Author: admin
ಬಂಟ್ವಾಳ: ಕುಟುಂಬ ಬಂಧುಗಳನ್ನು ಕಳಕೊಂಡು ಏಕಾಂಗಿಯಾಗಿ ಜೀವನ ನಡೆಸುತ್ತಿರುವ ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ಕಮಲ ಅವರ ಮನೆ ಹಾಗೂ ಮನೆಪರಿಸರವನ್ನು ಬಂಟ್ವಾಳ ತಾಲೂಕು ಪಿಡಬ್ಲ್ಯುಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ನೇತೃತ್ವದಲ್ಲಿ ವಿವಿಧ ಸಂಘಟನೆಯ ಸಮಾನ ಮನಸ್ಕ ಯುವಕರು ಶ್ರಮದಾನದ ಮೂಲಕ ಸ್ವಚ್ಚಗೊಳಿಸಿ ಮಾದರಿಯಾದರು. ಕಳೆದ ಹಲವಾರು ವರ್ಷಗಳಿಂದ ಕಮಲ, ಭಾಗಿ ಮತ್ತವರ ಬಡ ಕುಟುಂಬ ಸರಿಯಾದ ಸೂರಿಲ್ಲದೆ ಜೋಪಡಿ ಮನೆಯಲ್ಲಿ ವಾಸವಾಗಿತ್ತು. ಇದನ್ನು ಮನಗಂಡ ಶೈಲೇಶ್ ಪೂಜಾರಿಯವರು ಎರಡು ವರ್ಷಗಳ ಹಿಂದೆ ತಮ್ಮ ಶೈಲೇಶ್ ಕನ್ಸ್ ಸ್ಟ್ರಕ್ಷನ್ ಮೂಲಕ ಸ್ವಂತ ಖರ್ಚಿನಲ್ಲಿ ಮನೆ ನಿರ್ಮಿಸಿ ಕೊಟ್ಟಿದ್ದರು. ಕುಟುಂಬ ಸದಸ್ಯರೆಲ್ಲ ನಿಧನ ಹೊಂದಿದ ಬಳಿಕ ಮನೆಯಲ್ಲಿ ಕಮಲ ಅವರು ಏಕಾಂಗಿಯಾಗಿ ವಾಸವಾಗಿದ್ದಾರೆ. ಕೆಲವು ದಿನಗಳ ಹಿಂದೆ ಕಮಲ ಅವರು ಅನಾರೋಗ್ಯಕ್ಕೊಳಗಾಗಿ ಮನೆಯಲ್ಲಿಯೇ ಚಾಪೆಹಿಡಿದ ಸ್ಥಿತಿಯಲ್ಲಿದ್ದಾಗ ಮಾಹಿತಿ ತಿಳಿದ ಶೈಲೇಶ್ ಪೂಜಾರಿ ಯವರು ಮನೆಗೆ ಧಾವಿಸಿ ಕಮಲ ಅವರನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ನೀಡಿದ ಬಳಿಕ…
ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಂ. ಕರುಣೇಂದ್ರ ಪೂಜಾರಿ ಕೊಂಬರ ಬೈಲು ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಸಂಘದ ಉಪಾಧ್ಯಕ್ಷ ಆದಿರಾಜ್ ಕೆ. ಜೈನ್ ಸ್ವಾಗತಿಸಿದರು. ಬಳಿಕ ಪ್ರಾಸ್ತಾವಿಕವಾಗಿ ಮಾತನಾಡಿ ಸಂಘ ಹಂತ ಹಂತವಾಗಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದು ಇನ್ನಷ್ಟು ಹೊಸ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದಸ್ಯರ ಸಹಕಾರ ಅಗತ್ಯ. ಮುಂದಿನ ವರ್ಷದಿಂದ ಸದಸ್ಯರಿಗೆ ಹೆಚ್ಚು ಡಿವಿಡೆಂಟ್ ನೀಡಲು ಹಾಗೂ ಸಂಘದ ನಿವ್ವಳ ಲಾಭಾಂಶವನ್ನು ಹೆಚ್ಚಿಸಲು ಕಾರ್ಯಯೋಜನೆ ರೂಪಿಸುವುದಾಗಿ ತಿಳಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯಪ್ರಕಾಶ್ ಕಾಮತ್ 2025-26ನೇ ಸಾಲಿನ ವಾರ್ಷಿಕ ವರದಿ, ಲೆಕ್ಕಪತ್ರ, ಆಯ್ಯವ್ಯಯವನ್ನು ಮಂಡಿಸಿದರು. ಸಂಘದ ಅಧ್ಯಕ್ಷರಾದ ಎಂ. ಕರುಣೇಂದ್ರ ಪೂಜಾರಿ ಮಹಾಸಭೆಯ ಕಲಾಪವನ್ನು ನಡೆಸಿಕೊಟ್ಟರು. ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿ, ಸಲಹೆ ಸೂಚನೆಗಳನ್ನು ಆಲಿಸಿದರು. ಸಂಘದ ಅಭಿವೃದ್ಧಿಯ ದೃಷ್ಟಿಯಿಂದ ಅಧ್ಯಕ್ಷರ ಅನುಮತಿಯ ಮೇರೆಗೆ ಇತರ ವಿಚಾರಗಳು ಚರ್ಚಿತವಾದವು. ಕಾರ್ಯಕ್ರಮ ದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ…
ಬಂಟ್ವಾಳದ ಕಾರ್ತಿಕ್ ಕುಮಾರ್ ವೈ.ಎಸ್. ಹಾಗೂ ಗೆಳೆಯರ ಸಾಹಸಗಾಥೆ ಬಂಟ್ವಾಳ: ಜಪಾನ್‌ನ ಅತಿ ಎತ್ತರದ ಪರ್ವತ ಹಾಗೂ ವಿಶ್ವದ ಪ್ರಸಿದ್ಧ ಶಿಖರಗಳಲ್ಲಿ ಒಂದಾದ ಮೌಂಟ್ ಫುಜಿಯನ್ನು ಏರುವ ಮೂಲಕ ಬಂಟ್ವಾಳದ ಕಾರ್ತಿಕ್ ಕುಮಾರ್ ವೈ.ಎಸ್. ಹಾಗೂ ಅವರ ಗೆಳೆಯರು ಗಮನಾರ್ಹ ಸಾಹಸ ಸಾಧನೆ ಮಾಡಿದ್ದಾರೆ. ಕಠಿಣ ಹವಾಮಾನ, ಕಡಿದಾದ ಪರ್ವತ ಮಾರ್ಗ ಹಾಗೂ ಹಲವು ಸವಾಲುಗಳನ್ನು ಎದುರಿಸಿದ ಅವರು, ಛಲ, ಆತ್ಮವಿಶ್ವಾಸ ಮತ್ತು ಸಾಹಸದಿಂದ ಮೌಂಟ್ ಫುಜಿಯ ಶಿಖರವನ್ನು ತಲುಪಿದ್ದಾರೆ. ಶಿಖರದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಪ್ರೇಮ ಮೆರೆದಿರುವುದು ಈ ಸಾಧನೆಯ ವಿಶೇಷತೆಯಾಗಿದೆ. ಜಪಾನ್‌ನ ನೆಲದಲ್ಲಿ, ಅಲ್ಲಿನ ಅತ್ಯುನ್ನತ ಶಿಖರದ ಮೇಲೆ ಭಾರತದ ರಾಷ್ಟ್ರಧ್ವಜ ಹಾರಿಸಿದ ಕ್ಷಣವು ಕಾರ್ತಿಕ್ ಕುಮಾರ್ ಹಾಗೂ ಅವರ ಗೆಳೆಯರಿಗೆ ಅವಿಸ್ಮರಣೀಯ ಹೆಮ್ಮೆಯ ಕ್ಷಣವಾಗಿ ಪರಿಣಮಿಸಿದೆ. ಸಾಹಸಪ್ರಿಯತೆ, ದೇಶಾಭಿಮಾನ ಹಾಗೂ ಸಾಧಿಸುವ ಛಲಕ್ಕೆ ಈ ಪ್ರಯತ್ನ ಸಾಕ್ಷಿಯಾಗಿದೆ. ಕಾರ್ತಿಕ್ ಕುಮಾರ್ ವೈ.ಎಸ್. ಅವರು ಬಂಟ್ವಾಳದ ಬಡ್ಡಕಟ್ಟೆಯ ಶಂಕರ್ ಮತ್ತು ಯಶೋದ ದಂಪತಿಯ ಪುತ್ರ. ಉದ್ಯೋಗ ನಿಮಿತ್ತ…
ಬಂಟ್ವಾಳ: ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ.ಬಂಟ್ವಾಳ ಇದರ 23ನೇ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಆರಂಭದಲ್ಲಿ ಬಂಟ್ವಾಳದ ಪಟ್ಟಣ ಭಾಗಕ್ಕೆ ಮಾತ್ರ ಸೀಮಿತವಾಗಿದ್ದ ಸಂಘದ ಕಾರ್ಯ ಕ್ಷೇತ್ರವನ್ನು ಬಂಟ್ವಾಳ ತಾಲೂಕಿಗೆ ವಿಸ್ತರಿಸಲಾಯಿತು. ಕಳೆದ 2 ವರ್ಷಗಳ ಹಿಂದೆ ಸಂಘದ ವ್ಯಾಪ್ತಿ ಜಿಲ್ಲಾಮಟ್ಟಕ್ಕೆ ವಿಸ್ತರಣೆಗೊಂಡು ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು. 10 ಸಾವಿರಕ್ಕಿಂತಲೂ ಅಧಿಕ ಸದಸ್ಯರು ನೋಂದಾವಣೆ ಮಾಡಿದ್ದು 6 ಸಾವಿರಕ್ಕಿಂತಲೂ ಹೆಚ್ಚು ಸದಸ್ಯರು ಸಕ್ರಿಯವಾಗಿದ್ದಾರೆ. 25 ಸಾವಿರಕ್ಕಿಂತಲೂ ಅಧಿಕ ಗ್ರಾಹಕರು ವ್ಯವಹಾರ ಮಾಡುತ್ತಿದ್ದಾರೆ ಎಂದ ಅವರು ನಿಂತು ಹೋಗಿರುವ ಬಂಟ್ವಾಳ ಸಂತೆಯನ್ನು ಪುನಃ ಕಾರ್ಯರಂಭ ಮಾಡಲು ಯೋಜನೆ ರೂಪಿಸಲಾಗಿದೆ. ಇದರಿಂದ ಜನರಿಗೆ ಹಾಗೂ ವರ್ತಕರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಕ್ತದಾನ ಮಾಡಿದ ಸಂಘದ ಸಿಬ್ಬಂದಿಗಳಿಗೆ ಗೌರವಾರ್ಪಣೆ ಮಾಡಲಾಯಿತು. ಮೂರು ಮಂದಿ ಸಾಧಕರನ್ನು ಅಭಿನಂದಿಸಲಾಯಿತು. ಅತಿ ಹೆಚ್ಚು ಲಾಭ ಗಳಿಕೆ, ಹೆಚ್ಚು ಠೇವಣಿ ಸಂಗ್ರಹ…
ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಮಹಿಳಾ ಘಟಕ ಹಾಗೂ ಕುಲಾಲ ಸೇವಾದಳದ ಸಹಯೋಗದೊಂದಿಗೆ 25ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಬಿ.ಸಿ.ರೋಡಿನ ರಕ್ತೇಶ್ವರೀ ದೇವಸ್ಥಾನದಲ್ಲಿ ವಿಜ್ರಂಭಣೆಯಿಂದ ನಡೆಯಿತು. ವರಮಹಾಲಕ್ಷ್ಮೀ ವೃತಾ ಪೂಜೆಯ ಪ್ರಾರಂಭದಲ್ಲಿ ಮಹಿಳಾ ಘಟಕದ ಸದಸ್ಯೆಯರಿಂದ ಭಜನೆ ನಡೆಯಿತು. ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಮಚ್ಚೇಂದ್ರನಾಥ ಸಾಲ್ಯಾನ್, ಅಧ್ಯಕ್ಷ ರಮೇಶ್ ಸಾಲ್ಯಾನ್ ಸಂಚಯಗಿರಿ, ಉಪಾಧ್ಯಕ್ಷ ಗಣೇಶ್ ಮರ್ದೋಳಿ, ಕಾರ್ಯದರ್ಶಿ ಸತೀಶ್ ಸಂಪಾಜೆ, ಕೋಶಾಧಿಕಾರಿ ಸೋಮನಾಥ ಸಾಲ್ಯಾನ್, ಜೊತೆ ಕಾರ್ಯದರ್ಶಿಗಳಾದ ಜಯಂತ ಬಂಗೇರ, ಪ್ರೇಮಜನಾರ್ದನ್ ಪೊಸಳ್ಳಿ, ಮಹಿಳಾ ಘಟಕದ ಅಧ್ಯಕ್ಷೆ ವಾರಿಜಾ ಚೇತನ್, ಸೇವಾದಳಪತಿ ಚಂದ್ರಶೇಖರ ಕಾಮಾಜೆ ಹಾಗೂ ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ಸದಸ್ಯರು, ಮಹಿಳಾ ಘಟಕದ ಪದಾಧಿಕಾರಿಗಳು, ಸೇವಾದಳದ ಸದಸ್ಯರು, ಭಕ್ತಾದಿಗಳು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ನಾವೂರು, ಬಿ.ಸಿ.ರೋಡು ಶ್ರೀ…
ಬಂಟ್ವಾಳ: ಶಾಶ್ವತವಾದ ಸುಖ ನಮ್ಮ ಆತಂರ್ಯದಲ್ಲಿ ಇದೆ. ನಿಷ್ಕಲ್ಮಶವಾದ ಮನಸ್ಸು, ಭಕ್ತಿ ಇದ್ದಾಗ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರಿನ ಶ್ರೀ ಆದಿಚುಂಚನಗಿರಿ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ಸೇವಾಂಜಲಿ ಸಭಾಗೃಹದಲ್ಲಿ ನಡೆದ 21ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಲಕ್ಷ್ಮೀ ಶಕ್ತಿಯ ಸಂಕೇತ, ನಮ್ಮ ಕರ್ಮ, ಕರ್ತವ್ಯ, ಚಿಂತನೆಯಲ್ಲಿ ಲಕ್ಷ್ಮೀ ವಾಸವಾಗಿರುತ್ತಾಳೆ ಸಾಮೂಹಿಕವಾಗಿ ಮಾಡುವ ಪೂಜೆ ಶ್ರೇಷ್ಠವಾದ ವೃತಾಚರಣೆಯಾಗಿದೆ ಎಂದು ತಿಳಿಸಿದರು. ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಪ್ರತೀಕ್ಷಾ ರೈ ಜಿ.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಬಡವರ ಸೇವೆ ಮಾಡುವ, ಮಕ್ಕಳಿಗೆ ಧರ್ಮ, ಸಂಸ್ಕಾರವನ್ನು ಕಲಿಸಿಕೊಡುವ, ಹಿರಿಯರಿಗೆ ಗೌರವ ಕೊಡುವ ಸಂಕಲ್ಪವನ್ನು ಈ ದಿನ ಕೈಗೊಳ್ಳಬೇಕು ಎಂದು ತಿಳಿಸಿದರು. ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಕಾರ್ಯದರ್ಶಿ ಕೃಷ್ಣ ಕುಮಾರ್ ಪೂಂಜ ಪ್ರಾಸ್ತವಿಕವಾಗಿ…
ಬಂಟ್ವಾಳ: ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ (ನಿ) ಬೊಳ್ಳಾಯಿ ಇದರ 2025-26 ನೇ ಸಾಲಿನ ಮಹಾಸಭೆಯು ಸೆ.20ರಂದು ಆದಿತ್ಯವಾರ ಬೆಳಿಗ್ಗೆ ಘಂಟೆ 10.30 ಕ್ಕೆ ಸಜೀಪಮೂಡ ಸುಭಾಷ್‌ನಗರದಲ್ಲಿರುವ ಶ್ರೀ ಗುರು ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 31.3.2026ರ ಒಳಗೆ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಸದಸ್ಯರ ಮಕ್ಕಳು ಎಸ್‌ಎಸ್‌ಎಲ್‌ಸಿ ಯಲ್ಲಿ ಶೇ.90ಮತ್ತು ಪಿಯುಸಿಯಲ್ಲಿ ಶೇ.85 ಅಂಕ ಹಾಗೂ ಅದಕ್ಕಿಂತ ಮೇಲ್ಪಟ್ಟು ವಿದ್ಯಾಭ್ಯಾಸಕ್ಕೆ ಶೇ.75 ಅಂಕ ಗಳಿಸಿದ ವಿಧ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿವೇತನದ ಅರ್ಜಿಗಳನ್ನು ಕೇಂದ್ರ ಕಚೇರಿ ಇಲ್ಲವೇ ಶಾಖೆಗಳಲ್ಲಿ ಪಡೆದು ಹಾಗೂ ದಿನಾಂಕ 15.9.2026 ರೊಳಗೆ ತಲುಪಿಸ ಬೇಕು. ಸೆ. 20ರಂದು ನಡೆಯುವ ಮಹಾಸಭೆಯಲ್ಲಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ: ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಸಂಸ್ಥೆಗೆ, ತನ್ನ ವ್ಯವಹಾರಿಕ ಹಾಗೂ ಸರ್ವತೋಮುಖ ಸಾಧನೆಗಾಗಿ, ವಿವಿಧೋದ್ದೇಶ ಸಹಕಾರಿ ಸಂಘಗಳ ವಿಭಾಗದಲ್ಲಿ ಸಾಧನಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅಜಿತ್ ಕುಮಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಸ್ಥೆಯ ನಿರ್ದೇಶಕರಾದ ಗಜೇಂದ್ರ ಪ್ರಭು ಹಾಗೂ ವಿಜಯ ಕುಮಾರಿ ಇಂದ್ರ ಉಪಸ್ಥಿತರಿದ್ದರು.
ಬಂಟ್ವಾಳ: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ವ್ಯವಹಾರ ನಡೆಸಿ ಸಾಧನೆ ಮಾಡಿರುವ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹನಾಧಿಕಾರಿ ಮಮತಾ ಜಿ.ಪ್ರಶಸ್ತಿ ಸ್ವೀಕರಿಸಿದರು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ ಆಡಳಿತ ಮಂಡಳಿ ಸದಸ್ಯರಾದ ಭಾಸ್ಕರ್ ಎಸ್.ಕೋಟ್ಯಾನ್, ಶಶಿಕುಮಾರ್ ರೈ ಬಿ, ಡಾ. ದೇವಿಪ್ರಸಾದ್ ಶೆಟ್ಟಿ, ಸದಾಶಿವ ಉಳ್ಳಾಲ್, ಎಂ. ಮಹೇಶ್ ಹೆಗ್ಡೆ, ಎಸ್.ಎನ್.ಮನ್ಮಥ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್. ರಮೇಶ್ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಸಿಇಒ ಕಿಶೋರ್ ಹಾಗೂ ಸಂಘದ ಲೆಕ್ಕಿಗ ನಿಶ್ಮಿತಾ ಕೆ, ಶಾಖಾ ವ್ಯವಸ್ಥಾಪಕಿ ಅಕ್ಷತಾ ಹಾಗೂ ಶ್ರುತಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬಂಟ್ವಾಳ: ತುಂಬೆಯ ಆಶೀರ್ವಾದ್ ಸೇವಾ ಸಂಘ ಹಾಗೂ ಆಶೀರ್ವಾದ್ ಮಹಿಳಾ ಸೇವಾ ಸಂಘ ಇದರ ಆಶ್ರಯದಲ್ಲಿ 11 ನೇ ವರ್ಷದ ಕೆಸರ್ಡೊಂಜಿ ದಿನ ಕಾರ್ಯಕ್ರಮ ತುಂಬೆ ಬೊಳ್ಳಾರಿಯಲ್ಲಿ ವಿಜ್ರಂಭಣೆಯಿಂದ ನಡೆಯಿತು. ಬೆಳಿಗ್ಗೆ ಸ್ಥಳೀಯ ಹಿರಿಯರಾದ ಬಾಬು ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ಗ್ರಾಮ ವಿಕಾಸ ಸಂಯೋಜಕ ದಾಮೋದರ ನೆತ್ತರಕೆರೆ ಮಾತನಾಡಿ ಯಾವುದೇ ಕಾರ್ಯಕ್ರಮಗಳ ಆಯೋಜನೆಯ ಹಿಂದೆ ಬಲವಾದ ಉದ್ದೇಶ ಇರಬೇಕು. ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಹಿರಿಯರಿಂದ ಬಂದ ಸಂಪ್ರದಾಯ, ಸಂಸ್ಕೃತಿ, ಸಂಸ್ಕಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸುವ ಕಾರ್ಯ ಆಗಬೇಕು ಎಂದರು. ಬಂಟ್ವಾಳ ತಾಲೂಕು ಗ್ಯಾರೇಜು ಮಾಲಕರ ಸಂಘದ ಗೌರವ ಸಲಹೆಗಾರ ಸುಧಾಕರ ಸಾಲ್ಯಾನ್ ಮಾತನಾಡಿ ಸನಾತನ ಧರ್ಮದ ಬಂಧುಗಳು ಜೊತೆಯಾಗಿ ಸೇರಿ ಸಂಭ್ರಮಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಸಂಧ್ಯಾರಾಣಿ ಹಾಗೂ ತುಂಬೆ ಸರಕಾರಿ ಹಿರಿಯ…








