Author: admin

ಬಂಟ್ವಾಳ: ಹದಿಹರೆಯ ಎನ್ನುವುದು ಕಾಲಘಟ್ಟ. ಮಕ್ಕಳ ಈ ಸಂಕ್ರಮಣ ಕಾಲವನ್ನು ನಿಭಾಸುವುದು ಪೋಷಕರಿಗೆ ಸವಾಲಿನ ಕೆಲಸ. ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಾಗುವ ಬದಲಾವಣೆಯನ್ನು ಅರ್ಥಮಾಡಿಕೊಂಡು ಅವರ ಸಾಗುವ ದಾರಿಯನ್ನು ಪೋಷಕರು ಅವಲೋಕಿಸುತ್ತಿರಬೇಕು ಎಂದು ಮನೋವೈದ್ಯ ಡಾ. ರವೀಶ್ ತುಂಗ ಹೇಳಿದರು. ರೋಟರಿ ಕ್ಲಬ್ ಫರಂಗಿಪೇಟೆ ಇದರ ಆಶ್ರಯದಲ್ಲಿ ಅರ್ಕುಳ ಫರಂಗಿಪೇಟೆಯ ಶ್ರೀರಾಮ ವಿದ್ಯಾ ಸಂಸ್ಥೆ ಮತ್ತು ದೇರಳಕಟ್ಟೆ ಯೆನಪೋಯ ಫಿಸಿಯೋಥೆರಪಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದೊಂದಿಗೆ ಫರಂಗಿಪೇಟೆಯ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಡೆದ ಹದಿಹರೆಯ ಎತ್ತ ಸಾಗುತ್ತಿದೆ? ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಗಾಂಜ, ಮದ್ಯಪಾನದಂತೆ ಮೊಬೈಲ್ ಕೂಡ ಒಂದು ವ್ಯಸನವಾಗಿದೆ. ನಮ್ಮ ಅನುಕೂಲತೆಗಾಗಿ ಇರುವ ಮೊಬೈಲ್ ಇಂದು ಬದುಕನ್ನೇ ಕಸಿಯುತ್ತಿದೆ. ಆದ್ದರಿಂದ ಮೊಬೈಲ್ ಜೀವನ ಅಲ್ಲ. ಮೊಬೈಲ್ ಇಲ್ಲದೆ ಬದಕಲು ಸಾಧ್ಯವಿದೆ ಎಂದ ಅವರು ಇಂದು ಕುಟುಂಬ ಜೀವನ ಬದಲಾಗಿ ಮಕ್ಕಳಿಗೆ ಮಾರ್ಗದರ್ಶನದ ಕೊರತೆ ಎದುರಾಗುತ್ತಿದೆ ಎಂದು ತಿಳಿಸಿದರು. ಯೇನಪೋಯ ಫಿಸಿಯೋಥೆರಪಿ…

Read More

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೂಡುನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಿತು. ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಡಾ. ಜಯಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಭಾರತದಲ್ಲಿ ಸಾಂಕ್ರಮಿಕವಲ್ಲದ ರೋಗಗಳಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಮಾನ್ಯ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಷಲು ಸಾಧ್ಯವಾದರೆ ರೋಗ ನಿರ್ಮಾಲನ ಮಾಡಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ಇಂತಹ ಆರೋಗ್ಯ ಶಿಬಿರಗಳು ಅತ್ಯಂತ ಮಹತ್ವವಾಗಿದೆ ಎಂದರು. ರೋಗ ಬರುವ ಮೊದಲೇ ಅದನ್ನು ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ತಿಳಿಸಿದರು. ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ ಆರೋಗ್ಯ ಮತ್ತು ಶಿಕ್ಷಣ ಸಿಕ್ಕಾಗ ಪ್ರತಿಯೊಬ್ಬ ವ್ಯಕ್ತಿಯೂ ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯ. ಇಂತಹ ಶಿಬರಗಳನ್ನು ಸದುಪಯೋಗ ಪಡಿಸಿಕೊಂಡು ಆರೋಗ್ಯವನ್ನು ಉತ್ತಮ ಪಡಿಸಿಕೊಳ್ಳುವಂತೆ ತಿಳಿಸಿದರು. ಪ್ರಜ್ಞಾ ಸಲಹಾ ಕೇಂದ್ರದ ಪ್ರಾಂಶುಪಾಲೆ ವಿಜಯ ಶುಭ…

Read More

ಬಂಟ್ವಾಳ: ಜಾತಿ ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕರೋರ್ವರು ಜೇನು ನೊಣದ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆ ಸಜೀಪಮುನ್ನೂರು ಗ್ರಾಮದ ಆಲಾಡಿ ಬಳಿ ಶನಿವಾರ ನಡೆದಿದೆ. ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕ ವೆಂಕಟರಮಣ ಆಚಾರ್ ಜೇನು ನೊಣದ ದಾಳಿಗೊಳಗಾಗಿದ್ದು ಚೇತರಿಸಿಕೊಂಡಿದ್ದಾರೆ. ಶಿಕ್ಷಣ ವೆಂಕಟರಮಣ ಆಚಾರ್ ಅವರು ಸಜೀಪಮುನ್ನೂರು ಗ್ರಾಮದ ಆಲಾಡಿ, ಶಾರಾದನಗರದ ಬಳಿ ಗಣತಿ ಕಾರ್ಯಕ್ಕೆ ತೆರಳಿದ್ದ ವೇಳೆ ಅಲ್ಲಿನ ಪಿಲಿಚಂಡಿ ದೈವಸ್ಥಾನದ ರಸ್ತೆ ಬಳಿಯ ಗುಳಿಗ ಸ್ಥಾನದ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ನಿಂತಿದ್ದ ವೇಳೆ ಏಕಾಏಕಿ ಜೇನು ನೊಣಗಳು ದಾಳಿ ಮಾಡಿದೆ. ತಲೆ, ಕೈಗೆ ನೊಣಗಳು ಕಚ್ಚಿದಾಗ ಸ್ಥಳೀಯ ಮನೆಯೊಂದಕ್ಕೆ ಓಡಿ ಹೋದ ವೆಂಕಟರಮಣ ಆಚಾರ್ ಅವರು ೨೦ ನಿಮಿಷಗಳ ಕಾಲ ಮನೆಯಲ್ಲಿ ಸುಧಾರಿಸಿ, ಗಾಯಗಳಿಗೆ ಅರಶಿನ ಹಚ್ಚಿಕೊಂಡು ಇನ್ನೇನು ನೊಣಗಳು ಹೋಯಿತೆಂದು ವಾಪಸ್ಸು ತನ್ನ ವಾಹನದತ್ತ ಬಂದಾಗ ಮತ್ತೆ ಜೇನು ನೊಣಗಳ ಹಿಂಡು ದಾಳಿ ನಡೆಸಿ ತಲೆ, ಕಿವಿ, ಕುತ್ತಿಗೆಗೆ…

Read More

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಅ.12 ರಂದು ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಮೂಡುನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಅಲ್‌ಕಾರ್ಗೋ ಲಾಜಿಸ್ಟಿಕ್ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್, ದಡ್ಡಲಕಾಡು, ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಶನ್ (ರಿ.) ಬಂಟ್ವಾಳ ಕ್ಷೇತ್ರ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಬಂಟ್ವಾಳ ವಲಯ ಹಾಗೂ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ದಡ್ಡಲಕಾಡು, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೇನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ದೇರಳಕಟ್ಟೆ ಶಿಬಿರಕ್ಕೆ ಸಹಯೋಗ ನೀಡಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ವಚನ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಂಟ್ವಾಳ: ತುಂಬೆಯ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ಆಶ್ರಯದಲ್ಲಿ ತುಂಬೆಯ ರಾಮಲ್ ಕಟ್ಟೆಯಲ್ಲಿ ನಿರ್ಮಾಣಗೊಂಡ ನೂತನ ಶ್ರೀಶಾರದಾ ಸಭಾಭವನ ಹಾಗೂ ಆ ‌ಬಳಿಕ ಎರಡು ದಿನಗಳ ಕಾಲ ನಡೆದ ಶ್ರೀ ಶಾರದೋತ್ಸವದ ಬಗ್ಗೆ ಅವಲೋಕನ ಸಭೆ ಭಾನುವಾರ ಶ್ರೀ ಶಾರದಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಪ್ರತಿಷ್ಠಾನದ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ರಾಘವ ಸುವರ್ಣ ಪೇರ್ಲಬೈಲು, ಪ್ರಧಾನ ಸಂಚಾಲಕ ತಾರಾನಾಥ ಕೊಟ್ಟಾರಿ ತೇವು, ಪೊಳಲಿ ಗಿರಿ ಪ್ರಕಾಶ್ ತಂತ್ರಿ ಸಮಿತಿ ಪ್ರಮುಖರಾದ ಶೋಭಾ ಮೈಂದನ್ ರಾಮಚಂದ್ರ ಸುವರ್ಣ, ವಿನೋದ್ ಬೊಳ್ಳಾರಿ ದಿವಾಕರ ಪೇರ್ಲಬೈಲು ಉಪಸ್ಥಿತರಿದ್ದರು. ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಾಗವಹಿಸಿ ಅನಿಸಿಕೆ ವ್ಯಕ್ತ ಪಡಿಸಿದರು. ಸಂತೋಷ್ ಕೋಟ್ಯಾನ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.

Read More

ಬಂಟ್ವಾಳ: ಸೇವಾಂಜಲಿ ಸಂಸ್ಥೆಯ ಸೇವಾ ಕಾರ್ಯದ ಹಿಂದೆ ಉತ್ಕೃಷ್ಟವಾದ ದೃಷ್ಟಿಕೋನವಿದೆ. ಇಂತಹ ಪ್ರತಿಷ್ಠಾನಗಳಿಗೆ ಸಮಾಜ ಚಿರ ಋಣಿಯಾಗಿರಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು. ಅವರು ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ‌ ಸೇವಾಂಜಲಿ ಸಭಾಗೃಹದಲ್ಲಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಿ ಮಾತನಾಡಿದರು. ಕ್ಷಯ ಗುಣವಾಗುವ ರೋಗ. ಸರಿಯಾದ ಔಷಧೋಪಚಾರ ಹಾಗೂ ಪೌಷ್ಟಿಕಾಹಾರ ಸೇವನೆಯಿಂದ‌ ರೋಗ ಗುಣಪಡಿಸಲು ಸಾಧ್ಯವಿದೆ ಎಂದರು. ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ವಸಂತ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸೇವಾಂಜಲಿಯ ಕಾರ್ಯ ಅಪೂರ್ವವಾದುದು, ಕೃಷ್ಣ ಕುಮಾರ್ ಪೂಂಜ ಅವರ ನೇತೃತ್ವದಲ್ಲಿ ಸೇವಾಂಜಲಿ ಅತ್ಯುತ್ತಮ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಪ್ರಾಸ್ತವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸಂತೋಷ್ ತುಪ್ಪೆಕಲ್ಲು, ಸೇವಾಂಜಲಿ ಟ್ರಸ್ಟಿ ನಾರಾಯಣ ಬಡ್ಡೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸಂಶೋಧನಾ ವಿದ್ಯಾರ್ಥಿಗಳಾದ ಡಾ.ಮಹಮ್ಮದ್…

Read More

ಬಂಟ್ವಾಳ: ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ನರಿಕೊಂಬುವಿನ ಬಿರ್ವೆರ್ ಸೇವಾ ಟ್ರಸ್ಟ್‌ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಅಧ್ಯಕ್ಷತೆಯಲ್ಲಿ ನಡೆಯಿತು. ಅವರು ಮಾತನಾಡಿ ಸಂಘವು ಪ್ರಗತಿಯ ಹಾದಿಯಲ್ಲಿದ್ದು ಲಾಭದೊಂದಿಗೆ ಮುನ್ನಡೆಯುತ್ತಿದೆ. ಸಂಘದ ಸದಸ್ಯರ ಒಪ್ಪಿಗೆಯ ಮೇರೆಗೆ ಲಾಭಾಂಶವನ್ನು ಸಂಘಕ್ಕೆ ನಿವೇಶನ ಖರೀದಿಸಿ, ಸ್ವಂತ ಕಟ್ಟಡ ಕಟ್ಟುವ ಉದ್ದೇಶದಿಂದ ಕಟ್ಟಡ ನಿಧಿಗೆ ವರ್ಗಾಯಿಸುವುದಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್, ಉಪಾಧ್ಯಕ್ಷೆ ಮೋಹಿನಿ ವಾಮನ ಕುಲಾಲ್, ನರಿಕೊಂಬು ಬಿರುವೆರ್ ಸೇವಾ ಟ್ರಸ್ಟ್ ಅಧ್ಯಕ್ಷ ಸೀತರಾಮ ಪೂಜಾರಿ, ಭೂಸೇನೆಯ ನಿವೃತ್ತ ಸುಬೇಧಾರ್ ಮೋನಪ್ಪ ಪೂಜಾರಿ ಭಾಗವಹಿಸಿ ಶುಭ ಹಾರೈಸಿದರು. ಸಂಘದ ಉಪಾಧ್ಯಕ್ಷ ಮಾಧವ ಕೆ. ಕರ್ಬೆಟ್ಟು, ನಿರ್ದೇಶಕರಾದ ಅಶೋಕ್ ಆರ್. ರಾಜೇಶ್ ಆರ್. ಮೋನಪ್ಪ ಪೂಜಾರಿ, ನಾರಾಯಣ ಪೂಜಾರಿ ಕೇದಿಗೆ, ಗಣೇಶ್ ಪೆಲ್ತಿಮಾರ್, ಶ್ರೀಶ ಆರ್., ವಿಜಯ ತುಕರಾಂ, ಜಯಂತಿ ಈಶ್ವರ ಪೂಜಾರಿ, ಕೃಷ್ಣಪ್ಪ…

Read More

ಬಂಟ್ವಾಳ: ಇಲ್ಲಿನ ಸಮಾಜ ಸೇವಾ ಸಹಕಾರಿ ಸಂಘದ 17ನೇ ಶಾಖೆಯು ಕಡಬ ತಾಲೂಕಿನ ಆಲಂಕಾರುವಿನಲ್ಲಿರುವ ಮಾತೃ ಕೃಪಾ ಕಟ್ಟಡದಲ್ಲಿ ಅ.5ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡುವರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ನೂತನ ಶಾಖೆಯನ್ನು ಉದ್ಘಾಟಿಸುವರು, ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸುವರು. ಭದ್ರತಾ ಕೊಠಡಿಯನ್ನು ಸಂಸದ ಕ್ಯಾ| ಬ್ರಿಜೇಶ್ ಚೌಟ ಉದ್ಘಾಟಿಸುವರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇಫ್ ಲಾಕರ್ ಉದ್ಘಾಟಿಸುವರು. ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಕಂಪ್ಯೂಟರ್ ಉದ್ಘಾಟಿಸುವರು. ಸಹಕಾರ ಸಂಘಗಳ ಉಪನಿಬಂಧಕ ಎಚ್. ಎನ್. ರಮೇಶ್ ಠೇವಣಿ ಪತ್ರ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಬೆಂಗಳೂರು ಕುಲಾಲ ಸಂಘದ ಅಧ್ಯಕ್ಷ ದಿವಾಕರ ಮೂಲ್ಯ, ಆಲಂಕಾರು ಗ್ರಾ.ಪಂ. ಅಧ್ಯಕ್ಷೆ ಸುಶೀಲ, ಅಲಂಕಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಭಟ್ ಯು.…

Read More

ಬಂಟ್ವಾಳ: ಇಲ್ಲಿನ ಗಿರಿಗುಡ್ಡೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಬುಧವಾರ ಎನ್‌ಎಸ್‌ಎಸ್ ಘಟಕದ ವತಿಯಿಂದ ೧೦ನೇ ಆಯುರ್ವೇದ ದಿನಾಚರಣೆ ಮತ್ತು ಎನ್‌ಎಸ್‌ಎಸ್ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾಸಂಸ್ಥೆಯ ಪ್ರಾಂಶುಪಾಲ ನರಸಿಂಹ ಭಟ್ ಎಚ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬದಲಾಗುತ್ತಿರುವ ಕಾಲಘಟ್ಟದ್ದಲ್ಲಿ ನಾವು ಬಳಸುತ್ತಿರುವ ಆಹಾರ ನಮ್ಮ ಆರೋಗ್ಯಕ್ಕೆ ಮುಳುವಾಗುತ್ತಿದ್ದು ಪ್ರಕೃತಿ ಜನ್ಯ ಆಹಾರಗಳ ಸೇವೆಯಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆಯುರ್ವೇದ ನಮ್ಮ ಪಾರಂಪರಿಕ ಔಷಧಿ ಪದ್ದತಿಯಾಗಿದ್ದು ಇದರ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಭಾಗವಹಿಸಿ ಎನ್‌ಎಸ್‌ಎಸ್ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಮಾಹಿತಿಯನ್ನು ನೀಡಿದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಭಾಸ್ಕರ್ ಎಲ್. ಪ್ರಾಸ್ತಾವಿಕವಾಗಿ ಮಾತನಾಡಿ ಎನ್‌ಎಸ್‌ಎಸ್ ಮತ್ತು ಆಯುರ್ವೇದ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಭಗವಾನ್ ಪ್ರಸಾದ್, ಸಿವಿಲ್ ವಿಭಾಗ ಮುಖ್ಯಸ್ಥ ಮೋಹನ್ ರಾಜ್ ಜಿ.ಎಸ್, ಎಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಉದಯ್ ಕುಮಾರ್, ಕಚೇರಿ ಅಧೀಕ್ಷಕ ಸುಧಾಕರ್…

Read More

ಬಂಟ್ವಾಳ: ಇಲ್ಲಿನ ಬಂಟ್ವಾಳ ತಾಲೂಕು ಹಿಂದಿ ಭಾಷ ಶಿಕ್ಷಕ ಸಂಘದ ಆಶ್ರಯದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಸಹಯೋಗದೊಂದಿಗೆ ಹಿಂದಿ ಭಾಷ ಶಿಕ್ಷಕ ಸಮಾವೇಶ ಬಿ.ಸಿ.ರೋಡಿನ ಬಿ.ಎ. ಸೋಮಯಾಜಿ ರೋಟರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಂಟ್ವಾಳ‌ ಕ್ಷೇತ್ರ ‌ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಉದ್ಘಾಟಿಸಿದರು. ಅವರು ಮಾತನಾಡಿ ಹಿಂದಿ ಭಾಷೆ ಕಲಿತರ ದೇಶದ ಎಲ್ಲಾ ಕಡೆಗೂ ಸಂಚರಿಸಬಹುದಾಗಿದೆ. ಲೋಕಸಭೆ ರಾಜ್ಯಸಭೆಯಲ್ಲಿ ಚರ್ಚೆಗಳು ಹಿಂದಿ ಭಾಷೆಯಲ್ಲಿಯೆ ನಡೆಯುತ್ತದೆ. ಹಿಂದಿ ಭಾಷ ಸಂಘದ ವತಿಯಿಂದ ರಚಿತವಾದ ಹಿಂದಿ ಅಭ್ಯಾಸ ಪುಸ್ತಕದಿಂದ ಎಸ್ ಎಲ್ ಎ ಸಿ ಯಲ್ಲಿ ಅತ್ಯಧಿಕ ಅಂಕಗಳು ಬಂದಿದೆ.‌ಇದರಿಂದ ಮಕ್ಕಳ ಮನೋಸ್ಥೈರ್ಯ ಹೆಚ್ಚಿಸುವ ಕಾರ್ಯ ಆಗಿದೆ ಎಂದರು. ಪಾಣೆಮಂಗಳೂರಿನ ಎಸ್ ಎಲ್ ಎಂ. ಪಿ. ಶಾಲೆಯ ಹಿಂದಿ ಶಿಕ್ಷಕ ಪಂಚಾಕ್ಷರಿ ಯವರಿಗೆ ಹಿಂದಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.. ಬಂಟ್ವಾಳ ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್ ಲೋಬೋ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹಿಂದಿ ಶಿಕ್ಷಕರಿಗೆ ತೊಂದರೆಯಾಗುವುದಿಲ್ಲ, ಹಿಂದಿ ಶಿಕ್ಷಕರು ಆತಂಕ…

Read More