ಬಂಟ್ವಾಳ: ಸಜೀಪ ನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ಪ್ರಿಯತಮೆಯನ್ನು ಭೇಟಿಯಾಗಲು ಬಂದ ಯುವಕನಿಗೆ ಸ್ಥಳೀಯರು ಕಟ್ಟಿಹಾಕಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಂಚಿನಡ್ಕಪದವು ನಿವಾಸಿಗಳಾದ ಮಹಮ್ಮದ್ (25) ಮಹಮ್ಮದ್ ರಿಜ್ವಾನ್ (25) ಇರ್ಪಾನ್(27) ಅನೀಸ್ ಅಹಮ್ಮದ್ (19) ನಾಸೀರ್ (೨೭27) ಎಂದು ಗುರುತಿಸಲಾಗಿದೆ. ಕಳೆದ ನವೆಂಬರ್ 7 ರಂದು ರಾತ್ರಿ 19 ಉಳ್ಳಾಲ ತಾಲೂಕು ವ್ಯಾಪ್ತಿಯ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಪ ಎಂಬಾತನನು ಆತನ ದೂರದ ಸಂಬಂಧಿ ಹುಡುಗಿಯೊಬ್ಬಳು ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ಮನೆಗೆ ಬರಲು ಹೇಳಿದಂತೆ ಕಂಚಿನಡ್ಕಪದವಿಗೆ ಬಂದಾಗ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಹಲ್ಲೆ ನಡೆಸಿದೆ. ಈ ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಹಲ್ಲೆಗೊಳಗಾದ ಮಹಮ್ಮದ್ ಮುಸ್ತಾಫ ಚಿಕಿತ್ಸಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಗಿದ್ದು ಆಸ್ಪತ್ರೆಯ ಸೂಚನಾ ಪತ್ರದಂತೆ ಪೊಲೀಸರು ಭಾನುವಾರ ಆಸ್ಪತ್ರೆಗೆ ತೆರಳಿ ವಿಚಾರಿಸಿದಾಗ ಆತನು ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಗುಂಪು ಹಲ್ಲೆ ನಡೆಸಿ ಕೊಲೆಯತ್ನ ನಡೆಸಿರುವುದಾಗಿ ಹೇಳಿಕೆ ನೀಡಿರುವುದರಿಂದ ಪ್ರಕರಣದಲ್ಲಿ ಕಲಂ 109, 117(4) ಬಿಎನ್ಎಸ್ ಕಾಯ್ದೆಯನ್ನು ಹೆಚ್ಚುವರಿಯಾಗಿ ಸೇರಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ.
ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿತ್ತು.