Author: admin

ಮೋದಿ, ಅದಾನಿ, ಅಂಬಾನಿಗೆ ಬಂದ ಅಮೃತಕಾಲ ದಲಿತರಿಗೆ ಬರುವುದು ಯಾವಾಗ? – ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಪ್ರಶ್ನೆ ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಸಚಿವರಿಗೆ, ದೊಡ್ಡ ಉದ್ಯಮಿಗಳಿಗೆ ಇಂದು ಅಮೃತಕಾಲ, ಪ್ರತಿದಿನವೂ ದಲಿತ ದೌರ್ಜನ್ಯ ನಡೆಯುತ್ತಿದ್ದು, ಅದೀಗ ಹೆಚ್ಚಾಗಿದೆ, ದಲಿತರಿಗೆ ಅಮೃತ ಕಾಲಬರುವುದು ಯಾವಾಗ? ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಪ್ರಶ್ನಿಸಿದ್ದಾರೆ.ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕಗಳ ನೇತೃತ್ವದಲ್ಲಿ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ನಡೆದ ಐಕ್ಯತಾ ಸಮಾವೇಶದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ದಲಿತವಿರೋಧಿಯಾಗಿರುವ ಬಿಜೆಪಿ ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಅಧಿಕಾರಕ್ಕೆ ಬಾರದಂತೆ ನೋಡಿಕೊಳ್ಳಬೇಕಾಗಿದೆ. ಸಂವಿಧಾನವನ್ನು ತಿರುಚುವ ಕೆಲಸವನ್ನು ಸರಕಾರ ಮಾಡುತ್ತಿದ್ದು, ದಲಿತರಿಗೆ ಅನೇಕ ಕ್ಷೇತ್ರಗಳಲ್ಲಿ ಇನ್ನೂ ಸ್ವಾತಂತ್ರ್ಯ ದೊರಕಿಲ್ಲ. ಸರಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗಿಗೆ ನೀಡಲಾಗುತ್ತಿದ್ದು, ಅಲ್ಲಿ ದಲಿತರಿಗೆ ಉದ್ಯೋಗವಿಲ್ಲ, ಇಡೀ ದೇಶದಲ್ಲಿ ೨೪ ಲಕ್ಷ ಉದ್ಯೋಗಗಳು ಖಾಲಿ…

Read More

ನಾವೂರು ಶಕ್ತಿ ಕೇಂದ್ರದ ಪ್ರಮುಖರ ಸಭೆ ಬಂಟ್ವಾಳ: ಶಾಂತಿ,ನೆಮ್ಮದಿಯ ಜೊತೆಗೆ ಬಂಟ್ವಾಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುವ ಕಾರಣಕ್ಕಾಗಿ ಬಂಟ್ವಾಳ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಶಾಸಕರ ಆಯ್ಕೆಯಾಗಬೇಕು, ಈ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಕ್ಷೇತ್ರದ ಜನರು ಸಹಕಾರ ನೀಡಿ ಗೆಲ್ಲಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಮನವಿ ಮಾಡಿದರು.ಅವರು ನಾವೂರ ಶಕ್ತಿ ಕೇಂದ್ರದ ಗಂಗಾಧರ ಪೂಜಾರಿ ಅವರ ಮನೆಯಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದರು.ಅಮಾಯಕರು ಜೀವ ಕಳೆದುಕೊಂಡು,ತಾಲೂಕಿನ ತಾಯಂದಿರು ನಿತ್ಯ ಕಣ್ಣೀರು ಹಾಕುವ ದಿನವನ್ನು ದೂರ ಮಾಡಿ, ಅನಗತ್ಯವಾಗಿ ಪ್ರಕರಣಗಳನ್ನು ಹಾಕಿಸಿಕೊಳ್ಳುವುದನ್ನು ನಿಲ್ಲಿಸಿ ಶಾಂತಿಯ ಬಂಟ್ವಾಳವಾಗಿ ಮಾಡಲು ಕ್ಷೇತ್ರದ ಜನರ ಸಹಕಾರದಿಂದ ಸಾಧ್ಯವಾಯಿತು ಎಂದು ಅವರು ತಿಳಿಸಿದರು.ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಕೊರೊನಾ ಅವಧಿಯಲ್ಲಿ ಸಾವನ್ನಪ್ಪಿದ ಬಂಟ್ವಾಳದ ಮಹಿಳೆಯ ಅಂತ್ಯಕ್ರಿಯೆಗೆ ಜಾಗನೀಡದ ಸಮಯದಲ್ಲಿ ಒಡ್ಡೂರಿನ ಮನೆಯ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡಲು ವ್ಯವಸ್ಥೆ ಮಾಡಿ ಎಂದು ಜಿಲ್ಲಾಡಳಿತಕ್ಕೆ ತಿಳಿಸಿದ ರಾಜ್ಯದ ಏಕೈಕ ಶಾಸಕ ರಾಜೇಶ್ ನಾಯ್ಕ್.ಅಂತಹ ಮಾನವೀಯ ಮೌಲ್ಯವಿರುವ ಗುಣವಂತ…

Read More

ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಗಳಿಗೆ ಬೆಂಬಲ: ಎಡನೀರು ಶ್ರೀ ಸ್ವಾಮೀಜಿ ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಯಲ್ಲಿ ಧರ್ಮದ ಪಥದಲ್ಲಿ ನಡೆಯಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಿರಿಯರ ಸೇವಾ ಪ್ರತಿಷ್ಠಾನ ಈಗಾಗಲೇ ಕೈಗೊಂಡಿರುವ ಕಾರ್ಯಕ್ರಮಗಳು ಸಾಮಾಜಿಕ ಪರಿವರ್ತನೆಗೆ ಕೊಡುಗೆಯನ್ನು ನೀಡಿದ್ದು ಮುಂದಿನ ದಿನಗಳಲ್ಲಿ ಕಾಸರಗೋಡು ಜಿಲ್ಲಾ ಹಿರಿಯರ ಸಮಾವೇಶವನ್ನು ಏರ್ಪಡಿಸಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಪ್ರಯತ್ನಿಸುವುದಾಗಿ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ತಿಳಿಸಿದರು. ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ(ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ಎಡನೀರು ಪ್ರೌಢಶಾಲಾ ಸಭಾಂಗಣದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಗಳಿಗೆ ಬೆಂಬಲ: ಎಡನೀರು ಶ್ರೀ ಸ್ವಾಮೀಜಿ ಯಾವುದೇ ಉತ್ತಮ ವಿಚಾರ ಮೂಡುವುದು ಒಬ್ಬನ ಮನಸ್ಸಿನಲ್ಲಿ. ಸಜ್ಜನರ ಸಂಘಟನೆಯ ಕೆಲಸವನ್ನು ಹಿರಿಯರ ಸೇವಾ ಪ್ರತಿಷ್ಠಾನ ಮಾಡುತ್ತಿದ್ದು ಶಂಕರಾಚಾರ್ಯ ರಾಮಾನುಜಚಾರ್ಯ ವಿವೇಕಾನಂದ, ಭಗತ್ ಸಿಂಗ್ ಮೊದಲಾದವರು ಅತ್ಯಂತ ಕಿರಿವಯಸ್ಸಿನಲ್ಲಿ ಅಪೂರ್ವ ಸಾಧನೆ ಮಾಡಿದವರಾಗಿದ್ದು…

Read More

ಅನಂತಾಡಿ : ” ಮಕ್ಕಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯದ ಕೊಡುಗೆ ಅಪಾರವಾದುದು. ಸಾಹಿತ್ಯದ ಬಗೆಗಿನ ಆಸಕ್ತಿಯು ಮಕ್ಕಳನ್ನು ಅತಿಯಾದ ಮೊಬೈಲ್ ಬಳಕೆ ಹಾಗೂ ಮತ್ತಿತರ ಕೆಟ್ಟ ಹವ್ಯಾಸಗಳಿಂದ ಮುಕ್ತಗೊಳಿಸುತ್ತದೆ ” ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಪರಿಮಳ ಮಹೇಶ್ ರಾವ್ ಚೇಳಾರು ಅಭಿಪ್ರಾಯಪಟ್ಟರು. ಅನಂತಾಡಿ ಶಾಲೆಯಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಕ್ಕಳ ಪರಿಷತ್ತು ಇದರ ಬಂಟ್ಟಾಳ ತಾಲೂಕು ಘಟಕದ ಉದ್ಘಾಟನೆಸಮಾರಂಭದಲ್ಲಿ ಮಾತನಾಡಿದರು. ಸಮಾರಂಭದ ಉದ್ಘಾಟನೆಯನ್ನು 7ನೇ ತರಗತಿ ವಿದ್ಯಾರ್ಥಿ ರಚನ್ ಅಶ್ವತ್ತಡಿ ನೆರವೇರಿಸಿದರು. ಮುಖ್ಯ ಅತಿಥಿಗಳಾದ NS CDF ನ ಅಧ್ಯಕ್ಷರು ಹಾಗೂ ಜಿಲ್ಲಾ ಘಟಕರ ಗೌರವ ಸಲಹೆಗಾರರಾದ ಗಂಗಾಧರ ಗಾಂಧಿ, ತಾಲೂಕು ಘಟಕದ ಗೌರವ ಸಲಹೆಗಾರರಾದ ರಮೇಶ ಎಂ ಬಾಯಾರು , ಜಯಾನಂದ ಪೆರಾಜೆ ಹಾಗೂ ಬಾಲಕೃಷ್ಣ ಕಾರಂತ್ ಅಳಿಕೆ , ಮುಖ್ಯ ಶಿಕ್ಷಕರಾದ ಜಯಂತಿ , ಎಸ್. ಡಿ .ಎಂ . ಸಿ ಅಧ್ಯಕ್ಷರಾದ ವಿವೇಕಾನಂದ ಶೆಟ್ಟಿ ,…

Read More

ಬಂಟ್ವಾಳ: ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದುದನ್ನು ಆ ಪರಿಸರದ ಮಂದಿ ಗಮನಿಸಿದ್ದರು, ಆದರೆ ಮಧ್ಯಾಹ್ನದ ಬಳಿಕ ಬಾಲಕ ಹಠಾತ್ ಕಾಣೆಯಾಗಿದ್ದ. ಬಾಲಕನನ್ನು ಸಂಪರ್ಕಿಸಲು ಮನೆಮಂದಿ ಸಾಕಷ್ಟು ಪ್ರಯತ್ನಿಸಿದ್ದರೂ ಸಫಲರಾಗಿರಲಿಲ್ಲ ಎನ್ನಲಾಗಿದೆ. ಬಾಲಕನ ಕೈಯಲ್ಲಿದ್ದ ಮೊಬೈಲ್ ರಿಂಗಿಣಿಸುತ್ತಿದ್ದರೂ ಕರೆ ಸ್ವೀಕಾರ ಆಗದ ಹಿನ್ನಲೆಯಲ್ಲಿ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು. Advertisement ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ…

Read More

ಬಂಟ್ವಾಳ: ಬಿ.ಸಿ.ರೋಡಿನ ಮುಖ್ಯವೃತ್ತದ ಬಳಿ ಇಳಿಜಾರು ಪ್ರದೇಶದ ಕಸದ ರಾಶಿಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿ ಮೂರು ದಿನವಾದರೂ ಇನ್ನೂ ಆ ಸ್ಥಳದಲ್ಲಿ ಹೊಗೆಯಾಡುತ್ತಿದೆ. ಗುರುವಾರ ಬೆಂಕಿ ಕಾಣಿಸಿಕೊಂಡ ಬಳಿಕ ಸುಮಾರು ೩ ಗಂಟೆಗಳ ಕಾಲ ಅಗ್ನಿಶಾಮಕ ದಳ ನೀರು ಸಿಂಪಡಿಸಿ ಬೆಂಕಿ ನಂದಿಸಿದರೂ ಶನಿವಾರ ಸಂಜೆಯ ವೇಳೆಗೂ ಹೊಗೆ ಮೇಲೆಳುತ್ತಿತ್ತು.ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ, ರೈಲ್ವೇ ನಿಲ್ದಾಣದ ಬಳಿ ಗುರುವಾರ ಮಧ್ಯಾಹ್ನದ ವೇಳೆಗೆ ಇಳಿಜಾರು ಗುಂಡಿಯ ಕಸದ ರಾಶಿಯಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ಸ್ಥಿತಿ ನಿರ್ಮಾಣಗೊಂಡಿತ್ತು. ಬೆಂಕಿಯಿಂದ ಹೊರ ಚಿಮ್ಮಿದ ದಟ್ಟ ಹೊಗೆ ನಗರವಿಡಿ ವ್ಯಾಪಿಸಿ ಕೊಂಡಿತ್ತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ನಿರಂತರ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಅದೇ ಸ್ಥಳದಿಂದ ಮತ್ತೆ ಹೊಗೆಯಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮರಗಳ ಮಾರಣ ಹೋಮ:ಈ ಹಿಂದೆ ಈ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಥಳದಲ್ಲಿದ್ದ ಅನೇಕ ಮರಗಳು ಆಹುತ್ತಿಯಾಗಿತ್ತು. ಈ ಭಾರಿಯೂ ಹಲವು ಮರಗಳು ಬೆಂಕಿಯ…

Read More

ಬಂಟ್ವಾಳ: ಮತದಾರರು ನೀಡಿದ ಸಹಕಾರದಿಂದಾಗಿ ಬಂಟ್ವಾಳ ಕ್ಷೇತ್ರದಲ್ಲಿ ಅಭೂತಪೂರ್ವವಾದ ಅಭಿವೃದ್ಧಿ ಹಾಗೂ ನವಬಂಟ್ವಾಳವಾಗಿ ಮಾರ್ಪಾಡು ಮಾಡಲು ಸಾಧ್ಯವಾಯಿತು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಅವರು ಇರ್ವತ್ತೂರು ಶಕ್ತಿ ಕೇಂದ್ರದ ಶುಭಕರ ಶೆಟ್ಟಿ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಮುಂದಿನ ದಿನಗಳಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿಯ ಜೊತೆಗೆ ಕಾರ್ಯಕರ್ತರ ,ಮತದಾರರ ಬೇಡಿಕೆಯನ್ನು ಪ್ರಾಮಾಣಿಕವಾಗಿ ಈಡೇರಿಸುವ ಕೆಲಸ ಮಾಡುತ್ತೇನೆ, ನಿರಂತರವಾಗಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಅವರು ತಿಳಿಸಿದರು. Advertisement ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬೇಕಾಗುವ ಮಾನಸಿಕ ಶಕ್ತಿಯನ್ನು ಕಾರ್ಯಕರ್ತರು ಪ್ರದರ್ಶನ ಮಾಡಬೇಕು ಎಂದು ತಿಳಿಸಿದರು. ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ಶಾಸಕನಾಗಿ ಯಾವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದಕ್ಕೆ ರಾಜ್ಯದಲ್ಲಿ ರಾಜೇಶ್ ನಾಯ್ಕ್ ಅವರು ಮಾದರಿಯಾಗಿದ್ದಾರೆ.ಮುಂದಿನ 30 ದಿನಗಳು ಚುನಾವಣಾ ಕಾರ್ಯಕ್ಕೆ ಅತ್ಯಂತ ಪ್ರಾಮುಖ್ಯತೆ ಪಡೆದಿದ್ದು, ಕಾರ್ಯಕರ್ತರು ಅವಿರತವಾಗಿ ಪಕ್ಷದ…

Read More

ಬಂಟ್ವಾಳ: ಸಜೀಪ ಮಾಗಣೆಗೊಳಪಟ್ಟ ಮಿತ್ತಮಜಲು ಕ್ಷೇತ್ರದ ಬಿಸು ಜಾತ್ರೆ ಪ್ರಯುಕ್ತಶನಿವಾರದಂದು ಪೂರ್ವಸಂಪ್ರದಾಯದಂತೆ ಕೋಳಿಕುಂಟ ನೆರವೇರಿತು. ಈ ಸಂದರ್ಭ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ಪಾಲೆ ಮಂಟಪ ಸಂಸಾರ, ಗಡಿ ಪ್ರಧಾನರಾದ ಕೋಚುಭಂಡಾರಿ ಯಾನೆ ಮುಂಡಪ್ಪ ಶೆಟ್ಟಿ, ಅನುಪ್ ಆಳ್ವ, ದೇವಿಪ್ರಸಾದ್ ಪೂಂಜ, ಶಿವರಾಮ ಭಂಡಾರಿ, ಬಿಜಂದಾರ್ ಗುತ್ತು ಯಶೋಧರ ರೈ, ಎಸ್.ಶ್ರೀಕಾಂತ ಶೆಟ್ಟಿ, ಸಾನದ ಮನೆಯ ಕೋಚು ಪೂಜಾರಿ ಯಾನೆ ಶಂಕರ ಪೂಜಾರಿ, ಕುಂಞ ಪೂಜಾರಿ ಯಾನೆ ದಯಾನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಮಿತ್ತಮಜಲು ಕ್ಷೇತ್ರದ ಬಿಸು ಜಾತ್ರೆಯ ಪ್ರಯುಕ್ತ ಎ. 12ರಿಂದ ಎ.14ರವರೆಗೆ ಮೂರು ದಿನಗಳ ಚೆಂಡು ನಡೆಯಲಿದೆ, ಎ.14ರಂದು ಶುಕ್ರವಾರ ರಾತ್ರಿ ಒಲಸರಿ ನಡೆದು ದೈವದ ಮೆಚ್ಚಿ, ಎ.15ರಂದು ರಾತ್ರಿ 10ಕ್ಕೆ ಕೆರೆನೇಮ, ಎ. 16ರಂದು ಬೆಳಿಗ್ಗೆ ಗಂಟೆ 9ಕ್ಕೆ ಕೆರೆನೇಮ ಬಳಿಕ ಉಡುಕು ಬಲಿ ಹಾಗೂ ಮಧ್ಯಾಹ್ನ 1ರಿಂದ ಅನ್ನಸಂತರ್ಪಣೆ ನಡೆಯಲಿದೆ. ಎ. 7ರಂದು ಪರಿವಾರ ದೈವದ ನೇಮೋತ್ಸವದ ಬಳಿಕ ಭಂಡಾರ ಇಳಿಯಲಿದೆ.

Read More

ಬಂಟ್ವಾಳ: ಇಲ್ಲಿನ ಕೊಡಂಗೆ ನಿವಾಸಿ ಸದಾಶಿವ ಆಚಾರ್ಯ (77) ಅವರು ಶುಕ್ರವಾರ ತಡರಾತ್ರಿ ಬಿ.ಸಿ.ರೋಡಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾದರು.ಮೃತರು ಪತ್ನಿ 4ಗಂಡು ಹಾಗೂ 5ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರಿನ ಸಂಬಂಧಿಯ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ಬರುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಬಿ.ಸಿ.ರೋಡಿನ ಪದ್ಮ ಪೆಟ್ರೋಲ್ ಪಂಪ್ ಬಳಿ ಆಕಸ್ಮಿಕವಾಗಿ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುತ್ರ, ಮೊಮ್ಮಗ ಸಹಿತ ಇತರ 3 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮೃತರು ಮರದ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

Read More

ಬಂಟ್ವಾಳ: ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿಯೂ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು,ಹಾಗಾಗಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಿಗೆ ಕಾರ್ಯಕರ್ತರು ತಿಳಿಸ ಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಕಲಾಯಿ ಪ್ರವೀಣ್ ನಾಯಕ್ ಅವರ ಮನೆಯಲ್ಲಿ ನಡೆದ ಕಾವಳಮೂಡೂರು ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಸುಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಮುಂದಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಸುಳ್ಳು ಮಾತಿಗೆ ಮರುಳಾಗದೆ ದೇಶದ ಹಿತ ಕಾಯುವ ಬಿಜೆಪಿಗೆ ಅಧಿಕಾರ ನೀಡಬೇಕು ಎಂದು ತಿಳಿಸಿದರು.ವಿರೋಧ ಪಕ್ಷದ ಆಡಳಿತ ಅವಧಿಯಲ್ಲಿ ಎರಡು ವರ್ಷಗಳ ಕಾಲ ಶಾಸಕನಾಗಿ ಬಳಿಕ ಕೊರೊನಾ ಸಂದರ್ಭದಲ್ಲಿ ಕಷ್ಟಕರ ಪರಿಸ್ಥಿತಿಯ ಬಳಿಕ ಸಿಕ್ಕಿದ ಎರಡು ವರ್ಷಗಳಲ್ಲಿ ಎಣಿಸದ ರೀತಿಯಲ್ಲಿ ಕ್ಷೇತ್ರದ ಜನತೆಯ ಆಶ್ರೀರ್ವಾದದ ಮೂಲಕ ಅಭಿವೃದ್ಧಿ ಮಾಡಿದ್ದೇನೆ ಎಂದರು.ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ಇನ್ನಷ್ಟು ಧಾರ್ಮಿಕ ಕ್ಷೇತ್ರಗಳ ಸಹಿತ ಸರ್ವ ರೀತಿಯ ಅಭಿವೃದ್ಧಿಗೆ…

Read More