Author: admin
ಬಂಟ್ವಾಳ: ದ.ಕ. ಜಿಲ್ಲಾ ಕೆಂದ್ರ ಸಹಕಾರಿ ಬ್ಯಾಂಕ್ ನಿ., ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ಬಿ.ಸಿ.ರೋಡು . ಸಹಕಾರ ಇಲಾಖೆ ದ.ಕ. ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲೆಯ ಪತ್ತಿನ, ಮೂರ್ತೆದಾರರ ಮತ್ತು ಇತರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ ಫೆ. ೨೧ರಂದು ಶನಿವಾರ ಬೆಳಿಗ್ಗೆ ೯ ಗಂಟೆಗೆ ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿದೆ. ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ನಿ. ದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಿ. ಪದ್ಮಶೇಖರ್ ಜೈನ್, ಸವಿತಾ ಎನ್. ಶೆಟ್ಟಿ, , ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್. ರಮೇಶ್, ಸಹಾಯಕ ನಿಬಂಧಕಿ ತ್ರಿವೇಣಿ…
ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚgಣಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಬಂಟ್ವಾಳ ವಿಧಾನ ಸಭಾಕ್ಷೇತ್ರ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಶುಕ್ರವಾರ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ತಹಶಿಲ್ದಾರ್ ಜಿ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರ್ವಜ್ಞನ ತ್ರಿಪದಿಗಳ ಸಾರ ಇಂದಿನ ಯುವ ಸಮುದಾಯಕ್ಕೆ ತಿಳಿದಿಲ್ಲ. ಸರ್ವಜ್ಞನ ವಿಚಾರಧಾರೆಗಳನ್ನು ಶಾಲಾ ಮಕ್ಕಳಿಗೆ ತಿಳಿಸುವ ಕಾರ್ಯ ಆಗಬೇಕಿದೆ ಎಂದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸರ್ವಜ್ಞನ ವಿಚಾರಧಾರೆ ಇಡೀ ಮಾನವ ಸಮುದಾಯಕ್ಕೆ ತಲುಪಬೇಕಾಗಿದೆ. ಸರ್ವಜ್ಞ ಜಯಂತಿ ಆಚರಣೆಯಲ್ಲಿ ಎಲ್ಲಾ ವರ್ಗದ ಜನರನ್ನು ಸೇರಿಸಿಕೊಳ್ಳಬೇಕು. ಆ ಮೂಲಕ ಯುವ ಸಮುದಾಯಕ್ಕೆ ಶ್ರೇಷ್ಠ ವ್ಯಕ್ತಿಗಳ ವಿಚಾರಧಾರೆ ತಲುಪಬೇಕು ಎಂದು ತಿಳಿಸಿದರು. ಫರಂಗಿಪೇಟೆ ಶ್ರೀರಾಮ ವಿದ್ಯಾಸಂಸ್ಥೆಯ ಮುಖ್ಯಸ್ಥ ದೇವದಾಸ್ ಕೊಡ್ಮಾಣ್ ಉಪನ್ಯಾಸ ನೀಡಿ…
ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರವನ್ನು ಬಂಟ್ವಾಳ ಪುರಸಭೆಯ ಐಟಿ ಸಿಬ್ಬಂದಿ ಜಯಶ್ರೀ ಆಚಾರ್ಯ ಅವರಿಗೆ ನೀಡಿ ಗೌರವಿಸಲಾಯಿತು. ಬಿ.ಸಿ.ರೋಡಿನ ಕೈಕಂಬದ ಶ್ರೀ ಲಕ್ಷ್ಮೀ ಜ್ಯವೆಲರ್‍ಸ್‌ನಲ್ಲಿ ನಡೆದ ಜೆಸಿಐ ಬಂಟ್ವಾಳ ಮಾಸಿಕ ಸಭೆಯಲ್ಲಿ ಅಧ್ಯಕ್ಷ ಕಿಶೋರ್ ಕುಮಾರ್ ಆಚಾರ್ಯ ಗೌರವಿಸಿದರು. ಈ ಸಂದರ್ಭ ಕಾರ್ಯದರ್ಶಿ ಕಿರಣ್ ಕುಮಾರ್, ಕೋಶಾಧಿಕಾರಿ ಶಿವರಾಂ ಮರ್ತಾಜೆ, ಲೇಡಿ ಜೇಸಿ ಸಂಯೋಜಕಿ ಅನುಷಾ ಕಿಶೋರ್, ಪೂರ್ವಾಧ್ಯಕ್ಷೆ ರಶ್ಮಿ ಶೆಟ್ಟಿ, ಸದಸ್ಯೆ ದೀಪ್ತಿ ರೋಷನ್, ಪೂರ್ವಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ಕರ್ತವ್ಯದ ವೇಳೆ ಮೆಸ್ಕಾಂನ ಮೀಟರ್ ರೀಡರ್ ಒಬ್ಬರಿಗೆ ಸಾಕು ನಾಯಿಯೊಂದು ಕಚ್ಚಿ ಗಂಭೀರ ಗಾಯಗೊಳಿಸಿದ ಘಟನೆ ರಾಯಿ ಗ್ರಾಮದ ಕೈತ್ರೋಡಿ ಕ್ವಾಟ್ರಸ್‌ನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಇರಾ ಗ್ರಾಮದ ನಿವಾಸಿಯಾಗಿರುವ ಸಂಪತ್ ಆರ್. ಶೆಟ್ಟಿ ನಾಯಿ ಕಡಿತಕ್ಕೊಳಗಾಗಿದ್ದು ಕೈಗೆ ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಪತ್ ಅವರು ಕೈತ್ರೋಡಿ ಕ್ವಾಟ್ರಸ್ ಬಳಿ ಮೀಟರ್ ರೀಡಿಂಗ್ ಮುಗಿಸಿ ಮುಖ್ಯ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಮನೆಯೊಂದರ ಸಾಕು ನಾಯಿ ಏಕಾಏಕಿ ಓಡಿ ಬಂದು ಇವರ ಕೈಗೆ ಕಚ್ಚಿ ಗಾಯಗೊಳಿಸಿದೆ. ನಾಯಿ ದಾಳಿಗೆ ಒಳಗಾದ ಸಂಪತ್ ಅವರ ಕೈಯ ಮಾಂಸವೇ ಕಿತ್ತು ಬಂದಿದೆ. ತಕ್ಷಣ ಸ್ಥಳೀಯರು ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ತಕ್ಷಣ ಶಸ್ತ್ರಚಿಕಿತ್ಸೆಯ ಅಗತ್ಯತೆ ಇರುವುದರಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿ ಮಂಗಳವಾರ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೀಟರ್ ರೀಡರ್‌ಗಳಿಗೆ ಭದ್ರತೆಯಿಲ್ಲ: ವಿದ್ಯುತ್ ಬಿಲ್ ನೀಡಲು ಮನೆ ಮನೆಗಳಿಗೆ ಹೋಗುವ ಮೆಸ್ಕಾಂನ ಮೀಟರ್ ರೀಡರ್‌ಗಳು…
ಬಂಟ್ವಾಳ: ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಫೆ.15ರಂದು ನಡೆಯಲಿದೆ. ಬೆಳಿಗ್ಗೆ 6.30ಕ್ಕೆ ಅರ್ಚಕ ರಘುರಾಮ್ ಮಯ್ಯ ದೀಪ ಪ್ರಜ್ವಲಿಸುವರು, ಬಳಿಕ ವಿವಿಧ ಭಜನಾ ತಂಡಗಳಿಂದ ಭಜನೋತ್ಸವ ಕಾರ್ಯಕ್ರಮ ನಡೆಯಲಿದೆ. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಘು ಎಲ್. ಶೆಟ್ಟಿ ದೇವಸ್ಯ, ಸೀತಾರಾಮ ಪೂಂಜ, ಕುಶಕುಮಾರ್ ಉಪಸ್ಥಿತರಿರುವರು. ಬೆಳಿಗ್ಗೆ 9 ಗಂಟೆಗೆ ಏಕಾದಶ ರುದ್ರಾಭಿಷೇಕ, ವಿಶೇಷ ರುದ್ರಹೋಮ, ರಾತ್ರಿ 7ಕ್ಕೆ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ರಾತ್ರಿ 7.30ಕ್ಕೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಶ್ರೀ ತುಲಸಿ ಕಾಲಮಿತಿ ಯಕ್ಷಗಾನ ಬಯಲಾಟ ನಡೆಯಲಿದೆ
ಬಂಟ್ವಾಳ: ಅಭಿರುಚಿ ಜೋಡುಮಾರ್ಗ ಮತ್ತು ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ (ರಿ) ಮಂಚಿ ಸಹಯೋಗದಲ್ಲಿ ನಟಮಿತ್ರರು ಹವ್ಯಾಸಿ ಕಲಾಸಂಘ (ರಿ.) ತೀರ್ಥಹಳ್ಳಿ ಅಭಿನಯಿಸುವ ಆ ಊರು ಈ ಊರು ನಾಟಕ ಫೆ.೧೫ರಂದು ಭಾನುವಾರ ಬಂಟ್ವಾಳ ಸ್ಪರ್ಶಾ ಕಲಾಮಂದಿರದಲ್ಲಿ ಸಂಜೆ 6.30ಕ್ಕೆ ನಡೆಯಲಿದೆ ಎಂದು ಅಭಿರುಚಿ ಅಧ್ಯಕ್ಷ ದಾಮೋದರ ರಾಮಕುಂಜ ತಿಳಿಸಿದ್ದಾರೆ. ದೆಹಲಿಯ ಭಾರತ್ ರಂಗಮಹೋತ್ಸವಕ್ಕೆ ಆಯ್ಕೆಯಾಗಿರುವ ಈ ನಾಟಕವನ್ನು ಜಿ. ಬಿ. ಜೋಷಿ ರಚಿಸಿದ್ದು, ಪ್ರಸಿದ್ಧ ರಂಗಕರ್ಮಿ ಹುಲುಗಪ್ಪ ಕಟ್ಟೀಮನಿ ನಿರ್ದೇಶಿಸಿದ್ದಾರೆ.
ಬಂಟ್ವಾಳ: ಜೀವನದಲ್ಲಿ ಕಷ್ಟ ಮತ್ತು ಸುಖ ಸಮಚಿತ್ತದಿಂದ ಸ್ವೀಕರಿಸುವುದರ ಜೊತೆಗೆ ಆಧ್ಯಾತ್ಮಿಕ ಚಿಂತನೆಯೊಂದಿಗೆ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮನಶಾಂತಿ ಮತ್ತು ನೆಮ್ಮದಿ ಲಭಿಸುತ್ತದೆ ಎಂದು ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಹೇಳಿದರು. ಬಿ.ಸಿ.ರೋಡಿನ ಚಣಡಿಕಾನಗರದಲ್ಲಿರುವ ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ನಿರ್ಮಾಣಗೊಂಡ ನೂತನ ಅನ್ನಛತ್ರ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನ್ನದಾನದಂತಹ ಶ್ರೇಷ್ಟ ದಾನ ಪುಣ್ಯದಾಯಕ ಎಂದರು. ಕರ್ನಾಟಕ ಪ್ರಾಂತ ಅದಾನಿ ಸಂಸ್ಥೆ ಅಧ್ಯಕ್ಷ ಕಿಶೋರ್ ಆಳ್ವ, ಪಾಣೆಮಂಗಳೂರು ಶ್ರೀ ಭಯಂಕೇಶ್ವರ ದೇವಳದ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ, ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಳದ ಅಧ್ಯಕ್ಷ ಡಾ.ರಮೇಶಾನಂದ ಸೋಮಯಾಜಿ ಶುಭ ಹಾರೈಸಿದರು. ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಕೇಶ ಮಲ್ಲಿ ಮತ್ತಿತರರು ಇದ್ದರು. ದೇವಳದ ಆಡಳಿತ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ ಸ್ವಾಗತಿಸಿ, ಮಣಿಮಾಲ ವಂದಿಸಿದರು. ನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಆಡಳಿತ ಸಮಿತಿ ಸದಸ್ಯರು,…
ಬಂಟ್ವಾಳ: ರೈತರು ನೀಡಿದ ಅಕ್ರಮ ಸಕ್ರಮ ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ದ.ಕ. ಜಿಲ್ಲಾ ಸಮಿತಿ ಒತ್ತಾಯಿಸಿದೆ. ರೈತ ಸಂಘದ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳ ಗುತ್ತು ಶುಕ್ತವಾರ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಆಡಳಿತ ಮಾಡಿದ ಎಲ್ಲಾ ರಾಜಕೀಯ ಪಕ್ಷಗಳ ಸರಕಾರಗಳು ಚುನಾವಣಾ ಸಂದರ್ಭದಲ್ಲಿ ರೈತರ ಅಕ್ರಮ ಸಕ್ರಮ ಅರ್ಜಿಯನ್ನು ಇತ್ಯರ್ಥ ಪಡಿಸುವ ಬಗ್ಗೆ ಭರವಸೆಗಳನ್ನು ನೀಡಿ ಚುನಾವಣೆಯ ಬಳಿಕ ಮರೆತು ಬಿಡುತ್ತಾರೆ. ಪ್ರಸ್ತುತ ಸಾವಿರಗಟ್ಟಲೆ ಅರ್ಜಿಗಳು ಧೂಳು ಹಿಡಿದಿದ್ದು ತಕ್ಷಣವೇ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಪಡಿಸುವಂತೆ ಅವರು ಒತ್ತಾಯಿಸಿದರು. ರೈತರ ಸ್ವಾಧೀನದಲ್ಲಿರುವ ಕುಮ್ಕೀ ಜಮೀನುಗಳ ಮೇಲೆ ಸರಕಾರ ದಾಳಿ ಆರಂಭಿಸಿದೆ. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೈತರ ಕುಮ್ಕಿ ಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದ್ದು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೈತರ ಸ್ವಾಧೀನದಲ್ಲಿರುವ ಕುಮ್ಕಿ ಜಮೀನನ್ನು ಸರಕಾರ ಮುಟ್ಟಬಾರದು ಎಂದು ಎಚ್ಚರಿಸಿದರು. ಸರಕಾರದ ಅಭಿವೃದ್ದಿ ಕಾರ್ಯಗಳಿಗೆ ನಮ್ಮ ಆಕ್ಷೇಪವಿಲ್ಲ, ಆದರೆ ತಲೆ…
ಬಂಟ್ವಾಳ: ಸಹಕಾರ ಕ್ಷೇತ್ರದಲ್ಲಿ ಗಣನೀಯವಾಗಿ ಸಾಧನೆ ಮಾಡಿ ವಿವಿಧ ಕ್ಷೆತ್ರದಲ್ಲಿ ಸಲ್ಲಿಸಿದ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯದ ಕನ್ನಡಪ್ರಭ ದಿನಪತ್ರಿಕೆ ಹಾಗೂ ರಾಜ್ಯದ ಪ್ರಮುಖ ಸುದ್ದಿವಾಹಿನಿ ಏಷಿಯಾನೆಟ್ ಸುವರ್ಣನ್ಯೂಸ್ ನವರು ಕೊಡಮಾಡುವ ರಾಜ್ಯ ಮಟ್ಟದ “ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಭಾಜನರಾಗಿದ್ದಾರೆ. ಇವರು ಸಹಕಾರ ಸಂಘದಲ್ಲಿ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ ಪ್ರಸ್ತುತ ಅಧ್ಯಕ್ಷರಾಗಿ ಕಳೆದ 6 ವರ್ಷಗಳಲ್ಲಿ ಸಹಕಾರ ಸಂಘವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಿರುವುದಲ್ಲದೆ ಸಂಘದ ವತಿಯಿಂದ ಸಾಧಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ನೆರವು, ಅನಾರೋಗ್ಯ ವ್ಯಕ್ತಿಗಳ ಚಿಕಿತ್ಸೆ ವೆಚ್ಚಕ್ಕೆ ಸಹಕಾರ, ಕೋವಿಡ್ ಸಮಯದಲ್ಲಿ ಆರೋಗ್ಯ ಇಲಾಖೆಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಆರ್ಥಿಕ ಸಹಾಯದೊಂದಿಗೆ ಗೌರವರ್ಪಣೆ, ಮಹಿಳೆಯರಿಗೆ ಉಚಿತ ಸ್ವಉದ್ಯೋಗ ಟೈಲರಿಂಗ್ ತರಬೇತಿಗಳು, ಸೇರಿದಂತೆ ಹತ್ತು ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಯೋಜನೆಗಳ ಬಗ್ಗೆ ಮತ್ತು ಸಾರ್ವಜನಿಕ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆದು ಸಹಕಾರ ಸಂಘವನ್ನು…
ಬಂಟ್ವಾಳ: ಕೂರಿಯಾಳ ಗ್ರಾಮದ ದುರ್ಗಾನಗರ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ನೂತನ ಅಧ್ಯಕ್ಷರಾಗಿ ಶ್ರೀನಿಧಿ ಬಂಗೇರ ಪುನರಾಯ್ಕೆಯಾಗಿದ್ದಾರೆ. ಆದಿತ್ಯವಾರ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವ ಸಲಹೆಗಾರರಾಗಿ ತಿಮ್ಮಪ್ಪ ಆಚಾರ್ಯ , ಗೌರವ ಅಧ್ಯಕ್ಷರಾಗಿ ಶಂಕರ್ ಸುವರ್ಣ, ಉಪಾಧ್ಯಕ್ಷರಾಗಿ ಸುರೇಶ್ ಬಂಗೇರ, ಪ್ರಧಾನ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ,ಕೋಶಾಧಿಕಾರಿಯಾಗಿ ಧರ್ಮಣ ಬಂಗೇರ, ಜೊತೆ ಕಾರ್ಯದರ್ಶಿಯಾಗಿ ಕುಶಾಲ್ ರಾಜ್ ಆಯ್ಕೆಗೊಂಡರು. ಈ ಸಂದರ್ಭ ವಾರ್ಷಿಕ ಲೆಕ್ಕಪತ್ರ ಮಂಡಿಸಲಾಯಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಮಣಿಹಳ್ಳ ಉಪಸ್ಥಿತರಿದ್ದರು








