Author: admin
ಪ್ರಗತಿ ಬಂಧು ಸಂಘಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಬಿ.ಸಿ.ರೋಡು ವಲಯ ಮಟ್ಟದ ಸಾಧನ ಸಮಾವೇಶ ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಬಿ.ಸಿ.ರೋಡು ವಲಯ ಇವರ ಸಹಯೋಗದೊಂದಿಗೆ ಪ್ರಗತಿ ಬಂಧು ಸಂಘಗಳಿಗೆ ಕೃಷಿ ಸಲಕರಣೆ ವಿತರಣೆ ಹಾಗೂ ಬಿ.ಸಿ.ರೋಡು ವಲಯ ಮಟ್ಟದ ಸಾಧನ ಸಮಾವೇಶ ಕಾರ್ಯಕ್ರಮ ಬಂಟ್ವಾಳದ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜರುಗಿತು.ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾತೃಶ್ರೀಯವರ ದೂರದೃಷ್ಟಿ ಯೋಜನೆಯಿಂದ ಇಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಜನರು ಸ್ವಾಭಿಮಾನದ ಬದುಕು ಸಾಗಿಸಲು ಸಾಧ್ಯವಾಗಿದೆ ಎಂದರು. ಕರೋನಾ ಸಂದರ್ಭದಲ್ಲಿ ಜನರ ಮಾನ, ಪ್ರಾಣ ರಕ್ಷಣೆಯಾಗಿರುವುದು ಕೃಷಿಯಿಂದ. ದೇಶದ ಆರ್ಥಿಕತೆ ಉಳಿದಿರುವುದು ಕೃಷಿಯಿಂದ ಎಂದು ತಿಳಿಸಿದರು. ಯಾಂತ್ರಿಕ ಬದುಕಿಗೆ ಮಾರು ಹೋಗುವ ಈ ಕಾಲಘಟ್ಟದಲ್ಲಿ ಶ್ರಮಜೀವಿಗಳಾಗಿ ತಮ್ಮ…
ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಜನತೆಯ ಆರೋಗ್ಯ ವಿಚಾರದಲ್ಲಿ ವಿಶೇಷ ಗಮನಹರಿಸಿ ತಾಲೂಕು ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಘಟಕ,ಆಕ್ಸಿಜನ್ ಘಟಕ ಹಾಗೂ ಐಸಿಯು ಘಟಕ ಒದಗಿಸಿದ್ದು, ಪುಂಜಾಲಕಟ್ಟೆ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿಯೂ ಈಗಾಗಲೇ ಪ್ರಾರಂಭಗೊಂಡಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು. ಸಜೀಪ ಮುನ್ನೂರು ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಜೀಪ ಭಾಗದಲ್ಲಿ ಸಾಕಷ್ಟು ಮಂದಿ ಪಕ್ಷವನ್ನು ಕಟ್ಟಿ ಗಟ್ಟಿಗೊಳಿಸುವ ಕಾರ್ಯ ಮಾಡಿದ ಹಿರಿಯರಿಗೆ ನಾವು ಸದಾ ಚಿರ ಋಣಿಯಾಗಬೇಕಿದ್ದು, ಅವರ ಮಾರ್ಗದರ್ಶನ ದಲ್ಲಿ ಕಾರ್ಯಕರ್ತರು ಮುನ್ನೆಡೆದರೆ ಬಿಜೆಪಿ ಬಲಿಷ್ಠ ವಾಗಿ ಬೆಳೆಯಲಿದೆ.ಕಳೆದ ನಾಲ್ಕು ವರೆ ವರ್ಷಗಳಲ್ಲಿ ಶಾಸಕನಾಗಿ ಕ್ಷೇತ್ರದ ಪ್ರತಿ ಗ್ರಾಮ ಗಳ ಅಭಿವೃದ್ಧಿ ಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಸಾವಿರದ ಐನೂರ ಎಂಟು ರಸ್ತೆಗಳು ಈತನಕ ಅಭಿವೃದ್ಧಿ ಯಾಗಿದೆ.ಶಾಸಕನಾಗಿರುವ ಕೊನೆಯ ಕ್ಷಣದವರೆಗೂ ಅಷ್ಟು ಅನುದಾನಗಳನ್ನು ತಂದು ,ಶಾಸಕತ್ವದ ಮೊದಲ ಅವಧಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ ತೃಪ್ತಿ ಇದೆ ಎಂದರು. ವಲಯ ಕಾಂಗ್ರೇಸ್ ಅಧ್ಯಕ್ಷ ಸತೀಶ್…
ರಾಜಕೀಯ ಅಭಿವೃದ್ಧಿ ಯ ಆಟ ಆಗಬೇಕೆ ಹೊರತು ದ್ವೇಷ, ಅಸಹನೆಯ ಆಟ ಆಗಬಾರದು- ಎಂ.ಜಿ. ಹೆಗ್ಡೆ ಬಂಟ್ವಾಳ: ರಾಜಕೀಯ ಆಟದಲ್ಲಿ ದ್ವೇಷ ಅಸಹನೆಯಿಂದ ದೇಶ ಕಟ್ಟಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗ್ಡೆ ಹೇಳಿದರು.ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ 14 ದಿನಗಳ ಕಾಲ ನಡೆಯುತ್ತಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ನಡೆದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು.ಟೀಕೆಯನ್ನು, ಪ್ರಶ್ನೆಯನ್ನು ಆರೋಗ್ಯಪೂರ್ಣವಾಗಿ ಸ್ವೀಕರಿಸದೇ ಇರುವುದೇ ಫ್ಯಾಸಿಸಂ. ಇಂತಹ ವರ್ತನೆಯ ಬಿಜೆಪಿಗೆ ಮುಳುವಾಗುತ್ತಿದೆ. ಪ್ರಜಾಪ್ರಭುತ್ವ ದ ಸೌಂದರ್ಯ ಇರುವುದೇ ಜನರು ಪ್ರಶ್ನೆ ಕೇಳುವುದರಲ್ಲಿ.ರಸ್ತೆ ಸರಿಯಿಲ್ಲ ಎಂದವರ ಮೇಲೆ ಕೇಸು ಹಾಕಲಾಗುತ್ತಿದೆ ಎಂದರು.ರಾಜಕೀಯ ಅಭಿವೃದ್ಧಿ ಯ ಆಟ ಆಗಬೇಕೆ ಹೊರತು ದ್ವೇಷ, ಅಸಹನೆಯ ಆಟ ಆಗಬಾರದು. ದ್ವೇಷದ ರಾಜಕಾರಣದಿಂದ ನಮ್ಮ ದೇಶದ ರಾಜಕಾರಣದ ಮೌಲ್ಯ ಶಿಥಿಲವಾಗುತ್ತಿದೆ, ಚುನಾವಣೆ ದೇಶದೊಳಗಿನ ಆಟ.ಆಟದಲ್ಲಿ ಆಟಗಾರರನ್ನು ಗೆಲ್ಲಿಸುವ ಜವಾಬ್ದಾರಿ ದೇಶದ ನಾಗರಿಕರದ್ದು. ಆ ಆಟದಲ್ಲಿ ಗಲಾಟೆ ಮಾಡಿಕೊಂಡು ಆಸ್ಪತ್ರೆ, ಮಸಣ ಸೇರುವುದು ಸರಿಯೇ?…
ಕುಕ್ಕಿಪ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಬಂಟ್ವಾಳ: ಪಕ್ಷ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿಕೊಂಡು ಬಂದಿದ್ದೇನೆ. ಕ್ಷೇತ್ರ ವ್ಯಾಪ್ತಿಯಲ್ಲಿ ನನ್ನ ಶಕ್ತಿ ಮೀರಿ ಕೆಲಸ ನಿರ್ವಹಿಸಿದ ತೃಪ್ತಿ ನನಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.ಅವರು ಕುಕ್ಕಿಪ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ತಾ.ಪಂ. ಮಾಜಿ ಸದಸ್ಯ ಪ್ರಭಾಕರ ಪ್ರಭು ಮಾತನಾಡಿ ಮತದಾರ ಪಟ್ಟಿಗೆ ಯುವ ಮತದಾರರನ್ನು ಸೇರಿಸಿ ಮತ್ತೊಮ್ಮೆ ರಾಜೇಶ್ ನಾಯ್ಕ್ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಬೇಕು. ಅವರು ಶಾಸಕನಾಗಿ ನಿಷ್ಠೆ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿದ್ದಾರೆ. ಎಂದರು. Promotion ಈ ಸಂದರ್ಭ ಶಾಸಕರು ಕುಕ್ಕಿಪ್ಪಾಡಿ ಗ್ರಾ.ಪಂ. ವ್ಯಾಪ್ತಿಯ ಕುಂಡದ ಬೆಟ್ಟು ದೇವಸ ರಸ್ತೆ ಕಾಂಕ್ರೀಟ್, ಮಾಡಮೆ ಕಲ್ಕೂರಿ ರಸ್ತೆ ಮರುಡಾಮಾರೀಕರಣ, ಕೋರ್ಯಾರು ದೇವಸ್ಥಾನ ರಸ್ತೆ ಕಾಂಕ್ರೀಟ್, ಸಿದ್ದಕಟ್ಟೆ ಚರ್ಚ್ ಅಂಗನವಾಡಿ , ದೇವಸ ಕಲ್ಲಬೆಟ್ಟು ರಸ್ತೆ ಮರು ಕಾಂಕ್ರೀಟ್, ನೇಲ್ಯಕುಮೇರು ಹಲಾಯಿ ರಸ್ತೆ ಕಾಂಕ್ರೀಟ್, ಉಮ್ಮೊಟ್ಟು ಸ್ಮಶಾನ, ಮಾವಿನ ಕಟ್ಟೆ ಕೆಂತಲೆ, ಮಾವಿನಕಟ್ಟೆ…
ಬಿ.ರಮಾನಾಥ ರೈ ಅಭಿಮಾನಿ ಬಳಗದಿಂದ ಪದವಿಶ್ರೀಗೆ ಗೌರವಾರ್ಪಣೆ ಬಂಟ್ವಾಳ: ಬಿ.ರಮಾನಾಥ ರೈ ಅಭಿಮಾನಿ ಬಳಗ ಇದರ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯದ ೨೩ನೇಸಾಲಿನಲ್ಲಿ ನಡೆದ ಎಂ.ಎಸ್ಸಿ ಇನ್ ಸೈಬರ್ ಸೆಕ್ಯುರಿಟಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಪದವಿಶ್ರೀ ಅವರನ್ನು ಮಾಜಿ ಸಚಿವ ಬಿ.ರಮಾನಾಥರೈ ಸನ್ಮಾನಿಸಿದರು. ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭಾ ಸದಸ್ಯ ಲೋಲಾಕ್ಷ ಶೆಟ್ಟಿ, ಬೂಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರಾ, ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಜೋಸ್ಪಿನ್ ಡಿಸೋಜ, ದಯಾನಂದ, ಶಿವಪ್ರಸಾದ ಆಳ್ವ, ಸುರೇಶ್ ಶೆಟ್ಟಿ, ಸತೀಶ್ ಶೆಟ್ಟಿ, ಶೈಲೇಶ್ ಶೆಟ್ಟಿ, ಶಿವಾನಂದ, ಜಯರಾಮ ಶೆಟ್ಟಿ, ಆನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. Promotion
ಪುಂಜಾಲಕಟ್ಟೆಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ ಸಮಾರಂಭ ಬಂಟ್ವಾಳ: ಆರೋಗ್ಯ ಕ್ಷೇತ್ರದ ಅಮೂಲಾಗ್ರ ಬದಲಾವಣೆಯ ದೃಷ್ಟಿಯಿಂದ ಕೋವಿಡ್ ಬಳಿಕ ಗ್ರಾಮೀಣ ಭಾಗಗಳಲ್ಲೂ ಗುಣಮಟ್ಟದ ಆರೋಗ್ಯ ಕೇಂದ್ರಗಳ ಅನುಷ್ಠಾನಕ್ಕೆ ಒತ್ತು ನೀಡಲಾಗುತ್ತಿದ್ದು, ಪ್ರಧಾನಿಗಳ ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ದ.ಕ.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.ಅವರು ಪುಂಜಾಲಕಟ್ಟೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯ ವತಿಯಿಂದ ೧೨.೪೪ ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪುಂಜಾಲಕಟ್ಟೆ ಅಮೃತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.ಜಗತ್ತಿನಲ್ಲೇ ಅದ್ಬುತ ಯೋಜನೆಯಾಗಿ ಪ್ರಧಾನಿಗಳು ಆಯುಷ್ಮಾನ್ ಭವ, ಜನೌಷಧಿ ಕೇಂದ್ರ, ಆಸ್ಪತ್ರೆಯನ್ನು ಮೇಲ್ದರ್ಜೆ ಕಾರ್ಯ ವೇಗವಾಗಿ ನಡೆಯುತ್ತಿದ್ದು, ಡಬಲ್ ಇಂಜಿನ್ ಸರಕಾರ ಹೆಚ್ಚಿನ ಅನುದಾನ ನೀಡುವ ಕಾರ್ಯ ಮಾಡುತ್ತಿದೆ. ಸಿಎಂ ಬೊಮ್ಮಾಯಿ ಅವರ ಸರಕಾರ ಹಳ್ಳಿ ಹಳ್ಳಿಗಳಲ್ಲೂ ನಮ್ಮ ಕ್ಲಿನಿಕ್ ತೆರೆಯುವ ಕಾರ್ಯ ನಡೆಯುತ್ತಿದೆ. ಆಕ್ಸಿಜನ್, ವೆಂಟಿಲೇಟರ್, ವೈದ್ಯರ ನೇಮಕ, ಎಲ್ಲಾ ಕೊರತೆ ನೀಗಿಸುವ ಕಾರ್ಯ ಮಾಡಲಾಗುತ್ತಿದೆ.ಪುಂಜಾಲಕಟ್ಟೆಯಲ್ಲಿ ಖಾಸಗಿ ಆಸ್ಪತ್ರೆಗಿಂತಲೂ ಉತ್ತಮ…
ಬಂಟ್ವಾಳ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಎಸ್ಪಿಯಿಂದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿರುವುದು ಏಕೆ ಎಂದು ಲೋಕಾಯುಕ್ತ ಎಸ್ಪಿ ಸೈಮನ್ ಗರಂ ಆದ ಘಟನೆ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಕರೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಡೆಯಿತು.ಎಸ್ಪಿ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಕ್ರಮದಲ್ಲಿ ಸುಮಾರು ಹದಿನೈದರಷ್ಟು ಮಂದಿ ತಮ್ಮ ದೂರು, ದುಮ್ಮಾನ ಸಲ್ಲಿಸಿದರು. ಈ ಸಂದರ್ಭ ಕರೋಪಾಡಿ ಗ್ರಾಮದ ವಿಕ್ಟರ್ ವೇಗಸ್ ಎಂಬವರು ದೂರು ನೀಡಿ, ತನ್ನ ಕಡತಗಳ ಕುರಿತು ತಾಲೂಕು ಕಚೇರಿಯಲ್ಲಿ ಕೇಳಿದರೆ, ತನಗೆ ಸೂಕ್ತ ಮಾರ್ಗದರ್ಶನ ದೊರಕುತ್ತಿಲ್ಲ, ಪ್ರತಿ ಬಾರಿಯೂ ಕಡತ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ಈ ಸಂದರ್ಭ ಗರಂ ಆದ ಲೋಕಾಯುಕ್ತ ಎಸ್ಪಿ ಸೈಮನ್, ಸಂಬಂಧಪಟ್ಟ ವಿಷಯ ನಿರ್ವಾಹಕ ವಿಷುಕುಮಾರ್ ಅವರನ್ನು ಕರೆಸಿ, ಇಂಥ ಸನ್ನಿವೇಶ ನಿರ್ಮಾಣ ಏಕಾಗುತ್ತಿದೆ, ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿವೆ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.ಈ ಸಂದರ್ಭ ಸ್ಥಳದಲ್ಲಿ ಉಪಸ್ಥಿತರಿದ್ದ…
ಕಾರ್ಮಿಕ ವಿರೋಧಿ ಬಿ.ಜೆ.ಪಿ ಸರಕಾರವನ್ನು ಸೋಲಿಸಿ-ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಬಂಟ್ವಾಳ : ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (ಎ.ಐ.ಸಿ.ಸಿ.ಟಿ.ಯು) ದ.ಕ ಜಿಲ್ಲಾ ಸಮಾವೇಶ ಬಿ.ಸಿ.ರೋಡಿ ನಲ್ಲಿ ನಡೆಯಿತು.ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಎ.ಐ.ಸಿ.ಸಿ.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಮಾತನಾಡಿ ಎ.ಐ.ಸಿ.ಸಿ.ಟಿ.ಯು ಸಂಘಟನೆ ಒಂದು ಕೇಂದ್ರ ಕಾರ್ಮಿಕ ಸಂಘಟನೆಯಾಗಿದ್ದು ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದು , ಹಲವಾರು ಚಳುವಳಿಗಳನ್ನು ನಡೆಸುವುದರ ಮೂಲಕ ಕಾರ್ಮಿಕರಿಗೆ ನ್ಯಾಯ ದೊರಕಿಸಲು ಸಾದ್ಯವಾಗಿದೆ ಎಂದು ತಿಳಿಸಿದರು. ಕೊರೋಣ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ಕಾನೂನು ಹೋರಾಟವನ್ನು ಮಾಡುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಹೋರಾಟ ಮಾಡಿದ ಏಕೈಕ ಕಾರ್ಮಿಕ ಸಂಘಟನೆ ಎ.ಐ.ಸಿ.ಸಿ.ಟಿ.ಯು ಎಂದು ತಿಳಿಸಿದರು. ರಾಜ್ಯ ಸರಕಾರವು ಅಕ್ಷರ ದಾಸೋಹ, ಆಶಾ,ಅಂಗನವಾಡಿ ಮುಂತಾದ ನೌಕರರನ್ನು ಇನ್ನೂ ನೌಕರರೆಂದು ಪರಿಗಣಿದೆ ಸಮಾಜ ಸೇವಕರು ಎಂದು ಬಿಂಬಿಸಿ ಸೌಲಭ್ಯ ದಿಂದ ವಂಚಿಸುತ್ತಿದೆ ಎಂದರು. ಇಂದು ಕಾರ್ಮಿಕ ವರ್ಗ ಅತ್ಯಂತ ಸಂಕಷ್ಟದ ಪರಿಸ್ಥಿತಿ ಯಲ್ಲಿ ಇದ್ದು ನಮ್ಮನ್ನಾಳುತ್ತಿರುವ ಕೇಂದ್ರ ಮತ್ತು ರಾಜ್ಯದ…
ಬಂಟ್ವಾಳ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕ್ಷೇತ್ರದ ವಿವಿದೆಡೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ 22.29 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಎಂಟು ಸೇತುವೆ ಸಹಿತ ಕಿಂಡಿ ಅಣೆಕಟ್ಟುಗಳ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಭಾನುವಾರ ನೆರವೇರಿಸಿದರು.ಈ ಸಂದರ್ಭ ಮಾತನಾಡಿದ ಶಾಸಕರು ಬಂಟ್ವಾಳ ಕ್ಷೇತ್ರದಲ್ಲಿಯು 266 ಕೋ.ರೂ.ವೆಚ್ಚದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿದೆ ಎಂದರು.ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ರೈತರ ಆದಾಯವನ್ನು ದ್ವಿಗುಣ ಮಾಡುವ ನಿಟ್ಟಿನಲ್ಲಿ ಚೆಕ್ ಡ್ಯಾಮ್ ಗಳ ನಿರ್ಮಿಸಿ ನೀರನ್ನು ಉಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಅಂರ್ತಜಲವು ವೃದ್ಧಿಯಾಗಿ ಕೃಷಿ ಭೂಮಿ, ಕುಡಿಯುವ ನೀರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.ಮಾಣಿ ಗ್ರಾಮದ ಅರ್ಬಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು, ಸಜಿಪಮೂಡ ಕಲ್ಲಕುಮೇರುವಿನಲ್ಲಿ, ವಿಟ್ಲಪಡ್ನೂರು ಗ್ರಾಮದ ಮೂರ್ಗಜೆಯಲ್ಲಿ, ಕೊಳ್ನಾಡು ಗ್ರಾಮದ ಕಟ್ಟತ್ತಿಲಮಠದಲ್ಲಿ, ಮಣಿನಾಲ್ಕೂರು ಗ್ರಾಮದ ಬಾರೆತ್ಯಾರುವಿನಲ್ಲಿ, ಅಜ್ಜಿಬೆಟ್ಟು ಗ್ರಾಮದ ಕಳಸಡ್ಕದಲ್ಲಿ ಕರೋಪಾಡಿಯ ದೇವಸ್ಯದಲ್ಲಿ, ರಾಯಿ ಗ್ರಾಮದ ಮಿಯಾಳಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡಿದ್ದು, ಇವುಗಳ…
ಮೇ ತಿಂಗಳಿನಲ್ಲಿ ಜಕ್ರಿಬೆಟ್ಟು ಡ್ಯಾಂ ಕಾಮಗಾರಿ ಪೂರ್ಣ ನಿರೀಕ್ಷೆ : ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ: ಜಕ್ರಿಬೆಟ್ಟುವಿನ ನಿರ್ಮಾಣಗೊಳ್ಳುತ್ತಿರುವ ಸೇತುವೆ ಸಹಿತ ಡ್ಯಾಂನ ಕಾಮಗಾರಿ ಅತ್ಯಂತ ತ್ವರಿತಗತಿಯಲ್ಲಿ ಸಾಗುತ್ತಿದ್ದು ಮುಂದಿನ ಮೇ ತಿಂಗಳಿಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಶಾಸಕ ರಾಜೇಶ್ ನಾಕ್ ಹೇಳಿದರು.ಅವರು ಬಂಟ್ವಾಳದ ಜಕ್ರಿಬೆಟ್ಟುವಿನ 135 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಸಹಿತ ಅಣೆಕಟ್ಟು( ಬ್ರಿಡ್ಜ್ ಕಂ ಬ್ಯಾರೇಜ್)ವಿನ ಕಾಮಗಾರಿ ವೀಕ್ಷಿಸಿ ಪ್ರಗತಿ ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ ನವೆಂಬರ್ 18ರಂದು ಸಣ್ಣನೀರಾವರಿ ಇಲಾಖೆಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದರು. ಮುಂದಿನ ವರ್ಷಕ್ಕೆ ಈ ಡ್ಯಾಂನ ಸಂಪೂರ್ಣ ಪ್ರಯೋಜನ ಈ ಭಾಗದ ಜನರಿಗೆ ಸಿಗಲಿದೆ, ಈ ಬಾರಿ ಬಿಸಿಲಿನ ತಾಪಕ್ಕೆ ನೀರಿನ ಅಭಾವ ಉಂಟಾಗುವ ಆತಂಕ ಇದೆ. ಈ ಡ್ಯಾಂ ನಿರ್ಮಾಣಗೊಂಡ ಬಳಿಕ ನೀರಿಗಾಗಿ ಪರಿತಪಿಸುವ ಸಂಕಷ್ಟ ದೂರವಾಗಲಿದೆ ಎಂದು ತಿಳಿಸಿದರು.ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಪ್ರಸನ್ನ…








