ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಸೇವಾಂಜಲಿ ಸಂಗೀತ ತರಗತಿಯ ವಾರ್ಷಿಕೋತ್ಸವ ಡಿ.15ರಂದು ಭಾನುವಾರ ಸಂಜೆ 4ಗಂಟೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಶಿವಾಂಜಲಿ ಕಲಾಕೇಂದ್ರ ಪೆರ್ಲ ಇದರ ನಿರ್ದೇಶಕಿ ವಿದುಷಿ ಕಾವ್ಯ ಭಟ್ ಉದ್ಘಾಟಿಸುವರು, ಗಾಯಕಿ ಪವಿತ್ರ ವಿನಯ ಮಯ್ಯ ಉಪಸ್ಥಿತರಿರುವರು. ಸಂಜೆ 4.30ರಿಂದ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ದೇವರ ನಾಮಗಳು, ಸಂಜೆ 5.30ರಿಂದ ವಿದ್ವಾನ್ ಕೃಷ್ಣಾಚಾರ್ಯ ಇವರಿಂದ ಶಾಸ್ತ್ರೀಯ ಸಂಗೀತ ಮತ್ತು ಭಕ್ತಿ ಗೀತೆ ನಡೆಯಲಿದೆ ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—
Advertisement