Author: admin

ಬಂಟ್ವಾಳ: ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ ತೃಪ್ತಿ ತನಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.ಶುಕ್ರವಾರ ಪಂಜಿಕಲ್ಲು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿದ ಬಳಿಕ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಈ ಸಂದರ್ಭ ಮಾತನಾಡಿದ ಪಂಜಿಕಲ್ಲು ಗ್ರಾಪಂ ಅಧ್ಯಕ್ಷ ಸಂಜೀವ ಪೂಜಾರಿ, ರಾಜೇಶ್ ನಾಯ್ಕ್ ಶಾಸಕರಾದ ಬಳಿಕ ೧೪ ಕೋಟಿ ರೂ.ಗೂ ಮಿಕ್ಕಿ ಅನುದಾನ ಪಂಜಿಕಲ್ಲಿಗೆ ಬಂದಿದೆ. ಸೇತುವೆ ಸಹಿತ ಕಿಂಡಿ ಅಣೆಕಟ್ಟು, ರಸ್ತೆಗಳು ಇದರಲ್ಲಿ ಸೇರಿವೆ ವಸತಿ ರಹಿತರ ಸಮಸ್ಯೆಗಳೂ ಈಡೇರಿವೆ ಎಂದರು. Promotion ಬಿಜೆಪಿ ಕ್ಷೇತ್ರ ಕೋಶಾಧಿಕಾರಿ ಪ್ರಕಾಶ್ ಅಂಚನ್ ಮಾತನಾಡಿ, ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಗ್ರಾಪಂ ಉಪಾಧ್ಯಕ್ಷೆ ಜಯಶ್ರೀ ಪಟ್ರಾಡಿ, ಸದಸ್ಯರಾದ ಹರೀಶ್ ಪೂಜಾರಿ ತಾಕೋಡೆ, ಬಾಲಕೃಷ್ಣ ಪೂಜಾರಿ, ಮೋಹನ್ ದಾಸ್ , ಪೂವಪ್ಪ ಮೆಂಡನ್, ಚಿತ್ರಾಕ್ಷಿ, ರೂಪ, ನಳಿನಿ, ಚಂದ್ರಾವತಿ ಶೆಟ್ಟಿ, ಶೋಭಾ, ಗೋಪಾಲ ಕುಲಾಲ್ ಮಜಲೊಡಿ, ಚಿದಾನಂದ ಕುಲಾಲ್, ಸುಜಾತ, ಪಂಜಿಕಲ್ಲು…

Read More

ಬಂಟ್ವಾಳ : ಕೂರಿಯಾಳ ಸಮಾಜ ಸೇವಾ ಸಂಘ ಇದರ 5ನೇ ವರ್ಷದ ವಾರ್ಷಿಕೋತ್ಸವವು ಶನಿವಾರ ಕೂರಿಯಾಳ ಮೇಗಿನಕೆರೆ ದೊಂಪದ ಬಲಿ ಕ್ಷೇತ್ರದಲ್ಲಿ ಸಂಜೆ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಮಾಜಿ ಸಚಿವ ಬಿ.ರಮಾನಾಥ ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಪ್ರಗತಿಪರ ಕೃಷಿಕ ರಘುನಾಥ ಪಯ್ಯಡೆ, ಪ್ರಗತಿಪರ ಕೃಷಿಕ ಪ್ರಸನ್ನ ಭಂಡಾರಿ ಬಳ್ಳಿ, ನಿವೃತ್ತ ಮುಖ್ಯ ಶಿಕ್ಷಕಿ ಸಿಪ್ರಿಯನ್ ಡಿಸೋಜ ಭಾಗವಹಿಸಲಿದ್ದಾರೆ. Space for paid advertisement ಸಭಾ ಕಾರ್ಯಕ್ರಮದ ಮೊದಲು ಶ್ರೀ ತುಳಸಿ ಕಲಾ ತಂಡದ ಕಲಾವಿದರಿಂದ ಹಾಸ್ಯ ಪ್ರಹಸನ ಮತ್ತು ಸಭಾ ಕಾರ್ಯಕ್ರಮದ ನಂತರ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ರಾಘವ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರವ್ಯಾಪ್ತಿಯಲ್ಲಿ 14 ದಿನಗಳ ಕಾಲ ನಡೆಯಲಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಗೆ ಪೊಳಲಿ ಸಮೀಪದ ಪುಂಚಮೆಯಲ್ಲಿ ಶುಕ್ರವಾರ ಬೆಳಿಗ್ಗೆ ಅದ್ಧೂರಿಯ ಚಾಲನೆ ನಿಡಲಾಯಿತು. ಬಂಟ್ವಾಳ ವೆಂಕಟರಮಣ ದೇವಸ್ಥಾನ, ಅಗ್ರಹಾರ ಚರ್ಚ್, ಬಂಟ್ವಾಳ ಕೆಳಗಿನ ಪೇಟೆ ಜುಮಾ ಮಸೀದಿ ಸಹಿತ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪುಂಚಮೆ ಬಳಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಬಿಜೆಪಿ ಸರ್ಕಾರ ಪ್ರತಿ ಹಂತದಲ್ಲೂ ಭ್ರಷ್ಟಾಚಾರವನ್ನು ವಿಜೃಂಭಿಸಲು ಅವಕಾಶ ನೀಡಿದ್ದು, ಬೆಲೆ ಏರಿಕೆಯಿಂದ ಜನರು ಜೀವನ ಮಾಡಲು ಅಸಾಧ್ಯ ಎನ್ನುವ ಸ್ಥಿತಿ ಎದುರಾಗಿದೆ, ಜನರನ್ನು ವ್ಯವಸ್ಥಿತವಾಗಿ ಮೋಸ ಮಾಡುವ ಕೆಲಸ ಬಿಜೆಪಿಯಿಂದ ನಡೆಯುತ್ತಿದ್ದು, ಬಿಜೆಪಿ ಸುಳ್ಳಿನ ಸರಕಾರ ಎಂದವರು ಆರೋಪಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಭಿವೃದ್ಧಿಗಾಗಿ ಕಾಮಗಾರಿ ನಡೆಯುತ್ತಿತ್ತು,…

Read More

ಬಂಟ್ವಾಳ: ತಾಲೂಕು ಕಚೇರಿ ಮುಂಭಾಗ 400ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ರೈತಸಂಘ ಆಯೋಜಿಸಿದ್ದ ಪ್ರತಿಭಟನೆಗೆ ಬಂದ ವೇಳೆ ಬಿ.ಸಿ.ರೋಡಿನ ರೋಟರಿ ಕ್ಲಬ್ ಲಯನ್ಸ್ ಭವನದ ಬಳಿ ನಿಲ್ಲಿಸಿದ್ದ ಆಟೊವನ್ನೇ ಕಳವು ಮಾಡಿದ ಘಟನೆ ನಡೆದಿದೆ.ಈ ಕುರಿತು ವಿಟ್ಲದ ಯೋಗೀಶ್ ಕುಮಾರ್ ಎಂಬವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಬೆಳಗ್ಗೆ 10.30ರ ವೇಳೆ ಬಿ ಸಿ ರೋಡಿನ ಲಯನ್ಸ್ ಕ್ಲಬ್ ಭವನದ ಹತ್ತಿರ ತಮ್ಮ ಅಟೋ ರಿಕ್ಷಾವನ್ನು ನಿಲ್ಲಿಸಿ, ರೈತರ ಪ್ರತಿಭಟನೆಗೆ ತೆರಳಿದ್ದಾರೆ. ಪ್ರತಿಭಟನೆ ಮುಗಿದ ನಂತರ ಮಧ್ಯಾಹ್ನ 3.00 ಗಂಟೆಗೆ ಪುನಃ ಅಲ್ಲಿಗೆ ಹೋಗಿ ನೋಡಲಾಗಿ ಅಟೋ ರಿಕ್ಷಾ ನಿಲ್ಲಿಸಿದಲ್ಲಿ ಇರದೇ ಇದ್ದು, ಅಲ್ಲೆ ಸುತ್ತ ಮುತ್ತ ಹುಡುಕಲಾಗಿ ಸಿಗದೇ ಇದ್ದು ಯಾರೋ ಕಳ್ಳರು ಅಟೋ ರಿಕ್ಷಾ ಕಳವು ಮಾಡಿಕೊಂಡು ಹೋಗಿದ್ದಾಗಿ ಸಂಶಯಿಸಲಾಗಿದೆ. promotion

Read More

ಬಂಟ್ವಾಳ: ಅನಂತಾಡಿ ಗ್ರಾ.ಪಂ.ಬಿಜೆಪಿಯ ಬಲಿಷ್ಠ ಶಕ್ತಿಕೇಂದ್ರವಾಗಿದ್ದು, ಅದಕ್ಕೆ ಪೂರಕವಾಗಿ ಹೆಚ್ಚಿನ ಅನುದಾನಗಳ ಮೂಲಕ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದೆ. ಜತೆಗೆ ಕೋಟ್ಯಂತರ ರೂಪಾಯಿ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಬಂದಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು. ಅವರು ಅನಂತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು ೧.೫೦ ಕೋ.ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ- ಶಿಲಾನ್ಯಾಸ ನೆರವೇರಿಸಿ ಬಳಿಕ ಮಂದಿರದಲ್ಲಿ ನಡೆದ ಮಾತನಾಡಿದರು. ಯಾವುದೇ ಚುನಾವಣೆಯನ್ನು ಅತಿಯಾದ ಆತ್ಮವಿಶ್ವಾಸದಿಂದ ಕೊಂಚ ಲೈಟಾಗಿ ಪರಿಗಣಿಸಿದರೂ, ದೊಡ್ಡ ಹೊಡೆತ ಸಿಗುತ್ತದೆ. ಅಭಿವೃದ್ಧಿಯ ಜತೆಗೆ ಪಕ್ಷ ಸಂಘಟನೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ಅಭ್ಯರ್ಥಿ ಸೋತಾಗ ಎಷ್ಟು ಹಿನ್ನಡೆಯಾಗುತ್ತದೆ ವಿಮರ್ಶೆ ಮಾಡಬೇಕು.ವೇದಿಕೆಯಲ್ಲಿ ಅನಂತಾಡಿ ಗ್ರಾ.ಪಂ.ಅಧ್ಯಕ್ಷ ಗಣೇಶ್ ಪೂಜಾರಿ, ನೆಟ್ಲಮುಡ್ನೂರು ಗ್ರಾ.ಪಂ‌.ಅಧ್ಯಕ್ಷ ಸತೀಶ್ ಪೂಜಾರಿ, ಉಪಾಧ್ಯಕ್ಷೆ ಶಕೀಲ ಕೃಷ್ಣ ಪೂಜಾರಿ, ಸದಸ್ಯೆ ಸುಜಾತ, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷೆ ಪುಷ್ಪರಾಜ್ ಚೌಟ, ಉಪಾಧ್ಯಕ್ಷ ತನಿಯಪ್ಪ ಗೌಡ, ಮಹಾಶಕ್ತಿ ಕೇಂದ್ರದ ಅಧ್ಯಕ್ಷೆ ಸನತ್ ಕುಮಾರ್ ರೈ, ತಾ.ಪಂ.ಮಾಜಿ ಸದಸ್ಯೆ ಗೀತಾ…

Read More

ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಬಂಟ್ವಾಳದ ವಾಸುದೇವ ಟವರ್ಸ್‌ನಲ್ಲಿರುವ ಕಿಯೋನಿಕ್ಸ್ ಸೆಂಟರ್‌ನಲ್ಲಿ ಆಚರಿಸಲಾಯಿತು. ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕಿಯೋನಿಕ್ಸ್ ಸೆಂಟರ್‌ನ ಗೀತಾ ಜೆ. ಜೈನ್ ಭಾಗವಹಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭಾರತಿ ವಸಂತ್ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪವಿತ್ರ ಸುರೇಶ್ ಅವರನ್ನು ಸನ್ಮಾನಿಸಲಾಯಿತು. ಮಹಿಳಾ ಕಾನೂನು ಮತ್ತು ಹಕ್ಕುಗಳ ಬಗ್ಗೆ ವಕೀಲೆ ಶೈಲಜಾ ರಾಜೇಶ್ ತರಬೇತಿ ನೀಡಿದರು. ವೇದಿಕೆಯಲ್ಲಿ ಜೆಸಿಐ ಬಂಟ್ವಾಳದ ಉಪಾಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ, ಕಾರ್ಯದರ್ಶಿ ರಶ್ಮಿ ಶೆಟ್ಟಿ, ಕಾರ್ಯಕ್ರಮ ಸಂಯೋಜಕಿ ವಿಮಲ ಶ್ರೀನಿವಾಸ್, ಪೂರ್ವಾಧ್ಯಕ್ಷರಾಧ ಯತೀಶ್ ಕರ್ಕೆರಾ, ಸದಾನಂದ ಬಂಗೇರಾ, ಸಂತೋಷ್ ಜೈನ್ ಸದಸ್ಯ ಉಮೇಶ್ ಪೂಜಾರಿ ಉಪಸ್ಥಿತರಿದ್ದರು. Promotion

Read More

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗುರುವಾರ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.೧೦ ಲಕ್ಷ ರೂ ಅನುದಾನದ ರಾಮರೆಪಾಲು ಹೊಸಹೊಕ್ಲು ರಸ್ತೆ ಉದ್ಘಾಟನೆ, ೩೦ ಲಕ್ಷ ಅನುದಾನದ ನಡು ಉರ್ದಿಲ ತಡೆಗೋಡೆ, ೨ನೇ ವಾರ್ಡಿನ ಜನತಾ ಕಾಲನಿರಸ್ತೆ ಉದ್ಘಾಟನೆ, ಉರ್ದಿಲ ಕ್ರೀಡಾಂಗಣದ ಹೈ ಮಾಸ್ಕ್ ದೀಪ ಉದ್ಘಾಟನೆ, ೧೩ ಲಕ್ಷ ವೆಚ್ಚದ ಕರಿಂಕ ಅಂಗನವಾಡಿ ಕೇಂದ್ರ ಉದ್ಘಾಟನೆ, ೧೫ ಲಕ್ಷ ವೆಚ್ಚದ ಪಂತಡ್ಕ -ಗುಂಡ್ಯ-ಎಲ್ಕಾಜೆ ಪರಿಶಿಷ್ಠ ಪಂಗಡ ಕಾಲನಿ ರಸ್ತೆ ಕಾಂಕ್ರೀಟಿಕರಣ, ೧೦ ಲಕ್ಷ ವೆಚ್ಚದ ಮಾದೇಲು- ಮೀನಾವು ರಸ್ತೆಗೆ ಶಿಲಾನ್ಯಾಸ, ೧೦ಲಕ್ಷ ಅನುದಾನದಲ್ಲಿ ಮೈಕೆ ಯಿಂದ ಏಮಾಜೆ ಸಂಪರ್ಕ ಕಾಂಕ್ರೀಟ್ ರಸ್ತೆ ಉದ್ಘಾಟನೆ, ೫೦ ಲಕ್ಷ ವೆಚ್ಚದ ಏಮಾಜೆ ರಸ್ತೆಗೆ ಶಿಲಾನ್ಯಾಸ, ೧೪ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕರಿಂಕ ಹೊಸ ಹೊಕ್ಲು ಕಾಲುಸಂಕ ಉದ್ಘಾಟನೆ, ೧೦ ಲಕ್ಷದದಲ್ಲಿ ಕಾಂಕ್ರಿಟೀಕರಣಗೊಂಡ ನೇರಳಕಟ್ಟೆ ಕರ್ಲೆತ್ತಿಮಾರ್ ರಸ್ತೆಯನ್ನು ಹಾಗೂ ನೆಟ್ಲಮುಡ್ನೂರು ಗ್ರಾ.ಪಂ.ಕಚೇರಿ ಬಳಿ…

Read More

ಬಂಟ್ವಾಳ: ಕರ್ನಾಟಕ ಗಮಕ ಕಲಾ ಪರಿಷತ್ ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ ದ.ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕು ದ್ವಿತೀಯ ಗಮಕ ಸಮ್ಮೇಳನ ಮಾ.12ರಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ಗಮಕ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ತಿಳಿಸಿದರು.ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ ಡಾ. ವಾರಿಜಾ ನಿರ್ಬೈಲು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಬೆಳಿಗ್ಗೆ 9ಗಂಟೆಗೆ ವಿದ್ಯಾರ್ಥಿಗಳಿಂದ ಗಮಕ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಕರ್ನಾಟಕ ಗಮಕ ಕಲಾ ಪರಿಷತ್ ಅಧ್ಯಕ್ಷೆ ಗಂಗಮ್ಮ ಕೇಶವ ಮೂರ್ತಿ ಅಧ್ಯಕ್ಷತೆ ವಹಿಸುವರು, ಕನ್ನಡ ಸಾಹಿತ್ಯ ಪರಿಷತ್ತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ದೀಪೋಜ್ವಲನಗೊಳಿಸುವರು. ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್, ಗಮಕ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಮಧೂರು…

Read More

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ ಕೋಟಿ ರೂಗಳ ಪ್ರಗತಿಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಯಾತ್ರೆ ಮೂಲಕ ಮಾಡಲಾಗುವುದು. ಒಂದೇ ದಿನ ಮೂರು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡು ಯಾತ್ರೆಯನ್ನು ನಡೆಸಲಾಗುವುದು. ಪ್ರತಿ ದಿನ ಸಂಜೆ ಸಭೆ ನಡೆಸಲಾಗುತ್ತದೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಯಾತ್ರೆ ಆರಂಭಗೊಳ್ಳಲಿದೆ. ಪ್ರಮುಖ ಮುಖಂಡರು ಪ್ರತಿದಿನದ ಯಾತ್ರೆಯಲ್ಲಿ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.ಇನ್ನೊಬ್ಬರು ಮಾಡಿದ್ದನ್ನು ಹೇಳೋದಿಲ್ಲ:ಇನ್ನೊಬ್ಬರು ಮಾಡಿದ ಕೆಲಸವನ್ನು ನಾನು ಮಾಡಿದ್ದು ಎಂದು ಎಲ್ಲೂ ಹೇಳುವುದಿಲ್ಲ ಎಂದು ಹೇಳಿದ ರಮಾನಾಥ ರೈ, ಬಂಟ್ವಾಳದ ಒಳಚರಂಡಿ ಯೋಜನೆ ಮಂಜೂರಾತಿಯನ್ನು 2017ರ ಅಕ್ಟೋಬರ್…

Read More

ಬಂಟ್ವಾಳ:ಬರಿಮಾರು ಗ್ರಾಮದ ಕಲ್ಲೆಟ್ಟಿ ಕಾನಲ್ತಾಯ ಮಹಾಕಾಳಿ ದೈವಸ್ಥಾನಕ್ಕೆ ರೂ 40 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ತಡೆಗೋಡೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬುಧವಾರ ಉದ್ಘಾಟಿಸಿದರು.25 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಪಂಜುರ್ಲಿಗುಡ್ಡೆ ಮಹಾಕಾಳಿಬೆಟ್ಟು, ತಲಾ 10 ಲಕ್ಷ ವೆಚ್ಚದಲ್ಲಿ ಪಾಪೆತ್ತಿಮಾರು ಬರಿಮಾರು, ಕುಲ್ಲಾಜೆ ಲಾದ್ರಕೋಡಿ ರಸ್ತೆ, ಪಾಪರ್ಕಜೆ ಬೊಟ್ಟು ರಸ್ತೆ, ಪಾರ್ಪಕಜೆ ಮುಂಡೇವು ರಸ್ತೆ ಕಾಂಕ್ರೀಟ್ ಕರಣವನ್ನು ಉದ್ಘಾಟಿಸಿದರು. ಬರಿಮಾರು ಶಾಲೆ ಬಳಿ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.ಮುಂದಿನ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದ ರಾಜೇಶ್ ನಾಯ್ಕ್, ದಾರಿ ತಪ್ಪಿಸುವ ಹೇಳಿಕೆಗಳನ್ನು ಕೆಲವರು ಕೊಡುತ್ತಿದ್ದು, ಈಡೇರಿಸಲು ಅಸಾಧ್ಯವಾದ ಅವಾಸ್ತವಿಕ ಮಾಹಿತಿ ನೀಡಲಾಗುತ್ತಿದೆ ಎಂದರು.ಸಾಮಾನ್ಯ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಿ ಕೆಲಸ ಮಾಡುವ ಕಾರ್ಯವನ್ನು ಮಾಡಿದ್ದೇನೆ. ಜಗತ್ತು ಮೆಚ್ಚುವ ಕೆಲಸವನ್ನು ಕೋವಿಡ್ ಸಂದರ್ಭದಲ್ಲಿ ನರೇಂದ್ರ ಮೋದಿ ನೇತೃತ್ವದ ಅಡಳಿತದಿಂದಾಗಿ ಇವತ್ತು ನಾವು ಆರೋಗ್ಯವಂತರಾಗಿದ್ದೇವೆ. ನನಗೆ ಹಿಂದುತ್ವ ಮತ್ತು ಅಭಿವೃದ್ಧಿ ಮುಖ್ಯ. ಶಾಂತಿ ಕಾಪಾಡುವ ಆಡಳಿತ ನಡೆಸಿದ್ದು ಹಿಂದುತ್ವವಾಗಿದೆ. ಸಾವಿರದ…

Read More