Author: admin

ಬಂಟ್ವಾಳ: ಇಲ್ಲಿನ ಶ್ರೀಲಕ್ಷ್ಮೀ ನರಸಿಂಹ ಪೈ ವಿದ್ಯಾಲಯ ಪಾಣೆಮಂಗಳೂರು ಇಲ್ಲಿನ ವಿದ್ಯಾರ್ಥಿನಿ ಪಂಚಮಿ ಕೆ. ಶಿವಮೊಗ್ಗದ ಡಿ.ವಿ.ಎಸ್. ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯ ಜನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಡಾ. ಕಿರಣ ಕೆ. ಯು ಮತ್ತು ಡಾ.ಪ್ರಮೀಳಾ ಕೆ. ದಂಪತಿಗಳ ಪುತ್ರಿಯಾಗಿರುವ ಪಂಚಮಿ ಕೆ. ತನ್ನ ಆರನೇ ವಯಸ್ಸಿನಿಂದಲೇ ಗುರುಗಳಾದ ವಿದುಷಿ ಮಂಜುಳಾ ಜಿ.ರಾವ್ ಇವರಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದಾಳೆ. ಚಿತ್ರಕಲೆ, ನೃತ್ಯ ಹಾಗೂ ಕ್ರೀಡಾ ಕ್ಷೇತ್ರದಲ್ಲಿಯೂ ಪ್ರತಿಭಾನ್ವಿತೆ. 2017-18 ರ ಕ್ಲಸ್ಟರ್ ಹಾಗೂ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಕ್ತಿಗೀತೆ ಗಾಯನ ವಿಭಾಗದಲ್ಲಿ ಪ್ರಥಮ, ಜಿಲ್ಲಾ ಮಟ್ಟದಲ್ಲಿ ತೃತೀಯ ಸ್ಥಾನ ೨೦೧೯-೨೦ ರ ಕ್ಲಸ್ಟರ್ ಪ್ರತಿಭಾ ಕಾರಂಜಿಯ ಭಕ್ತಿಗೀತೆ ಗಾಯನ ವಿಭಾಗದಲ್ಲಿ ದ್ವಿತೀಯ ಸ್ಥಾನ, ಪ್ರತಿಭಾ ಕಾರಂಜಿಯ ಜನಪದ ಗೀತೆ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಳು.

Read More

ಬಂಟ್ವಾಳ: ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭದ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ರವಿವಾರ ನಡೆಯಿತು. ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ, ಬಂಟ್ವಾಳ ಇದರ ಅಧ್ಯಕ್ಷ, ಹಿರಿಯ ಪತ್ರಕರ್ತ ಅಮ್ಮೆಂಬಳ ಆನಂದ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಿದರು.ಸಭೆಯಲ್ಲಿ ಡಾ. ಅಮ್ಮೆಂಬಳ ಬಾಳಪ್ಪ ಜನ್ಮ ಶತಾಬ್ದಿ ಸಮಾರಂಭಕ್ಕೆ ಅತಿಥಿ ಗಣ್ಯರನ್ನು ಆಹ್ವಾನಿಸುವುದು, ದೇಶಭಕ್ತಿಗೀತೆ ಸ್ಪರ್ಧೆ ಆಯೋಜನೆ, ಅಮ್ಮೆಂಬಳ ಬಾಳಪ್ಪರ ಸಂಸ್ಮರಣಾರ್ಥ ಸಂಚಿಕೆ ಬಿಡುಗಡೆ, ಸಾಧಕರಿಗೆ ಸನ್ಮಾನ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಿತು. ಶತಾಬ್ದಿ ಸಮಾರಂಭವನ್ನು ಸಂಪೂರ್ಣ ಯಶಸ್ವಿ ಗೊಳಿಸುವುದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು.ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭ ಸಮಿತಿಗೆ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಮುಖ್ಯಸ್ಥ ಪ್ರೊ. ತುಕಾರಾಮ ಪೂಜಾರಿ ಅವರನ್ನು ಅಧ್ಯಕ್ಷರನ್ನಾಗಿ, ಪುಂಡರೀಕಾಕ್ಷ ಯು. ಕೈರಂಗಳ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ, ಉಮೇಶ್ ಪಿ.ಕೆ. ನಾಗನ ವಳಚ್ಚಿಲು ಅವರನ್ನು…

Read More

ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಪ್ರಾಂತ್ಯ೯ ಇದರ ವಲಯ1,2,3 ಇದರ ಅಂತರ್ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಬಂಟ್ವಾಳದ ಎಸ್‌ವಿಎಸ್ ದೇವಳ ಶಾಲೆಯ ಮೈದಾನದಲ್ಲಿ ನಡೆಯಿತು. ಪ್ರಾಂತ್ಯ 9 ರ ಪ್ರಾಂತೀಯ ಅಧ್ಯಕ್ಷ ಲಕ್ಷ್ಮಣ್ ಕುಲಾಲ್ ಅಗ್ರಬೈಲು ಮಾತನಾಡಿ ಮುಂದಿನ ದಿನಗಳಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಅರ್ಹ ಆಟಗಾರರನ್ನು ಆಯ್ಕೆ ಮಾಡಿ ಸಮರ್ಥವಾದ ಒಂದೇ ತಂಡವನ್ನು ರಚಿಸುವ ಉದ್ದೇಶದಿಂದ ಅಂತರ್ ವಲಯ ಮಟ್ಟದ ಕ್ರಿಕೆಟ್‌ಪಂದ್ಯಾಟವನ್ನು ಆಯೋಜಿಸಲಾಗಿದೆ ಎಂದರು.ಕ್ರೀಡಾಕೂಟವನ್ನು ಲಯನ್ಸ್ ಕ್ಲಬ್ ಬಂಟ್ವಾಳದ ಸ್ಥಾಪಕ ಸದಸ್ಯ ಡಾ. ಎಂ. ಶ್ಯಾಂ ಭಟ್ ಉದ್ಘಾಟಿಸಿ ಶುಭ ಕೋರಿದರು.ಮುಖ್ಯ ಅತಿಥಿ ಬಂಟ್ವಾಳ ಶ್ರೀ ತಿರುಮಲ ವೆಂಕಟರಂನ ಸ್ವಾಮೀ ದೇವಸ್ಥಾನದ ಆಡಳಿತ ಮೋಕ್ತೇಸರ ಅಶೋಕ್ ಶೆಣೈ ಮಾತನಾಡಿ ಕ್ರಿಕೆಟ್ ಆಟದಿಂದ ದೇಹ ಹಾಗೂ ಮನಸ್ಸು ಸಂತುಷ್ಟಗೊಳ್ಳುತ್ತದೆ. ಈ ಮೂಲಕ ಉತ್ತಮ ಆರೋಗ್ಯವನ್ನು ಪಡೆದು ಸಮಾಜದಲ್ಲಿ ಉತ್ತಮ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿದೆ ಎಂದರು. ಈ ಸಂದರ್ಭ ಆಟಗಾರರ ಜರ್ಸಿಯನ್ನು ಬಿಡುಗಡೆಗೊಳಿಸಿ ಮೂರು ವಲಯಗಳ ತಂಡದ ನಾಯಕರಿಗೆ ಹಸ್ತಾಂತರಿಸಲಾಯಿತು. ವೇದಿಕೆಯಲ್ಲಿ…

Read More

ಬಂಟ್ವಾಳ: ಕಾವಳಮೂಡೂರು ಹಾಗೂ ದೇವಶ್ಯಮೂಡೂರು ಗ್ರಾಮದ ಜನತೆಗೆ ಉತ್ತಮ ಸೇವೆ ನೀಡುತ್ತಾ, ಅಬಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರ ಸಂಘದ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಕೆಲವು ಸ್ಥಾಪಿತ ಹಿತಾಸಕ್ತಿಗಳು ಅಪಪ್ರಚಾರ ನಡೆಸುತ್ತಿದ್ದು,ಸಂಘದ ಹಿಂದಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಓರ್ವ ಸಿಬ್ಬಂದಿ ಮತ್ತು ಸಾಲಗಾರ ಸದಸ್ಯರ ನಡುವಿನ ಸಾಲದ ವ್ಯವಹಾರಕ್ಕೂ ಸಂಘದ ಆಡಳಿತ ಸಮಿತಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಅಧ್ಯಕ್ಷ ಪದ್ಮಶೇಖರಜೈನ್ ನೇತೃತ್ವದ ಆಡಳಿತ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದ ಸಂಘದ ಆಡಳಿತ ಮಂಡಳಿಯ ವಿರುದ್ದ ಕೆಲ ಸ್ಥಾಪಿತ ಹಿತಾಸಕ್ತಿಗಳು ಅಪಪ್ರಚಾರ ಮಾಡುತ್ತಿದ್ದು,ಹಿಂದಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಕೋಟ್ಯಾನ್ ಹಾಗೂ ಓರ್ವ ಸಿಬ್ಬಂದಿ ಕೆಲವು ಸದಸ್ಯರ ಹೆಸರಿನಲ್ಲಿ ಸಾಲವನ್ನು ಪಡೆದಿರುವ ಕುರಿತು ಮೇಲಾಧಿಕಾರಿಗಳಿಂದ ಶಾಸನಾತ್ಮಕವಾದ ತನಿಖೆಯು ನಡೆಯುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹಿಂದಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಆ ಸಾಲಗಳನ್ನು ಸದಸ್ಯರಿಂದ ಬಂದ ಸಾಲದ ಅರ್ಜಿ ಹಾಗೂ ದಾಖಲೆಗಳನ್ನು ಆಡಳಿತ ಸಮಿತಿ ಸಭೆಗೆ ಹಾಜರುಪಡಿಸಿ ಶಿಫಾರಸ್ಸು ಮಾಡಿದ…

Read More

ಬಂಟ್ವಾಳ: ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ ಕಲಿಕಾ ಚೇತರಿಕೆ ಕಾರ್ಯಗಾರ ಶುಕ್ರವಾರ ನಡೆಯಿತು.ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ಸಂಯೋಜಕಿಯರಾದ , ಸುಧಾ, ಸುಜಾತ, ಪ್ರತಿಮಾ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್ ಲೋಬೋ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಸಂಪನ್ಮೂಲ ವ್ಯಕ್ತಿಗಳಾದ, ವೆಂಕಟ್ರಮಣ ಆಚಾರ್, ಲಕ್ಷ್ಮಣ್, ಶರತ್ ಚೌಟ, ರಂಜಿತ, ಪುಷ್ಪಲತಾ, ಸುಬ್ರಹ್ಮಣ್ಯ ಪ್ರಕಾಶ್, ಪ್ರವೀಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.ತಾಲೂಕಿನ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಭೋದಿಸುವ ಸುಮಾರು 124 ಮಂದಿ ಶಿಕ್ಷಕರು ಭಾಗವಹಿಸಿದ್ದರು. ಉಪಪ್ರಾಂಶುಪಾಲೆ ಜಯಾಲಕ್ಷ್ಮೀ ಪಿ.ಎನ್. ಸ್ವಾಗತಿಸಿದರು. ಸಹಶಿಕ್ಷಕರಾದ ಸುಲೋಚನಾ ವಂದಿಸಿದರು, ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More

ತುಂಬೆ: ಇಲ್ಲಿನ ಗುಲಾಬಿ ಶೆಟ್ಟಿ ಎಜುಕೇಷನ್‌ಲ್ ಮತ್ತು ಸರ್ವೀಸ್ ಟ್ರಸ್ಟ್ ಆಶ್ರಯದಲ್ಲಿ ನಡೆಯುತ್ತಿರುವ ದಿವೀಶ್ ಪ್ರಿ ಪ್ರೈಮರಿ ಸ್ಕೂಲ್ ತುಂಬೆ, ಇದರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು.ಇಂಗ್ಲೀಷ್ ವಿಝಾರ್ಡ್ ಫೌಂಡೇಶನ್ ಇದರ ಜಿಲ್ಲಾ ಸಂಯೋಜಕ ಪ್ರದೀಪ್ ಪೈ ದೀಪ ಪ್ರಜ್ವಲಿಸಿದರು. ಟ್ರಸ್ಟ್ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ, ಟ್ರಸ್ಟಿ ಸುಕನ್ಯಾ ಎನ್.ಶೆಟ್ಟಿ, ಶಾಲಾ ಸಂಚಾಲಕಿ ಉಷಾ ಚಂದ್ರಪ್ರಕಾಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾಸಂಸ್ಥೆಯ ಶಿಕ್ಷಕಿಯರಾದ ಸ್ವಾತಿಶ್ರೀ, ಉಷಾ, ರುಬೀನಾ ಸಹಕರಿಸಿದರು. ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.

Read More

ಬಂಟ್ವಾಳ: ಸಜೀಪ ಮಾಗಣೆಯ ಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಚಿಕ ಪುದ್ದರ್ ಮೆಚ್ಚಿ ಜಾತ್ರೆಯ ಪ್ರಯುಕ್ತ ಜ.9ರಿಂದ ಜ.16ರವರೆಗೆ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೆಲು ಸೇವೆ ಹಾಗೂ ಕೋಲ ಸೇವೆ ಇರುವುದಿಲ್ಲ. ಜ.17ರಿಂದ ಎಂದಿನಂತೆ ಸೇವೆಗಳು ಮುಂದುವರಿಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Read More

ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದ ವತಿಯಿಂದ ಬಿ.ಸಿ.ರೋಡ್ ನಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ತಂಗುದಾಣವೊಂದನ್ನು ನಿರ್ಮಿಸಲಾಗಿದ್ದು, ಅದನ್ನು ಶುಕ್ರವಾರ ಸಂಜೆ ಲಯನ್ಸ್ ಜಿಲ್ಲೆ 317 ಡಿ ಗವರ್ನರ್ ಎಸ್. ಸಂಜಿತ್ ಶೆಟ್ಟಿ ಅವರು ತಮ್ಮ ಅಧಿಕೃತ ಭೇಟಿ ವೇಳೆ ಉದ್ಘಾಟಿಸಿದರು.ಈ ಸಂದರ್ಭ ಮಾತನಾಡಿದ ಅವರು, ಲಯನ್ಸ್ ಕ್ಲಬ್ ತನ್ನ ಸಮಾಜಸೇವಾ ಚಟುವಟಿಕೆಗಳ ಮೂಲಕ ಜನರ ಅಗತ್ಯಗಳನ್ನು ಪೂರೈಸುವ ಕೆಲಸ ಮಾಡುತ್ತಿದ್ದು, ಬಿ.ಸಿ.ರೋಡ್ ನಲ್ಲಿ ಬಸ್ ಗೆ ಕಾಯುವ ಜನರ ಬವಣೆಯನ್ನು ಗಮನಿಸಿ ತಂಗುದಾಣವನ್ನು ನಿರ್ಮಿಸಿದ್ದು ಶ್ಲಾಘನೀಯ ಎಂದರು.ಈ ಸಂದರ್ಭ ಗವರ್ನರ್ ಅವರ ಪತ್ನಿ ಪ್ರಗತಿ ಶೆಟ್ಟಿ, ಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಚೇರ್ ಪರ್ಸನ್ ವಸಂತ್ ಕುಮಾರ್ ಶೆಟ್ಟಿ, ಜಿಲ್ಲಾ ಸಂಯೋಜಕ ಶ್ರೀನಿವಾಸ ಪೂಜಾರಿ ಮೇಲ್ಕಾರ್, ಜಿಲ್ಲಾ ಕ್ಯಾಬಿನೆಟ್ ಸದಸ್ಯ ಧೀರಜ್ ಹೆಬ್ರಿ, ಪ್ರಾಂತ್ಯಾಧ್ಯಕ್ಷ ಲಕ್ಷ್ಮಣ್ ಕುಲಾಲ್ ಅಗ್ರಬೈಲ್, ವಲಯಾಧ್ಯಕ್ಷ ರಮಾನಂದ ನೂಜಿಪ್ಪಾಡಿ, ಜಿಲ್ಲಾ ಸಂಪುಟ ಸದಸ್ಯ ಜಗದೀಶ ಯಡಪಡಿತ್ತಾಯ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್, ಕಾರ್ಯದರ್ಶಿ ಬಿ.ಶಿವಾನಂದ ಬಾಳಿಗಾ, ಕೋಶಾಧಿಕಾರಿ…

Read More

ಬಂಟ್ವಾಳ: ಪಂಜಿಕಲ್ಲು ಗ್ರಾ.ಪಂ.ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಡಾಮಾರು ತಯಾರಿ ಘಟಕದ ವಿರುದ್ಧ ಹೋರಾಟ ಸಮಿತಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಅವರ ಕುರಿತು ಗ್ರಾ.ಪಂ.ಅಧ್ಯಕ್ಷರು ಸಾಮಾನ್ಯ ಸಭೆಯಲ್ಲಿ ದೌರ್ಜನ್ಯ ನಡೆಸಿದ್ದಾರೆ ಆರೋಪಿಸಿ ಶುಕ್ರವಾರ ಪಂಜಿಕಲ್ಲು ಗ್ರಾ.ಪಂ.ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಹಕಾರಿ ಘಟಕದ ಸಂಚಾಲಕ ಸುದರ್ಶನ್ ಜೈನ್ ಮಾತನಾಡಿ, ಪಂಜಿಕಲ್ಲಿನಲ್ಲಿ ಡಾಮಾರು ಘಟಕ ಅನುಷ್ಠಾನವಾದರೆ ಸ್ಥಳೀಯ ಮನೆಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಪ್ರತಿಭಟನೆಯಲ್ಲಿ ಸದಸ್ಯೆ ಮಾಲತಿ ಅವರನ್ನು ಪಾಲ್ಗೊಂಡಿದ್ದರು. ಹಿಂದಿನ ಪಿಡಿಒ ಅವರೇ ಘಟಕಕ್ಕೆ ಅನುಮತಿ ನೀಡಿದ್ದು, ಸಾಮಾನ್ಯ ಸಭೆಯಲ್ಲಿ ಚರ್ಚಿಸದೆ ನಿರ್ಣಯವನ್ನು ತಿದ್ದಲಾಗಿದೆ. ಇದರ ಹಿಂದೆ ಲಕ್ಷಾಂತರ ರೂಪಾಯಿ ಹಣದ ವ್ಯವಹಾರ ನಡೆದಿರುವ ಮಾಹಿತಿಯೂ ಇದೆ.ಸದಸ್ಯೆಯನ್ನು ಗ್ರಾ.ಪಂ.ಅಧ್ಯಕ್ಷರು ನಿಂದಿಸಿರುವ ಕುರಿತು ಈಗಾಗಲೇ ಪೊಲೀಸ್ ಸೇರಿದಂತೆ ಸಂಬಂಧಪಟ್ಟವರಿಗೆ ದೂರು ನೀಡಲಾಗಿದ್ದು, ಘಟಕವನ್ನು ನಿಲ್ಲಿಸದೇ ಇದ್ದರೆ ದೊಡ್ಡ ಮಟ್ಟದ ಹೋರಾಟ ನಡೆಸಲಿದ್ದೇವೆ. ಪಂಜಿಕಲ್ಲು ಗ್ರಾ.ಪಂ.ನಲ್ಲಿ ಬಿಜೆಪಿಯವರಿಗೆ ಮಾತ್ರ ಸೌಲಭ್ಯಗಳು ಸಿಗುತ್ತಿದ್ದು, ಭ್ರಷ್ಟಾಚಾರ ತುಂಬಿ ಹೋಗಿದೆ ಎಂದು ಆರೋಪಿಸಿದರು.ಬಂಟ್ವಾಳ…

Read More

ಬಂಟ್ವಾಳ: ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಉಜಿರೆ ಇದರ ರಜತಪರ್ವ- ಶತಕ ತಾಳಮದ್ದಳೆ ಸಪ್ತಾಹ ಸರಣಿಗೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಬುಧವಾರ ಸಂಜೆ ಚಾಲನೆ ನೀಡಲಾಯಿತು. ಬಿ. ಸಿ. ರೋಡಿನ ಹೋಟೆಲ್ ರಂಗೋಲಿ ಇದರ ಆಶ್ರಯದಲ್ಲಿ ಯಕ್ಷಸಂಜೀವಿನಿ ಟ್ರಸ್ಟ್ ರಿ.ಮುಡಿಪು ಸಹಕಾರದೊಂದಿಗೆ ನಡೆಯುವ ತಾಳಮದ್ದಳೆ ಸಪ್ತಾಹಕ್ಕೆ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾದ ಬಿ.ಗಣೇಶಾನಂದ ಸೋಮಯಾಜಿ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಯಕ್ಷಗಾನ ತಾಳಮದ್ದಳೆ ಸಹಿತ ಕಲಾಪ್ರಕಾರಗಳು ಇಂದು ನವಮಾಧ್ಯಮಗಳಲ್ಲಿ ಸಾಕಷ್ಟು ದೊರಕುತ್ತಿದ್ದರೂ ನೇರವಾಗಿ ಅದನ್ನು ವೀಕ್ಷಿಸುವುದರಿಂದ ರಸಾನುಭವ ಸಾಧ್ಯವಾಗುತ್ತದೆ ಎಂದರು. ಹಿರಿಯ ಕಲಾವಿದರೂ ವಿಮರ್ಶಕರೂ ಆದ ಡಾ. ಎಂ.ಪ್ರಭಾಕರ ಜೋಷಿ, ಪ್ರಮುಖರಾದ ಭುಜಬಲಿ ಧರ್ಮಸ್ಥಳ, ಹಿರಿಯ ಯಕ್ಷಗಾನ ಕಲಾವಿದ ಕೆ.ಗೋವಿಂದ ಭಟ್, ಉದ್ಯಮಿ ಸದಾನಂದ ಶೆಟ್ಟಿ ರಂಗೋಲಿ ಮತ್ತು ಸಂಜೀವ ಶೆಟ್ಟಿ ಉಪಸ್ಥಿತರಿದ್ದರು. ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಶ್ವಭಾರತಿ ಟ್ರಸ್ಟ್ ನ ಪ್ರಶಾಂತ್ ಹೊಳ್ಳ…

Read More