Author: admin
ಬಂಟ್ವಾಳ: ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸೇವಾ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾದ ಸಮಾಜ ಸೇವಾ ರತ್ನ ಡಾ| ಅಮ್ಮೆಂಬಳ ಬಾಳಪ್ಪರವರ ಜನ್ಮದಿನದ ಪ್ರಯುಕ್ತ ಭಾನುವಾರ ಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಸಮಾಜ ಸೇವಾ ಸಹಕಾರಿ ಸಂಘದ ಕೇಂದ್ರ ಕಚೇರಿಯ ಸಮಾಜ ಸಹಕಾರಿ ಭವನದ ಡಾ। ಬಾಳಪ್ಪ ವೇದಿಕೆಯಲ್ಲಿ ಏರ್ಪಡಿಸಲಾಗಿತ್ತು. ಸ್ಥಾಪಕರ ದಿನಾಚರಣೆಯ ಪ್ರಯುಕ್ತ ಉನ್ನತ ಶಿಕ್ಷಣ ಪಡೆಯುತ್ತಿರುವ ಸಂಘದ 204 ಸದಸ್ಯರ ಮಕ್ಕಳಿಗೆ ಸಂಘದ ವಿದ್ಯಾನಿಧಿಯಿಂದ ಒಟ್ಟು ರೂ.8,80,000 ವಿದ್ಯಾರ್ಥಿವೇತನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಐಸಿಐಸಿಐ ಬ್ಯಾಂಕ್ ಸಹಯೋಗದೊಂದಿಗೆ ಸಂಘದ ಐ.ಎಫ್.ಎಸ್.ಸಿ ಕೋಡ್ ಮತ್ತು ಸಂಘದ ಸದಸ್ಯರ ಖಾತೆಗೆ ಯುಪಿಐ, ಐಎಂಪಿ ಮತ್ತು ನೆಫ್ಟ್ ಮೂಲಕ ನೇರವಾಗಿ ಜಮೆ ಮಾಡುವ ಇ-ಕಲೆಕ್ಷನ್ ಸೌಲಭ್ಯವನ್ನು ಬಿಡುಗಡೆ ಮಾಡಲಾಯಿತು. ಈ ಮೂಲಕ ಬಂಟ್ವಾಳ ತಾಲೂಕಿನಲ್ಲಿ ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಮೊದಲ ಸಹಕಾರಿ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಐ.ಸಿ.ಐ.ಸಿ.ಐ. ಬ್ಯಾಂಕ್ ರೀಜನಲ್ ಹೆಡ್…
ಬಂಟ್ವಾಳ: ಬಿ.ಸಿ.ರೋಡಿನ ನಾರಾಯಣ ಗುರು ವೃತ್ತದ ಬಳಿಯಿಂದ ಪೊಸಳ್ಳಿ, ದೈಪಲ, ಕಾಮಾಜೆ, ಕುಲಾಲರ ಮಠ ಸಂಪರ್ಕ ರಸ್ತೆಗೆ ಸ್ವಾತಂತ್ರ್ಯ ಯೋಧ ಡಾ.ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣ ಕಾರ್ಯಕ್ರಮ ಅವರ 104 ನೇ ಜನ್ಮದಿನದ ಅಂಗವಾಗಿ ಸೋಮವಾರ ನಡೆದಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನಾಮಫಲಕ ಅನಾವರಣಗೊಳಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು ರಸ್ತೆಗೆ ಬಾಳಪ್ಪರ ಹೆಸರು ಇಟ್ಟ ತಕ್ಷಣ ನಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ಬದಲಾಗಿ ರಸ್ತೆಯನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸಿ ಸುಂದರೀಕರಣಗೊಳಿಸಿದಾಗ ಮಾತ್ರ ನಾಮಕರಣ ಮಾಡಿರುವುದು ಅರ್ಥಪೂರ್ಣವಾಗುತ್ತದೆ. ತನ್ನ ಶಾಸಕರ ನಿಧಿಯಿಂದ ರಸ್ತೆ ಅಭಿವೃದ್ದಿಗೆ ಅನುದಾನ ಒದಗಿಸುವುದಾಗಿ ತಿಳಿಸಿದ ರಾಜೇಶ್ ನಾಯ್ಕ್ ಬಳಿಕ ರಸ್ತೆಯ ಇಕ್ಕೆಲಗಳಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸುಂದರಗೊಳಿಸುವಂತೆ ತಿಳಿಸಿದರು. ಬಿಎಸ್ ಎಫ್ ನಿವೃತ್ತ ಕಮಾಂಡರ್ ಚಂದಪ್ಪ ಮೂಲ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಅಮ್ಮೆಂಬಳ ಬಾಳಪ್ಪ ಅವರ ಹೆಸರು ಚಿರಸ್ಥಾಯಗೊಳಿಸುವ ನಿಟ್ಟಿನಲ್ಲಿ ಶಾಶ್ವತವಾದ ಕೆಲಸ ಆಗಬೇಕಿದ್ದು ಪ್ರಸ್ತುತ ದಿನಗಳಲ್ಲಿ ಹಂತಹಂತವಾಗಿ ನಡೆಯುತ್ತಿದೆ.…
ಬಂಟ್ವಾಳ: ನರಿಕೊಂಬು ಗ್ರಾಮ ಪಂಚಾಯತಿ ಮಟ್ಟದ ಅರುಂಧತಿ ಸಂಜೀವಿನಿ ಒಕ್ಕೂಟ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಆಶ್ರಯದಲ್ಲಿ ಒಕ್ಕೂಟದ ೨೫ ಸದಸ್ಯರಿಗೆ ನೀಡಲಾದ ತರಬೇತಿಯ ಸಮಾರೋಪ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಅಧ್ಯಕ್ಷೆ ವಿದ್ಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನರಿಕೊಂಬು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೃಷ್ಣನಾಯ್ಕ್, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್, ಸಂಪನ್ಮೂಲ ವ್ಯಕ್ತಿ ಅಂಜನಾ ಪ್ರಭಾಕರ್, ಸಂಜೀವಿನಿ ಅಭಿಯಾನ ಘಟಕದ ವಲಯ ಮೇಲ್ವಿಚಾರಕಿ ಕುಸುಮ ಹಾಗೂ ಕಸೂತಿ ತರಬೇತಿ ಪಡೆದ 25 ಮಂದಿ ಸದಸ್ಯರು ಉಪಸ್ಥಿತರಿದ್ದರು. ಅಶ್ವಿನಿ ಸ್ವಾಗತಿಸಿದರು. ತನುಜಾ ವಂದಿಸಿದರು. ಅನಿತಾ ನಿರೂಪಿಸಿದರು ತರಬೇತಿ ಪಡೆದ ಸದಸ್ಯರು ತಾವು ಸಿದ್ದಪಡಿಸಿದ ಉಡುಪುಗಳ ಪ್ರದರ್ಶನವನ್ನು ಏರ್ಪಡಿಸಿದರು.
ಬಂಟ್ವಾಳ: ದ.ಕ. ಜಿಲ್ಲಾ ಕೆಂದ್ರ ಸಹಕಾರಿ ಬ್ಯಾಂಕ್ ನಿ., ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ಬಿ.ಸಿ.ರೋಡು, ಸಹಕಾರ ಇಲಾಖೆ ದ.ಕ. ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲೆಯ ಪತ್ತಿನ, ಮೂರ್ತೆದಾರರ ಮತ್ತು ಇತರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ನಿ. ದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಕಾನೂನುಗಳು ಬದಲಾಗುತ್ತಿದ್ದಂಯೇ ಸಹಕಾರಿ ಕ್ಷೇತ್ರದಲ್ಲಿ ಅನೇಕ ಸವಾಲುಗಳು ಸಿಬ್ಬಂದಿಗಳಿಗೆ ಎದುರಾಗುತ್ತಿರುತ್ತದೆ. ಈ ನಿಟ್ಟಿನಲ್ಲಿ ಕಾನೂನು ಅರಿವು ಮೂಡಿಸುವುದರ ಜೊತೆಗೆ ಗ್ರಾಹಕರೊಂದಿಗೆ ಉತ್ತಮ ವ್ಯವಹಾರ ಮಾಡಲು ಇಂತಹ ತರಬೇತಿ ಸಹಕಾರಿಯಾಗಲಿದೆ. ಸಹಕಾರಿ ಯೂನಿಯನ್ ನಿರ್ದೇಶಕನಾದ ಬಳಿಕ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ತರಬೇತಿ ಹಮ್ಮಿಕೊಳ್ಳಬೇಕೆಂಬ ಬೇಡಿಕೆಗೆ ಸಹಕಾರಿ ಯೂನಿಯನ್…
ಬಂಟ್ವಾಳ: ದ.ಕ. ಜಿಲ್ಲಾ ಕೆಂದ್ರ ಸಹಕಾರಿ ಬ್ಯಾಂಕ್ ನಿ., ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ಬಿ.ಸಿ.ರೋಡು . ಸಹಕಾರ ಇಲಾಖೆ ದ.ಕ. ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲೆಯ ಪತ್ತಿನ, ಮೂರ್ತೆದಾರರ ಮತ್ತು ಇತರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ ಫೆ. ೨೧ರಂದು ಶನಿವಾರ ಬೆಳಿಗ್ಗೆ ೯ ಗಂಟೆಗೆ ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿದೆ. ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ನಿ. ದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಿ. ಪದ್ಮಶೇಖರ್ ಜೈನ್, ಸವಿತಾ ಎನ್. ಶೆಟ್ಟಿ, , ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್. ರಮೇಶ್, ಸಹಾಯಕ ನಿಬಂಧಕಿ ತ್ರಿವೇಣಿ…
ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚgಣಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಬಂಟ್ವಾಳ ವಿಧಾನ ಸಭಾಕ್ಷೇತ್ರ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಶುಕ್ರವಾರ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ತಹಶಿಲ್ದಾರ್ ಜಿ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರ್ವಜ್ಞನ ತ್ರಿಪದಿಗಳ ಸಾರ ಇಂದಿನ ಯುವ ಸಮುದಾಯಕ್ಕೆ ತಿಳಿದಿಲ್ಲ. ಸರ್ವಜ್ಞನ ವಿಚಾರಧಾರೆಗಳನ್ನು ಶಾಲಾ ಮಕ್ಕಳಿಗೆ ತಿಳಿಸುವ ಕಾರ್ಯ ಆಗಬೇಕಿದೆ ಎಂದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸರ್ವಜ್ಞನ ವಿಚಾರಧಾರೆ ಇಡೀ ಮಾನವ ಸಮುದಾಯಕ್ಕೆ ತಲುಪಬೇಕಾಗಿದೆ. ಸರ್ವಜ್ಞ ಜಯಂತಿ ಆಚರಣೆಯಲ್ಲಿ ಎಲ್ಲಾ ವರ್ಗದ ಜನರನ್ನು ಸೇರಿಸಿಕೊಳ್ಳಬೇಕು. ಆ ಮೂಲಕ ಯುವ ಸಮುದಾಯಕ್ಕೆ ಶ್ರೇಷ್ಠ ವ್ಯಕ್ತಿಗಳ ವಿಚಾರಧಾರೆ ತಲುಪಬೇಕು ಎಂದು ತಿಳಿಸಿದರು. ಫರಂಗಿಪೇಟೆ ಶ್ರೀರಾಮ ವಿದ್ಯಾಸಂಸ್ಥೆಯ ಮುಖ್ಯಸ್ಥ ದೇವದಾಸ್ ಕೊಡ್ಮಾಣ್ ಉಪನ್ಯಾಸ ನೀಡಿ…
ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರವನ್ನು ಬಂಟ್ವಾಳ ಪುರಸಭೆಯ ಐಟಿ ಸಿಬ್ಬಂದಿ ಜಯಶ್ರೀ ಆಚಾರ್ಯ ಅವರಿಗೆ ನೀಡಿ ಗೌರವಿಸಲಾಯಿತು. ಬಿ.ಸಿ.ರೋಡಿನ ಕೈಕಂಬದ ಶ್ರೀ ಲಕ್ಷ್ಮೀ ಜ್ಯವೆಲರ್‍ಸ್‌ನಲ್ಲಿ ನಡೆದ ಜೆಸಿಐ ಬಂಟ್ವಾಳ ಮಾಸಿಕ ಸಭೆಯಲ್ಲಿ ಅಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ ಗೌರವಿಸಿದರು. ಈ ಸಂದರ್ಭ ಕಾರ್ಯದರ್ಶಿ ಕಿರಣ್ ಕುಮಾರ್, ಕೋಶಾಧಿಕಾರಿ ಶಿವರಾಂ ಮರ್ತಾಜೆ, ಲೇಡಿ ಜೇಸಿ ಸಂಯೋಜಕಿ ಅನುಷಾ ಕಿಶೋರ್, ಪೂರ್ವಾಧ್ಯಕ್ಷೆ ರಶ್ಮಿ ಶೆಟ್ಟಿ, ಸದಸ್ಯೆ ದೀಪ್ತಿ ರೋಷನ್, ಪೂರ್ವಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ಕರ್ತವ್ಯದ ವೇಳೆ ಮೆಸ್ಕಾಂನ ಮೀಟರ್ ರೀಡರ್ ಒಬ್ಬರಿಗೆ ಸಾಕು ನಾಯಿಯೊಂದು ಕಚ್ಚಿ ಗಂಭೀರ ಗಾಯಗೊಳಿಸಿದ ಘಟನೆ ರಾಯಿ ಗ್ರಾಮದ ಕೈತ್ರೋಡಿ ಕ್ವಾಟ್ರಸ್‌ನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಇರಾ ಗ್ರಾಮದ ನಿವಾಸಿಯಾಗಿರುವ ಸಂಪತ್ ಆರ್. ಶೆಟ್ಟಿ ನಾಯಿ ಕಡಿತಕ್ಕೊಳಗಾಗಿದ್ದು ಕೈಗೆ ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಪತ್ ಅವರು ಕೈತ್ರೋಡಿ ಕ್ವಾಟ್ರಸ್ ಬಳಿ ಮೀಟರ್ ರೀಡಿಂಗ್ ಮುಗಿಸಿ ಮುಖ್ಯ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಮನೆಯೊಂದರ ಸಾಕು ನಾಯಿ ಏಕಾಏಕಿ ಓಡಿ ಬಂದು ಇವರ ಕೈಗೆ ಕಚ್ಚಿ ಗಾಯಗೊಳಿಸಿದೆ. ನಾಯಿ ದಾಳಿಗೆ ಒಳಗಾದ ಸಂಪತ್ ಅವರ ಕೈಯ ಮಾಂಸವೇ ಕಿತ್ತು ಬಂದಿದೆ. ತಕ್ಷಣ ಸ್ಥಳೀಯರು ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ತಕ್ಷಣ ಶಸ್ತ್ರಚಿಕಿತ್ಸೆಯ ಅಗತ್ಯತೆ ಇರುವುದರಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿ ಮಂಗಳವಾರ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೀಟರ್ ರೀಡರ್‌ಗಳಿಗೆ ಭದ್ರತೆಯಿಲ್ಲ: ವಿದ್ಯುತ್ ಬಿಲ್ ನೀಡಲು ಮನೆ ಮನೆಗಳಿಗೆ ಹೋಗುವ ಮೆಸ್ಕಾಂನ ಮೀಟರ್ ರೀಡರ್‌ಗಳು…
ಬಂಟ್ವಾಳ: ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಫೆ.15ರಂದು ನಡೆಯಲಿದೆ. ಬೆಳಿಗ್ಗೆ 6.30ಕ್ಕೆ ಅರ್ಚಕ ರಘುರಾಮ್ ಮಯ್ಯ ದೀಪ ಪ್ರಜ್ವಲಿಸುವರು, ಬಳಿಕ ವಿವಿಧ ಭಜನಾ ತಂಡಗಳಿಂದ ಭಜನೋತ್ಸವ ಕಾರ್ಯಕ್ರಮ ನಡೆಯಲಿದೆ. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಘು ಎಲ್. ಶೆಟ್ಟಿ ದೇವಸ್ಯ, ಸೀತಾರಾಮ ಪೂಂಜ, ಕುಶಕುಮಾರ್ ಉಪಸ್ಥಿತರಿರುವರು. ಬೆಳಿಗ್ಗೆ 9 ಗಂಟೆಗೆ ಏಕಾದಶ ರುದ್ರಾಭಿಷೇಕ, ವಿಶೇಷ ರುದ್ರಹೋಮ, ರಾತ್ರಿ 7ಕ್ಕೆ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ರಾತ್ರಿ 7.30ಕ್ಕೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಶ್ರೀ ತುಲಸಿ ಕಾಲಮಿತಿ ಯಕ್ಷಗಾನ ಬಯಲಾಟ ನಡೆಯಲಿದೆ
ಬಂಟ್ವಾಳ: ಅಭಿರುಚಿ ಜೋಡುಮಾರ್ಗ ಮತ್ತು ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ (ರಿ) ಮಂಚಿ ಸಹಯೋಗದಲ್ಲಿ ನಟಮಿತ್ರರು ಹವ್ಯಾಸಿ ಕಲಾಸಂಘ (ರಿ.) ತೀರ್ಥಹಳ್ಳಿ ಅಭಿನಯಿಸುವ ಆ ಊರು ಈ ಊರು ನಾಟಕ ಫೆ.೧೫ರಂದು ಭಾನುವಾರ ಬಂಟ್ವಾಳ ಸ್ಪರ್ಶಾ ಕಲಾಮಂದಿರದಲ್ಲಿ ಸಂಜೆ 6.30ಕ್ಕೆ ನಡೆಯಲಿದೆ ಎಂದು ಅಭಿರುಚಿ ಅಧ್ಯಕ್ಷ ದಾಮೋದರ ರಾಮಕುಂಜ ತಿಳಿಸಿದ್ದಾರೆ. ದೆಹಲಿಯ ಭಾರತ್ ರಂಗಮಹೋತ್ಸವಕ್ಕೆ ಆಯ್ಕೆಯಾಗಿರುವ ಈ ನಾಟಕವನ್ನು ಜಿ. ಬಿ. ಜೋಷಿ ರಚಿಸಿದ್ದು, ಪ್ರಸಿದ್ಧ ರಂಗಕರ್ಮಿ ಹುಲುಗಪ್ಪ ಕಟ್ಟೀಮನಿ ನಿರ್ದೇಶಿಸಿದ್ದಾರೆ.








