Author: admin
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯದ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಗಾಣದ ಪಡ್ಪುವಿನಲ್ಲಿರುವ ಆಟೋಲೈನ್ಸ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ಸಂದೇಶ್ ಶೆಟ್ಟಿ ಅರೆಬೆಟ್ಟು ಮಾತನಾಡಿ ಗ್ಯಾರೇಜು ಮಾಲಕರ ಸಂಘದಲ್ಲಿ ಮಾತು ಮೌನವಾಗಿ, ಕೆಲಸ ಮಾತನಾಡುತ್ತಿದೆ, ಸಮಾಜದಲ್ಲಿ ಸಂಘಟನೆ ಹೇಗೆ ಇರಬೇಕು, ಹೇಗೆ ಬೆಳೆಯಬೇಕು ಎನ್ನುವುದಕ್ಕೆ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯ ಮಾದರಿಯಾಗಿದೆ ಎಂದರು. ಜಿಲ್ಲಾ ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು ಅವರು ಮಾತನಾಡಿ ಸುಧೀರ್ ಪೂಜಾರಿ ನೇತ್ರತ್ವದಲ್ಲಿ ಸಂಘ ಉತ್ತಮ ಕೆಲಸ ಮಾಡಿದ್ದು ಮುಂದಿನ ದಿನಗಳಲ್ಲೂ ಮಾತೃ ಸಂಘದಿಂದ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು. ನಿರ್ಗಮನ ಅಧ್ಯಕ್ಷ ಸುಧೀರ್ ಪೂಜಾರಿ ಮಾತನಾಡಿ ಅಧ್ಯಕ್ಷ ಎನ್ನುವುದು ಪದವಿ, ಅಧಿಕಾರಕ್ಕಿಂತಲೂ ಅದೊಂದು ಜವಬ್ದಾರಿ ಎಂದು ಕೆಲಸ ಮಾಡಿದಾಗ ಸಂಘಟನೆಯನ್ನು ಬಲಪಡಿಸಲು ಸಾಧ್ಯವಿದೆ ಎಂದರು. ನೂತನ ಅಧ್ಯಕ್ಷ ಗಣೇಶ್ ಸುವರ್ಣ ಮಾತನಾಡಿ ದೇವರ ಅನುಗ್ರಹ,…
ಬಂಟ್ವಾಳ :ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಆಶ್ರಯದಲ್ಲಿ ನಡೆಯುವ 44ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆಯು ಭಾನುವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು. ಈ ಸಂದರ್ಭ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಉಪನ್ಯಾಸಕಿ ಕೆ.ಕವಿತಾ ದೇವದಾಸ ಅರ್ಕುಳ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದು ಅವಿಭಜಿತ ದ.ಕ.ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವುದು ಪ್ರಥಮವಾಗಿದೆ. ಕೆ.ಕವಿತಾ ದೇವದಾಸ ಅರ್ಕುಳ ಇವರು ಕಳೆದ 33ವರ್ಷಗಳಿಂದ ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ಲೆಕ್ಕ ಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ವಾಣಿಜ್ಯ ಉಪನ್ಯಾಸಕರ ಸಂಘದ ಕೋಶಾಧಿಕಾರಿಯಾಗಿ, ಫರಂಗಿಪೇಟೆ ಅಂಜನಾದೇವಿ ಮಾತೃ ಮಂಡಳಿಯ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಸೇವಾಂಜಲಿ ಪ್ರತಿಷ್ಠಾನದ ಸದಸ್ಯರಾಗಿ ಇಲ್ಲಿ ನಡೆಯುವ ಶ್ರೀ ವರಮಾಲಕ್ಷ್ಮೀ ಪೂಜೆ ಸಹಿತ ಎಲ್ಲಾ ಕಾರ್ಯಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರ ನಾಯಕತ್ವ ಗುಣ, ಸಮಾಜಮುಖಿ ಸೇವೆಯಿಂದಾಗಿ ಮಹಿಳೆಯೊಬ್ಬರು ಪ್ರಥಮ ಭಾರಿಗೆ ಫರಂಗಿಪೇಟೆ ಗಣೆಶೋತ್ಸವ ಸಮಿತಿಯ…
ಬಂಟ್ವಾಳ: ಶಿವಗಿರಿ ಮಹಿಳಾ ಸಹಕಾರ ಸಂಘ ಮೆಲ್ಕರ್ ಪಾಣೆಮಂಗಳೂರು ಇದರ ಆಡಳಿತ ಮಂಡಳಿ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಜಯಂತಿ ವಿ ಪೂಜಾರಿ ಇವರು ಎರಡನೇ ಬಾರಿಗೆ ಪುನರ್ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಪುಷ್ಪಾವತಿ ಶ್ರೀನಿವಾಸ್, ನಿರ್ದೇಶಕರಾಗಿ ಅಭಿನಯ ಚಿದಾನಂದ, ಜ್ಯೋತಿಲಕ್ಷ್ಮಿ ರಾಜೇಶ್, ವನಿತಾ ಕೂಸಪ್ಪ, ತುಳಸಿ ಪುರಂದರ, ಶ್ವೇತಾ ಡಿ ಪೂಜಾರಿ, ಧನಲಕ್ಷ್ಮೀ ಮಿಥುನ್, ಪ್ರಮೀಳಾ ಮನೋಜ್, ವಿನೋದ ಆನಂದ ಪೂಜಾರಿ ಇವರು ಮುಂದಿನ ೫ ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಂಟ್ವಾಳ: ಪ್ರತೀ ತಿಂಗಳು ಕ್ಷಯ ರೋಗಿಗಳಿಗೆ ಪೌಷ್ಟಿಕಾಹಾರ ನೀಡುವ ಸರಕಾರ ಮಾಡಬೇಕಾದ ಕಾರ್ಯವನ್ನು ಖಾಸಗಿ ಸಂಸ್ಥೆಯಾದ ಸೇವಾಂಜಲಿ ಪ್ರತಿಷ್ಠಾನ ಅತ್ಯಂತ ಮುತುವರ್ಜಿ ವಹಿಸಿ ಮಾಡುತ್ತಿರುವುದು ಅಭಿನಂದನೀಯ ಎಂದು ಬಂಟ್ವಾಳ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಹೇಳಿದರು. ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಕ್ಷಯ ರೋಗಿಗಳಿಗೆ ಆಹಾರ, ದವಸಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವ ಸೇವಾಂಜಲಿ ಪ್ರತಿಷ್ಠಾನ ಪ್ರಧಾನಿಯವರ ಕ್ಷಯ ಮುಕ್ತ ಭಾರತ ಅಭಿಯಾನಕ್ಕೆ ಅಳಿಲ ಸೇವೆಯನ್ನು ನೀಡುತ್ತಿದೆ. ಕ್ಷಯ ರೋಗಿಗಳು ಔಷಧಿಯ ಜೊತೆಗೆ ಪೌಷ್ಟಿಕಾಂಶದ ಆಹಾರವನ್ನು ಸೇವಿಸಿ ಕ್ಷಯ ಮುಕ್ತ ಸಮಾಜ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸುವಂತೆ ವಿನಂತಿಸಿದರು. ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೇತನ್ ಆರೋಗ್ಯ ಮಾಹಿತಿ ನೀಡಿ ಕೆಮ್ಮು ಮೊದಲಾದ ಕ್ಷಯ ರೋಗದ ಲಕ್ಷಣಗಳು ಕಂಡು ಬಂದಾಗ ಸಕಾಲದಲ್ಲಿ ವೈದ್ಯರಿಂದ ತಪಸಣೆ ನಡೆಸಿ ಔಷಧೋಪಾಚಾರ ಮಾಡಿದಾಗ ರೋಗ ನಿರ್ಮೂಲನೆ ಮಾಡಲು ಸಾಧ್ಯವಿದೆ ಎಂದರು.…
ಬಂಟ್ವಾಳ: ಇಲ್ಲಿನ ಜೆಸಿಐ ಬಂಟ್ವಾಳ ಈ ವರ್ಷ ನಡೆಸಿದ ವಿವಿಧ ಕಾರ್ಯಕ್ರಮಗಳಿಗೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ಲಭಿಸಿದೆ. ಜೆಸಿಐ ಕಾಪುವಿನ ಆತಿಥ್ಯದಲ್ಲಿ ಕಾಪುವಿನ ಇನಾಸನ್ ಆಡಿಟೋರಿಯಂನಲ್ಲಿ ಭಾನುವಾರ ನಡೆದ ವಲಯದ ಮಧ್ಯಂತರ ಸಮ್ಮೇಳನ ಸಂಗಮದಲ್ಲಿ ಜೆಸಿಐ ಬಂಟ್ವಾಳದ ಅಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ ಅವರಿಗೆ ವಲಯಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ಅತ್ಯುತ್ತಮ ಘಟಕ ವಿನ್ನರ್, ಅತ್ಯುತ್ತಮ ಅಧ್ಯಕ್ಷ ರನ್ನರ್, ಡೈಮಂಡ್ ಸ್ಟಾರ್ ಪ್ರೆಸಿಡೆಂಟ್, ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್, ಪ್ರೋ ಪ್ರೆಸಿಡೆಂಟ್, ಲೇಬರ್ ಡೇ ಪ್ರೋಗ್ರಾಮ್ ಅವಾರ್ಡ್, ದಾನ್ ಪ್ರೋಗ್ರಾಮ್ ಅವಾರ್ಡ್, ಸೈಲೆಂಟ್ ಸ್ಟಾರ್ ಪ್ರೋಗ್ರಾಮ್ ಅವಾರ್ಡ್, ಸೇರಿದಂತೆ ಹಲವಾರು ಪುರಸ್ಕಾರಗಳು ಪ್ರಾಪ್ತವಾಗಿದೆ. ಈ ಸಂದರ್ಭ ವಲಯಾಧಿಕಾರಿಗಳಾದ ಕಾಶೀನಾಥ್ ಗೋಗಟೆ, ಸುಹಾಸ್ ಮರಿಕೆ, ಜೆಸಿಐ ಬಂಟ್ವಾಳದ ಲೇಡಿ ಜೇಸಿ ಸಂಯೋಜಕಿ ಅನುಷಾ ಕಿಶೋರ್ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ: ಕರುನಾಡು ಬಾರಿಟೆಬಲ್ ಟ್ರಸ್ಟ್ ಇದರ 12 ನೇ ಸೇವಾ ಯೋಜನೆಯಾಗಿ ದ.ಕ.ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಯಪಾದೆ ಇಲ್ಲಿನ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಈ ಸಮಯದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರುಗಳು ಹಾಗೂ ಸಂಸ್ಥೆಯ ಎಲ್ಲಾ ಸೇವಾ ಮಾಣಿಕ್ಯರು ಹಾಜರಿದ್ದರು.
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಹಾಗೂ ರೋಟರಿ ಆನ್ಸ್ ಕ್ಲಬ್ ವತಿಯಿಂದ ಬೊಂಡಾಲದ ಸರಕಾರಿ ಪ್ರಾಥಮಿಕ ಶಾಲೆಯ 45 ವಿದ್ಯಾರ್ಥಿಗಳಿಗೆ ಸಮವಸ್ತ್ರ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಬಸ್ತಿ ಮಾಧವ ಶೆಣೈ, ಆನ್ಸ್ ಕ್ಲಬ್ ಅಧ್ಯಕ್ಷೆ ಗೌರಿ ಶೆಣೈ, ರೋಟರಿ ಕ್ಲಬ್ ಬಂಟ್ವಾಳದ ಸದಸ್ಯರಾದ ಕೆ. ನಾರಾಯಣ ಹೆಗ್ಡೆ, ಪ್ರತಿಭಾ ಎ. ರೈ, ಶಾಲಾ ಮುಖ್ಯೋಪಾಧ್ಯಾಯಿನಿ ರೇಖಾ, ಎಸ್‌ಡಿಎಂಸಿ ಅಧ್ಯಕ್ಷ ಜನಾರ್ದನ ಕುಲಾಲ್ ಬೊಂಡಾಲ, ಹಿರಿ ವಿದ್ಯಾರ್ಥಿ ವಿನೋದ್ ಶೆಟ್ಟಿ, ಬೊಂಡಾಲ, ವಸಂತ್ ಅಂಚನ್, ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ಬಂಟ್ವಾಳ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ಜ.ಕೆ.ಎಸ್. ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ಮಂಗಳೂರು ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಮಂಗಳವಾರ ಬೆಳಿಗ್ಗೆ ನಡೆಯಿತು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲರ ಆದ್ಯ ಕರ್ತವ್ಯವಾಗಿದ್ದು ಜನರಲ್ಲಿ ಜಾಗೃತಿಯ ಪ್ರಜ್ಞೆ ಮೂಡಿಸುವ ಇಂತಹ ಕಾರ್ಯಕ್ರಮ ಪ್ರಸ್ತುತವಾಗಿದೆ. ಗಿಡಗಳನ್ನು ನೆಡುವುದರ ಜೊತೆಗೆ ಅವುಗಳ ಪಾಲನೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆಗೆ ನಮ್ಮ ಕೊಡುಗೆಯನ್ನು ನೀಡಬೇಕು ಎಂದರು. ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮರದ ಮೇಲೆ ಕುಳಿತು ಬುಡ ಕಡಿಯುವ ಕಾಳಿದಾಸನ ಕತೆಯಂತೆ ಪ್ರಕೃತಿಯ ಮೇಲೆ ಹಾಕುವ ಒಂದೊಂದು ಕೊಡಲಿ ಪೆಟ್ಟು ನಮ್ಮ ಜೀವನಕ್ಕೆ ಹಾಕುತ್ತಿರುವ ಕೊಡಲಿ ಏಟು ಎನ್ನುವುದನ್ನು ನಾವು ಮರೆಯುತ್ತಿದ್ದೇವೆ ಎಂದರು. ಸೇವಾಂಜಲಿ ದಂತ…
ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಕೊಳಲು ವಾದಕ ಶಿವಪ್ರಸಾದ್ ಬಿ.ಸಿ.ರೋಡು, ಮಹಿಳಾ ಉದ್ಯಮಿ ಸುಹಾಸಿನಿ ವಿಶ್ವನಾಥ ಆಚಾರ್ಯ ಹಾಗೂ ಕೇಬಲ್ ಸಂಸ್ಥೆಯ ಸಿಬ್ಬಂದಿ ಆಶಾಲತಾ ಅವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ, ಕಾರ್ಯದರ್ಶಿ ಕಿರಣ್ ಕುಮಾರ್, ಉಪಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ, ಲೇಡಿ ಜೆಸಿ ಸಂಯೋಜಕಿ ಅನುಷಾ ಕಿಶೋರ್, ಪೂರ್ವಾಧ್ಯಕ್ಷರಾದ ಲೋಕೇಶ್ ಸುವರ್ಣ, ಸದಾನಂದ ಬಂಗೇರ, ರಾಜೇಂದ್ರ ಕೆ. ಉಪಸ್ಥಿತರಿದ್ದರು.
ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ ಕೈಕಂಬದಲ್ಲಿರುವ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ ಸರಕಾರ ದ ನಿಕ್ಷಯ್ ಮಿತ್ರ ಯೋಜನೆಯಡಿಯಲ್ಲಿನ ಕ್ಷಯ ರೋಗಿಗೆ ಪೌಷ್ಟಿಕ ಆಹಾರ ಸಾಮಗ್ರಿಯನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ವಲಯದ ಅಧ್ಯಕ್ಷ ರಾಜೇಂದ್ರ ಕೆ. ವೈದ್ಯಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ, ಮಾಜಿ ಅಧ್ಯಕ್ಷ ಹರೀಶ್ ಕುಂದರ್, ಗೌರವಾಧ್ಯಕ್ಷ ಕಿಶೋರ್, ಕಾರ್ಯದರ್ಶಿ ರವಿ ಕಲ್ಪನೆ, ಉಪಾಧ್ಯಕ್ಷ ಹರೀಶ್ ನಾಟಿ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಛಾಯಾ ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ ಹಾಗೂ ಆಸ್ಪತ್ರೆ ಯ ಸಿಬ್ಬಂದಿ ಗಳು ಉಪಸ್ಥಿತರಿದ್ದರು








