Author: admin
ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.99.72 ಫಲಿತಾಂಶ ಬಂಟ್ವಾಳ: ಮೊಡಂಕಾಪುವಿನ ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು ಇಲ್ಲಿ ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 358 ವಿದ್ಯಾರ್ಥಿಗಳು ಹಾಜರಾಗಿದ್ದು 115ಮಂದಿ ವಿಶಿಷ್ಟ ಶ್ರೇಣಿ, 215 ಮಂದಿ ಪ್ರಥಮ ಶ್ರೇಣಿ, 26 ಮಂದಿ ದ್ವಿತೀಯ ಶ್ರೇಣಿ ಹಾಗೂ ಒರ್ವ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿ ಒಟ್ಟು 99.72 ಶೇ. ಫಲಿತಾಂಶ ದಾಖಲಾಗಿದೆ. Advertisement ಕಲಾ ವಿಭಾಗದಲ್ಲಿ ಶೇ. 100, ವಾಣಿಜ್ಯ ವಿಭಾಗದಲ್ಲಿ ಶೇ. 99.5, ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ ಬಂದಿದೆ.ಕಲಾ ವಿಭಾಗದಲ್ಲಿ ಸಾಕ್ಷಿ ಆನಂದ ಸಾಲ್ಯಾನ್ 560 ಅಂಕ, ವಾಣಿಜ್ಯ ವಿಭಾಗದಲ್ಲಿ ಗೌತಮಿ 586 ಅಂಕ, ವಿಜ್ಞಾನ ವಿಭಾಗದಲ್ಲಿ ಸಮಂತಾ ಅಥೆನಾ ಡಿಸೋಜಾ 584 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಗಳಾಗಿದ್ದಾರೆ. Advertisement
ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ. 2022-23ನೆ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾ.9ರಿಂದ 29ರವರೆಗೆ ನಡೆಸಲಾಗಿತ್ತು. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನವೂ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. Advertisement ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. Advertisement ಫಲಿತಾಂಶವನ್ನು ಈ ಲಿಂಕ್ ನಲ್ಲಿ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪರಿಶೀಲಿಸುವುದು ಹೇಗೆ?…
ಅನಂತಾಡಿ ಗ್ರಾಮದಲ್ಲಿ ರಾಜೇಶ್ ನಾಯ್ಕ್ ಮತಯಾಚನೆ ಬಂಟ್ವಾಳ: ಕ್ಷೇತ್ರದ ಜನರ ಪ್ರತಿಯೊಂದು ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವುದರ ಜೊತೆಗೆ ಸರಕಾರದಿಂದ ಸಿಗುವ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಕೆಲಸವನ್ನು ಬದ್ಧತೆಯಿಂದ ಮಾಡಿದ್ದು, ಶಾಂತಿ ಮತ್ತು ಅಭಿವೃದ್ಧಿಗೆ ಹೆಚ್ಚಿನ ಅಧ್ಯತೆ ನೀಡಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.ಅವರು ಅನಂತಾಡಿ ಗ್ರಾಮದ ವಿವಿಧ ಭಾಗಗಳಿಗೆ ಸಂಚರಿಸಿ,ಪ್ರಮುಖ ಮನೆಗಳಿಗೆ ಬೇಟಿ ನೀಡಿ ಮತಯಾಚನೆ ಮಾಡಿದರು. Advertisement ಬಿಜೆಪಿ ಆಡಳಿತಕ್ಕೆ ಬರುವ ಮೊದಲು ರಾಜ್ಯದಲ್ಲಿ ಮತ್ತು ಬಂಟ್ವಾಳ ಕ್ಷೇತ್ರದ ಸ್ಥಿತಿಗತಿಯ ಬಗ್ಗೆ ಎಲ್ಲರಿಗೂ ತಿಳಿದಿರುವಂತ ವಿಚಾರ, ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕದ ದಿನಗಳನ್ನು ಅವಲೋಕನ ಮಾಡಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ಅವರು ತಿಳಿಸಿದರು. ಇದರ ಜೊತೆಯಲ್ಲಿ ಪ್ರತಿ ಮನೆಯ ತಾಯಂದಿರಿಗೆ ನೆಮ್ಮದಿಯಿಂದ ಜೀವನ ಮಾಡುವಂತಾಗಲು , ರಾಜ್ಯದಲ್ಲಿ ಮತ್ತು ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಅವರು ತಿಳಿಸಿದರು. ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾಧವ ಮಾವೆ ಮಾತನಾಡಿ, ಧರ್ಮ ಉಳಿಯಬೇಕು, ನ್ಯಾಯ ಸಿಗಬೇಕು…
ಬಂಟ್ವಾಳ: ಮನೆಯೊಂದರ ಮಹಡಿ ಮೇಲೆ ಪೈಪ್‌ಲೈನ್ ಅಳವಡಿಕೆ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಕುಕ್ಕಿಪಾಡಿ ಗ್ರಾ.ಪಂ.ವ್ಯಾಪ್ತಿಯ ಮಾಡಮೆ ಎಂಬಲ್ಲಿ ಸಂಭವಿಸಿದೆ.ಸಿದ್ದಕಟ್ಟೆ ದೇವಸ ನಿವಾಸಿ ಬಾಲಕೃಷ್ಣ ಆಚಾರ್ಯ ಅವರ ಪುತ್ರ ದುರ್ಗಾಪ್ರಸಾದ್(32)ಅವರು ಮೃತಪಟ್ಟವರಾಗಿದ್ದಾರೆ. ಅವರು ಮಾಡಮೆಯ ತೋಮಸ್ ಲೋಬೋ ಅವರ ಮನೆಯ ನೀರಿನ ಟ್ಯಾಂಕ್‌ಗಾಗಿ ಮಧ್ಯಾಹ್ನ ಪೈಪ್‌ಲೈನ್ ಅಳವಡಿಸುತ್ತಿದ್ದಾಗ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದು, ಅವರ ತಲೆಗೆ ಗಂಭೀರ ಏಟಾಗಿತ್ತು. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Advertisement ದುರ್ಗಾಪ್ರಸಾದ್ ಅವರು ಬಾಲಕೃಷ್ಣ ದಂಪತಿಯ ಆರು ಮಂದಿ ಮಕ್ಕಳಲ್ಲಿ ಇಬ್ಬರು ಪುತ್ರರಲ್ಲಿ ಹಿರಿಯವನಾಗಿದ್ದು, ಮನೆಗೆ ಆಧಾರವಾಗಿದ್ದರು.ಅವಿವಾಹಿತರಾಗಿದ್ದ ಅವರು ಬಿಜೆಪಿ ಹಾಗೂ ಬಜರಂಗದಳ ಕಾರ್ಯಕರ್ತರಾಗಿದ್ದರು. Advertisement
ಬಂಟ್ವಾಳ: ಕ್ರಾಂಗ್ರೆಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಬಿ.ರಮನಾಥ ರೈ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನ ಹಾಗೂ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮೊಡಂಕಾಪು ಚರ್ಚ್, ಮಿತ್ತಬೈಲು ಮೊಯ್ಯುದ್ದೀನ್ ಜುಮ್ಮಾಮಸೀದಿ, ಕೆಳಗಿನ ಪೇಟೆ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಸಭಾಂಗಣದ ಬಳಿಯಿಂದ ಸಹಸ್ರ ಸಂಖ್ಯೆಯಲ್ಲಿ ಪಕ್ಷದ ಬೆಂಬಲಿಗರು, ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಅಭಿದ್ ಗಡ್ಯಾಲ್ ಅವರಿಗೆ ತನ್ನ ಉಮೇದುವಾರಿಕೆ ಸಲ್ಲಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ಜೊತೆಯಾದ ಕಾರ್ಯಕರ್ತರು:ಮಾಜಿ ಸಚಿವ ಬಿ.ರಮನಾಥ ರೈ ನಾಮಪತ್ರ ಸಲ್ಲಿಕೆಯ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಕೊಂಡು ಮೆರವಣಿಗೆಯಲ್ಲಿ ಹೆಜ್ಜೆಹಾಕಿದರು. ಬಂಟ್ವಾಳದ ರಥಬೀದಿಯಲ್ಲಿ ಆರಂಭಗೊಂಡ ಮೆರವಣಿಗೆ ಬಿ.ಸಿ.ರೋಡಿನ ಮುಖ್ಯ ರಸ್ತೆಯಲ್ಲಿ ಆಗಮಿಸಿ ರಕ್ತೇಶ್ವರೀ ದೇವಸ್ಥಾನದ ಬಳಿ ಸಮಾಪನಗೊಂಡಿತು.…
ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಒಟ್ಟು 8 ನಾಮಪತ್ರ ಸಲ್ಲಿಕೆ ಬಂಟ್ವಾಳ: ವಿಧಾನಸಭೆಯ ಬಂಟ್ವಾಳ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಏ.20ರ ಗುರುವಾರ ಒಟ್ಟು 5 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ. ಇದುವರೆಗೆ ಬಿಜೆಪಿಯ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಎಸ್.ಡಿ.ಪಿ.ಐ.ನಿಂದ ಇಲ್ಯಾಸ್ ತುಂಬೆ, ಮಜೀದ್ ಅವರು ನಾಮಪತ್ರ ಸಲ್ಲಿಸಿದ್ದರು. ಇದೀಗ ಗುರುವಾರ ಒಂದೇ ದಿನ 5 ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್ ನಿಂದ ಬಿ.ರಮಾನಾಥ ರೈ, Advertisement ಜಾತ್ಯತೀತ ಜನತಾದಳದಿಂದ ಪ್ರಕಾಶ್ ರಫಾಯಲ್ ಗೋಮ್ಸ್, ಆಮ್ ಆದ್ಮಿ ಪಾರ್ಟಿಯಿಂದ ಪುರುಷೋತ್ತಮ, ಉತ್ತಮ ಪ್ರಜಾಕೀಯ ಪಕ್ಷದಿಂದ ಅನೀಶ್ ಶೆಟ್ಟಿ, ಪಕ್ಷೇತರ ಅಭ್ಯರ್ಥಿಯಾಗಿ ಬಿ.ಟಿ.ಕುಮಾರ್ ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಚುನಾವಣಾದಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. Advertisement
ಬಂಟ್ವಾಳ: ನೇತ್ರಾವತಿ ನದಿಗೆ ಆಕಸ್ಮಿಕವಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಮಾರು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ರಾಮಕ್ಕು ಎಂದು ಗುರುತಿಸಲಾಗಿದೆ. ಬಟ್ಟೆ ತೊಳೆಯಲು ಹೋದ ಸಂದರ್ಭ ಈ ದುರ್ಘಟನೆ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. Advertisement Advertisement
ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ ಬಂಟ್ವಾಳ : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಅಲ್ಲದೆ, ಹಿರಿಯ ನಾಯಕನ ಆರೋಗ್ಯ, ಯೋಗಕ್ಷೇಮದ ಬಗ್ಗೆ ವಿಚಾರಿಸಿದರು. ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ ಗುರುವಾರ ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಲಿದ್ದಾರೆ. Advertisement ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಜನಾರ್ಧನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಭೇಟಿ ನೀಡಿ ಅವರು ಮಾತುಕತೆ ನಡೆಸಿದರು.ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಇಂತಹ ವಿಷಯಗಳ ಬಗ್ಗೆ ಬಲವಾಗಿ ಮಾತನಾಡುವವರು ಯಾರೂ ಇಲ್ಲ. ಅದಕ್ಕೋಸ್ಕರವಾದರೂ ರಮಾನಾಥ…
ಸಾಹಿತ್ಯದಿಂದ ಸಂಸ್ಕಾರ ಸಾಧ್ಯ : ಶ್ರೀಕಲಾ ಕಾರಂತ್ ಸಾಲೆತ್ತೂರು : ಸಂಸ್ಕಾರದ ಬೆಳವಣಿಗೆಯಲ್ಲಿ ಸಾಹಿತ್ಯದ ಪಾತ್ರ ಮಹತ್ತರವಾದದ್ದು. ಉತ್ತಮ ಸಾಹಿತ್ಯದಿಂದ ಸಂಸ್ಕಾರ ಸಾಧ್ಯ. ಹಾಗಾಗಿ ಮಕ್ಕಳ ಸಾಹಿತ್ಯದ ಮೂಲಕ ಮಕ್ಕಳನ್ನು ಸಂಸ್ಕಾರವಂತರನ್ನಾಗಿಸಬಹುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಬಂಟ್ಟಾಳ ತಾಲೂಕು ಘಟಕ ಅಧ್ಯಕ್ಷೆ ಶ್ರೀಕಲಾ ಕಾರಂತ ಅಳಿಕೆ ಅಭಿಪ್ರಾಯಪಟ್ಟರು. ಸಾಹಿತ್ಯದಿಂದ ಸಂಸ್ಕಾರ ಸಾಧ್ಯ : ಶ್ರೀಕಲಾ ಕಾರಂತ್ ನವಚೇತನ ಯುವಕ ಮಂಡಲ ಸಾಲೆತ್ತೂರು ಸಂಸ್ಕಾರ ಭಾರತೀ ಬಂಟ್ಟಾಳ ತಾಲೂಕು ಘಟಕದ ವತಿಯಿಂದ ಜರುಗಿದ ಸಂಸ್ಕಾರ ಸೌರಭ ಮಕ್ಕಳ ಶಿಬಿರದಲ್ಲಿ ಮಾತನಾಡಿದರು. Advertisement ಸಮಾರಂಭದ ಉದ್ಘಾಟನೆಯನ್ನು ಸವಿತಾ ಶೆಟ್ಟಿ ಪುಂಚಿಲ ನೆರವೇರಿಸಿದರು. ಬಂಟ್ಟಾಳ ತಾಲೂಕು ಉಪಾಧ್ಯಕ್ಷೆ ಡಾ| ವಾರಿಜ ನಿರ್ಬೈಲ್ ಶುಭ ಹಾರೈಸಿದರು. ಮಕ್ಕಳಿಗೆ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಸಂಸ್ಕಾರ ಸಾಹಿತ್ಯದ ಅಗತ್ಯತೆಯನ್ನು ಸಾಹಿತಿ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಗೋಪಾಲಕೃಷ್ಣ ನೇರಳಕಟ್ಟೆ ವಿವರಿಸಿದರು. ಕಥನ ಕಾವ್ಯ ರಚನೆಯ ಬಗ್ಗೆ ಸಾಹಿತಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಜಯರಾಮ ಪಡ್ರೆಯವರು…
ಯಕ್ಷಧ್ರುವ ಪಟ್ಲ ಫೌಂಡೇಶನ್: ಸರಪಾಡಿ ಘಟಕ ವಾರ್ಷಿಕೋತ್ಸವ, ಯಕ್ಷಗಾನ ಸಾಧಕರಿಗೆ ಸನ್ಮಾನ ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ , ಸರಪಾಡಿ ಘಟಕ ಸಮಿತಿಯ ವತಿಯಿಂದ 6ನೇ ವಾರ್ಷಿಕೋತ್ಸವ ಕಾರ್ಯಕ್ರಮ ಎ.18ರಂದು ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ, ಭಾಗವತ ಸತೀಶ್ ಶೆಟ್ಟಿ ಪಟ್ಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನ ಕಲಾವಿದರ ಬೆಳವಣಿಗೆಗೆ ಸರಪಾಡಿಯ ಕೊಡುಗೆ ಮಹತ್ತರವಾಗಿದೆ. ಕಲಾಭಿಮಾನಿಗಳ ಪ್ರೀತಿ, ಪ್ರೋತ್ಸಾಹದಿಂದ ಯಕ್ಷಗಾನ ಬೆಳೆಯಲು ಸಾಧ್ಯವಾಗಿದೆ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್: ಸರಪಾಡಿ ಘಟಕ ವಾರ್ಷಿಕೋತ್ಸವ, ಯಕ್ಷಗಾನ ಸಾಧಕರಿಗೆ ಸನ್ಮಾನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರು ಮಾತನಾಡಿ, ಸತೀಶ್ ಶೆಟ್ಟಿ ಪಟ್ಲ ಅವರ ನೇತೃತ್ವದಲ್ಲಿ ಯಕ್ಷಗಾನ ಕಲಾವಿದರಿಗೆ ಭರವಸೆಯ ಬೆಳಕು ನೀಡಿ ಮುನ್ನಡೆಸುವ ಕಾರ್ಯ ಮಾಡುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯ ಮಾದರಿಯಾಗಿದೆ ಎಂದರು. Advertisement ಈ ಸಂದರ್ಭದಲ್ಲಿ ಯಕ್ಷಗಾನ ಸಾಧಕರಾದ ಸರಪಾಡಿ…








