ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ “ದೀಪಾವಳಿ ಸಂಭ್ರಮ” ಕಾರ್ಯಕ್ರಮ ಲಯನ್ಸ್ ಸೇವಾ ಮಂದಿರದಲ್ಲಿ ಇತ್ತೀಚಿಗೆ ನಡೆಯಿತು.
ತುಳಸಿ ಪೂಜೆ , ಲಕ್ಷ್ಮೀ ಪೂಜೆ , ಬಲೀಂದ್ರ ಪೂಜೆ ಹಾಗೂ ಗೋ ಪೂಜೆ ಮೊದಲಾದ ಕಾರ್ಯಕ್ರಮಗಳು ರಾಘವೇಂದ್ರ ಕಾರಂತ್ ನೇತೃತ್ವದಲ್ಲಿ ನಡೆಯಿತು. ಲಯನ್ಸ್ ಸದಸ್ಯರಿಗೆ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ
, ರಂಗೋಲಿ ಸ್ಪರ್ಧೆ , ಮಕ್ಕಳಿಗೆ ಗೂಡುದೀಪ ಸ್ಪರ್ಧೆ ಮುಂತಾದವುಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ದೀಪಾವಳಿ ಮುಖ್ಯ ಸಂಯೋಜಕ ಲೋಕೇಶ್ ಉಳ್ಳಾಲ್ , ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ.ಎಂ ಹರ್ಷ ಸಂಪಿಗೆತ್ತಾಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ನಿಕಟಪೂರ್ವ ರೋಟರಿ ಸಹಾಯಕ ರಾಜ್ಯಪಾಲ ರಾಘವೇಂದ್ರ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ದೀಪಾವಳಿ ಹಬ್ಬ ಆಚರಣೆಯ ಮಹತ್ವ ತಿಳಿಸಿದರು.
ಕಾರ್ಯಕ್ರಮದಲ್ಲಿ ಪೀಸ್ ಪೋಸ್ಟರ್ ಸ್ಪರ್ಧೆಯಲ್ಲಿ ವಿಜೇತ ಐದು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸೇವಾ ಕಾರ್ಯಕ್ರಮವಾಗಿ ರಾಯಿ ಲಕ್ಷ್ಮೀ ಕೋಡಿ ನಿವಾಸದ ಬಡ ಕುಟುಂಬದ ವಿದ್ಯಾರ್ಥಿನಿಗೆ ಆರ್ಥಿಕ ಸಹಾಯಧನ ನೀಡಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಸ್ವಾಗತಿಸಿದರು. ಕಾರ್ಯಕ್ರಮದ ಆತಿಥ್ಯ ನೀಡಿದ ಜಯಂತ್ ಶೆಟ್ಟಿ, ಗಣೇಶ್ ಪ್ರಸಾದ್ ಮತ್ತು ಶುಭ ಇಂದಿರೇಶ್ ಇವರುಗಳಿಗೆ ಮತ್ತು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲಾ ಸಂಯೋಜಕರನ್ನು ಗೌರವಿಸಲಾಯಿತು. ಕಾರ್ಯದರ್ಶಿ ದೇವಿಕಾ ದಾಮೋದರ್ ವರದಿ ವಾಚಿಸಿದರು ಮತ್ತು ಕೋಶಾಧಿಕಾರಿ ದೇವಪ್ಪ ಪೂಜಾರಿ ಮಾಸಿಕ ಲೆಕ್ಕಪತ್ರ ಮಂಡಿಸಿದರು. ವೇದಿಕೆಯಲ್ಲಿ ಲಿಯೋ ಅಧ್ಯಕ್ಷೆ ಖುಷಿ ತಪೋದನ್ ಶೆಟ್ಟಿ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಬಂಟ್ವಾಳದ ಪೂರ್ವಾಧ್ಯಕ್ಷರುಗಳು, ಎಲ್ಲಾ ಸದಸ್ಯರು ಕುಟುಂಬ ಸಮೇತರಾಗಿ ಭಾಗವಹಿಸಿದ್ದರು.