Author: admin

ಬಂಟ್ವಾಳ: ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಗಾಣಿಗ ಅವರನ್ನು ನೇಮಕಾತಿಗೊಳಿಸಿ ಕನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್ ಎಚ್.ಎಸ್. ಆದೇಶಿಸಿದ್ದಾರೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ರವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಯವರ ಅನುಮೋದನೆಯೊಂದಿಗೆ ಪ್ರಸಾದ ಗಾಣಿಗ ಅವರನ್ನು ನೇಮಕ ಮಾಡಲಾಗಿದೆ. ಕಳೆದ ಹಲವು ಸಮಯಗಳಿಂದ ಯುವ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಸ್ಥಳೀಯ ಸಾಮಾಜಿಕ ಸಂಘಟನೆಗಳಲ್ಲೂ ಮುಂಚೂಣಿಯಲ್ಲಿದ್ದಾರೆ.

Read More

ಬಂಟ್ವಾಳ: ಫೆ.23 ರಂದು ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪನವರ ಜಯಂತಿ ಆಚರಿಸಲು ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಮಿತಿ ಸಭೆ ತೀರ್ಮಾನಿಸಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಕೊಂಡು, ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದ.ಕ. ಜಿಲ್ಲೆಯ ನೇತಾರ ಡಾ‌.ಅಮ್ಮೆಂಬಳ ಬಾಳಪ್ಪನವರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಜೊತೆಗೆ ಅವರ ಬಗ್ಗೆ ಯುವ ಸಮುದಾಯ ಸಮಾಜ ಅಧ್ಯಯನಶೀಲರಾಗ ಬೇಕು ಎಂಬ ಬೇಡಿಕೆಯನ್ನು ವಿವಿಯ ಸಿಂಡಿಕೇಟ್ ಸದಸ್ಯ, ವಕೀಲ ಸುರೇಶ್ ಕುಮಾರ್ ನಾವೂರು ಸೆನೆಟ್ ಸಮಿತಿಯ ಸಭೆಯಲ್ಲಿ ಮುಂದಿಟ್ಟಿದ್ದರು. ಅಂತೆಯೇ ಚರ್ಚೆ ನಡೆಸಿ ಮುಂದಿನ ಫೆ.23 ರಂದು ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಡಾ.ಅಮ್ಮೆಂಬಳ ಬಾಳಪ್ಪ ರವರ ಜಯಂತಿ ಆಚರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ ಡಾ. ಅಮ್ಮೆoಬಳ ಬಾಳಪ್ಪ ರವರ ಜಯಂತಿ ಆಚರಣೆಯನ್ನು ವಿಶ್ವ ವಿದ್ಯಾನಿಲಯ ಮಟ್ಟದ ಎಲ್ಲಾ ಕಾಲೇಜುಗಳಲ್ಲಿ ಸರಕಾರದ ವತಿಯಿಂದ ಆಚರಿಸುವಲ್ಲಿ ಕ್ರಮ ಕೈಗೊಳ್ಳುವ ಪ್ರಯತ್ನಕ್ಕೆ ಚಾಲನೆ ನೀಡಲಾಗಿದೆ

Read More

ಬಂಟ್ವಾಳ: ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಮೂರು ತರಗತಿ ಕೋಣೆಗಳಿಗೆ ರೋಟರಿ ಕ್ಲಬ್ ಬಂಟ್ವಾಳದ ವತಿಯಿಂದ ಟೈಲ್ಸ್ ಅಳವಡಿಸಲಾಗಿದ್ದು ನವೀಕೃತ ಕೊಠಡಿಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಸಂಜೆ ನಡೆಯಿತು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಬಸ್ತಿ ಮಾಧವ ಶೈಣೈ ನವೀಕೃತ ತರಗತಿ ಕೊಠಡಿಯನ್ನು ಉದ್ಘಾಟಿಸಿದರು. ‌ಬಳಿಕ ನಡೆಸ ಸಮಾರಂಭದಲ್ಲಿ ಅವರು ಶುಭ ಹಾರೈಸಿದರು. ವಲಯ ಸೇನಾನಿ ಪ್ರಕಾಶ್ ಬಾಳಿಗ, ರೋಟರಿ ಕ್ಲಬ್ ಬಂಟ್ವಾಳದ ಕಾರ್ಯದರ್ಶಿ ಮಹಮ್ಮದ್ ಯಾಸೀರ್ ಕಲ್ಲಡ್ಕ, ನಿಯೋಜಿತ ಕಾರ್ಯದರ್ಶಿ ರವಿರಾಜ್ ಶೆಟ್ಟಿ , ಉಪಪ್ರಾಂಶುಪಾಲೆ ಜ್ಯೋತಿ ಕುಮಾರಿ, ಇಂಟರಾಕ್ಟ್ ಕ್ಲಬ್ ಅಧ್ಯಕ್ಷ ಹರ್ಷ, ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್ ಉಪಸ್ಥಿತರಿದ್ದರು. ಶಿಕ್ಷಕರಾದ ಗಣೇಶ್ ಸ್ವಾಗತಿಸಿದರು, ಬಾಲಕೃಷ್ಣ ಶೆಟ್ಟಿ ಖಂಡಿಗ ವಂದಿಸಿದರು, ಸುಲೋಚನಾ ಕುಮಾರಿ, ವೆಂಕಟರಮಣ ಆಚಾರ್ ಹಾಗೂ ಸಹಶಿಕ್ಷಕರು ಸಹಕರಿಸಿದರು.

Read More

ಬಂಟ್ವಾಳ: ಕೇಂದ್ರದ ಮಾಜಿ ವಿತ್ತ ಸಚಿವ ಚಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಭೇಟಿ ನೀಡಿದರು. ಡಿಸಿಎಂ ಗೆ ಶಾಲು ಹಾಕಿ ಪೂಜಾರಿಯವರು ಬರಮಾಡಿಕೊಂಡರು. ಪೂಜಾರಿಯವರ ಆರೋಗ್ಯ ಕ್ಷೇಮ ವಿಚಾರಿಸಿದ ಡಿಕೆಶಿ ಕೆಲಹೊತ್ತುಗಳ ಕಾಲ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭ ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಬೂಡ ಅಧ್ಯಕ್ಷ ಬೇಬಿ ಕುಂದರ್. ಪಕ್ಷದ ಮುಖಂಡರಾದ ಇನಾಯತ್ ಆಲಿ, ಇಬ್ರಾಹಿಂ ನವಾಝ್ ಮತ್ತಿತರರು ಉಪಸ್ಥಿತರಿದ್ದರು.

Read More

ಬಂಟ್ವಾಳ: ನಮ್ಮ‌ ಆರೋಗ್ಯದ ರಕ್ಷಣೆ ನಮ್ಮ ಕೈಯಲ್ಲಿಯೇ ಇದೆ, ಆರೋಗ್ಯದ ಬಗ್ಗೆ ಎಚ್ಚರಿಕೆಯನ್ನು ವಹಿಸಿಕೊಂಡು ಔಷಧಿಯೊಂದಿಗೆ ಪೌಷ್ಠಿಕಾಂಶದ ಆಹಾರ ಸೇವಿಸಿದಾಗ ಕ್ಷಯ ರೋಗವನ್ನು ವಾಸಿ ಮಾಡಿಕೊಳ್ಳಲು ಸಾಧ್ಯವಿದೆ ಎಂದು ಮಂಗಳೂರು ಶ್ರೀ ರಾಮಕೃಷ್ಣ ಮಠದ ಶ್ರೀ ಜಿತಕಾಮನಂದ‌ ಸ್ವಾಮೀಜಿ ಹೇಳಿದರು. ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಕ್ಷಯ ರೋಗಿಗಳಿಗೆ ಪೌಷ್ಟಿಕಾಹಾರ ದ ಕಿಟ್ ವಿತರಿಸಿ ಮಾತನಾಡಿದರು. ಸೇವಾಂಜಲಿಯ ಸೇವಾ ಕಾರ್ಯ ನಿಜವಾಗಿಯೂ ದೇವರ ಪೂಜೆ. ಜನರ ಸೇವೆ ಮಾಡುವ ಸೇವಾಂಜಲಿಯ ಕಾರ್ಯ ಹೀಗೆಯೇ ಮುಂದುವರಿಯಲಿ ಎಂದು ಆಶಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಪ್ಪು ಶ್ರೀ ಅಂಬಾ ಮಹೇಶ್ವರಿ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ಎ. ಮಾತನಾಡಿ ಕ್ಷಯ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸೇವಾಂಜಲಿಯ ಈ ಕಾರ್ಯದೊಂದಿಗೆ ನಾವೆಲ್ಲರೂ ಕೈ ಜೋಡಿಸಬೇಕಾಗಿದೆ ಎಂದರು. ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು. ಸೇವಾಂಜಲಿ…

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಸೇವಾಂಜಲಿ ಸಂಗೀತ ತರಗತಿ ಯ ವಾರ್ಷಿಕೋತ್ಸವ ಭಾನುವಾರ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯ ಬಿ. ರಾಮಚಂದ್ರ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಸೇವಾಂಜಲಿ ಸಂಸ್ಥೆ ಧಾರ್ಮಿಕ, ಆರೋಗ್ಯ, ಶಿಕ್ಷಣ ಸೇವೆ ನೀಡುವುದರ ಜೊತೆಗೆ ಭಾರತೀಯ ಶಾಸ್ತ್ರೀಯ ಕಲೆಗಳನ್ನು ವಿದ್ಯಾರ್ಥಿಗಳಿಗೆ ಕಲಿಸಿಕೊಡುವುತ್ತಿರುವುದು ಅಭಿನಂದನೀಯ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತುಂಬೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಕವಿತಾ ದೇವದಾಸ್ ಮಾತನಾಡಿ ರಾಗ, ಭಾವ, ತಾಳ, ಸ್ವರಗಳ ಸಮ್ಮೀಲನವೇ ಸಂಗೀತ, ಮನಸ್ಸಿಗೆ ಮುದ ನೀಡುವುದರ ಜೊತೆಗೆ ಭಾವನೆಗಳನ್ನು ವ್ಯಕ್ತಪಡಿಸುವ ಶಕ್ತಿಯುತ ಸಾಧನ ಎಂದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ‌ ಮಾತನಾಡಿ ಸೇವಾಂಜಲಿಯ ಕಾರ್ಯಚಟುವಟಿಕೆಯ ಬಗ್ಗೆ ತಿಳಿಸಿದರು. ಸಂಗೀತ ಗುರುಗಳಾದ ಕೃಷ್ಣಾಚಾರ್ಯ ನರಿಕೊಂಬು ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಮ್ಯಾ ರಂಜನ್ ಸುಜೀರ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ವಯೋಲಿನ್ ನಲ್ಲಿ ವಿದ್ವಾನ್ ಶ್ರೀಧರ್ ಆಚಾರ್ ಪಾಡಿಗಾರ್ ಉಡುಪಿ, ಮೃದಂಗದಲ್ಲಿ ಶ್ಯಾಂ…

Read More

ಬಂಟ್ವಾಳ: ಬಿ.ಸಿ.ರೋಡಿನ ಗೂಡಿನ ಬಳಿಯ ಬಳಕ ಎಂಬಲ್ಲಿ ಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಈ ಊರಿಗೆ ಸರಿಯಾದ ದಾರಿ ವ್ಯವಸ್ಥೆ ಇಲ್ಲದ ಕಾರಣ ಅಗ್ನಿಶಾಮಕ ವಾಹನ ಆಗಮಿಸಿದರೂ ಅವಘಡ ಸಂಭವಿಸಿದ ಮನೆಗೆ ಸಕಾಲದಲ್ಲಿ ತಲುಪಲು ಸಾಧ್ಯವಾಗದೆ ಅಪಾರ ವಸ್ತುಗಳು ಬೆಂಕಿಗೆ ಆಹುತಿಯಾಗಿ ಭಾಗಶಃ ಮನೆಯೇ ಸುಟ್ಟು ಕರಕಲಾಗಿದೆ. ಇಲ್ಲಿನ ಚಾರ್ಲಿ ಡಿಸೋಜಾ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಬೆಳಿಗ್ಗೆ 9.30 ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಈ ಸಂದರ್ಭ ಮನೆಯಲ್ಲಿ ಮನೆಯ ಯಜಮಾನ ಅನಾರೋಗ್ಯ ಪೀಡಿತ ವಿಜಯ್ ಹಾಗೂ ಅವರ ಮಗಳು ಮಾತ್ರ ಇದ್ದರು. ವಿಜಯ್ ಅವರ ಮಗಳು ಬಟ್ಟೆಯಂಗಡಿ ನಡೆಸುತ್ತಿದ್ದು ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆ ಬರೆಗಳು ಇದ್ದವು. ಬೆಂಕಿ ಅವಘಡದ ವೇಳೆ ಅವೆಲ್ಲವೂ ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗಿದ್ದು ಮನೆಯಲ್ಲಿ ದ್ದ ಗೃಹಪಯೋಗಿ ವಸ್ತುಗಳು ಬೂದಿಯಾಗಿವೆ. ಮನೆಯ ಯಜಮಾನ ವಿಜಯ್ ಅವರಿಗೆ ಸುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡ ಸಂಭವಿಸಿದ ಮನೆಗೆ…

Read More

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ಶಾಖೆಯ 2023-24 ಮತ್ತು 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಭಾನುವಾರ ಬಿ.ಸಿ.ರೋಡಿನಲ್ಲಿರುವ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮ ವನ್ನು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್ ಉದ್ಘಾಟಿಸಿದರು. ಅವರು ಮಾತನಾಡಿ ಇಂದು ಸರಕಾರಿ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿಂದಾಗಿ 4 ಮಂದಿಯ ಕರ್ತವ್ಯವನ್ನು ಒಬ್ಬನೇ ನಿರ್ವಹಿಸಬೇಕಾದ ಅನಿವಾರ್ಯತೆಯಿಂದ ಸರಕಾರಿ ನೌಕರರು ಮಾನಸಿಕ ಹಾಗೂ ದೈಹಿಕ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ತಿಳಿಸಿದರು. ಗಣ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಸರಕಾರಿ ನೌಕರರ ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿದ್ದೇನೆ ಎಂದರು. ಮುಖ್ಯ ಅತಿಥಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಮಾತನಾಡಿ ಸಂಘಟನಾ ಶಕ್ತಿ ಇಲ್ಲದೇ ಜಯಗಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ…

Read More

ಬಂಟ್ವಾಳ: ಸೌತ್ ಕೆನರಾ ಪೊಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ.ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ರಜತ ಸಂಭ್ರಮದ ಸಮಾರೋಪ ಹಾಗೂ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ರಾಜೇಂದ್ರ ಕೆ. ಕಾರ್ಯದರ್ಶಿಯಾಗಿ ರವಿ ಕಲ್ಪನೆ, ಕೋಶಾಧಿಕಾರಿಯಾಗಿ ಕೃಷ್ಣರಾವ್ ಹಾಗೂ ಇತರ ಪದಾಧಿಕಾರಿಗಳು ಆಯ್ಕೆಯಾಗಿದ್ದು ನೂತನ ತಂಡಕ್ಕೆ ಜವಾಬ್ದಾರಿ ಹಸ್ತಾಂತರಿಸಲಾಯಿತು. ಅಭಿಮತ ವಾಹಿನಿಯ ಆಡಳಿತ ಪಾಲುದಾರರಾಗಿರುವ ಡಾ. ಮಮತಾ ಪಿ. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎಸ್‌ಕೆಪಿಎ ಬಂಟ್ವಾಳ ವಲಯ ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು. ಮೊಬೈಲ್ ಬಂದ ಬಳಿಕ ವೃತ್ತಿನಿರತ ಪೊಟೊಗ್ರಾಫರ್ ಗಳಿಗೆ ಅವಕಾಶಗಳು ಕಡಿಮೆಯಾಗುತ್ತಿದೆ. ಕೌಶಲ್ಯ , ತಾಳ್ಮೆ ಇದ್ದಾಗ ಛಾಯಗ್ರಾಹಕರು ವೃತ್ತಿ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ ಎಂದರು. ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ ಅಧ್ಯಕ್ಷತೆ ವಹಿಸಿ ಮಾತನಾಡಿ ರಜತ ಸಂಭ್ರಮದ ಈ ಕಾರ್ಯಕ್ರಮ ವಿಶಿಷ್ಟವಾಗಿ ಸಂಪನ್ನಗೊಂಡಿದೆ. ಸಂಘಟನೆ ಹಾಗೂ ಸದಸ್ಯರಿಗೆ ಪೂರಕವಾದ ಕೆಲಸವನ್ನು ಬಂಟ್ವಾಳ…

Read More

ಬಂಟ್ವಾಳ: ಉಡುಪಿಯ ಶಿರ್ವ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೊಡಾಕ್ ಅಡ್ವೆಂಚರ್ ಪ್ರೈ.ಲಿ.‌ ಆಶ್ರಯದಲ್ಲಿ ನಡೆದ ಅಂತರ್ ಶಾಲಾ ಸಾಂಪ್ರದಾಯಿಕ ಬಿಲ್ಲು ವಿದ್ಯೆ ಪಂದ್ಯಾಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ಗ್ರಾಮೀಣ ಪ್ರದೇಶವಾದ ಕೊಡ್ಮಾಣ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಮನ್ವಿತಾ ಪ್ರಥಮ ಸ್ಥಾನ ಹಾಗೂ ಇದೇ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಧನ್ವಿ ಹಾಗೂ ನೆತ್ತರಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 4 ನೇ ತರಗತಿ ವಿದ್ಯಾರ್ಥಿ ಯಕ್ಷಿತ್ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ. ಈ ವಿದ್ಯಾರ್ಥಿಗಳು ನೆತ್ತರೆಕೆರೆ ಸರಕಾರಿ ಶಾಲೆಯ ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ಪಡೆಯುತ್ತಿದ್ದು ವಿದ್ಯಾರ್ಥಿಗಳ ಸಾಧನೆಗೆ ನೆತ್ತರಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ನೆತ್ತರೆಕೆರೆ ಹಾಗೂ ಕೊಡ್ಮಾಣ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮಾಧವಿ ಮೆಚ್ಚುಗೆ ವ್ಯಕ್ಯಪಡಿಸಿದ್ದಾರೆ.

Read More