Author: admin
ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ಸುಳ್ಳು ಹಬ್ಬಿಸುವ ಬಿಜೆಪಿಗೆ ತಕ್ಕ ಪಾಠ ಕಲಿಸಿ : ರಮಾನಾಥ ರೈ ಬಂಟ್ವಾಳ : ಸಮಾಜದಲ್ಲಿ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ದ್ವೇಷ ರಾಜಕಾರಣ ಮಾಡುವ ಬಿಜೆಪಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು. ಅವರು ಬಿ.ಸಿ.ರೋಡ್ ಪರ್ಲಿಯಾದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.ಕಳೆದ ಐದು ವರ್ಷದಲ್ಲಿ ಬಂಟ್ವಾಳ ಶಾಂತವಾಗಿದೆ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಅವಧಿಯಲ್ಲಿ ಬಂಟ್ವಾಳದ ನೆಮ್ಮದಿ ಕೆಡಿಸಿದವರೇ ಬಿಜೆಪಿಯವರು. ನಮ್ಮ ಅವಧಿಯಲ್ಲಿ ಚುನಾವಣೆಗೂ ಆರು ತಿಂಗಳಿರುವಾಗ ಗಲಭೆಗಳ ಸಂಚು ರೂಪಿಸಿ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಿದ್ದರು. ಕೊಲೆ ಪ್ರಕರಣವೊಂದನ್ನು ಕಾಂಗ್ರೆಸ್ ನಾಯಕರ ತಲೆಗೆ ಕಟ್ಟಲು ನೋಡಿದ್ದರು. ಆದರೆ, ನಾಲ್ಕೇ ದಿನದಲ್ಲಿ ಆರೋಪಿಗಳು ಪತ್ತೆಯಾದಾಗ ಅವರು ಬಿಜೆಪಿ ಕಾರ್ಯಕರ್ತರಾಗಿದ್ದುದು ಜಗಜ್ಜಾಹೀರಾಗಿತ್ತು ಎಂದು ಅವರು ಸ್ಮರಿಸಿದರು. Space for advertisement ಕಳೆದ ಐದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ…
80 ವರ್ಷ ಮೇಲ್ಪಟ್ಟವರಿಗೆ ಮತದಾನ ಬಂಟ್ವಾಳ : ಎಂಭತ್ತು ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿಗೆ ಮನೆಯಲ್ಲೇ ಮತದಾನ ಮಾಡುವ ಚುನಾವಣಾ ಆಯೋಗದ ನಿರ್ದೇಶನದಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ೨೫ ಸೆಕ್ಟರ್ ವ್ಯಾಪ್ತಿಯಲ್ಲಿ ಅಂಚೆ ಮತದಾನ ತಂಡಗಳು ಸೋಮವಾರ ಬೆಳಿಗ್ಗೆ ಮತದಾರರ ಮನೆಗಳಿಗೆ ತೆರಳಿದವು.ಓರ್ವ ಮೈಕ್ರೋ ವೀಕ್ಷಕರು, ಇಬ್ಬರು ಪೋಲಿಂಗ್ ಅಧಿಕಾರಿಗಳು, ಓರ್ವ ವೀಡಿಯೋ ಗ್ರಾಫರ್, ಹಾಗೂ ಪೊಲೀಸ್ ಸಿಬ್ಬಂದಿ ಸೇರಿದಂತೆ ಐದು ಮಂದಿ ಸಿಬ್ಬಂದಿಗಳ ತಂಡವುಪ್ರತಿ ಅರ್ಹ ಮತದಾದರರ ಮನೆಗೆ ತೆರಳಿ ಮನೆಯಿಂದಲೇ ಮತದಾನ ಮಾಡಿಸಲಾಯಿತು. Advertisement ಬಂಟ್ವಾಳ ವ್ಯಾಪ್ತಿಯಲ್ಲಿ ಚುನಾವಣಾ ತಂಡಗಳನ್ನು ಅಗತ್ಯ ನಿರ್ದೇಶನ ನೀಡಿ ಬೆಳಿಗ್ಗೆ ಮನೆಮನೆಗಳಿಗೆ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಆಬಿದ್ ಗದ್ಯಾಲ್, ಸಹಾಯಕ ಚುನಾವಣಾ ಅಧಿಕಾರಿ ಎಂ.ಬಿ.ಕೂಡಲಿಗಿ, ನೋಡಲ್ ಅಧಿಕಾರಿ ಸುನಿತಾ ಕುಮಾರಿ, ಮಾಸ್ಟರ್ ಟ್ರೈನರ್ ಅಬ್ದುಲ್ ರಝಾಕ್, ಉಪತಹಶೀಲ್ದಾರ್‌ಗಳಾದ ನವೀನ್ ಕುಮಾರ್, ರಾಜೇಶ್ ನಾಯ್ಕ್ , ನರೇಂದ್ರ ನಾಥ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು 80 ವರ್ಷ ಮೇಲ್ಪಟ್ಟವರಿಗೆ ಮತದಾನ Advertisement
ಕಾಂಗ್ರೆಸ್ಸಿನ ಪ್ರಜಾಧ್ವನಿ ಕೇಳುತ್ತಿಲ್ಲ, ಕುಕ್ಕರ್ ಧ್ವನಿ ಮಾತ್ರ ಕೇಳುತ್ತಿದೆ: ಕೆ. ಹರಿಕೃಷ್ಣ ಬಂಟ್ವಾಳ್ ಬಂಟ್ವಾಳ: ಉಚಿತ ಕೊಡುಗೆಯಿಂದ ಸ್ವಾಭಿಮಾನಿ ಭಾರತ ಕಟ್ಟಲು ಸಾಧ್ಯವಿಲ್ಲ. ಇದರಿಂದ ಶ್ರೀಲಂಕಾ ಪಾಕಿಸ್ತಾನದ ಪರಿಸ್ಥಿತಿ ಕರ್ನಾಟಕಕ್ಕೂ ಬರಲು ಸಾಧ್ಯವಿದೆ. ಬಿಜೆಪಿ ಬಂಟ್ವಾಳವನ್ನು ಜಿಲ್ಲೆಯ ಮಾದರಿ ಕ್ಷೇತ್ರವನ್ನಾಗಿ ಮಾಡಿದೆ, ಇಲ್ಲಿ ಕಾಂಗ್ರೆಸ್‌ನ ಪ್ರಜಾಧ್ವನಿ ಕೇಳುತ್ತಿಲ್ಲ, ಬದಲಾಗಿ ಕುಕ್ಕರ್ ಧ್ವನಿ ಮಾತ್ರ ಕೇಳುತ್ತಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಆರೋಪಿಸಿದರು. Advertisement ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಅಧಿಕಾರವಧಿಯಲ್ಲಿ ಶಾಂತಿ ಕದಡಿವರು ಬಿಜೆಪಿಯವರಲ್ಲ, ಕಾಂಗ್ರೆಸ್ಸಿಗರು ಹಾಗೂ ರಮನಾಥ ರೈಯವರ ರಾಜಕೀಯ ಚಿಂತನೆಯ ಪ್ರಭಾವದಿಂದಾಗಿ ಗಲಭೆಗಳು ಉಂಟಾಗಿದೆ. ಕೋಮುಗಲಭೆ, ಗೋಹತ್ಯೆ, ಹಿಂದೂ ಮುಸ್ಲಿಂ ಘರ್ಷಣೆ, ಹಿಂದೂ ಯುವಕರ ಮೇಲೆ ಕೇಸ್, ಜನಾರ್ದನ ಪೂಜಾರಿಯವರನ್ನು ನಿಂದಿಸಿ, ಅವರಲ್ಲಿ ಕಣ್ಣೀರಾಕಿಸಿದ ಹಿಂದಿನ ಹಸ್ತ ಯಾವುದು? ಎಂದು ಪ್ರಶ್ನಿಸಿದರು. ನಿಮಗೆ…
ಮಹಾ ಸಂಪರ್ಕ ಅಭಿಯಾನದಲ್ಲಿ ತೊಡಗಿಸಿ ಕೊಂಡವರಿಗೆ ಅಭಿನಂದನೆ ಸಲ್ಲಿಸಿದ ದೇವಪ್ಪ ಪೂಜಾರಿ ಬಂಟ್ವಾಳ: ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ ಮಹಾ ಸಂಪರ್ಕ ಅಭಿಯಾನ ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ.ಮಹಾಸಂಪರ್ಕದ ದಿನ ಕಾರ್ಯಕರ್ತರು ಪ್ರತೀ ಮತಕಟ್ಟೆಗಳಲ್ಲಿ ಒಟ್ಟು ಸೇರಿ , ಸೂಕ್ತ ಯೋಜನೆಯೊಡನೆ ಮನೆ- ಮನೆ ಪ್ರಚಾರವನ್ನು ಹಮ್ಮಿಕೊಂಡಿದ್ದಾರೆ. Advertisement Advertisement ಎರಡನೆಯ ಬಾರಿ ಮನೆ ಸಂಪರ್ಕಿಸುವ ಕಾರ್ಯದಲ್ಲಿ ಪಕ್ಷದ ಅಭ್ಯರ್ಥಿಯಾದ ರಾಜೇಶ್ ನಾಯ್ಕ್ ರವರು ಬಡಗಬೆಳ್ಳೂರು, ಪಾಣೆಮಂಗಳೂರು, ನರಿಕೊಂಬು ಗ್ರಾಮದ ಬೂತಿನಲ್ಲಿ ಮನೆ ಸಂಪರ್ಕ ಮಾಡಿದ್ದಾರೆ.ಮಾಜಿ ಶಾಸಕರಾದ ಎ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ ಮತ್ತು ಹರಿಕ್ರಷ್ಣ ಬಂಟ್ವಾಳ ಪಕ್ಷದ ಜವಾಬ್ದಾರಿ ಇರುವ ಎಲ್ಲಾ ಪ್ರಮುಖರು ತಮ್ಮ ತಮ್ಮ ಬೂತಿನಲ್ಲಿ ಮನೆ ಸಂಪರ್ಕದಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಯಕರ್ತರು…
ಮಹಾ ಸಂಪರ್ಕ ಅಭಿಯಾನ ಯಶಸ್ಸು: ರಾಜೇಶ್ ನಾಯ್ಕ್ ಬಂಟ್ವಾಳ: ವಿಧಾನ ಸಭಾ ಕ್ಷೇತ್ರಲ್ಲಿ ನಡೆದ ಮಹಾಅಭಿಯಾನ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ತಿಳಿಸಿದರು.ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ ಮಹಾ ಸಂಪರ್ಕ ಅಭಿಯಾನ ವನ್ನು ಏಪ್ರಿಲ್ ಭಾನುವಾರದಂದು ಹಮ್ಮಿಕೊಂಡಿದ್ದು ಪಕ್ಷದ ಜವಾಬ್ದಾರಿ ಇರುವ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತೀ ಮತಕಟ್ಟೆಗಳಲ್ಲಿ ಒಟ್ಟು ಸೇರಿ , ಸೂಕ್ತ ಯೋಜನೆಯೊಡನೆ ಮನೆ- ಮನೆ ಪ್ರಚಾರವನ್ನು 249 ಬೂತುಗಳಲ್ಲಿ ಯಶಸ್ವಿಗೊಳಿಸಿದ್ದಕ್ಕಾಗಿ ಕ್ಷೇತ್ರದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು. Advertisement ಬಂಟ್ವಾಳ ಮಂಡಲದಲ್ಲಿ ಯಶಸ್ವಿಯಾಗಿ ಮಾಡಲು ಜಿಲ್ಲಾ ಕ್ಷೇತ್ರ ಮಟ್ಟದ ಪ್ರಮುಖರು ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತು ಸಮಿತಿಯ ಸದಸ್ಯರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಯಶಸ್ವಿ ಮಾಡಿದ್ದಾರೆ. ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಸಲುವಾಗಿ ಬೂತು ಕಾರ್ಯಕರ್ತರಿಂದ ರಾಷ್ಟ್ರೀಯ ನಾಯಕರವರೆಗೆ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಯಾಗಿಸಿದ್ದಾರೆ…
ಜನಸೇವೆಗಾಗಿ ಬದುಕಿದವನು ನಾನು, ಶಾಸಕ, ಸಚಿವನಾದರೂ ಬಂಗಲೆ ಕಟ್ಟಿಲ್ಲ: ರಮಾನಾಥ ರೈ ಬಂಟ್ವಾಳ : ರಾಜ ವ್ಯಾಪಾರಿಯಾದರೆ ಪ್ರಜೆಗಳು ಭಿಕಾರಿಗಳಾಗುತ್ತಾರೆ ಎಂಬ ಮಾತಿದೆ. ಅದೇ ರೀತಿ ಇವತ್ತು ಉದ್ಯಮಿಗಳು ಜನಪ್ರತಿನಿಧಿಗಳಾಗುತ್ತಿರುವುದರಿಂದ ಅವರು ಎಲ್ಲವನ್ನೂ ಲಾಭದ ಸೃಷ್ಟಿಯಿಂದ ನೋಡುತ್ತಿದ್ದಾರೆ. ಜನಸೇವೆಗಿಂತ ಭ್ರಷ್ಟಾಚಾರ ಎಸಗುವುದಕ್ಕೆ ಅವರು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಇದು ಜನತೆಯನ್ನು ತೀರಾ ಸಂಕಷ್ಟಕ್ಕೀಡು ಮಾಡಿದೆ. ಆದರೆ ನಾನು ಜನಸೇವೆಗಾಗಿಯೇ ಬದುಕಿದವನು. ಶಾಸಕ, ಸಚಿವನಾದರೂ ನಗರಗಳಲ್ಲಿ ದೊಡ್ಡ ಬಂಗಲೆ ಕಟ್ಟಿಲ್ಲ. ನನ್ನ ಹಿರಿಯರು ಕೊಟ್ಟ ಮನೆಯಲ್ಲೇ ವಾಸಿಸುತ್ತಿದ್ದೇನೆ ಮತ್ತು ಅಲ್ಲಿಂದಲೇ ಜನಸೇವೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಾವೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. Advertisement ಬಿಜೆಪಿ ಆಡಳಿತದಲ್ಲಿ ಪ್ರತಿಯೊಂದು ವಿಚಾರಕ್ಕೂ ಭ್ರಷ್ಟಾಚಾರ ನಡೆದಿರುವ ಬಗ್ಗೆ ಅವರ ಪಕ್ಷಗಳ ಮುಖಂಡರುಗಳೇ ಆಪಾದಿಸಿದ್ದಾರೆ. ಇಂತಹ ಭ್ರಷ್ಟ ಸರಕಾರ ಕಿತ್ತೆಸೆಯದೆ ಜನರಿಗೆ ನೆಮ್ಮದಿಯ ಜೀವನ ಮರಳಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.ನನ್ನ…
ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು: ರಮಾನಾಥ ರೈ ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಬಂಟ್ವಾಳದಲ್ಲಿ ನಡೆದ ಸಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. Advertisement ಎಡಪಂಥಿಯ ಚಿಂತನೆಗಳು ಹಾಗೂ ಕಾಂಗ್ರೆಸ್ ಸಿದ್ಧಾಂತಕ್ಕೂ ಸಾಕಷ್ಟು ಸಾಮ್ಯತೆಯಿದೆ. ಕಾಂಗ್ರೆಸ್ ಹಾಗೂ ಎಡಪಂಥಿಯ ಪಕ್ಷಗಳು ಜೊತೆಗೂಡಿ ಸರಕಾರ ನಡೆಸಿದ ಇತಿಹಾಸವೂ ಇದೆ. ರಮಾನಾಥ ರೈ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಅವರನ್ನು ಗೆಲ್ಲಿಸುವ ಹೊಣೆ ನಮ್ಮ ಮೇಲೂ ಇದೆ. ಹೀಗಾಗಿ, ಈ ಚುನಾವಣೆಯಲ್ಲಿ ಬಂಟ್ವಾಳದಲ್ಲಿ ಸಿಪಿಐ ಕಾಂಗ್ರೆಸ್ ಅನ್ನು ಬೆಂಬಲಿಸಲಿದೆ ಎಂದು ಸಿಪಿಐ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್ ಹೇಳಿದರು. Advertisement ಸಿಪಿಐ ಜಿಲ್ಲಾ ಕಾರ್ಯದರ್ಶಿ…
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ಉಚಿತ ಸಾಮೂಹಿಕ ವಿವಾಹ , ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ಸಂಭ್ರಮಾಚರಣೆಯ ಪ್ರಯುಕ್ತ 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರವಿವಾರ ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಿತು.ಬೆಳಗ್ಗೆ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರ.ಕಾರ್ಯದರ್ಶಿ ಸುದರ್ಶನ್ ಬಜ ಅವರು ದಿಬ್ಬಣ ಮೆರವಣಿಗೆಯನ್ನು ಉದ್ಘಾಟಿಸಿದರು. ಬಳಿಕ ಮದುವೆ ಮಂಟಪದವರೆಗೆ ವಧು-ವರರ ದಿಬ್ಬಣ ಮೆರವಣಿಗೆ ನಡೆಯಿತು. ಸಭಾಂಗಣದಲ್ಲಿ ವಧು, ವರರನ್ನು ಸಾಂಪ್ರಾದಾಯಿಕವಾಗಿ ಎದುರುಗೊಳ್ಳಲಾಯಿತು. ಕೃಷ್ಣ ಭಟ್ ಕಾರ್ಕಳ ಅವರ ಪೌರೋಹಿತ್ಯದಲ್ಲಿ , ಮಧ್ಯಾಹ್ನ 11.22ರ ಶುಭ ಮುಹೂರ್ತದಲ್ಲಿ 9 ಜೋಡಿ ವಧು-ವರರಿಗೆ ಸಾಂಪ್ರದಾಯಿಕ, ಶಾಸ್ತ್ರೊಕ್ತವಾಗಿ ಸಾಮೂಹಿಕ ವಿವಾಹ ನಡೆಯಿತು. ಬಳಿಕ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನವದೆಹಲಿ ಅನಾರೋಖ್ ಪ್ರೈ.ಲಿ.ನ ವೈಸ್ ಚೆಯರ್ ಮೆನ್ ಸಂತೋಷ್ ಜೆ.ಪಿ. ಅವರು ಉದ್ಘಾಟಿಸಿ ಮಾತನಾಡಿ, ಸಮಾಜ ಸೇವೆ ಎನ್ನುವುದು ದೇವರ ಸೇವೆ ಮಾಡಿದಂತೆ.…
ಯಕ್ಷಗಾನದ ವೇಷಕ್ಕೆ ಅವಮಾನ ಖಂಡನೀಯ: ಅಶೋಕ್ ಶೆಟ್ಟಿ ಸರಪಾಡಿ ಬಂಟ್ವಾಳ: ಬಿ.ಸಿ.ರೋಡಿನಲ್ಲಿ ನಡೆದ ಮತದಾನದ ಜಾಗೃತಿ ಜಾಥವನ್ನು ಜನಸಾಮಾನ್ಯರ ಗಮನ ಸೆಳೆಯಲು ಯಕ್ಷಗಾನದ ವೇಷವನ್ನು ಶಿಷ್ಟಚಾರ ಬಿಟ್ಟು ಈ ರೀತಿ ಅಪಮಾನಿಸಿದ್ದು ಖಂಡನಾರ್ಹ ಎಂದು ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ದ.ಕ. ಜಿಲ್ಲಾ ಸಂಚಾಲಕ ಅಶೋಕ್ ಶೆಟ್ಟಿ ಸರಪಾಡಿ ಖಂಡಿಸಿದ್ದಾರೆ. Advertisement Advertisement ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಕಸ ಸಾಗಾಟದ ಗಾಡಿಯಲ್ಲಿ ರಾಜ ಗೌರವಾದರದ ಯಕ್ಷಗಾನ ವೇಷವನ್ನು ಕಸವೆಂದು ಅಧಿಕಾರಿಗಳು ಭಾವಿಸಿದಂತಿದೆ, ಕೂಡಲೇ ಆಯೋಜಕರು ಕಲಾ ವಲಯದ ಕ್ಷಮಾಯಾಚನೆ ಕೇಳಬೇಕು. ತಪ್ಪಿದರೆ ಇದರ ವಿರುದ್ಧ ಪ್ರತಿಭಟನೆ ಅನಿವಾರ್ಯ ಎಂದು ಎಚ್ಚರಿಸಿರುವ ಅವರು ಸಾವಿರಾರು ಮಂದಿ ಕಲಾವಿದರು ಚುನಾವಣಾ ಬಹಿಷ್ಕಾರಕ್ಕೆ ಕರೆ ಕೊಡುವುದಕ್ಕೆ ಮೊದಲು ತಕ್ಷಣ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಬಂಟ್ವಾಳ: ಚುನಾವಣಾ ಆಯೋಗ, ದ.ಕ. ಜಿಲ್ಲಾ ಸ್ವೀಪ್ ಸಮಿತಿ ಇದರ ಆಶ್ರಯದಲ್ಲಿ ತಾಲೂಕು ಆಡಳಿತ ಬಂಟ್ವಾಳ, ತಾಲೂಕು ಕಚೇರಿ ಬಂಟ್ವಾಳ, ಪುರಸಭೆ ಬಂಟ್ವಾಳ, ಕಾರ್ಮೆಲ್ ಕಾಲೇಜು ಮೊಡಂಕಾಪು ಇದರ ಸಹಯೋಗದಲ್ಲಿ ಮತದಾನ ಜಾಗೃತಿ ಜಾಥಕ್ಕೆ ಬಿ.ಸಿ.ರೋಡಿ ಕೈಕಂಬದ ಪೊಳಲಿ ದ್ವಾರದ ಬಳಿ ಚಾಲನೆ ನೀಡಲಾಯಿತು.ಜಾಗೃತಿ ಜಾಥವನ್ನು ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಉದ್ಘಾಟಿಸಿದರು. ಅವರು ಮಾತನಾಡಿ ನನ್ನ ಒಂದು ಮತದಾನದಿಂದ ಏನು ಆಗುವುದಿಲ್ಲ ಎನ್ನುವ ಮನೋಭಾವ ಬಿಟ್ಟು ಪ್ರತಿಯೊಬ್ಬರು ಮತದಾನ ಮಾಡಬೇಕು ಎಂದರು. ಬಂಟ್ವಾಳದಲ್ಲಿ ಮತದಾನ ಜಾಗೃತಿ ಜಾಥ, ಯಕ್ಷಗಾನದ ಮೂಲಕ ಮತದಾನ ಜಾಗೃತಿ ಚುನಾವಣಾ ಆಯೋಗದ ನಿರ್ದೇಶನದಂತೆ ನಮ್ಮ ನಡೆ ಮತದಾನದ ಕಡೆ ಎನ್ನುವ ದಿನಾಚರಣೆಯನ್ನು ಕರ್ನಾಟಕ ರಾಜ್ಯದ್ಯಂತ ಆಚರಿಸಲಿದ್ದೇವೆ, ಎಲ್ಲಾ ಮತಗಟ್ಟೆ ಅಧಿಕಾರಿಗಳು ಮತಗಟ್ಟೆ ಕೇಂದ್ರಗಳಲ್ಲಿ ಕುಳಿತು ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಲಿದ್ದಾರೆ. ವಿಶೇಷವಾಗಿ ಕಲಾವಿದರ ಮೂಲಕ ಜನರ ಮನಸ್ಸನ್ನು ಸೆಳೆಯುವ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.ಬಂಟ್ವಾಳ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಅಭಿದ್ ಗದ್ಯಾಲ್ ಮಾತನಾಡಿದರು.…








