Author: admin

ಬಂಟ್ವಾಳ: ಹಿರಿಯ ಉದ್ಯಮಿ, ಸಮಾಜ ಸೇವಕ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ 2022-23 ರ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಪಚ್ಚಿನಡ್ಕ ಕೆ.ಸೇಸಪ್ಪ ಕೋಟ್ಯಾನ್ (75) ಜನವರಿ 26ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಪತ್ನಿ ಚಂದ್ರಾವತಿ, ಪುತ್ರ ಭುವನೇಶ್ ಪಚ್ಚಿನಡ್ಕ, ಹಾಗು ನಾಲ್ಕು ಹೆಣ್ಣುಮಕ್ಕಳ ಸಹಿತ ಬಂಧುಮಿತ್ರರನ್ನು ಅಗಲಿದ್ದಾರೆ. .ಶುಭ ಬೀಡಿಗಳು ಹೆಸರಿನಲ್ಲಿ ಬೀಡಿ ಉದ್ಯಮವನ್ನು ಆರಂಭಿಸಿ ಸಹಸ್ರಾರು ಮಂದಿಗೆ ಉದ್ಯೋಗದಾತರಾದ ಅವರು, ರಿಕ್ಷಾ, ಸ್ಕೂಟರ್ ಮೂಲಕ ಮಾರುಕಟ್ಟೆ ಮಾಡಿದ್ದು ಹಂತಹಂತವಾಗಿ ಅದು ರಾಜ್ಯವ್ಯಾಪಿ ಬೆಳೆದದ್ದು ಇತಿಹಾಸ. ಶುಭಲಕ್ಷ್ಮೀ ಟ್ರಾವೆಲ್ಸ್ ಮೂಲಕ ಬಸ್ ಉದ್ಯಮವನ್ನೂ ಆರಂಭಿಸಿ, ಹಳ್ಳಿಪ್ರದೇಶದ ಜನರಿಗೆ ನೆರವಾದರು. ಸಿಹಿ ಪಾನೀಯ ಘಟಕ, ಶುಭಲಕ್ಷ್ಮೀ ಆಡಿಟೋರಿಯಂ ಸಭಾಂಗಣವನ್ನು ಆರಂಭಿಸಿ ಗಮನ ಸೆಳೆದ ಅವರು,ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರು. ಸತತ 26 ವರ್ಷಗಳಿಂದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿದ್ದರು. ಪಚ್ಚಿನಡ್ಕದ ಆದಿ ಮೊಗೇರ್ಕಳ ಕೊರಗಜ್ಜ ಕ್ಷೇತ್ರ, ಕೈಕಂಬ ಶ್ರೀ ಕ್ಷೇತ್ರ…

Read More

ಬಂಟ್ವಾಳ,ಜ. 26 : ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಮಾಣಿ ಕ್ಲಸ್ಟರ್ ಇವುಗಳ ಸಹಯೋಗದೊಂದಿಗೆ ಎರಡು ದಿನಗಳ ಕಲಿಕಾ ಹಬ್ಬವು ನೇರಳಕಟ್ಟೆ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ನೇರಳಕಟ್ಟೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎನ್.ಕೆ.ಅಬೂಬಕ್ಕರ್ (ಅಬ್ಬು) ಅಧ್ಯಕ್ಷತೆ ವಹಿಸಿದ್ದರು.ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಕೀಲಾ ಕೆ.ಪೂಜಾರಿ, ಸದಸ್ಯರಾದ ಕೆ. ಶ್ರೀಧರ ರೈ, ಲತೀಫ್ ನೇರಳಕಟ್ಟೆ, ಧನುಂಜಯ ಗೌಡ, ಸಮಿತಾ ಡಿ. ಪೂಜಾರಿ, ಪ್ರೇಮ, ಲಕ್ಷ್ಮಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ, ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಬಾಲಕೃಷ್ಣ ಆಳ್ವ, ನೇರಳಕಟ್ಟೆ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಕೆ. ನಿರಂಜನ್ ರೈ, ಮಾಣಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಕಾರ್ಯಕ್ರಮ ನೋಡೆಲ್ ಅಧಿಕಾರಿ, ಶಂಭೂರು ಶಾಲಾ ಮುಖ್ಯ ಶಿಕ್ಷಕ ಕಮಲಾಕ್ಷ…

Read More

ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್ ಗೆ ಭೇಟಿ ನೀಡಿದರು.ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು. ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ರೋಟರಿ ಕ್ಲಬ್ ಬಂಟ್ವಾಳದ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭ ವಿದೇಶಿ ರೋಟರಿ ಸದಸ್ಯರು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ರೈಟ್ ಫಾರ್ ರೋಟರಿ ಚೇರ್ ಮನ್ ಕೃಷ್ಣ ನಾರಾಯಣ್ ಮುಳಿಯ ಮಾತನಾಡಿದರು. ವೇದಿಕೆಯಲ್ಲಿ ಸಹಾಯಕ ಗವರ್ನರ್ ಮಂಜುನಾಥ ಆಚಾರ್ಯ, ರೈಟ್ ಫಾರ್ ರೋಟರಿ ಕಾರ್ಯದರ್ಶಿ ಪಶುಪತಿ ಶರ್ಮ, ಉಪಸ್ಥಿತರಿದ್ದರು. ರೋಟರಿ ಕ್ಲಬ್ ಬಂಟ್ವಾಳದ ಕಾರ್ಯದರ್ಶಿ ವಂದಿಸಿದರು.

Read More

ಬಂಟ್ವಾಳ: ದೇವಸ್ಥಾನಗಳು ಆಧ್ಯಾತ್ಮಕ್ಕೆ ಮಾತ್ರ ಸೀಮಿತವಾಗ ಬಾರದು. ಭಗವಾನ್ ಶ್ರೀ ನಿತ್ಯಾನಂದರು ಸಾಮಾಜಿಕ ಆಂದೋಲನ ಮಾಡಿದವರಾಗಿದ್ದು ದೇವಸ್ಥಾನಗಳು ಅವರ ಚಿಂತನೆಯ ಹಾದಿಯಲ್ಲಿಯೇ ಸಾಗಬೇಕಿದೆ ಎಂದು ಕೊಪ್ಪ ಗೌರಿಗದ್ದೆಯ ಶ್ರೀ ದತ್ತಾಶ್ರಮ ಸ್ವರ್ಣಪೀಠಿಕಾಪುರದ ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು.ಬಂಟ್ವಾಳ ಬೈಪಾಸ್‌ನಲ್ಲಿರುವ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ಟ್ರಸ್ಟ್‌ನ ಸುವರ್ಣ ಮಹೋತ್ಸವದ ವರ್ಷಚರಣೆ ಪ್ರಯುಕ್ತ ನೂತನ ಮಂದಿರ ಲೋಕಾರ್ಪಣೆ, ಶ್ರೀ ಗುರುವರ್ಯರ ಪಂಚಲೋಹದ ವಿಗ್ರಹ ಪ್ರತಿಷ್ಠಾ ಮಹೋತ್ಸವ ಹಾಗೂ ಉಚಿತ ಸಾಮೂಹಿಕ ವಿವಾಹದ ಪ್ರಯುಕ್ತ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.ಧರ್ಮಕ್ಕೆ ನಿವೃತ್ತಿ ಇಲ್ಲ, ಪರರ ಸೇವೆಗಾಗಿ ಬದುಕಿದಾಗ ನಮಗೆ ಆತ್ಮತೃಪ್ತಿ ಸಿಗುತ್ತದೆ. ನಾವು ಎಲ್ಲವನ್ನೂ ದೇವರಲ್ಲಿ ಕೇಳುತ್ತಿದ್ದೇವೆ ವಿನಃ ದೇವರ ತರ ಬದುಕುತ್ತಿಲ್ಲ ಎಂದು ತಿಳಿಸಿದರು.ಮಂದಿರ ನಿರ್ಮಾಣದಲ್ಲಿ ಸ್ವಯಂ ಸೇವಕರ ಶ್ರಮ ಕಾಣುತ್ತಿದೆ. ದೇವಸ್ಥಾನ ನಿರ್ಮಾಣ ಪುಣ್ಯದ ಕೆಲಸವಾಗಿದ್ದು ದೇವಸ್ಥಾನ, ಅನ್ನದಾನ, ಗೋಶಾಲೆ ನಿರ್ಮಾಣಮಾಗಬೇಕಾದರೆ ನಾವು ಪುಣ್ಯ ಮಾಡಿರಬೇಕು ಎಂದು ತಿಳಿಸಿದರು. ಬಂಟ್ವಾಳದಲ್ಲಿ ಮೂರು ಭಗವಾನ್ ಶ್ರೀ…

Read More

ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡ ಇಲ್ಲಿನ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ದಾನಿಗಳ ಸಹಕಾರದಿಂದ ನಿರ್ಮಿಸಲು ಉದ್ದೇಶಿಸಿರುವ ರಂಗ ಮಂದಿರ ನಿರ್ಮಾಣ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.ಸಜೀಪ ಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ, ಎಸ್ ಡಿ ಎಂ ಸಿ ಸದಸ್ಯರಾದ ಸೀತಾರಾಮ ಅಗೊಳಿಬೆಟ್ಟು, ದಿನಕರ್, ರವಿ ಪಂಬದ, ನಳಿನಿ, ಪ್ರಮುಖರಾದ ವಿಶ್ವನಾಥ ಕೊಟ್ಟಾರಿ ಉಪಪ್ರಾಂಶುಪಾಲೆ ಜಯಲಕ್ಷ್ಮಿ ಪಿ.ಎನ್, ಶಾಲಾ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳಾದ ರವೀಣ ಬಂಗೇರ, ಶಿವರಾಮ ಮರ್ತಾಜೆ, ಪ್ರತಿಭಾ ಉಪಸ್ಥಿತರಿದ್ದರು.

Read More

ಬಂಟ್ವಾಳ: ಬಂಟ್ವಾಳವೂ ಸೇರಿದಂತೆ ಕರಾವಳಿ ಆತಂಕದ ದಿನಗಳನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ರಾಜೇಶ್ ನಾಯ್ಕ್ ಪಾದಯಾತ್ರೆ ಮಾಡಿ ಚುನಾವಣೆಯಲ್ಲಿ ಗೆದ್ದು ನಾಲ್ಕೂವರೆ ವರ್ಷದ ಅವಧಿಯಲ್ಲಿ ಬಂಟ್ವಾಳದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.ಅವರು ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆಯುತ್ತಿರುವ ಗ್ರಾಮ ವಿಕಾಸ ನಡಿಗೆ- ಗ್ರಾಮದೆಡೆಗೆ ಶಾಸಕರ ನಡಿಯ 12ನೇ ದಿನದ ಪಾದಯಾತ್ರೆಯ ಬಳಿಕ ಕಳ್ಳಿಗೆ ಗ್ರಾಮದ ಕುರಿಯಾಳ ಶ್ರೀ ಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.ಹಿಂದೆ ಗಲಭೆ ಪೀಡಿತ ಬಂಟ್ವಾಳದಲ್ಲಿ ತಹಶೀಲ್ದಾರರ ಕಚೇರಿ ಮುಂದೆ ಹೋರಾಟ ಮಾಡಿದ ನೆನಪಿದೆ, ಅಂತಹ ಬಂಟ್ವಾಳ ಇಂದು ಅದೆಷ್ಟು ಬದಲಾಗಿದೆ. ರಾಜೇಶ್ ನಾಯ್ಕ್ ಕಾನೂನನ್ನು ಮೀರಿ ಏನನ್ನು ಮಾಡಿಲ್ಲ, ಅನ್ಯಾಯ ಆದಾಗ ಶಕ್ತಿ ಮೀರಿ ಕೆಲಸ ಮಾಡಿದ್ದಾರೆ. ತನ್ನ ಕ್ಷೇತ್ರದ ಕಟ್ಟಕಡೆಯ ಜನರ ಕಷ್ಟಕ್ಕೆ ಸ್ಪಂದಿಸಿದ್ದಾರೆ ಅದು ಅವರ ರಾಜಧರ್ಮ ಎಂದರು. ಚುನಾವಣೆ ಸಮೀಪಿಸುವಾಗ…

Read More

ಬಂಟ್ವಾಳ: ಕೇಂದ್ರ ಚುನಾವಣಾ ‌ ಆಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಬುಧವಾರ ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ತಹಶೀಲ್ದಾರ್ ದಯಾನಂದ ಕೆ .ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮತದಾನದ ಮಹತ್ವದ ಬಗ್ಗೆ ಮಾತನಾಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ರವರು ಜಾಗೃತ ಮತದಾರರಾಗಿ ಮತ ಚಲಾಯಿಸಬೇಕು. ಆಗ ಉತ್ತಮ ನಾಯಕರ ಆಯ್ಕೆ ನಡೆದು ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದರು.ಮತದಾರರ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದ ಉಪನ್ಯಾಸಕ ಹಾಗೂ ತಾಲೂಕು ಚುನಾವಣೆಯ ಮುಖ್ಯ ತರಬೇತುದಾರರಾದ ಅಬ್ದುಲ್ ರಝಾಕ್ ರವರು 18 ವರ್ಷ ಪೂರೈಸಿದ ಎಲ್ಲಾ ಭಾರತೀಯ ಪ್ರಜೆಗಳೂ ಮತದಾನದ ಹಕ್ಕನ್ನು ಪಡೆಯುತ್ತಾರೆ. ಮತದಾನ ಮಾಡುವುದು ಅಭಿಮಾನದ ವಿಷಯ. ಆದ್ದರಿಂದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂದು ಪರಿಶೀಲಿಸಿ ಖಚಿತಪಡಿಸಿಕೊಂಡು ಎಲ್ಲರೂ ತಪ್ಪದೇ ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಪಾಣೆಮಂಗಳೂರು ಹೋಬಳಿ…

Read More

ಬಂಟ್ವಾಳ: ಜ.26ರಂದು ಪ್ರಜಾಪ್ರಭುತ್ವ ದಿನದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ರಾಜ್ಯದ ಪ್ರತಿನಿಧಿಯಾಗಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿಥುನ್ ಆಯ್ಕೆಯಾಗಿದ್ದಾರೆ.ತಾಲೂಕಿನ ಶೇರಾ ನಿವಾಸಿ ದಿ|.ಕೃಷ್ಣಪ್ಪ ಪೂಜಾರಿ ಹಾಗೂ ದಿ.| ಭಾರತಿ ಅವರ ಏಕೈಕ ಪುತ್ರನಾಗಿರುವಮಿಥುನ್ ಕುಮಾರ್ ಭಾರತೀಯ ತಟ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಪ್ರಸ್ತುತ ಆಂಧ್ರಪ್ರದೇಶದ ವಿಶಾಖಪಟ್ಟಣಂದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ದೆಹಲಿಯಲ್ಲಿ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆಯುವ ಪಥಸಂಚಲನಕ್ಕೆಕರ್ನಾಟಕದ ಇಂಡಿಯಾನ್ ಕೋಸ್ಟ್ ಗಾರ್ಡ್ ನಿಂದ ಒರ್ವ ಆಯ್ಕೆಯಾಗಿರುವುದು , ರಾಜ್ಯಕ್ಕೆ ಅತ್ಯಂತ ಸಂತಸದ ವಿಷಯವಾಗಿದೆ. ಇಂದು ನಡೆಯುವ ಪಥಸಂಚಲನದ ಒಂದು ಯುನಿಟ್ ನಲ್ಲಿ 144 ಜನರಿದ್ದು ಅ ತಂಡದಲ್ಲಿ ಮಿಥುನ್ ಪಥಸಂಚನದಲ್ಲಿ ಭಾಗವಹಿಸಲಿದ್ದಾರೆ.

Read More

ಬಂಟ್ವಾಳ: ಗ್ರಾಮ ವಿಕಾಸ ಯಾತ್ರೆಯಲ್ಲಿ ಜನರ ಪ್ರೀತಿ ವಿಶ್ವಾಸವನ್ನು ನೋಡಿದಾಗ ಜೀವನದಲ್ಲಿ ಸಾರ್ಥಕತೆ ಸಿಕ್ಕಿದೆ. ಅಧಿಕಾರ ಬಂದು ಹೋಗುತ್ತದೆ. ಆದರೆ ಪಾದಯಾತ್ರೆಯ 11 ದಿನದಲ್ಲಿ ಹಿರಿಯರಾದಿಯಾಗಿ ಎಲ್ಲಾ ವರ್ಗದ ಜನರು ಪ್ರೀತಿ ನೀಡಿದಾಗ ಹೃದಯ ತುಂಬಿ ಬಂದಿದೆ. ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.ಅವರು ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆಯುತ್ತಿರುವ ಗ್ರಾಮ ವಿಕಾಸ ನಡಿಗೆ- ಗ್ರಾಮದೆಡೆಗೆ ಶಾಸಕರ ನಡಿಯ 11ನೇ ದಿನದ ಪಾದಯಾತ್ರೆಯ ಬಳಿಕ ಕುರಿಯಾಳ ದುರ್ಗಾನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಸ್ವಾರ್ಥ ರಹಿತವಾಗಿ ಪಕ್ಷ ಕಟ್ಟಿದವರು ನಮ್ಮ ಹಿರಿಯರು, ಈ ಪಕ್ಷ ಅಧಿಕಾರಕ್ಕೆ ಬರುವ ಕನಸು ಅವರು ಕಂಡಿರಲಿಲ್ಲ, ಆದರೆ ನಮ್ಮ ಜೀವಿತಾವಧಿಯಲ್ಕಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿರುವುದೇ ವಿಶೇಷ. ಬಿಜೆಪಿ ಪಕ್ಷ ಸಾಕಷ್ಟು ಕಾರ್ಯ ಮಾಡಿದೆ. 2 ಸಾವಿರ ಕೋಟಿಯ ಅಭಿವೃದ್ಧಿ ಕಾರ್ಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲೇ ಆಗಿದೆ. ಪಕ್ಷ ಸಂಘಟನೆಯಾಗಬೇಕು, ಯಾರು ನಿಂತರೂ ಬಿಜೆಪಿ…

Read More

ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿ ಯ 2023 ನೇ ಸಾಲಿನ ಅಧ್ಯಕ್ಷರಾಗಿ ಗಾಯತ್ರಿ ಲೋಕೇಶ್ ರವರು ಆಯ್ಕೆಯಾಗಿರುತ್ತಾರೆ. ಘಟಕದ ಕಾರ್ಯದರ್ಶಿಯಾಗಿ ರಮ್ಯ, ಕೋಶಾಧಿಕಾರಿಯಾಗಿ ದೀಪ್ತಿಶ್ರೀನಿಧಿ ಹಾಗು ಘಟಕದ ಉಪಾಧ್ಯಕ್ಷರುಗಳಾಗಿ ಸುಬ್ರಹ್ಮಣ್ಯ ಪೈ, ಕಿಶನ್ ಎನ್ ರಾವ್, ಅಮಿತಾಹರ್ಷರಾಜ್, ಡಾ.ವಿನಾಯಕ್ ಕೆ.ಎಸ್. ಪ್ರಕಾಶ್ ಆಳ್ವ, ಶ್ರೀನಿಧಿ ಭಟ್ ಆಯ್ಕೆಯಾಗಿರುತ್ತಾರೆ. ಘಟಕದ ಜೇಜೇಸಿ ಅಧ್ಯಕ್ಷರಾಗಿ ರಶ್ಮಿತಾ ಆಯ್ಕೆಯಾಗಿರುತ್ತಾರೆ.ಘಟಕದ ನಿರ್ದೇಶಕರುಗಳಾಗಿ ಹರಿಶ್ಚಂದ್ರ ಆಳ್ವ, ಹರ್ಷರಾಜ್, ಡಾ.ಧೀರಜ್ ಹೆಬ್ರಿ, ರವೀಂದ್ರ ಕುಕ್ಕಾಜೆ ಆಯ್ಕೆಯಾಗಿರುತ್ತಾರೆ.ನೂತನ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜ.30 ಸೋಮವಾರ ಸಂಜೆ ಘಂಟೆ 6.30 ಕ್ಕೆ ಬಿ.ಸಿ.ರೋಡಿನ ರೋಟರಿ ಸಭಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾವಂತೂರು ಮಹಾಗಣಪತಿ ದೇವಾಲಯ ಸಮಿತಿಯ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು, ಜೇಸಿಐ ವಲಯ 15 ರ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಪದ ಪ್ರಧಾನ ಅಧಿಕಾರಿಯಾಗಿ ಜೇಸಿಐ ವಲಯ ಉಪಾಧ್ಯಕ್ಷ ಅಜಿತ್ ಕುಮಾರ್ ಭಾಗವಹಿಸಲಿದ್ದಾರೆ.

Read More