Author: admin

ಬಂಟ್ವಾಳ: ಕಾರ್ಮಿಕ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಬಂಟ್ವಾಳದ ವತಿಯಿಂದ ಬಿ.ಸಿ.ರೋಡಿನ ಭಾರತ್ ಪೆಟ್ರೋಲಿಯಂನ ಎಂ. ಕೃಷ್ಣನಾಯಕ್ & ಕಂ. ಪೆಟ್ರೋಲ್ ಬಂಕ್‌ನಲ್ಲಿ ಕಳೆದ ೫೫ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾರ್ಮಿಕ ಕೇಶವ ಮೂಲ್ಯ ಅವರನ್ನು ಗೌರವಿಸಲಾಯಿತು.ಈ ಸಂದರ್ಭ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ, ಕಾರ್ಯದರ್ಶಿ ಸದಾಶಿವ ಬಾಳಿಗ, ಸದಸ್ಯ ಸಂದೀಪ್ ಮಿನೇಜಸ್ ಮತ್ತಿತರರು ಉಪಸ್ಥಿತರಿದ್ದರು.

Read More

ಬಂಟ್ವಾಳ: ಗಳಿಸಿದ ಸಂಪತ್ತು ಸಮಾಜದ ಸತ್ಕಾರ್ಯಗಳಿಗೆ ವಿನಿಯೋಗವಾಗಬೇಕು. ಹಣ, ವಿದ್ಯೆ, ಸ್ಥಾನಮಾನಗಳು ಅಂಹಕಾರಕ್ಕೆ ಕಾರಣವಾಗಬಾರದು. ಶ್ರೀ ಕೃಷ್ಣನ ಉಪದೇಶ ಸರ್ವಕಾಲಕ್ಕೂ ಪಾಲನೆಯಾಗಬೇಕು ಎಂದು ಕಾಸರಗೋಡು ಎಡನೀರು ಮಠದ ಶ್ರೀಗಳಾದ ಸಚ್ಚಿದಾನಂದ ಭಾರತಿ ಸ್ವಾಮಿಗಳು ಹೇಳಿದರು.ಅವರು ಮಂಚಿ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಎರಡು ದಿನಗಳ ಜಾತ್ರಾ ಮಹೋತ್ಸವನ್ನು ಉದ್ಘಾಟಿಸಿ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.ಸಂಪತ್ತು ಶಾಶ್ವತವಲ್ಲ. ದಾನಧರ್ಮ ಮಾಡುವ ಮಾಡುವುದು ಸಹಜ ಗುಣವಾಗಬೇಕು. ಸ್ತುತಿನಿಂದೆಗಳಿಗೆ ವಿಚಲಿತರಾಗಬಾರದು ಎಂದು ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಮೊಕ್ತೇಸರ ಶ್ರೀ ಕಮಲಾದೇವಿ ಪ್ರಸಾದ ಅಸ್ರಣ್ಣ ಹೇಳಿದರು. ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ವತಿಯಿಂದ ಸ್ಥಳದಾನಿ ಶ್ರೀನಿವಾಸ ಮರಡಿತ್ತಾಯ ವನಭೋಜನ ವಿಟ್ಲ, ಮುಂಬಯಿ ಉದ್ಯಮಿ ಸದಾಶಿವ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಚಂದ್ರಹಾಸ ರೈ ಬಾಲಾಜಿಬೈಲು, ನ್ಯಾಯವಾದಿ ಪತ್ತುಮುಡಿ ಚಿದಾನಂದ ರಾವ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಮೇಲ್ವಿಚಾರಕ ಜಗದೀಶ್ ಉಪಸ್ಥಿತರಿದ್ದರು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಕೈಯೂರು ನಾರಾಯಣ…

Read More

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ಸಭೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಶನಿವಾರ ಸಂಜೆ ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮೇ.೭ ಮಂಗಳವಾರದಂದು ಬಿ.ಸಿ.ರೋಡಿನ ಅನ್ನಪೂರ್ಣೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಬಂಟ್ವಾಳ ಘಟಕದ ಪ್ರಥಮ ವಾರ್ಷಿಕೋತ್ಸವದ ಆಮಂತ್ರಣ ಪತ್ರವನ್ನು ಬಿಡುಗಡೆ ಗೊಳಿಸಲಾಯಿತು. ಬಳಿಕ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು.ವಕೀಲ ಪ್ರಸಾದ್ ಕುಮಾರ್ ರೈ, ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ, ಪತ್ರಕರ್ತ ರತ್ನದೇವ್ ಪೂಂಜಲಕಟ್ಟೆ, ಕಲಾವಿದ ನಾರಾಯಣ ಸಿ. ಪೆರ್ನೆ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಭುಜಂಗ ಸಾಲಿಯಾನ್ ಬಿ.ಸಿ.ರೋಡು, ಜಯಪ್ರಕಾಶ್ ಜಕ್ರಿಬೆಟ್ಟು, ಕೋಶಾಧಿಕಾರಿ ಶಂಕರ ಶೆಟ್ಟಿ ಪರಾರಿಗುತ್ತು ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ ವಂದಿಸಿದರು, ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ವತಿಯಿಂದ ಉಚಿತ ಹೃದಯ ತಪಾಸಣೆ ಶಿಬಿರ ಎ.28ರಂದು ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರಗೆ ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಇರುವ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದ ಹೃದಯ ಶಸ್ತ್ರಚಿಕಿತ್ಸಕರಾಗಿರುವ ಡಾ. ರಾಹುಲ್ ರಾವ್ ಕೆ. ಭಾಗವಹಿಸುವರು ಎಂದು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಂಟ್ವಾಳ:ಈ ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಮತ್ತು ದುರ್ಬಲ ಸಮುದಾಯ ಕೂಡಾ ಬ್ಯಾಂಕಿನ ಮೆಟ್ಟಿಲು ಏರುವಂತೆ ಮಾಡಿದ ಹೆಗ್ಗಳಿಕೆ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗೆ ಸಲ್ಲುತ್ತದೆ. ಕಳೆದ 33 ವರ್ಷಗಳಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತಗೊಂಡಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ, ಯುವ ವಕೀಲ ಪದ್ಮರಾಜ್ ಆರ್.ಪೂಜಾರಿ ಅವರನ್ನು ಬಹುಮತದಿಂದ ಗೆಲ್ಲಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿ ಮತ್ತು ಸಮಸ್ತ ಹಿಂದುಳಿದ ವರ್ಗ ಸಮುದಾಯಕ್ಕೆ ನ್ಯಾಯ ದೊರಕಿಸಿ ಕೊಡಲು ಸಾಧ್ಯವಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಹೇಳಿದ್ದಾರೆ. ಇಲ್ಲಿನ ಬಿ.ಸಿ.ರೋಡು ಸ್ಪರ್ಶಾ ಸಭಾಂಗಣದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಉರ್ವ ಚಿಲಿಂಬಿ ಶ್ರೀ ಸತ್ಯಸಾಯಿ ಬಾಬಾ ಮಂದಿರ ಬಳಿ ಬಿಜೆಪಿ ಶಾಸಕರೊಬ್ಬರು ಈಚೆಗೆ ಉದ್ದೇಶ ಪೂರ್ವಕವಾಗಿ ಚುನಾವಣಾ ನಿಯಮಾವಳಿ ಮೀರಿ ಮತಯಾಚನೆ ನಡೆಸಿ ಮಂದಿರದ ಆಡಳಿತ ಸಮಿತಿ ಜೊತೆಗೆ ದರ್ಪದಿಂದ ವರ್ತಿಸಿ ಸಂಘರ್ಷ ನಡೆಸಿದ್ದರು ಎಂದು…

Read More

ಬಂಟ್ವಾಳ: ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಯವರು ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ಸುರೇಶ್ ಕುಮಾರ್ ನಾವೂರು ಅವರ ನೇತೃತ್ವದಲ್ಲಿ ಸೋಮವಾರ ಸಂಜೆ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಸಮುದಾಯ ಭವನಕ್ಕೆ ಭೇಟಿ ನೀಡಿ ಸಮುದಾಯದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು ಹಿಂದುಳಿದ ವರ್ಗದ ಬಡ ಕುಟುಂಬದಲ್ಲಿ ಹುಟ್ಟಿದ ನನಗೆ ಹಿಂದುಳಿದ ವರ್ಗ, ಶೋಷಿತ ಸಮಾಜದ ಜನರ ನೋವು, ಸಮಸ್ಯೆಗಳ ಅರಿವಿದೆ. ಬಡಜನರ ನೋವಿಗೆ ನಾನು ಸ್ಪಂದಿಸಿಕೊಂಡು ಬಂದಿದ್ದು ಲೋಕಸಭಾ ಸದಸ್ಯನಾಗುವ ಅವಕಾಶ ಸಿಕ್ಕಲ್ಲಿ, ಬಡವರ ಶೋಷಿತರ ಧ್ವನಿಯಾಗಿ ನಿಂತು ಕೆಲಸ ಮಾಡುತ್ತೇನೆ ಎಂದರು. ಕುಲಾಲ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ತನ್ನಿಂದಾಗುವ ಎಲ್ಲಾ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ, ಸಮುದಾಯದ ಪ್ರಮುಖರಾದ ಸುರೇಶ್ ಕುಮಾರ್…

Read More

ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಕುಲಾಲ ಯಾನೆ ಮೂಲ್ಯ ಸಮುದಾಯದ ಸಂಖ್ಯೆ ಗರಿಷ್ಠ ಪ್ರಮಾಣದಲ್ಲಿದ್ದು, ಮೂರನೆ ಅತೀ ಹೆಚ್ಚು ಮತದಾರರಿರುವ ಸಮುದಾಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಲಾಲ ಮತದಾರರು ನಿರ್ಣಯಕ ಸ್ಥಾನದಲ್ಲಿದ್ದರೂ ಇತ್ತೀಚಿನ ಕೆಲವು ದಿನಗಳಿಂದ ಚುನಾವಣೆಯ ಈ ಹೊತ್ತಿನಲ್ಲಿ ಸಾಮಾಜಿಕ ಜಾಲಾತಾಣಗಳಲ್ಲಿ ಕುಲಾಲ ಸಮುದಾಯದ ಮತದಾರರ ಅಂಕಿ ಅಂಶಗಳನ್ನು ಹಾಕದೆ, ಇತರ ಎಲ್ಲಾ ಹಿಂದುಳಿದ ವರ್ಗದ ಒಟ್ಟು ಸಂಖ್ಯೆ ಕೇವಲ ೪೦ ಸಾವಿರ ಮಾತ್ರ ಇರುವುದಾಗಿ ತೋರಿಸಿ ಪ್ರಚಾರ ಪಡಿಸುತ್ತಿರುವುದು ಖಂಡನೀಯ ಎಂದು ಬಂಟ್ವಾಳ ತಾಲೂಕು ಕುಲಾಲ ಸಂಘದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ತಿಳಿಸಿದ್ದಾರೆ.ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಎಂಟು ವಿಧಾನಸಭಾ ಕ್ಷೇತ್ರವನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರವೊಂದರಲ್ಲಿಯೇ ಅಂದಾಜು ಸುಮಾರು 39 ಸಾವಿರ ಕುಲಾಲ ಮತದಾರರಿದ್ದಾರೆ. ಅದೇ ರೀತಿ ಮೂಡಬಿದಿರೆಯಲ್ಲಿ ಅಂದಾಜು 26 ಸಾವಿರ, ಬೆಳ್ತಂಗಡಿಯಲ್ಲಿ ಅಂದಾಜು 22 ಸಾವಿರ, ಪುತ್ತೂರಿನಲ್ಲಿ ಅಂದಾಜು 19 ಸಾವಿರ, ಸುಳ್ಯದಲ್ಲಿ ಅಂದಾಜು 16 ಸಾವಿರ, ಉಳ್ಳಾಲದಲ್ಲಿ ಅಂದಾಜು 26…

Read More

ಬಂಟ್ವಾಳ: ಜನಪ್ರತಿನಿಧಿಗಳು ಮೂಲಭೂತ ಸೌಲಭ್ಯವನ್ನು ಒದಗಿಸದೇ ಇರುವುದರಿಂದ ಆಕ್ರೋಶಗೊಂಡಿರುವ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬೋಳಂಗಡಿ ಗ್ರಾಮಸ್ಥರು ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ. ಮೆಲ್ಕಾರ್ ಎಂ.ಎಚ್. ಮಿಲ್ ಬಳಿಯ ಅಶ್ವಸ್ಥ ಕಟ್ಟೆಯಿಂದ ಬೋಳಂಗಡಿ ಬಸ್ತುಕೋಡಿ ವರೆಗೆ ರಸ್ತೆಯು ತೀರ ಹದಗೆಟ್ಟಿದೆ. ನೀರಿನ ಅವ್ಯವಸ್ಥೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಬಂಟ್ವಾಳ ಪುರಸಭೆಯಾಗಲಿ, ಸಂಬಂಧಪಟ್ಟ ಜನಪ್ರತಿನಿಧಿಗಳಾಗಲಿ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಗ್ರಾಮಸ್ಥರು ರೋಸಿ ಹೋಗಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

Read More

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕವಿತಾ ಸನಿಲ್ ಹಾಗೂ ಬಂಟ್ವಾಳ ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ರಾಜಾಧ್ಯಕ್ಷ ಬಿ. ವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಪಕ್ಷದ ಧ್ವಜ ಹಾಗೂ ಶಾಲು ಹಾಕಿ ಇಬ್ಬರನ್ನು ರಾಜಾಧ್ಯಕ್ಷರು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭ ಕವಿತಾ ಸನಿಲ್ ಮಾತನಾಡಿ ಮೋದಿಯವರ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಬಿಜೆಪಿಗೆ ಬಂದಿದ್ದೇನೆ. ಸನಾತನ ಧರ್ಮದ ರಕ್ಷಣೆಯನ್ನು ಬಿಜೆಪಿ ಮಾಡುತ್ತಿದ್ದು ಕಾಂಗ್ರೆಸ್‌ನ ಕೆಲವೊಂದು ನಡವಳಿಕೆಯಿಂದ ಬೇಸತ್ತು ಪಕ್ಷ ತೊರೆದಿದ್ದೇನೆ ಎಂದರು. ಈ ಬಾರಿ ನಾವು ಹಾಕುವ ಓಟು ರಾಮನಿಗೆ ಹಾಕುವ ಓಟಾಗಿದ್ದು ಸೈನಿಕನಿಗೆ ಬೆಂಬಲ ನೀಡಬೇಕಾಗಿದೆ. ದೇಶಕ್ಕೆ ಮೋದಿ ಸೈನಿಕನಾದರೆ ದಕ್ಷಿಣ ಕನ್ನಡಕ್ಕೆ ಬ್ರಿಜೇಶ್ ಚೌಟ ಸೈನಿಕನಾಗಿ ಕಾಯಲಿದ್ದಾರೆ. ಧರ್ಮ ಉಳಿದರೆ ಜಾತಿ ಉಳಿಯುತ್ತದೆ. ನಾನು ಬಿಲ್ಲವ ಮಹಿಳೆ ಎನ್ನುವುದಕ್ಕಿಂತಲೂ ನಾನೋರ್ವ ಹಿಂದು ಎನ್ನಲು ಹೆಮ್ಮೆ ಪಡುತ್ತೇನೆ ಎಂದ ಅವರು ತನ್ನ ರಾಜಕೀಯ ಗುರು ಜನಾರ್ದನ ಪೂಜಾರಿಯವರ ಆಶೀರ್ವಾದ ಹಾಗೂ ಒಪ್ಪಿಗೆ ಪಡೆದೇ ಬಿಜೆಪಿಗೆ ಬಂದಿರುವುದಾಗಿ ತಿಳಿಸಿದರು.

Read More

ಬಂಟ್ವಾಳ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ೨೮ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.ಶನಿವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಪೂಜೆ ಸಲ್ಲಿಸಿ ಬಳಿಕ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೂರನೇ ಬಾರಿ ದ.ಕ. ಜಿಲ್ಲೆಗೆ ಭೇಟಿ ನೀಡುತ್ತಿದ್ದೇನೆ. ಇಲ್ಲಿಗೆ ಭೇಟಿ ನೀಡುವುದೇ ಆನಂದ. ನರೇಂದ್ರ ಮೋದಿಯವರು ಪ್ರಧಾನಿಯಾಗಿ ಕಳೆದ ಹತ್ತು ವರ್ಷದಲ್ಲಿ ಒಂದು ದಿನವೂ ವಿಶ್ರಾಂತಿ ಪಡೆಯದೇ ಕೆಲಸ ನಿರ್ವಹಿಸಿ ನುಡಿದಂತೆ ನಡೆದಿದ್ದಾರೆ. ಅವರು ಮೂರನೇ ಅವಧಿಗೆ ಪ್ರಧಾನಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಹತ್ಯೆಯ ಸಂಖ್ಯೆ ಹೆಚ್ಚಾಗಿದ್ದು ಹತ್ಯೆ ಮಾಡುವವರನ್ನು ಕಾಂಗ್ರೆಸ್ ಸರಕಾರ ರಕ್ಷಣೆ ಮಾಡುತ್ತಿದೆ. ಇದು ರಾಜ್ಯದ ದೌರ್ಭಾಗ್ಯ. ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯಿಂದಾಗಿ ಈ ಸ್ಥಿತಿ ನಿರ್ಮಾಣವಾಗಿದೆ ಎಂದು…

Read More