Author: admin
ಬಂಟ್ವಾಳ: ಮಳೆಗಾಲದ ಸಂದರ್ಭದಲ್ಲಿ ಪಂಚಾಯತಿ ಪಿಡಿಓಗಳು ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕಾರ್ಯನಿರ್ವಹಿಸಬೇಕು, ಪೋನ್ ಸ್ವಿಚ್ ಆಫ್ ಮಾಡಿಕೊಳ್ಳದೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು, ಯಾವುದೇ ಸಮಸ್ಯೆ, ಅವಘಡಗಳು ಎದುರಾದರೂ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿ.ಸಿ.ರೋಡಿನ ಎಸ್‌ಜೆಎಸ್‌ಆರ್.ವೈ ಸಭಾಂಗಣದಲ್ಲಿ ನಡೆದ ಮುಂಗಾರು ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ಜೀವಹಾನಿ, ಜಾನುವಾರು ಹಾನಿ, ನೆರೆ ಹಾವಳಿ, ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಕುರಿತು ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓಗಳು, ವಿಎಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮೇ. 31ರಿಂದ ಶಾಲೆಗಳು ಪುನಾರಂಭಗೊಳ್ಳಲಿದ್ದು ಬಂಟ್ವಾಳ ತಾಲೂಕಿನ 64 ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಸಭೆಯ ಗಮನಕ್ಕೆ ತಂದರು. ಚುನವಣೆಯ ಸಂಧರ್ಭ ಪುಚ್ಚೇರಿಯ ಡ್ಯಾಂನಿಂದ ನೀರನ್ನು ಸಂಪೂರ್ಣವಾಗಿ ಹೊರ ಹರಿಯಲು ಬಿಟ್ಟಿರುವ ಡ್ಯಾಂ ಅಧಿಕಾರಿಗಳ ಬಗ್ಗೆ…
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಾಸಕರ ಕಚೇರಿ ಉದ್ಘಾಟನೆ ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಾಸಕರ ಕಚೇರಿ ಉದ್ಘಾಟನೆ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆಯಿತು. ಈ ಸಂದರ್ಭ ಹಿರಿಯ ಆರೆಸ್ಸೆಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕಚೇರಿಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ರಾಜೇಶ್ ನಾಯ್ಕ್ ಅವರನ್ನು ಜನರು ಇಷ್ಟಪಟ್ಟ ಹಿನ್ನೆಲೆಯಲ್ಲಿ ಅವರು ಮತ್ತೊಮ್ಮೆ ಶಾಸಕರಾಗಿದ್ದಾರೆ. ಜನ ಅಪೇಕ್ಷೆ ಪಡುವವರೇ ನಾಯಕರಾಗಬೇಕು ಎಂದು ಹೇಳಿದರು. Advertisement Advertisement ಎಲ್ಲ ಕಾರ್ಯಕರ್ತರ ಪರಿಶ್ರಮದಿಂದ ಕಳೆದ ಐದು ವರ್ಷಗಳಲ್ಲಿ ರಾಜೇಶ್ ನಾಯ್ಕ್ ಮಾಡಿದ ಸಮಾಜಮುಖಿ ಕೆಲಸಗಳಿಂದ ಜನ ಬಿಜೆಪಿಯನ್ನು ರಾಜೇಶ್ ನಾಯ್ಕ್ ಅವರನ್ನು ಒಪ್ಪಿಕೊಂಡಿದ್ದಾರೆ ಎಂದರು. ಜನ ಅಪೇಕ್ಷೆ ಮಾಡಿದಂಥವನೇ ನಾಯಕನಾಗಬೇಕು. ಯಾರನ್ನೂ ಮೇಲಿಂದ ಹೊರಿಸುವಂಥದ್ದಲ್ಲ, ಅದನ್ನು ಒಪ್ಪಿಕೊಳ್ಳುವುದಿಲ್ಲ ಜನ. ಯಾರು ಜನ ಅಪೇಕ್ಷೆ ಮಾಡುತ್ತಾರೆ, ಅಂಥವರು ಆದರೆ ಜನರು ಪೂರ್ಣ ಮನಸ್ಸಿನಿಂದ ಆಯ್ಕೆ ಮಾಡುತ್ತಾರೆ. ರಾಜೇಶ್ ನಾಯ್ಕ್ ಅವರನ್ನು ಜನರು…
ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಬಂಟ್ವಾಳ: ಶ್ರೀ ಕ್ಷೇತ್ರ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ಇಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿಹೋಮ, ಶ್ರೀ ಆಶ್ಲೇಷ ಬಲಿ ಪೂಜೆ ಸಜೀ ಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯಭಟ್ ನೇತೃತ್ವದಲ್ಲಿ ಜರಗಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್. ಕೆ.ಟಿ. ಸುಧಾಕರ, ಶಂಕರ, ಗಣಪತಿ ಭಟ್, ಕಿಶನ್ ಸೇಣವ. ರಾಮಕೃಷ್ಣ ಭಟ್, ಸುಭಾಷ್, ಗುರುರಾಜ್ ಭಟ್, ಗಣಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು Advertisement Advertisement
ಬಂಟ್ವಾಳ,: ಕಲಾವಿದರು ಯಾವ ರೀತಿ ಬದುಕಬೇಕು ಎನ್ನುವುದಕ್ಕೆ ಆದರ್ಶ ಪಟ್ಲ ಸತೀಶ್ ಶೆಟ್ಟಿ. ಕಲಾವಿದರ ಕಷ್ಟ ತಿಳಿದು ಅವರ ಕಷ್ಟದಲ್ಲಿ ತಾನು ಭಾಗಿಯಾಗುವ ನಿಟ್ಟಿನಲ್ಲಿ ಇಂತಹ ಫೌಂಡೇಷನ್ ಹಾಕಿ ಕೊಂಡುವಿಶ್ವವ್ಯಾಪಿಯಾಗಿ ಕೆಲಸ ನಿರ್ವಹಿಸುವ ಈ ಫೌಂಡೇಶನ್ ಇನ್ನಷ್ಟು ಸಮಾಜ ಮುಖಿ ಸೇವೆ ನೀಡಲಿ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. Advertisement ಅವರು ಶುಕ್ರವಾರ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿ ಪದಗ್ರಹಣ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ದೇವರ ಅನುಗ್ರಹ ಇದ್ದಾಗ ಎಂತಹ ಯೋಗ ಭಾಗ್ಯಗಳು ನಮ್ಮನ್ನು ಅರಸಿಕೊಂಡು ಬರುತ್ತದೆ ಎನ್ನುವುದಕ್ಕೆ ಪಟ್ಲ ಸತೀಶ್ ಶೆಟ್ಟಿ ಉದಾಹರಣೆ. ಅವರ ದೂರದೃಷ್ಟಿ ಯೋಜನೆಗಳು ಎಲ್ಲರಿಗೂ ಮಾದರಿಯಾದುದು. ಕಲಾವಿದರಿಗೆ ಮಾತ್ರವಲ್ಲದೆ, ವಿದ್ಯಾರ್ಥಿಗಳು, ರೋಗಿಗಳಿಗೂ ಸೇವೆ ನೀಡುತ್ತಿರುವುದು ವಿಶೇಷ ಎಂದರು. Advertisement ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು…
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನಲ್ಲಿ ನೂತನವಾಗಿ ಅಸ್ತಿತ್ವಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ವತಿಯಿಂದ ನೂತನ ‘ಪದಾಧಿಕಾರಿಗಳ ಪದಗ್ರಹಣ’ ಕಾರ್ಯಕ್ರಮ ಮೇ.೨೬ರಂದು ಶುಕ್ರವಾರ ಸಂಜೆ ೩ ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ನೆರವೇರಲಿದೆ.ಅಂದು ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ, ಮಾಣಿಲ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸಭಾ ಕಾರ್ಯಕ್ರಮ ಉದ್ಘಾಟಿಸುವರು. Advertisement Advertisement ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ ಕೂಳೂರು, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ತಿಳಿಸಿದ್ದಾರೆ.
ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.ಸದಾ ನಗುಮುಖ, ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ 12 ಗಂಟೆಯ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. Advertisement Advertisement ರಾ.ಸ್ವ.ಸೇ.ಸಂಘದಲ್ಲಿ ಮಾತ್ರವಲ್ಲದೆ ಭಾರತೀಯ ಜನತಾ ಪಕ್ಷದಲ್ಲೂ ಗುರುತಿಸಿಕೊಂಡಿದ್ದ ಅವರು ಒಂದುಬಾರಿ ಪುದು ಜಿ.ಪಂ.ಚುನಾವಣೆಗೆ ಸ್ಪರ್ಧಿಸಿ ಸೋಲನ್ನನುಭವಿಸಿದ ಬಳಿಕ ರಾಜಕಾರಣದಿಂದ ದೂರ ಇದ್ದು,ರಾ.ಸ್ವ.ಸೇ. ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಮೇರಮಜಲು ಗ್ರಾ.ಪಂ.ಅಧ್ಯಕ್ಷರಾಗಿ, ಫರಂಗೀಪೇಟೆ ವ್ಯ.ಸೇ.ಸ.ಸಂಘದ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಕೊಡ್ಮಾಣ್ ಶ್ರೀಶಾರದ ಪೂಜಾ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ,ಕೊಡ್ಮಾಣ್ ಪ್ರೌಢಶಾಲಾ ಎಸ್ ಡಿಎಂಸಿ ಸದಸ್ಯರಾಗಿ ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.ಈ ಹಿಂದೆ ವಿಟ್ಲ ವಿಧಾನಸಭಾ ಕ್ಷೇತ್ರವಿದ್ದಾಗ ಬಿಜೆಪಿ ವಿಟ್ಲ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿದ್ದರು. ಸ್ಥಳೀಯವಾಗಿ ಯುವಕರ…
ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನ : ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ಬಂಟ್ವಾಳ: ಸುಮಾರು 1.5ಕೋ.ರೂ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಬಂಟ್ವಾಳ ತಾ. ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ಮೇ 20 ಶನಿವಾರ ರಂದು ಚಾಲನೆ ದೊರಕಿತು.ಆ ಪ್ರಯುಕ್ತ ಶನಿವಾರ ರಾತ್ರಿ ನಡೆದ ಧಾರ್ಮಿಕ ಸಭೆಯನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಂದರೆ ಹೋಗದ ಜ್ಞಾನ ಮತ್ತು ಹೋದರೆ ಬಾರದ ಮಾನ ಈ ಎರಡನ್ನು ಜತನದಿಂದ ಕಾಯ್ದಾಗ ಬದುಕು ಹಸನಾಗುವುದು. ಪ್ರಾಣದೇವರ ಉಪಾಸನೆಯಿಂದ ಜ್ಞಾನ ವೃದ್ಧಿಯಾಗುವುದು ಎಂದು ಹೇಳಿದರು. Advertisement ತ್ಯಾಗ, ಸೇವೆಗಳಿಗೆ ಪ್ರತೀಕ ಹನುಮ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣದ ಹೊಸ್ತಿಲಲ್ಲಿ ಮುಖ್ಯಪ್ರಾಣನ ದೇಗುಲವೂ ಪುನರ್ ನಿರ್ಮಾಣಗೊಂಡಿರುವುದು ರಾಷ್ಟ್ರ ಅಭಿವೃದ್ಧಿಯ ಸಂಕೇತ ಎಂದರು.ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮತ್ತೆ ಶಾಸಕನನ್ನಾಗಿ ಆಯ್ಕೆ ಮಾಡಿದ…
ಬಂಟ್ವಾಳ: ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳದ ಕೆಳಗಿನಮಂಡಾಡಿ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದ್ದು, ಈ ಸಂದರ್ಭ, ತಲವಾರು ಏಟಿಗೆ ಕೈ ತುಂಡಾಗಿ ನೆಲಕ್ಕೆ ಬಿದ್ದಿದೆ.ವೈಯಕ್ತಿಕ ದ್ವೇಷದಿಂದ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಆರೋಪಿ ಸಂತೋಷ್ ಗಾಗಿ ಬಂಟ್ವಾಳ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಗಾಯಾಳು ಶಿವರಾಜ್ ಕುಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೈ ಕಳೆದುಕೊಂಡಿದ್ದಾರೆ. Advertisement ವೈಯಕ್ತಿಕ ದ್ವೇಷದಿಂದ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಆರೋಪಿ ಎನ್ನಲಾದ ಸಂತೋಷ್ ಗಾಗಿ ಬಂಟ್ವಾಳ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಗಾಯಾಳು ಶಿವರಾಜ್ ಕುಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೈ ಕಳೆದುಕೊಂಡಿದ್ದಾರೆ. ಆರೋಪಿ ನಿನ್ನೆ ಮಧ್ಯರಾತ್ರಿ ಶಿವರಾಜ್ ಅವರಿಗೆ ಕರೆ ಮಾಡಿ ಅರ್ಬಿಗುಡ್ಡೆಯ ಅಂಗಡಿಯೊಂದರ ಸಮೀಪ ಬರಹೇಳಿದ್ದು, ಬಳಿಕ ಹಳೆ ವಿಚಾರವನ್ನು ಕೆದಕಿ ಮಾತಿನ ಚಕಮಕಿ ನಡೆಸಿದ್ದಾನೆ. ಈ ಸಂದರ್ಭ ಸಣ್ಣ ತಲವಾರಿನಿಂದ ಕೊಲೆಯತ್ನ ನಡೆಸಿದ ಸಂದರ್ಭ ಕೈ ಅಡ್ಡ ಹಿಡಿದ ಪರಿಣಾಮ, ಶಿವರಾಜ್ ಅವರ ಕೈ ತುಂಡಾಗಿ ನೆಲಕ್ಕೆ ಬಿದ್ದಿದೆ.…
ಬಂಟ್ವಾಳ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ಮಿಷನ್ ನಗರ ೨.೦ ಯೋಜನೆಯಡಿ ಸ್ಥಳೀಯ ಮಟ್ಟದಲ್ಲಿ ಪರಿಣಾಮ ಬೀರುವ ಅಭಿಯಾನವನ್ನು ಆರಂಭಿಸಿದ್ದು, ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆ ಕಾರ್ಯಕ್ರಮಕ್ಕೆ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಶನಿವಾರ ಚಾಲನೆ ನೀಡಲಾಯಿತು.ಮಂಗಳೂರು ನಗರ ಕೋಶದ ಯೋಜನಾ ನಿರ್ದೇಶಕ ಅಬಿದ್ ಗದ್ಯಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನವೀಕರಿಸಿ ಮರುಬಳಸಬಹುದಾದ ವಸ್ತುಗಳ ಉತ್ಪಾದನೆಯನ್ನು ಕಡಿಮೆಗೊಳಿಸಲು ಮತ್ತು ಸುಸ್ಥಿರ ಜೀವನ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಪರಿಸರ ರಕ್ಷಣೆ ಮಾಡುವಂಥ ಉದ್ದೇಶದಿಂದ ನನ್ನ ಜೀವನ ನನ್ನ ಸ್ವಚ್ಚ ನಗರ ಯೋಜನೆಯ ಕಾರ್ಯಕ್ರಮದಡಿ ಕಡಿಮೆಗೊಳಿಸುವುದು, ಮರುಬಳಕೆ ಮತ್ತು ಪುನರ್ಬಳಕೆ ಕೇಂದ್ರಗಳನ್ನು ಬಂಟ್ವಾಳ ಪುರಸಭಾ ವ್ಯಾಪ್ತಿಗಳಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರ ಅಥವಾ ಗುರುತಿಸಿರುವ ಎಂ.ಆರ್.ಎಫ್. ಗಳಲ್ಲಿ ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ವಸ್ತು ಮರುಪಡೆಯುವ ಸೌಲಭ್ಯ ಕೇಂದ್ರಗಳನ್ನು ರೆಡ್ಯುಸ್, ರಿಯೂಸ್ ಮತ್ತು ರಿಸೈಕಲ್ (ಆರ್.ಆರ್.ಆರ್.) ಕೇಂದ್ರಗಳಾಗಿ ಬಳಸಿ, ನನ್ನ ಜೀವನ ನನ್ನ…
ಬಂಟ್ವಾಳ: ಇಲ್ಲಿನ ಬಂಟ್ವಾಳ ಪೇಟೆಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಹರಿಯುವ ನೇತ್ರಾವತಿ ನದಿಯಲ್ಲಿನ ಬಂಡೆಗಳಲ್ಲಿ ವಿವಿಧ ಕಲಾಕೃತಿಗಳ ಕೆತ್ತನೆಗಳು ಕಾಣಿಸಲಾರಂಭಿಸಿದೆ. ಮಳೆಯಿಲ್ಲದೆ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದಂತೆಯೇ ಬಂಡೆ ಕಲ್ಲುಗಳ ಮೇಲೆ ಶಿವ, ನಂದಿ, ಪಾದ, ಪಾಣಿಪೀಠ, ಚೆನ್ನೆಮಣೆ, ಊಟದ ಬಟ್ಟಲು, ಜಡೆ, ಸೂರ್ಯ ಚಂದ್ರ, ತಾವರೆ ಮೊದಲಾದ ಅನೇಕ ಕೆತ್ತನೆಗಳು ಗೋಚರಿಸಿದೆ. Advertisement Advertisement ಅನಾದಿಕಾಲದಿಂದಲೂ ಈ ಕೆತ್ತನೆಗಳು ಇದ್ದು ನಾವು ಸಣ್ಣವರಾಗಿದ್ದಾಗ ಇಲ್ಲಿ ಬಂದು ಆಟವಾಡುತ್ತಿದ್ದೇವು. ಇಲ್ಲಿರುವ ಪಾದವನ್ನು ಸೀತೆಯ ಪಾದವೆಂದು ಹಿರಿಯರು ಕರೆಯತಿದ್ದರು ಎಂದು ಸ್ಥಳೀಯರಾದ ಬಂಟ್ವಾಳ ಪುರಸಭೆಯ ಹಿರಿಯ ಸದಸ್ಯ ಗೋವಿಂದ ಪ್ರಭು ತಿಳಿಸಿದ್ದಾರೆ. ಇಲ್ಲಿರುವ ಕೆತ್ತನೆಗಳ ಬಗ್ಗೆ ಸ್ಪಷ್ಟವಾದ ಐತಿಹಾಸಿಕ ದಾಖಲೆಗಳು ಇಲ್ಲದೇ ಇದ್ದರೂ ಕೂಡ ಋಷಿಮುನಿಗಳು ಇಲ್ಲಿ ತಪ್ಪಸ್ಸನ್ನಾಚರಿಸುವ ಸಂದರ್ಭದಲ್ಲಿ ಇಂತಹ ಕೆತ್ತನೆಗಳನ್ನು ಮಾಡಿ ದೇವರನ್ನು ಆರಾಧಿಸುತ್ತಿದ್ದರು ಎನ್ನುವ ನಂಬಿಕೆ ಸ್ಥಳೀಯರಲ್ಲಿದೆ. ನದಿಯಲ್ಲಿ ನೀರಿನ ಮಟ್ಟ ತೀವ್ರ ಕಡಿಮೆಯಾದಾಗ ಈ ಕೆತ್ತನೆಗಳು ಜನರಿಗೆ ಕಾಣಿಸುತ್ತವೆ. ಉಳಿದ ಸಂದರ್ಭದಲ್ಲಿ ನೀರಲ್ಲಿ ಮುಳುಗಡೆಯಾಗಿರುತ್ತದೆ. ಇತಿಹಾಸ…








