ಬಂಟ್ವಾಳ: ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಿಬಿರಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಪೋರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಮಹಾಬಲೇಶ್ ಶೆಟ್ಟಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸೈ ಹರೀಶ್ ಎಂ.ಆರ್. ಪುದು ಗ್ರಾಮ ಪಂಚಾಯತಿ ಅಧ್ಯಕ್ಷೆ ರಶೀದಾ ಬಾನು ಸೇವಾಂಜಲಿ ಪ್ರತಿಷ್ಠಾನದ ಅಧ್ಯಕ್ಷ ವಜ್ರನಾಭ ಶೆಟ್ಟಿ, ಫರಂಗಿಪೇಟೆ ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಜಯರಾಮ ಶೇಖ, ರೋಟರಿ ಕ್ಲಬ್ ಫರಂಗಿಪೇಟೆ ಅಧ್ಯಕ್ಷ ಹಾಗೂ ಕಾರ್ಯಕ್ರಮ ಸಂಯೋಜಕ ಅರ್ಜುನ್ ಪೂಂಜ, ಎನ್ ಐಪಿ ಟಿ ಪ್ರಾಂಶುಪಾಲ ಡಾ.ಧನೇಶ್ ಕುಮಾರ್ ಕೆ.ಯು., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತ, ಎನ್ ಎಸ್ ಎಸ್ ವಿದ್ಯಾರ್ಥಿ ಕಾರ್ಯದರ್ಶಿ ಸಂಕೀರ್ತ್ ಸನೀಶ್ , ಡಾ. ಮಹಿಮಾ ಬಂಜನ್ ಉಪಸ್ಥಿತರಿದ್ದರು.
ನಿಟ್ಟೆ ಆಸ್ಪತ್ರೆಯ ಫಿಸಿಯೋಥೆರಪಿ ವಿಭಾಗದ ಸಹಾಯಕ ಪ್ರಾಧ್ಯಪಕಿ ಡಾ. ಸೌಮ್ಯ ಸ್ವಾಗತಿಸಿದರು.
ರುಚಿತ ನರ್ಸಿನ್ ವಂದಿಸಿದರು. ಸಮೀನ್ ಕಾರ್ಯಕ್ರಮ ನಿರೂಪಿಸಿದರು.