ಬಂಟ್ವಾಳ: ಸಿಡಿಲು ಬಡಿದು ಬಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಮೃತ ಬಾಲಕ.
ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು. ಸುಭೋದ್ ಅವರು ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿದ್ದ ಆತನನ್ನು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೆ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
Advertisement
Advertisement
Advertisement
Advertisement