Author: admin

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ 15 ನೇಉಪ್ಪಿನಂಗಡಿ ಶಾಖೆಯು ಬ್ಯಾಂಕ್ ರಸ್ತೆಯಲ್ಲಿರುವ ಕೋಟೆ ಕೆಂಪಿನಮಜಲು “ಗೌರಿಕಾಂಪ್ಲೆಕ್ಸ್” ನ ಒಂದನೇ ಮಹಡಿಯಲ್ಲಿ ಶನಿವಾರ ಶುಭಾರಂಭಗೊಂಡಿತು. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ದೀಪ ಪ್ರಜ್ವಲನಗೈದು 15ನೇ ಉಪ್ಪಿನಂಗಡಿ ಶಾಖೆಯನ್ನು ಉದ್ಘಾಟಿಸಿ ಬಳಿಕ ಆಶೀರ್ವಚನಗೈದರುಜನತೆ ಸಹಕಾರಿ ತತ್ವದಡಿಯಲ್ಲಿ ವ್ಯವಹರಿಸಿ ಬ್ಯಾಂಕ್ ಅಭಿವೃದ್ಧಿ ಪಥದಲ್ಲಿ ಸಾಗಲಿ, ಸಂಘದ ಸಂಸ್ಥಾಪಕ ಡಾ.ಅಮ್ಮೆಂಬಳಬಾಳಪ್ಪ ಹಾಗೂ ಹೂವಯ್ಯ ಮೂಲ್ಯ ಅವರು ದೂರದೃಷ್ಠಿ ಮೂಲಕ ಹಾಕಿಕೊಟ್ಟ ಸಹಕಾರಿ ಬ್ಯಾಂಕ್ ಇಂದು ಅವರ ಚಿಂತನೆಯಂತೆ ಯುವಕರ ನೇತೃತ್ವದಲ್ಲಿ ಯಶಸ್ವಿಯಾಗಿ ಮುಂದುವರಿಯುತ್ತಿರುವುದು ಪ್ರಗತಿಯ ಸಂಕೇತವಾಗಿದೆ ಎಂದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಕಂಪ್ಯೂಟರ್ ಉದ್ಘಾಟಿಸಿ ಶುಭಹಾರೈಸಿದರು. ಉಪ್ಪಿನಂಗಡಿ ಅಡಕೆ ವ್ಯಾಪಾರಿ ಯಂ. ರಾಮ ಅವರು ಭದ್ರತಾ ಕೊಠಡಿ ಉದ್ಘಾಟಿಸಿದರು. ಮಂಗಳೂರು ಕುಲಾಲ ಮಾತೃಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ ಠೇವಣಿಪತ್ರ ಬಿಡುಗಡೆಗೊಳಿಸಿದರು ಅವರು ಮಾತನಾಡಿ ಮಂಗಳೂರಿನ ಕೇಂದ್ರ ಸ್ಥಳದಲ್ಲಿರುವ ಮುಖ್ಯ ರಸ್ತೆಗೆ ಡಾ.ಅಮ್ಮೆಂಬಳ ಬಾಳಪ್ಪ…

Read More

ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಕಾರ್ಯಲಯ ಉದ್ಘಾಟನಾ ಸಮಾರಂಭ ಜ.14ರಂದು ಶನಿವಾರ ಬೆಳಿಗ್ಗೆ 11.30ಕ್ಕೆ ನಡೆಯಲಿದೆ.ಬ್ರಹ್ಮಕಲಶ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಾಲಯ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ, ಬಿ.ಸಿ.ರೋಡಿನ ಸೋಮಯಾಜಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ರಮೇಶಾನಂದ ಸೋಮಯಾಜಿ, ಪಾಣೆಮಂಗಳೂರು ಶ್ರೀಶಾರದಾ ಪ್ರೌಢಶಾಲೆಯ ಸಂಚಾಲಕ ಡಾ. ಪಿ. ವಿಶ್ವನಾಥ ನಾಯಕ್ ಭಾಗವಹಿಸಲಿರುವರು. ಇದೇ ದಿನ ಬೆಳಿಗ್ಗೆ 9.30ರಿಂದ ಪ್ರತೀ ತಿಂಗಳ ಸಂಕ್ರಮಣದಂದು ನಡೆಯುವ ಸತ್ಯನಾರಾಯಣ ಪೂಜೆ ಜರುಗಲಿದ್ದು 11 ಗಂಟೆಗೆ ಮಹಾಪೂಜೆ ಜರುಗಲಿದೆ.

Read More

ಬಂಟ್ವಾಳ: ದ.ಕ.ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.ಜಿಲ್ಲಾ ಯುವ ಜನ ಒಕ್ಕೂಟ ಮಂಗಳೂರು, ತಾಲೂಕು ಯುವಜನ ಒಕ್ಕೂಟ ಬಂಟ್ವಾಳ ಹಾಗೂ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಇವರ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ಯುವ ಸಪ್ತಾಹ ಮತ್ತು ವಿವೇಕ ರಥ, ಯುವಪಥ- ಯುವ ಜಾಗೃತಿ ಕಾರ್ಯಕ್ರಮ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆಯಿತು.ಕಲ್ಲಡ್ಕ ಪೇಟೆಯಲ್ಲಿ ಸ್ವಾಮಿ ವಿವೇಕಾನಂದರ ಸ್ತಬ್ಧ ಚಿತ್ರದ ರಥವನ್ನು ಶಾಸಕ ರಾಜೇಶ್ ನಾಕ್ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರು ಪುಷ್ಪಾರ್ಚನೆಯ ಮಾಡುವ ಮೂಲಕ ಸ್ವಾಗತಿಸಿದರು. ಬಳಿಕ ಕಲ್ಲಡ್ಕ ಶಾಲಾ ಮಕ್ಕಳ ಮೆರವಣಿಗೆಯ ಮೂಲಕ ರಥಯಾತ್ರೆ ಕಾಲೇಜಿಗೆ ತೆರಳಿತು.ರಥಯಾತ್ರೆಯ ಬಳಿಕ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಲ್ಲಡ್ಕ ಡಾ | ಪ್ರಭಾಕರ್ ಭಟ್, ಸ್ವಾಮಿ ವಿವೇಕಾನಂದ ಸರ್ವ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿ ಇವರು ಓರ್ವರಾಗಿದ್ದು, ಇದೇ ರೀತಿ ದೇಶಕ್ಕಾಗಿ ಪ್ರಾಣತ್ಯಾಗ…

Read More

ಬಂಟ್ವಾಳ: ಇಲ್ಲಿನ ಪುರಸಭೆಯ ಎರಡನೇ ಮಹಡಿಯಲ್ಲಿ ನೂತನವಾಗಿ ನಿರ್ಮಾಣವಾದ ಅಭಿಲೇಖಾಲಯ ಕಚೇರಿಯ ಕಟ್ಟಡವನ್ನು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಅವರು ಶುಕ್ರವಾರ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ೩೦೦ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಯನ್ನ ಪುರಸಭಾ ವ್ಯಾಪ್ತಿಯಲ್ಲಿ ಮಾಡಲಾಗಿದೆ ಎಂದು ತಿಳಿಸಿದರು. ರೂಪಾಯಿ ೧೩೫ ಕೋಟಿ ವೆಚ್ಚದಲ್ಲಿ ಜಕ್ರಿಬೆಟ್ಟುವಿನಲ್ಲಿ ಸೇತುವೆ ಹಾಗೂ ಅಣೆಕಟ್ಟು ನಿರ್ಮಾಣ ಕಾಮಗಾರಿ ವೇಗ ಪಡೆದಿದೆ. ಈ ಯೋಜನೆ ಪೂರ್ಣಗೊಂಡ ಬಳಿಕ ಪುರಸಭಾ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ ಎಂದು ತಿಳಿಸಿದರು. ೪೦.೧೬ ಕೋಟಿ ರೂಪಾಯಿ ವೆಚ್ಚದಲ್ಲಿ ಎರಡನೇ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಮಗಾರಿ ಟೆಂಡರ್ ಹಂತದಲ್ಲಿದ್ದು, ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ. ಇದರ ಜೊತೆಗೆ ಅಂದಾಜು ೫೪ ಕೋಟಿ ರೂಪಾಯಿಗೂ ಮಿಕ್ಕಿದ ಯುಜಿಡಿ ಯೋಜನೆ ಕಾಮಗಾರಿ ಟೆಂಡರ್ ಹಂತದಲ್ಲಿದೆ, ಸಣ್ಣ ಪುಟ್ಟ ಸಮಸ್ಯೆಗಳನ್ನು ನಿವಾರಿಸಿಕೊಂಡು ಶೀಘ್ರವಾಗಿ ಕಾಮಗಾರಿ ನಡೆಯಲಿದೆ ಎಂದ ಅವರು ಪುರಸಭಾ ವ್ಯಾಪ್ತಿಯಲ್ಲಿ ಕಳೆದ ನಾಲ್ಕುವರೆ ವರ್ಷಗಳ ಅವಧಿಯಲ್ಲಿ ಸಮಗ್ರ…

Read More

ಬಂಟ್ವಾಳ: ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಅವರ ಪರಿಕಲ್ಪನೆ ಮತ್ತು ನೇತೃತ್ವದಲ್ಲಿ 13 ದಿನಗಳ ಕಾಲ ನಡೆಯುವ ಗ್ರಾಮ ವಿಕಾಸ ಯಾತ್ರೆ ಗ್ರಾಮದೆಡೆ ಶಾಸಕರ ನಡಿಗೆಗೆ ಜ.14 ರಂದು ಮಧ್ಯಾಹ್ನ 2 ಗಂಟೆಗೆ ಶ್ರೀಕ್ಷೇತ್ರ ಪೊಳಲಿಯ ವಠಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಚಾಲನೆ ನೀಡಲಿದ್ದಾರೆ ಎಂದು ಗ್ರಾಮ ವಿಕಾಸ ಯಾತ್ರೆಯ ಸಂಚಾಲಕ ಬಿ.ದೇವದಾಸ ಶೆಟ್ಟಿ ಅವರು ತಿಳಿಸಿದರು.ಗುರುವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ಜ.26ರಂದು ಮಧ್ಯಾಹ್ನ ಬಿ.ಸಿ.ರೋಡಿನಲ್ಲಿ ಶಾಸಕರ ಪಾದಯಾತ್ರೆ ಸಂಪನ್ನಗೊಳ್ಳಲಿದೆ. ಅಂದು ಮುಖ್ಯಂಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಕಂದಾಯ ಸಚಿವ ಆರ್ .ಅಶೋಕ್ ಸಹಿತ ಪಕ್ಷದ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದರು. ಪಕ್ಷದ ಸಂಘಟನೆ ಮತ್ತು ಕ್ಷೇತ್ರದಲ್ಲಿ ಭವಿಷ್ಯದ ದಿನಗಳಲ್ಲಿ ಆಗಬೇಕಾದ ಅಭಿವೃದ್ಧಿಗೆ ಪೂರಕವಾಗಿ ಅಧ್ಯಯನ ನಡೆಸುವ ನಿಟ್ಟಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಕ್ಷೇತ್ರದ 59 ಗ್ರಾಮಗಳ ಪೈಕಿ 58…

Read More

ಬಂಟ್ವಾಳ: ಸಮಾಜದಿಂದ ಗಳಿಸಿದ ಸಂಪತ್ತಿನ ಒಂದು ಭಾಗವನ್ನು ಮತ್ತೆ ಸಮಾಜಕ್ಕೆ ಮರಳಿಸುವ ಭಾಗವಾಗಿ ಅದನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಉದ್ದೇಶಕ್ಕಾಗಿ ವ್ಯಯಿಸುತ್ತಿರುವ ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್ ಕಂಪೆನಿ ವಾಣಿಜ್ಯ ಸಂಸ್ಥೆಯ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಹೇಳಿದರು. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಇದರ ಬಂಟ್ವಾಳ ಶಾಖಾ ವತಿಯಿಂದ ಬಿ ಸಿ ರೋಡಿನ ರಂಗೋಲಿ ಸಭಾಂಗಣದಲ್ಲಿ ಗುರುವಾರ ನಡೆದ ಬಂಟ್ವಾಳ ತಾಲೂಕಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಿಧಿ ವಿತರಿಸಿ ಮಾತನಾಡಿದ ಅವರು, ಖಾಸಗಿ ಸಂಸ್ಥೆಗಳು ಶೈಕ್ಷಣಿಕ ಉದ್ದೇಶಕ್ಕಾಗಿ ನೀಡುವ ಪ್ರೋತ್ಸಾಹವನ್ನು ವಿದ್ಯಾರ್ಥಿಗಳು ಸಮಪರ್ಕವಾಗಿ ಬಳಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಕರೆ ನೀಡಿದರು. ಬಂಟ್ವಾಳದಲ್ಲಿ ಸರಕಾರಿ ಶಾಲೆಗಳ ಅಭಿವೃದ್ದಿ ದೃಷ್ಟಿಯಿಂದ ಪ್ರತಿ ಶಾಲೆಗಳಲ್ಲೂ ಹಳೆ ವಿದ್ಯಾರ್ಥಿಗಳನ್ನು ಗುರುತಿಸಿ ಆ ಮೂಲಕ ಶಾಲೆಯ ಅಭಿವೃದ್ದಿಗೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗುತ್ತಿದೆ ಎಂದು ಶಾಸಕ ರಾಜೇಶ್ ನಾಯಕ್ ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಝೋನಲ್ ಬಿಝಿನೆಸ್ ಹೆಡ್…

Read More

ಬಂಟ್ವಾಳ: ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಇಜ್ಜ ಶ್ರೀ ಸತ್ಯ ನಾರಾಯಣ ಭಟ್ ಇವರು ಚಪ್ಪರ ಮುಹೂರ್ತ ನಡೆಸಿದರು. ಕಾರ್ಯಕ್ರಮದಲ್ಲಿ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ದಿನೇಶ್ ಭಂಡಾರಿ, ಪ್ರಮುಖರಾದ ಚೆನ್ನೇಶವ ಡಿ.ಆರ್., ಬೇಬಿ ಪೂಜಾರಿ, ಸುರೇಶ್ ಕುಲಾಲ್, ಉದಯಕುಮಾರ್ ರಾವ್, ಹರೀಶ್ ಶೆಟ್ಟಿ, ಹರೀಶ್ ಯಂ. ಅಶೋಕ್, ಸುರೇಶ್ ಕುಲಾಲ್ ಯಸ್., ಭವಾನಿ ಶಂಕರ ಶೆಟ್ಟಿ, ವಸಂತ ಭಂಡಾರಿ, ಪುಷ್ಪ, ಸುದೇಷ್ ಕುಮಾರ್ ಮೊದಲಾದವರು ಭಾಗವಹಿಸಿದರು.

Read More

ಬಂಟ್ವಾಳ: ಕುಲಾಲ ಮಹಿಳಾ ಪ್ರೇರಣಾ ಸಂಘ ನರಿಕೊಂಬು ಇದರ ಆಶ್ರಯದಲ್ಲಿ ಸಂಘದ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆಯು ಜ.15ರಂದು ಮೊಗರ್ನಾಡುವಿನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಶ್ರೀ ಅನ್ನಪೂರ್ಣೇಶ್ವರೀ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

Read More

ಬಂಟ್ವಾಳ: ಬಿ.ಸಿ. ರೋಡಿನ ಪೊಲೀಸ್ ಲೇನ್‌ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಜ.29ರಿಂದ ಆರಂಭಗೊಂಡು ಜ.31ರವರೆಗೆ ನಡೆಯಲಿದೆ.ಕೀಕಾಂಗೋಡು ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಅರ್ಧ ಏಕಾಹ ಭಜನಾ ಮಹೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಗುಳಿಗ ದೈವದ ವರ್ಷಾವಧಿ ಕೋಲ ಜರುಗಲಿದೆ. ಜ.29ರಂದು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅರ್ಧ ಏಕಾಹ ಭಜನಾ ಮಹೋತ್ಸವ ನಡೆಯಲಿದೆ, ಜ.30ರಂದು ಗಣಪತಿ ಹೋಮ, ನವಚಂಡಿಕಾ ಹೋಮ, ವಿಶೇಷ ನಾಗಾರಾಧನೆ, ನವಚಂಡಿಕಾ ಹೋಮದ ಪೂರ್ಣಾಹುತಿ, ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದೆ. ಸಂಜೆ 5 ರಿಂದ ಭಜನಾ ಕಾರ್ಯಕ್ರಮ ರಾತ್ರಿ 7ಕ್ಕೆ ಮಹಾಪೂಜೆ ನಂತರ ದೇವರ ನೃತ್ಯ ಬಲಿ, ಬಟ್ಟಲು ಕಾಣಿಕೆ ನಡೆಯಲಿದೆ. ಜ.31ರಂದು ರಾತ್ರಿ 7.30ಕ್ಕೆ ರಂಗ ಪೂಜೆಯೊಂದಿಗೆ ಮಹಾಪೂಜೆ ನಡೆದು ರಾತ್ರಿ 8ರಿಂದ ಗುಳಿಗ ದೈವದ ವರ್ಷಾವಧಿ ಕೋಲ ಹಾಗೂ ಹರಕೆ ಕೋಲ ಜರುಗಲಿದೆ.

Read More

ಬಂಟ್ವಾಳ: ಇಲಿನ ಬಡ್ಡಕಟ್ಟೆಯ ರಾಯರ ಚಾವಡಿಯಲ್ಲಿರುವ ಶ್ರೀ ಪಂಜುರ್ಲಿ, ಪಿಲಿಚಾಮುಂಡಿ, ಕಲ್ಲುರ್ಟಿ, ಕಲ್ಕುಡ ದೈವಸ್ಥಾನದಲ್ಲಿ ಜ.27 ಮತು ಜ.28ರಂದು ನೇಮೋತ್ಸವ ನಡೆಯಲಿದೆ.ಜ. 27ರಂದು ಬೆಳಿಗ್ಗೆ 8.30ಕ್ಕೆ ನೇಮೋತ್ಸವದ ಮುಹೂರ್ತ, ಬಳಿಕ ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪೂಜೆ, ಶ್ರೀ ನಾಗಸನ್ನಿಧಿಯಲ್ಲಿ ನಾಗ ತಂಬಿಲ, ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮಹಾಪೂಜೆ, ಶ್ರೀ ಅಶ್ವತ್ಥ ನಾರಾಯಣ ಕಟ್ಟೆ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4ಕ್ಕೆ ದೈವಸ್ಥಾನದಲ್ಲಿ ನವಕ ಪ್ರಧಾನ ಹೋಮ, ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ರಂಗ ಪೂಜೆ, ರಾತ್ರಿ 8ಗಂಟೆಗೆ ದೈವಸ್ಥಾನದಿಂದ ನೇಮೋತ್ಸವ ಗದ್ದೆಗೆ ಭಂಡಾರ ಹೊರಡುವುದು, ಶ್ರೀ ಪಿಲಿಚಾಮುಂಡಿ, ಕಲ್ಕುಡ ದೈವಗಳಿಗೆ ನೇಮೋತ್ಸವ, ಹಾಗೂ ವಲಸರಿ ನಡೆಯಲಿದೆ. ಜ.28ರಂದು ಸಂಜೆ 5.30ಕ್ಕೆ ಶ್ರೀ ಪಂಜುರ್ಲಿ ದೈವಕ್ಕೆ ಎಣ್ಣೆಬೂಳ್ಯ, ರಾತ್ರಿ 9ಕ್ಕೆ ಶ್ರೀ ಪಂಜುರ್ಲಿ ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ನಡೆಲಿದೆ.

Read More