ಬಂಟ್ವಾಳ: ವಾಮದಪದವು ಹಾಗೂ ಚೆನ್ನೈತ್ತೋಡಿಯಲ್ಲಿರುವ ಶ್ರೀ ದೇವರಾಜ ಅರಸು ಮೆಟ್ರಿಕ್ ನಂತರದ ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ಹಾಸ್ಟೆಲ್ ಡೇ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ನಾಯಕ್ ಉದ್ಘಾಟಿಸಿದರು. ಚೆನ್ನೈತ್ತೋಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ವನಿತಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೆಸಿಐ ವಿಟ್ಲದ ಅಧ್ಯಕ್ಷ ಸಂತೋಷ್ ಕುಮಾರ್, ವಾಮದಪದವು ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಪ್ರಮುಖರಾದ ಪ್ರಕಾಶ್ ಆಳ್ವ, ನವೀನ್ ಶೆಟ್ಟಿ, ಶಶಿಕಲಾ ಶೆಟ್ಟಿ, ಪುಷ್ಪಲತಾ ಉಪಸ್ಥಿತರಿದ್ದರು.
ನಿಲಯಪಾಲಕಿ ಭವಾನಿ ಸ್ವಾಗತಿಸಿ, ಪ್ರಾಸ್ತವಿಕ ಮಾತುಗಳನ್ನಾಡಿದರು. ಯಕ್ಷಿತಾ ವಂದಿಸಿ ತನುಶ್ರೀ ಕಾರ್ಯಕ್ರಮ ನಿರೂಪಿಸಿದರು.
Advertisement