Author: admin
ಬಿ. ಜನಾರ್ದನ ಪೂಜಾರಿಯನ್ನು ಭೇಟಿಯಾದ ಯು.ಟಿ. ಖಾದರ್, ಸರ್ವರನ್ನು ಜೊತೆಯಾಗಿ ಕರೆದೊಯ್ಯುವಂತೆ ಖಾದರ್‌ಗೆ ಪೂಜಾರಿ ಸಲಹೆ ಬಂಟ್ವಾಳ: ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ಬುಧವಾರ ಸಂಜೆ ಬಂಟ್ವಾಳದಲ್ಲಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಜನಾರ್ದನ ಪೂಜಾರಿಯವರು ನಮ್ಮ ಪಕ್ಷದ ಹಿರಿಯ ನಾಯಕರು. ತನ್ನ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಬಿ. ಜನಾರ್ದನ ಪೂಜಾರಿಯವರು ಮಾರ್ಗದರ್ಶನ ಮಾಡಿದ್ದರು. ಅವರ ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಸಾಮಾಜಿಕ ಬದ್ದತೆ ನನ್ನ ರಾಜಕೀಯ ಜೀವನದಲ್ಲಿ ದೊಡ್ಡ ಮಟ್ಟದ ಪರಿಣಾಮವನ್ನು ಬೀರಿದೆ ಎಂದರು. ನಾಮಪತ್ರ ಸಲ್ಲಿಸುವ ಮೊದಲು ಅವರ ಆಶೀರ್ವಾದ ಪಡೆದುಕೊಂಡಿದ್ದೆ ಇದೀಗ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕವೂ ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಕಾಂಗ್ರೆಸ್‌ನ ಎಲ್ಲಾ ಕಾರ್ಯಕರ್ತರನ್ನು ಒಂದು ಕುಟುಂಬದ ರೀತಿಯಲ್ಲಿ ನೋಡಿಕೊಂಡು ಸರ್ವರನ್ನು ಜೊತೆಯಾಗಿ ಕರೆದೊಯ್ಯುವಂತೆ ಅವರು ಸಲಹೆ ನೀಡಿದ್ದು ಅದನ್ನು ಸ್ವೀಕರಿಸಿ ಪಕ್ಷವನ್ನು ಬಲಿಷ್ಠಗೊಳಿಸಿ, ಪಕ್ಷ ಕಾರ್ಯಕ್ರಮವನ್ನು ಜನರಿಗೆ…
ಬಂಟ್ವಾಳ: ಮಾರಾಟಕ್ಕಲದ ಸಿಮೆಂಟ್‌ಗಳನ್ನು ಬಿಜೆಪಿ ಮುಖಂಡನ ಮನೆಯಲ್ಲಿ ಅಕ್ರಮವಾಗಿ ದಾಸ್ತನಿರಿಸಿದ್ದಲ್ಲದೆ ಇದೇ ಸಿಮೆಂಟ್ ಬಳಸಿ ಎರಡು ಮನೆಗಳನ್ನು ನಿರ್ಮಿಸಿರುವ ಬಗ್ಗೆ ಸೂಕ್ತ ಕಾನೂನು ತನಿಖೆ ಆಗಬೇಕೆಂದು ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯಿಲ ಆಗ್ರಹಿಸಿದ್ದಾರೆ. Advertisement ಬಿ.ಸಿ. ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಅವರು ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಇತ್ತೀಚೆಗೆ ಬಿ. ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ಖಾಸಗಿ ವ್ಯಕ್ತಿಯ ಮನೆ ನಿರ್ಮಾಣದ ಸಂದರ್ಬ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ 21 ಗೋಣಿ ಸಿಮೆಂಟ್ ಅನ್ನು ವಶಕ್ಕೆ ಪಡೆದುಕೊಂಡಿದೆ. ಈ ನಿರ್ಮಾಣ ಹಂತದಲ್ಲಿರುವ ಕಟ್ಟಡವು ಬಂಟ್ವಾಳ ಬಿಜೆಪಿ ಮುಖಂಡನ ಸಂಬಂಧಿಯ ಮನೆಯಾಗಿದೆ. ಇದೇ ಸಂದರ್ಭ ಅರಳದಲ್ಲಿರುವ ಬಿಜೆಪಿ ಮುಖಂಡನ ಮನೆಗೆ ದಾಳಿ ಮಾಡಿದಾಗ ನಿರ್ಮಾಣ ಹಂತದಲ್ಲಿರುವ ಮನೆಯಲ್ಲೂ 30 ಗೋಣಿ ಸಿಮೆಂಟ್ ಚೀಲಗಳು ಸಿಕ್ಕಿದ್ದು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಖಾಸಗಿ ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡಿದ ಸಿಮೆಂಟ್‌ನ ಖಾಲಿ…
ಬಂಟ್ವಾಳ: ಬಂಟ್ವಾಳ ತಾ. ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನ ಸುಮಾರು 1.50 ಕೋ.ರೂ.ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದ್ದು, ಉಡುಪಿ ಸೋದೆ ವಾದಿರಾಜ ಮಠ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ವೇ.ಮೂ.ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ ಅವರ ಪೌರೋಹಿತ್ಯದಲ್ಲಿ ಮೇ 20ರಿಂದ ಮೇ 22ರವರೆಗೆವ ಶ್ರೀ ಮುಖ್ಯಪ್ರಾಣ ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದೆ.ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಮಂಗಳವಾರ ಶ್ರೀ ಕ್ಷೇತ್ರದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ವಿವರ ನೀಡಿದರು.ಕ್ಷೇತ್ರದ ಹಿನ್ನೆಲೆ: ತುಳುನಾಡಿನ, ಪ್ರಕೃತಿಯ ರಮಣೀಯ ಮಡಿಲಲ್ಲಿ, ಸುಮಾರು ಐದು ಶತಮಾನಗಳಿಂದ ಮೂಲ ಕುಂಞ ಕಾಯರ ವಂಶಸ್ಥರಿಂದ ಪೂಜಿಸಿಕೊಂಡು ಬಂದಿರುವ ಉರಾಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿಯ ಸನ್ನಿಧಿಯು ಭಕ್ತರ ಪಾಲಿಗೆ ನಿಜಕ್ಕೂ ಅಭಯದಾಯಕ, ಈ ಪುಣ್ಯಕ್ಷೇತ್ರವು ವಗ್ಗ, ಕಾಡಬೆಟ್ಟು ರಸ್ತೆಯಿಂದ ಸುಮಾರು 3.7 ಕಿ.ಮೀ ದೂರದಲ್ಲಿ, ವಾಮದಪದವಿನಿಂದ 3 ಕಿ.ಮೀ ದೂರದಲ್ಲಿದೆ. ಊರ ಪರವೂರ ಭಕ್ತರೆಲ್ಲರೂ…
ಬಂಟ್ವಾಳ: ಧಾರ್ಮಿಕದತ್ತಿ ಇಲಾಖೆಯ ವ್ಯಾಪ್ತಿಗೊಳಪಟ್ಟ ಜಿಲ್ಲೆಯ ಕಾರಣಿಕ ದೈವ ಕ್ಷೇತ್ರ ಸಜೀಪಮೂಡ ಗ್ರಾಮದ ಪಣೋಲಿಬೈಲು ಶ್ರೀ ಕಲ್ಲುರ್ಟಿ ಕ್ಷೇತ್ರದಲ್ಲಿ ಅಮಾವಾಸ್ಯೆಯ ಪ್ರಯುಕ್ತ ಮೇ. 19 ಶುಕ್ರವಾರದಂದು ಅಗೇಲು ಹಾಗೂ ಕೋಲ ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. Advertisement Advertisement
ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜನ ಶಿಕ್ಷಣ ಟ್ರಸ್ಟ್‌ನ ಸಹಭಾಗಿತ್ವದಲ್ಲಿ, ಬಂಟ್ವಾಳ ತಾಲೂಕು ಕೇಂದ್ರದಲ್ಲಿ ನಡೆಯುತ್ತಿರುವ ಸಾಂತ್ವನ ಕೇಂದ್ರದಲ್ಲಿ ತೆರವಾಗಿರುವ ಸಮಾಜ ಕಾರ್ಯಕರ್ತರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಮಾಜ ಕಾರ್ಯ ಅಥವಾ ಮನಶಾಸ್ತ್ರದಲ್ಲಿ ಪದವಿ ವಿದ್ಯಾರ್ಹತೆ ಹೊಂದಿದ್ದು 22 ರಿಂದ 25 ವರ್ಷದೊಳಗಿನ ಕಂಪ್ಯೂಟರ್ ಜ್ಞಾನ ಹೊಂದಿರುವ ಗೌರವಧನದ ಆಧಾರದಲ್ಲಿ ಕೆಲಸ ಮಾಡಲು ಇಚ್ಚಿಸುವ ಸೇವಾಸಕ್ತ ಮತ್ತು ಕ್ಷೇತ್ರ ಅನುಭವ ಹೊಂದಿರುವ ಬಂಟ್ವಾಳ ತಾಲೂಕು ವ್ಯಾಪ್ತಿಯೊಳಗಿನ ಮಹಿಳಾ ಅಭ್ಯರ್ಥಿಗಳು 25.05.2023 ರೊಳಗೆ ನಿರ್ದಿಷ್ಟ ಅರ್ಜಿ ನಮೂನೆಯನ್ನು ಸಾಂತ್ವನ ಕೇಂದ್ರದಿಂದ ಪಡೆದು ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ನಿರ್ದೇಶಕರು, ಜನ ಶಿಕ್ಷಣ ಟ್ರಸ್ಟ್, ಸಾಂತ್ವನ ಕೇಂದ್ರ, ಸ್ತ್ರೀ ಶಕ್ತಿ ಭವನ, ತಾಲೂಕು ಪಂಚಾಯತ್ ರಸ್ತೆ, ಬಿ.ಸಿ. ರೋಡ್, Email: santhwanabantwal089@gmail.com ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ : 8255- 233089, 9449642137ನ್ನು ಸಂಪರ್ಕಿಸಬಹುದು. Advertisement Advertisement
ಲಯನ್ಸ್ ಕ್ಲಬ್ ಬಂಟ್ವಾಳದ ನೂತನ ಲಯನ್ಸ್ ಸಭಾಭವನ ಉದ್ಘಾಟನೆ, ಕ್ಲಬ್‌ನ ಸುವರ್ಣ ಸಂಭ್ರಮಾಚರಣೆ ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ ವತಿಯಿಂದ ನಿರ್ಮಾಣಗೊಂಡ ಸಂಸ್ಥೆಯ ಸುವರ್ಣಮಹೋತ್ಸವದ ಯೋಜನೆಯಾದ ಲಯನ್ಸ್ ಸಭಾಭವನದ ಉದ್ಘಾಟನಾ ಸಮಾರಂಭ ಬಿ.ಸಿ.ರೋಡಿನಲ್ಲಿ ವಿಜ್ರಂಭಣೆಯಿಂದ ನಡೆಯಿತು. Advertisement ಲಯನ್ಸ್‌ನ ಅಂತರಾಷ್ಟ್ರೀಯ ನಿರ್ದೇಶಕ ಕೆ. ವಂಶೀಧರ್ ಬಾಬು ನೂತನ ಸಭಾಭವನವನ್ನು ಉದ್ಘಾಟಿಸಿದರು. ಅವರು ಮಾತನಾಡಿ ನೂತನ ಭವನದಿಂದ ಬಾಡಿಗೆ ರೂಪದಲ್ಲಿ ಬರುವ ಹಣವನ್ನು ಸಂಸ್ಥೆಯ ಸೇವಾ ಟ್ರಸ್ಟ್ ವತಿಯಿಂದ ನಡೆಯುವ ವಿಶೇಷ ಚೇತನ ಮಕ್ಕಳ ಫಿಸಿಯೋಥೆರಪಿ ಕೇಂದ್ರದ ಚಟುವಟಿಕೆಗಳಿಗೆ ಬಳಸುವ ಕ್ಲಬ್‌ನ ಬದ್ದತೆಯನ್ನು ಅಭಿನಂದಿಸುವುದಾಗಿ ತಿಳಿಸಿದರು. ಬಂಟ್ವಾಳ ಕ್ಲಬ್ ತನ್ನ ಸೇವಾ ಚಟುವಟಿಕೆಗಳ ಮೂಲಕ ಮಾಧರಿ ಕ್ಲಬ್ ಆಗಿ ಗುರುತಿಸಿದೆ ಎಂದು ಶ್ಲಾಘಿಸಿದ ಅವರು ಸ್ಫಾಪಕ ಸದಸ್ಯರನ್ನು ಅಭಿನಂದಿಸುವುದಾಗಿ ತಿಳಿಸಿದರು.ಪೂರ್ವ ಅಂತರಾಷ್ಟ್ರೀಯ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ ಹಾಗೂ ಜಿಲ್ಲಾ ಗವರ್ನರ್ ಎಸ್. ಸಂಜಿತ್ ಶೆಟ್ಟಿ ಶುಭ ಕೋರಿದರು. ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ…
ಬಂಟ್ವಾಳ: ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(30) ಮೃತಪಟ್ಟ ಯುವಕ. ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು. ಬಜರಂಗ ದಳ ಸೇರಿದಂತೆ ಇತರ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. Advertisement Advertisement
ಕಾರ್ಯಕರ್ತರ ಶ್ರಮ ಗೆಲುವಿಗೆ ಪೂರಕ: ರಾಜೇಶ್ ನಾಯ್ಕ್ ಬಂಟ್ವಾಳ: ನನ್ನ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ದುಡಿದಿರುವುದೇ ನನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ. ಕಳೆದ ಐದು ವರ್ಷದ ಅಧಕಾರವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯ ಹಾಗೂ ಈ ಭಾಗದಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಂತಿರುವುದರಿಂದ ಜನರು ಒಲವು ತೋರಿಸಿ ಗೆಲುವು ತಂದು ಕೊಟ್ಟಿದ್ದಾರೆ ಎಂದು ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಹೇಳಿದರು.ಅವರು ಶನಿವಾರ ಸಂಜೆ ಬಿ.ಸಿ.ರೋಡಿನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ವಿರೋಧ ಪಕ್ಷದಲ್ಲಿದ್ದುಕೊಂಡು ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇವೆ ಅದರ ಜೊತೆ ಜೊತೆಗೆ ಅವಕಾಶ ಸಿಕ್ಕಾಗಲೆಲ್ಲ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ವಿರೋಧ ಪಕ್ಷದಲ್ಲಿದ್ದುಕೊಂಡು ಕಳೆದ ವರ್ಷದಷ್ಟೇ ಅನುದಾನ ತಂದು ಕೆಲಸ ಮಾಡಲು ಸಾಧ್ಯವೋ ಎನ್ನುವುದು ಗೊತ್ತಿಲ್ಲ, ಆದರೆ ಕ್ಷೇತ್ರದ ಅಭಿವೃದ್ದಿಗಾಗಿ ನಾನು ಸಂಪೂರ್ಣ ಪ್ರಯತ್ನ ಪಡುತ್ತೇನೆ ಎಂದು ತಿಳಿಸಿದರು. Advertisement Advertisement ಭವಿಷ್ಯದ ಬಂಟ್ವಾಳದ ಬಗ್ಗೆ…
ಬಂಟ್ವಾಳದಲ್ಲಿ ಗೆಲುವಿನ ನಗೆ ಬೀರಿದ ರಾಜೇಶ್ ನಾಯ್ಕ್ ಬಂಟ್ವಾಳ: ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಹಾಗೂ ಕಾಂಗ್ರೆಸ್‌ನ ಬಿ. ರಮನಾಥ ರೈ ಮಧ್ಯೆ ನಡೆದ ಪ್ರಬಲ ಸ್ಪರ್ಧೆಯಲ್ಲಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ೮೨೮೨ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆರಂಭಿಕ ಹಂತದ ಅಂಚೆ ಮತದಾನದಲ್ಲಿ ಮಾತ್ರ ರಮಾನಾಥ ರೈ ಮುನ್ನಡೆಯನ್ನು ಸಾಧಿಸಿದ್ದರೆ, ಬಳಿಕ ರಾಜೇಶ್ ನಾಯ್ಕ ಅವರು ಕೊನೆಯ ಹಂತದವರೆಗೂ ಮುನ್ನಡೆಯನ್ನು ಸಾಧಿಸಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಎರಡನೇ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.ಒಟ್ಟು ಚಲಾಯಿತ ಮತಗಳು ೧,೮೩,೪೨೮, ರಾಜೇಶ್ ನಾಕ್ ೯೩,೩೨೪( ಬಿಜೆಪಿ), ರಮಾನಾಥ ರೈ(ಕಾಂಗ್ರೆಸ್) ೮೫,೦೪೨. ಪ್ರಕಾಶ್ ಗೋಮ್ಸ್ (ಜೆಡಿಎಸ್) ೪೫೪, ಪುರುಷೋತ್ತಮ ಕೋಲ್ಪೆ (ಆಮ್ ಆದ್ಮಿ) ೪೯೫, ಇಲಿಯಾಸ್ ಮಹಮ್ಮದ್ ತುಂಬೆ (ಎಸ್.ಡಿ.ಪಿಐ) ೫೪೩೬, ನೋಟಾ ೮೨೧ ಗಮನಿಸಬೇಕಾದ ಅಂಶವಾಗಿದೆ. ಹಾಲಿ ಶಾಸಕ ರಾಜೇಶ್ ನಾಯ್ಕ ಅವರ ಗೆಲುವಿನ ಅಂತರ ೮೨೮೨ ಅಗಿದ್ದು, ಶೇಕಡಾವಾರು ೫೦.೨೯ ಮತಗಳಿಸಿ ಜಯ ಸಾಧಿಸಿದ್ದಾರೆ.ಮಾಜಿ ಸಚಿವ…
ಮೇ.15: ಲಯನ್ಸ್ ಸಭಾಭವನ ಉದ್ಘಾಟನೆ, ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಬಂಟ್ವಾಳ: ಇಲ್ಲಿನ ಲಯನ್ಸ್ ಕ್ಲಬ್ ಬಂಟ್ವಾಳದ ವತಿಯಿಂದ ನಿರ್ಮಾಣಗೊಂಡ ಸಂಸ್ಥೆಯ ಸುವರ್ಣಮಹೋತ್ಸವದ ಯೋಜನೆಯಾದ ಲಯನ್ಸ್ ಸಭಾಭವನದ ಉದ್ಘಾಟನಾ ಸಮಾರಂಭ ಮೇ.15ರಂದು ಸೋಮವಾರ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್ ತಿಳಿಸಿದರು.ಅವರು ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಲಯನ್ಸ್‌ನ ಅಂತರಾಷ್ಟ್ರೀಯ ನಿರ್ದೇಶಕ ಕೆ. ವಂಶೀಧರ್ ಬಾಬು ನೂತನ ಸಭಾಭವನ ಉದ್ಘಾಟಿಸುವರು, ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಪೂರ್ವ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ, ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ವಸಂತ ಕುಮಾರ್ ಶೆಟ್ಟಿ, ಜಿಲ್ಲಾ ಗವರ್ನರ್ ಸಂಜಿತ್ ಶೆಟ್ಟಿ ಭಾಗವಹಿಸುವರು. ಅಭ್ಯಾಗತರಾಗಿ ಚುನಾಯಿತ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜಾ, ಚುನಾಯಿತ ಪ್ರಥಮ ಉಪಗವರ್ನರ್ ಬಿ.ಎಂ. ಭಾರತಿ, ಚುನಾಯಿತ ದ್ವಿತೀಯ ಉಪಗವರ್ನರ್ ಅರವಿಂದ ಶೆಣೈ, ಲಯನ್ಸ್ ಕ್ಲಬ್ ಬಂಟ್ವಾಳದ ಸ್ಥಾಪಕಾಧ್ಯಕ್ಷ ಡಾ. ಬಿ. ವಸಂತ ಬಾಳಿಗ ಭಾಗವಹಿಸುವರು ಎಂದು ತಿಳಿಸಿದರು.…








