
ಬಂಟ್ವಾಳ: ದ.ಕ. ಜಿಲ್ಲೆಯ ಕಾರಣಿಕದ ದೈವಸ್ಥಾನ ಪಣೋಲಿಬೈಲು ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಕೋಲ ಭಾನುವಾರ ರಾತ್ರಿ ನಡೆಯಿತು.
ಸಂಜೆ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ, ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈವಿಧ್ಯ, ಕಲ್ಲಡ್ಕ ವಿಠಲ್ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಹಾಗೂ ನಾಟಕ ನಡೆಯಿತು. ಭಂಡಾರದ ಮನೆಯಿಂದ ದೈವಗಳ ಭಂಡಾರ ಬಂದು ವರ್ಷಾವಧಿ ಕೋಲ ನಡೆಯಿತು.
ದೈವಸ್ಥಾನದ ಆಡಳಿತಾಧಿಕಾರಿ, ಕಾರ್ಯನಿರ್ವಹಣಾಧಿಕಾರಿ ಅರ್ಚಕ ವರ್ಗ, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದೈವದ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸಿದರು.

