Author: admin

ಬಂಟ್ವಾಳ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ಹಾಗೂ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾ.8 ರಂದು ರವಿವಾರ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ. ಬೆಳಿಗ್ಗೆ 9ಕ್ಕೆ ವಧು-ವರರ ಭವ್ಯ ಮೆರವಣಿಗೆ ನಡೆಯಲಿದೆ. 18ನೇ ವರ್ಷದ ಮದುವೆ ದಿಬ್ಬಣಕ್ಕೆ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ನಿವೃತ್ತ ಬ್ಯಾಂಕ್ ಮ್ಯಾನೇಜರ್ ಚಂದ್ರಹಾಸ ಶೆಟ್ಟಿ ಮಜಲೋಡಿ, ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಷನ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ ಮತ್ತಿತರ ಗಣ್ಯರು ಚಾಲನೆ ನೀಡುವರು. ರಾಜ್ಯ ಧಾರ್ಮಿಕ ಪರಿಷತ್ ವಿಶೇಷ ಆಹ್ವಾನಿತ ಸದಸ್ಯ ರವಿಶಂಕರ್ ಸಮಾರಂಭ ಉದ್ಘಾಟಿಸುವರು, ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸುವರು, ಸಂಸದ ಬ್ರಿಜೇಶ್ ಚೌಟ ರಾಜ್ಯ ಪ್ರಶಸ್ತಿ ಪ್ರದಾನ ಮಾಡುವರು, ಉದ್ಯಮಿ ಅಬ್ದುಲ್ ಕುಂಞ ಹಾಗೂ ಪಿಲಾತಬೆಟ್ಟು ವ್ಯವಸಾಯ ಸೇವಾಸ ಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷ ಯು.ಎಸ್. ಚಂದ್ರಶೇಖರ್ ಭಟ್ ಮಂಗಲ…

Read More

ಬಂಟ್ವಾಳ: ಈ ವರ್ಷ ಬೇಸಿಗೆ ಅವಧಿ ಹೆಚ್ಚಾಗಿ, ಮಳೆ ತಡವಾಗುವ ಸಾಧ್ಯತೆಯಿರುವುದರಿಂದ ಜೂನ್ ತಿಂಗಳವರೆಗೆ ನೀರಿನ ಲಭ್ಯತೆಯನ್ನು ಕಾಯ್ದಿರಿಸುವುದು ಅತೀ ಮುಖ್ಯವಾಗಿದೆ. ಮುಂದಿನ ೪ ತಿಂಗಳವರೆಗೆ ನೀರಿನ ಶೇಖರಣೆಯನ್ನು ಕಾಯ್ದುಕೊಳ್ಳುವುದರ ಜೊತೆಗೆ ಮಂಗಳೂರು ನಗರಕ್ಕೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳುವುದು ಅತೀ ಅವಶ್ಯಕ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡುವುದರ ಜೊತೆಗೆ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ತುಂಬೆ ವೆಂಟೆಡ್ ಡ್ಯಾಂನಲ್ಲಿ ಬುಧವಾರ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿ, ಬಳಿಕ ಗಂಗಾಪೂಜೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ತುಂಬೆ ವೆಂಟೆಡ್ ಡ್ಯಾಂ ಮತ್ತು ಎಎಂಆರ್ ಡ್ಯಾಂನಲ್ಲಿ ಸಾಕಷ್ಟು ನೀರಿನ ಸಂಗ್ರಹಣೆಯಿದೆ. ಈ ವರ್ಷ ನೀರಿನ ಹಾಹಾಕಾರ ಬಾರದಿರಲಿ ಎಂದು ಗಂಗಾದೇವಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹರೀಶ್ ಕುಮಾರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಾಜಿ ಸಚಿವ ಬಿ.ರಮಾನಾಥ ರೈ, ಮನಪ್ತಾಯುಕ್ತ ರವಿಚಂದ್ರ…

Read More

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಬಿ.ಮೋಹನ್ ಆಯ್ಕೆಯಾಗಿದ್ದಾರೆ. ತ್ರೈವಾರ್ಷಿಕ ಮಹಾಸಭೆಯು ಶ್ರೀ ರಕ್ತೇಶ್ವರಿದೇವಿ ಸನ್ನಿಧಿ ವಠಾರದಲ್ಲಿ ಬ.ವಿಶ್ವನಾಥ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಮುಂದಿನ ಮೂರು ವರ್ಷದಅವಧಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸೇವಾ ಸಮಿತಿ ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಎನ್.ಶಿವಶಂಕರ್, ಕೋಶಾಧಿಕಾರಿಯಾಗಿ ರಾಜೇಶ್.ಎಲ್.ನಾಯಕ್, ಜತೆ ಕಾರ್ಯದರ್ಶಿಯಾಗಿ ಸತೀಶ್‌ಕುಮಾರ್ ಆಯ್ಕೆಯಾಗಿದ್ದಾರೆ. ಇತರಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Read More

ಬಂಟ್ವಾಳ: ಇಲ್ಲಿನ ಬಂಟ್ವಾಳ ತಾಲೂಕು ಬಂಟರ ಸಂಘದ ಮಹಿಳಾ ವಿಭಾಗ ವತಿಯಿಂದ ಎ.ಜೆ ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್ ಮಂಗಳೂರು ಹಾಗೂ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಮಂಗಳೂರು ಎಂಐಓ ಕ್ಯಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು, ಎನ್ ಜಿ ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದೊಂದಿಗೆ ಬೃಹತ್ ಆರೋಗ್ಯ ಉಚಿತ ತಪಾಸಣೆ ಮತ್ತು ರಕ್ತದಾನ ಶಿಬಿರ ಹಾಗೂ ಕ್ಯಾನ್ಸರ್ ಬಗ್ಗೆ ಜಾಗೃತಿ ಮತ್ತು ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ಬಂಟರ ಸಭಾಭವನದಲ್ಲಿ ಭಾನುವಾರ ನಡೆಯಿತು. ಎಂಐಓ ಕ್ಯಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆಯ ಕ್ಯಾನ್ಸರ್ ರೋಗ ತಜ್ಞೆ ಡಾ. ದಿವ್ಯಜ್ಯೋತಿ ಕಾರ್ಯಕ್ರಮ ಉದ್ಘಾಟಿಸಿದರು. ಎ.ಜೆ.ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಾಮನ್ ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಆರೋಗ್ಯ ಶಿಬಿರ ಆಯೋಜಿಸುವುದರಿಂದ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಯೆ ಜನರ ಬಳಿ ಬಂದಂತಾಗುತ್ತದೆ. ಜನರು ರೋಗ ಬರುವ ಮೊದಲೆ ಆರೋಗ್ಯ ತಪಾಸಣೆ ಮಾಡಿಸಿ ಕೊಳ್ಳುವುದು ಉತ್ತಮ ಎಂದರು. ರಕ್ತದಾನ ಒಳ್ಳೆಯ ಕೆಲಸ.…

Read More

ಬಂಟ್ವಾಳ: ಗ್ರಾಮ ಪಂಚಾಯತ್ ನಲ್ಲಿರುವ ಮಳೆಮಾಪನ ಕೇಂದ್ರಗಳನ್ನು ಸುಸ್ಥಿತಿಯಲ್ಲಿಡಲು ಕ್ರಮ ಕೈಗೊಳ್ಳಲು ಸಿದ್ದಕಟ್ಟೆ ಪಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿ. ಅಧ್ಯಕ್ಷ ಪ್ರಭಾಕರ ಪ್ರಭು ತೋಟಗಾರಿಕಾ ಸಚಿವರಿಗೆ ಮನವಿ ಮಾಡಿದ್ದಾರೆ 2024-25 ನೇ ಸಾಲಿಗೆ ಸಂಬಂಧಿಸಿದಂತೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಪ್ರೀಮಿಯಂ ಪಾವತಿಸಿದ ರೈತರಿಗೆ ಬಿಡುಗಡೆಯಾದ ಪರಿಹಾರದಲ್ಲಿ ತುಂಬಾ ಗೊಂದಲಗಳು ಆಗಿರುತ್ತವೆ . ಈ ಬಗ್ಗೆ ತೋಟಾಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಟೆಂಡರ್ ವಹಿಸಿದ ಎಜೆನ್ಸಿಗಳಲ್ಲಿ ವಿಚಾರಿಸಿದಾಗ ಮಳೆ ಮಾಪನ ಕೇಂದ್ರಗಳಲ್ಲಿ ಬಿದ್ದಿರುವ ಮಳೆಯ ಪ್ರಮಾಣದಲ್ಲಿ ಪರಿಹಾರ ನೀಡಲಾಗಿದೆ ಎಂದು ಸ್ಪಷ್ಟೀಕರಣ ನೀಡಿರುತ್ತಾರೆ . ಆದರೆ ಹೆಚ್ಚಿನ ಗ್ರಾಮ ಪಂಚಾಯತ್ ಗಳಲ್ಲಿರುವ ಮಳೆ ಮಾಪನ ಕೇಂದ್ರಗಳು ಚಲಾವಣೆ ಇಲ್ಲದೇ ದುಸ್ಥಿತಿಯಲ್ಲಿ ಇರುವುದಾಗಿ ತಿಳಿದು ಬಂದಿದೆ . ಇದರಿಂದಾಗಿ ಕರಾವಳಿಯ ಕೆಲವೊಂದು ತಾಲೂಕುಗಳಲ್ಲಿ ರೈತರು ಪಾವತಿಸಿದ ಪ್ರೀಮಿಯಂಗಿಂತಲೂ ಕಡಿಮೆ ಪರಿಹಾರ ದೊರೆತ್ತಿದೆ . ಇದರಿಂದ ಸಾವಿರಾರು ರೈತರಿಗೆ ಸಮರ್ಪಕ ಪರಿಹಾರ ದೊರಕದೇ ರೈತರು ಸರಕಾರದ ಅಸಮರ್ಪಕ ಧೋರಣೆಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ ಹಾಗೂ…

Read More

ಬಂಟ್ವಾಳ ಫೆ.28 ರ ಶನಿವಾರ ಬಿ.ಸಿ.ರೋಡಿನ ಅಲೆತ್ತೂರಿನಲ್ಲಿ ಮಂಗಳ ಫ್ರೆಂಡ್ಸ್ ಸರ್ಕಲ್ (ರಿ) ಇದರ 27 ನೇ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ 44 ನೇ ವರ್ಷದ ವಾರ್ಷಿಕೋತ್ಸವ ನಡೆಯಲಿರುವುದು. ಸಂಜೆ ಗಂಟೆ 5.30ರಿಂದ ಶನಿಪೂಜೆ ಪ್ರಾರಂಭ ರಾತ್ರಿ ಗಂಟೆ 7.30ಕ್ಕೆ ಮಂಗಳಾರತಿ, ಪ್ರಸಾದ ವಿತರಣೆ, ಹಾಗೂ ಅನ್ನಸಂತರ್ಪಣೆ ರಾತ್ರಿ ಗಂಟೆ 8.00 ಕ್ಕೆ ಸಭಾ ಕಾರ್ಯಕ್ರಮ ರಾತ್ರಿ ಗಂಟೆ 8.30 ರಿಂದ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ, ಹಾಗೂ ಸಭಾ ಕಾರ್ಯಕ್ರಮ ರಾತ್ರಿ ಗಂಟೆ 10.00 ರಿಂದ ಅಮ್ಮ ಕಲಾವಿದರು ಕುಡ್ಲ ಇವರಿಂದ ತುಳು ಹಾಸ್ಯಮಯ ನಾಟಕ ಆನ್ ಮಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಟ್ರಾಫಿಕ್ ವಾರ್ಡನ್ ಆಗಿ ಚಿರಪರಿಚಿತರಾಗಿದ್ದ ಡ್ರೈವಿಂಗ್ ತರಬೇತುದಾರ ಅಬ್ದುಲ್ ರಹಿಮಾನ್ ಪಟೇಲ್ (65) ಅಸೌಖ್ಯದಿಂದ ಬುಧವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೆಲವು ವರ್ಷಗಳ ಕಾಲ ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗಿಯಾಗಿದ್ದ ಇವರು ಊರಿಗೆ ಮರಳಿದ ಬಳಿಕ ಬಿ.ಸಿ.ರೋಡಿನ ಡ್ರೈವಿಂಗ್ ಸಂಸ್ಥೆಯಲ್ಲಿ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕರ್ತವ್ಯದ ಬಿಡುವಿನ ವೇಳೆಯಲ್ಲಿ ಬಿ.ಸಿ.ರೋಡು, ಕೈಕಂಬ ಪರಿಸರದಲ್ಲಿ ಟ್ರಾಫಿಕ್ ವಾರ್ಡನ್ ಸೇವೆ ನೀಡುತ್ತಿದ್ದರು. ಇವರ ಈ ಸೇವಾಕಾರ್ಯ ಸಾರ್ವಜನಿಕ ಕ್ಷೇತ್ರದಲ್ಲಿ ಮೆಚ್ಚುಗೆಗೆ ಪಾತ್ರವಾಗುವುದರ ಜೊತೆಗೆ ಆ ಸಮಯದಲ್ಲಿ ಸಿಬ್ಬಂದಿ ಕೊರತೆ ಎದುರಿಸುತ್ತಿದ್ದ ಟ್ರಾಫಿಕ್ ಪೊಲೀಸರಿಗೆ ವರದಾನವಾಗಿತ್ತು.‌ ಬಳಿಕ ಅನಾರೋಗ್ಯಕ್ಕೆ ತುತ್ತಾದ ಅವರು ಪರ್ಲಿಯಾ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.‌ ಅಬ್ದುಲ್ ರಹಿಮಾನ್ ಪಟೇಲ್ ಅವರ ಸೇವಾ ಕಾರ್ಯಕ್ಕೆ ಅನೇಕ ಸಂಘ ಸಂಸ್ಥೆಗಳು ಅವರನ್ನು ಗೌರವಿಸಿದ್ದವು.

Read More

ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರ ಸಂಘ ನಿ. ಶಂಭೂರು ಇದರ 2026-2031ನೇ ಸಾಲಿಗೆ ಅಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಹಾಗೂ ಉಪಾಧ್ಯಕ್ಷರಾಗಿ ಮಾಧವ ಪೂಜಾರಿ ಕರ್ಬೆಟ್ಟು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘದ ಚುನಾವಣೆಯಲ್ಲಿ ಈ ಆಯ್ಕೆ ಪ್ರಕಿಯೆ ನಡೆದಿದ್ದು ನಿರ್ದೇಶಕರಾಗಿ ಮೋನಪ್ಪ ಪೂಜಾರಿ ಬೊಂಡಾಲ, ಗೋಪಾಲ ಸುವರ್ಣ ಬಿ.ಸಿ.ರೋಡು, ಕೃಷ್ಣಪ್ಪ ಪೂಜಾರಿ ಬಾಳ್ತಿಲ, ಶ್ರೀಶ ಆರ್. ರಾಯಸ ನರಿಕೊಂಬು, ಅಶೋಕ್ ಆರ್. ಶಂಭೂರು, ರಾಜೇಶ್ ಶೇಡಿಗುರಿ, ನಾರಾಯಣ ಪೂಜಾರಿ ಕೇದಿಗೆ, ಸುಮತಿ ಮೋನಪ್ಪ ಪೂಜಾರಿ, ವೇದಾವತಿ ಸುರೇಶ್ ಪೂಜಾರಿ ಅವರು ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.

Read More

ಬಂಟ್ವಾಳ: ಇಲ್ಲಿನ ಮೂಡೂರು ಪಡೂರು ಜೋಡುಕರೆ ಕಂಬಳ ಸಮಿತಿ ವತಿಯಿಂದ ಮಾರ್ಚ್ 7ರಂದು ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲು ಗ್ರಾಮದಲ್ಲಿ ಬಂಟ್ವಾಳ ಕಂಬಳ ನಡೆಯಲಿದ್ದು, ಸಂಜೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮಿಸಲಿದ್ದಾರೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಗುರುವಾರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು ಈ ಬಾರಿ ಕಂಬಳದಲ್ಲಿ ಆಹಾರ ಮೇಳ ವಿಶೇಷತೆಗಳಲ್ಲಿ ಒಂದಾಗಿದ್ದು, ಪಾರ್ಕಿಂಗ್ ಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಹೊಸ ರಸ್ತೆಯನ್ನು ಸಮೀಪ ನಿರ್ಮಿಸಲಾಗಿದ್ದು, ವಾಹನಗಳ ಓಡಾಟಕ್ಕೆ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ಹಲವು ವರ್ಷಗಳಿಂದ ಈ ಕಂಬಳ ತನ್ನ ವಿಶೇಷತೆಗಳಿಂದ ಪ್ರಸಿದ್ಧಿ ಪಡೆದಿದ್ದು, ಚಿತ್ರತಾರೆಯರ ಸಹಿತ ಗಣ್ಯರು ವೀಕ್ಷಿಸಿದ್ದಾರೆ ಎಂದರು. ಬೆಳಗ್ಗೆ 8.45ಕ್ಕೆ ಉದ್ಘಾಟನಾ ಸಮಾರಂಭದಲ್ಲಿ ಸೋಲೂರು ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಬಾರ್ಕೂರು ಮಹಾಸಂಸ್ಥಾನದ ಶ್ರೀ ವಿದ್ಯಾವಾಚಸ್ಪತಿ ಡಾ. ಸಂತೋಷ್ ಗುರೂಜಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ, ಅಲ್ಲಿಪಾದೆ ಚರ್ಚ್ ಧರ್ಮಗುರು…

Read More

ಬಂಟ್ವಾಳ: ಒಗ್ಗಟ್ಟು ನಮ್ಮೆಲ್ಲರ ಶಕ್ತಿ. ಸಾಮರಸ್ಯದ ಮೂಲಕ ಜೀವನ ಹಾಗೂ ಸಮಾಜವನ್ನು ಮುನ್ನಡೆಸುವ ಜವಬ್ದಾರಿ ನಮ್ಮೆಲ್ಲರದ್ದಾಗಬೇಕು. ಭಿನ್ನಾಭಿಪ್ರಾಯವನ್ನು ಸಕರಾತ್ಮಕವಾಗಿ ಸ್ವೀಕರಿಸಿಕೊಂಡು ನಾವೆಲ್ಲರೂ ಭಾರತೀಯರು ಎಂಬ ಭಾವನೆಯೊಂದಿಗೆ ಭವಿಷ್ಯದ ಸಮಾಜಕ್ಕೆ ಪ್ರತಿಯೊಬ್ಬರು ಕಟಿ ಬದ್ಧರಾಗಬೇಕು ಎಂದು ರಾಜ್ಯ ವಿಧಾನಸಭಾದ್ಯಕ್ಷ ಡಾ. ಯು.ಟಿ.ಖಾದರ್ ಹೇಳಿದರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ಕೇಂದ್ರ ಕಚೇರಿಯ ನೂತನ ಕಟ್ಟಡಕ್ಕೆ ಸಜೀಪಮೂಡ ಗ್ರಾಮದ ಸುಭಾಷ್ ನಗರದಲ್ಲಿ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು. ಕುಲ ಕಸುಬುದಾರರಿಗೆ ಸ್ವಾಭಿಮಾನ ನೀಡಬೇಕೆನ್ನುವ ಉದ್ದೇಶ ಈ ಸಹಕಾರಿ ಸಂಘದ ಮೂಲಕ ಈಡೇರಿದೆ. ಪ್ರಸ್ತುತ ಸರ್ವರಿಗೂ ಸೇವೆ ನೀಡುವ ಸಹಕಾರಿ ಸಂಘವಾಗಿ ಪರಿವರ್ತನೆಯಾಗಿದೆ ಎಂದು ತಿಳಿಸಿದರು. ಸಹಕಾರಿ ಕ್ಷೇತ್ರ ದೊಡ್ಡ ಮಟ್ಟದ ಕೊಡುಗೆಯನ್ನು ದೇಶಕ್ಕೆ ನೀಡುತ್ತಿದೆ. ಸಹಕಾರ ಸಂಘಗಳು ಜನರ ವಿಶ್ವಸಾದೊಂದಿಗೆ ವ್ಯವಹಾರ ಮಾಡುತ್ತಿದೆ. ಇಲ್ಲಿನ ಸಮುದಾಯ ಭವನ ನಿರ್ಮಾಣಕ್ಕೆ ನಿಯಮಕ್ಕೆ ಅನುಗುಣವಾಗಿ ಅನುದಾನವನ್ನು ಸರಕಾರದಿಂದ ಒದಗಿಸಿಕೊಡುವುದಾಗಿ ಅವರು ಭರವಸೆ ನೀಡಿದರು. ಮಾಜಿ ಸಚಿವ ಬಿ. ರಮಾನಾಥ ರೈ ಕೇಂದ್ರ…

Read More