Author: admin
ಬಂಟ್ವಾಳ: ಸಂಚಯಗಿರಿ ನಾಗರಿಕ ಕ್ರಿಯಾ ಸಮಿತಿಯ ವತಿಯಿಂದ ಗಣರಾಜ್ಯೋತ್ಸವ ದಿನ ಆಚರಿಸಲಾಯಿತು.ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಎಸ್ ವಿ.ಎಸ್ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಬಂಗೇರ ಪ್ರಧಾನ ಭಾಷಣ ಮಾಡಿ ಜಗತ್ತಿನಲ್ಲಿಯೇ ಅತ್ಯಂತ ದೊಡ್ಡದಾದ ಸಂವಿಧಾನವನ್ನು ಭಾರತ ಹೊಂದಿದೆ. ನಮ್ಮದು ಪ್ರಜಾಪ್ರಭುತ್ವ ದೇಶ ಎನ್ನುವುದು ಪ್ರಜೆಗಳಾದ ನಮಗೆಲ್ಲರಿಗೂ ಹೆಮ್ಮೆ ಎಂದು ತಿಳಿಸಿದರು. ನಾಗರಿಕ ಕ್ರಿಯಾ ಸಮಿತಿಯ ಗೌರವಾಧ್ಯಕ್ಷ ನರಸಿಂಹರಾಜ್ ಹೊಳ್ಳ, ಉಪಾಧ್ಯಕ್ಷೆ ಪ್ರಿಯಾಲತಾ, ಕಾರ್ಯದರ್ಶಿ ಶೇಖರ್ ಕುಲಾಲ್ ಉಪಸ್ಥಿತರಿದ್ದರು. ಸದಸ್ಯ ಸುಧಾಕರ ಸಾಲ್ಯಾನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಕೋಶಾಧಿಕಾರಿ ಎ. ದಾಮೋದರ್ ವಂದಿಸಿದರು.
ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿ ಘಟಕದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಸುಸ್ಥಿರ ಭವಿಷ್ಯಕ್ಕಾಗಿ ಯುವ ಜನತೆ ವಿಷಯದ ಬಗ್ಗೆ ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿಸಲಾಯಿತು. ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಸ್ವಾಮಿ ವಿವೇಕಾನಂದರ ಆದರ್ಶ ಹಾಗೂ ಚಿಂತನೆಗಳನ್ನು ಪ್ರಸ್ತುತ ಯುವ ಜನತೆಗೆ ಪರಿಚಯಿಸುವ ಉದ್ದೇಶದಿಂದ ಜೆಸಿಐ ಜೋಡುಮಾರ್ಗ ನೇತ್ರಾವತಿ ಘಟಕದಿಂದ ಪ್ರಾಜೆಕ್ಟ್ ಡೈರೆಕ್ಟರ್ ರಮ್ಯಾ ಸೋಮಯಾಜಿ ಇವರ ನೇತೃತ್ವದಲ್ಲಿ ವಲಯ ತರಬೇತುದಾರರಾದ ಡಾ. ವಿನಾಯಕ್ ಕೆ. ಎಸ್. ತರಬೇತಿಯನ್ನು ನೀಡಿದರು.ಶಾಲೆಯ ಮುಖ್ಯೋಪಾಧ್ಯಾಯಿನಿ ಸೌಜನ್ಯ, ಡಾ. ಕಾಶಿನಾಥ್ ಶಾಸ್ತ್ರಿ, ಸಹಶಿಕ್ಷಕಿ ಸೌಮ್ಯ ಉಪಸ್ಥಿತರಿದ್ದರು.
ಬಂಟ್ವಾಳ: ಕಳೆದ 30 ವರ್ಷಗಳಿಂದ ತೆಂಗಿನ ಮರ ಹಾಗೂ ಅಡಿಕೆಮರ ಏರುವ ಕಾಯಕ ನಿರ್ವಹಿಸುತ್ತಿರುವ ವಲೇರಿಯನ್ ರೋಡ್ರಿಗಸ್ ಅವರಿಗೆ ಜೆಸಿಐ ಬಂಟ್ವಾಳದ ವತಿಯಿಂದ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸೋಮವಾರ ಬಿ.ಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್ ನಲ್ಲಿ ಘಟಕದ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಮಾಸಿಕ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಲಯ ಉಪಾಧ್ಯಕ್ಷ ರಂಜಿತ್ ಎಚ್. ಡಿ. ಓರಿಯಂಟೇಷನ್ ತರಬೇತಿ ನಡೆಸಿಕೊಟ್ಟರು. ಬಳಿಕ ಮಾಸಿಕ ಸಭೆ ನಡೆಯಿತು. ಈ ಸಂದರ್ಭ ನಿಕಟಪೂರ್ವಾಧ್ಯಕ್ಷೆ ರಶ್ಮಿ ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಆಚಾರ್ಯ, ಲೇಡಿ ಜೇಸಿ ಸಂಯೋಜಕಿ ಬಬಿತಾ ಗಣೇಶ್, ಪೂರ್ವಾಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು.
ಬಂಟ್ವಾಳ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಒಲಂಪಿಕ್ ಅಸೋಸಿಯೇಷನ್ ಜಿಲ್ಲಾಡಳಿ ಮಂಗಳೂರು ಹಾಗೂ ಉಡುಪಿ ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಕ್ರೀಡಾಕೂಟ -2025 ಜೂಡೋ ವಿಭಾಗದಲ್ಲಿ ತೇಜ ಜೆ. ಕಂಚಿನ ಪದಕ ಗೆದ್ದುಕೊಂಡಿದ್ದಾರೆ.ಇವರು ಪೊಳಲಿ ಸರ್ವಮಂಗಳ ಸಭಾಂಗಣದಲ್ಲಿ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಇವರಿಂದ ಮಿಕ್ಸೆಡ್ ಮಾರ್ಷಲ್ ಆರ್ಟ್ ತರಬೇತಿಯನ್ನು ಪಡೆಯುತ್ತಿದ್ದಾರೆ. ಪೊಳಲಿ ಸುಬ್ರಾಯ ಕಾರಂತರು ಸಹಕರಿಸಿದ್ದಾರೆ.ಮಿಕ್ಸೆಡ್ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರು ಕಳೆದ ಹಲವಾರು ವರ್ಷಗಳಿಂದ ಪೊಳಲಿ ಸುಮಂಗಳ ಸಭಾಭವನ ಹಾಗೂ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜೂಡೋ, ಟ್ವಿಂಕಾಂಡೋ, ಸ್ಕೇಟಿಂಗ್ ಮೊದಲಾದ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು ಆಸಕ್ತರು ಅವರನ್ನು ಸಂಪರ್ಕಿಸಬಹುದಾಗಿದೆ (9964673040).
ಬಂಟ್ವಾಳ: ಕರ್ನಾಟಕ ಡಾ|| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಹಂಸಿಕಾ ಶೇ.87 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಫರಂಗಿಪೇಟೆ ಸೇವಾಂಜಲಿ ಟ್ರಸ್ಟ್ ನಲ್ಲಿ ನಡೆಯುವ ಭರತನಾಟ್ಯ ತರಗತಿಯ ನೃತ್ಯಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯ , ನಾಟ್ಯರಂಗ ಪುತ್ತೂರು ಇವರ ಶಿಷ್ಯೆ. ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಈಕೆ ನೆತ್ರಕೆರೆ ರಾಜೇಶ್ ಹಾಗೂ ಶೋಭಾ ಇವರ ಪುತ್ರಿ.
ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಎರಡು ದಿನಗಳ ಕಾಲ ಕ್ಷೇತ್ರದ ತಂತ್ರಿಗಳಾದ ನಡ್ವಾಂತಾಡಿ ಶ್ರೀಪಾದ ಪಾಂಗಣ್ಣಯರ ನೇತೃತ್ವದಲ್ಲಿ ನಡೆಯಿತು. ಶನಿವಾರ ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ ವಾಚನ, ದುರ್ಗಾ ನಮಸ್ಕಾರ ಪೂಜೆ, ಮಹಾ ಪೂಜೆ, ಉತ್ಸವ ಬಲಿ, ವಸಂತಕಟ್ಟೆ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಭಾನುವಾರ ಬೆಳಿಗ್ಗೆ ೧೨ ಕಾಯಿ ಗಣಪತಿ ಹೋಮ, ನವಕಲಶ ಪ್ರಧಾನ ಹೋಮ, ಕಲಶಾಭಿಶೇಕ, ಮಹಾಪೂಜೆ, ದರ್ಶನ ಬಲಿ ಉತ್ಸವ, ವಸಂತ ಕಟ್ಟೆಪೂಜೆ, ಬಟ್ಟಲು ಕಾಣಿಕೆ ಪ್ರಸಾದ, ಪಿಲಿಚಾಮುಂಡಿ ದೈವಕ್ಕೆ ಬಿಂಬ ಸಮರ್ಪಣೆ ಪಂಚಪರ್ವ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರುಗಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಸಮಿತಿ, ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.
ಬಂಟ್ವಾಳ: ಇಲ್ಲಿನ ಬಡ್ಡಕಟ್ಟೆ ರಾಯರ ಚಾವಡಿಯ ಶ್ರೀ ಪಂಜುರ್ಲಿ ಪಿಲಿಚಾಮುಂಡಿ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಜ.24 ಮತ್ತು 25ರಂದು ನಡೆಯಲಿದೆ.ಜ.24 ಶುಕ್ರವಾರ ಬೆಳಿಗ್ಗೆ ಗಣಹೋಮ, ನೇಮೋತ್ಸವದ ಮುಹೂರ್ತ, ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪೂಜೆ, ಶ್ರೀ ನಾಗಸನ್ನಿಧಿಯಲ್ಲಿ ನಾಗತಂಬಿಲ, ಮಧ್ಯಾಹ್ನ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮಹಾಪೂಜೆ, ಅಶ್ವತ್ಥ ಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಅಶ್ವತ್ಥ ನಾರಾಯಣ ಕಟ್ಟೆ ಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಪ್ರಸಾದ ನಡೆಯಲಿದೆ.ಸಂಜೆ 4ಕ್ಕೆ ದೈವಸ್ಥಾನದಲ್ಲಿ ನವಕ ಪ್ರಧಾನ ಹೋಮ, ರಾತ್ರಿ ಶ್ರೀ ಮುಖ್ಯಪ್ರಾಣ ದೇವರ ಸನ್ನೀದಿಯಲ್ಲಿ ರಂಗಪೂಜೆ, ದೈವಸ್ಥಾನದಿಂದ ನೇಮೋತ್ಸವ ಗದ್ದೆಗೆ ಭಂಡಾರ ಹೊರಡುವುದು, ರಾತ್ರ್ರಿ 9.30ಕ್ಕೆ ಶ್ರೀ ಪಿಲಿಚಾಮುಂಡಿ ಕಲ್ಕುಡ ದೈವಗಳಿಗೆ ನೇಮೋತ್ಸವ, 12.30ಕ್ಕೆ ಶ್ರೀ ಪಿಲಿಚಾಮುಂಡಿ ಕಲ್ಕುಡ ದೈವಗಳ ವಲಸರಿ ನಡೆಯಲಿದೆ.ಜ.25ಶನಿವಾರ ಸಂಜೆ 5.30ಕ್ಕೆ ಶ್ರೀ ಪಂಜುರ್ಲಿ ದೈವಕ್ಕೆ ಎಣ್ಣೆ ಬೂಳ್ಯ, ಗಂಟೆ 9ಕ್ಕೆ ಶ್ರೀ ಪಂಜುರ್ಲಿ-ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ನಡೆಯಲಿದೆ.
ಬಂಟ್ವಾಳ: ತ್ಯಾಗ ಮತ್ತು ಸೇವೆ ಭಾರತ ದೇಶದ ಮೌಲ್ಯ ಮತ್ತು ಆದರ್ಶಗಳಾಗಿದೆ.ದತ್ತನಗರ ಎಂದರೆ ಭಗವಂತನು ಇತ್ತ ನಗರ ಎಂದರ್ಥ. ಅಹಂಕಾರ, ಮಮಕಾರ ಇದ್ದಲ್ಲಿ ಭಗವಂತನಿರುವುದಿಲ್ಲ. ದತ್ತನಗರದಲ್ಲಿ ನಾನು ಎಂಬ ಭಾವ ಇಲ್ಲದೇ ಇರುವುದರಿಂದ ಭಗವಂತ ಇಲ್ಲಿ ನೆಲೆಸಿದ್ದಾನೆ ಎಂದು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.ಅವರು ಪುದು ಗ್ರಾಮದ ಸುಜೀರು ದತ್ತನಗರ ಶ್ರೀ ವೀರ ಹನುಮಾನ್ ಮಂದಿರದ ೨೩ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಭಾರತದ ಸೌಂದರ್ಯ ಆಧ್ಯಾತ್ಮಿಕತೆಯಲ್ಲಿ ಅಡಗಿದೆ. ಆಧ್ಯಾತ್ಮ ಇದ್ದಲ್ಲಿ ಸಾಮರಸ್ಯದ ಬದುಕು ಇದೆ ಎಂದರು.ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿಭಜನೆಯ ಮುಖಾಂತರ ದೇವರನ್ನು ಕಾಣಲು ಸಾಧ್ಯವಿದೆ. ಭಜನೆ ಇದ್ದಲ್ಲಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಇಲ್ಲಿ ೨೩ ವರ್ಷದಿಂದ ಭಜನೆ ನಡೆಯುತಿದ್ದು ಭಗವಂತನ ಸಾಕ್ಷತ್ಕಾರವಾಗುವುದರ ಜೊತೆಗೆ ಹಿಂದೂ ಸಮಾಜ ಸಂಘಟಿತವಾಗಿದೆ ಎಂದರು.ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಕೊಡ್ಮಾಣ್ ಜಗತ್ತಿಗೆ ಜ್ಞಾನದ ಬೆಳಕು ನೀಡಿರುವುದು…
ಬಂಟ್ವಾಳ: ಪುದು ಗ್ರಾಮದ ಸುಜೀರು ಶ್ರೀ ವೀರ ಹನುಮಾನ್ ಮಂದಿರದ 23ನೇ ವಾರ್ಷಿಕೋತ್ಸವ ಜ.15ರಂದು ನಡೆಯಲಿದೆ.ಬೆಳಿಗ್ಗೆ ಪೊಳಲಿ ಗಿರಿಪ್ರಕಾಶ್ ತಂತ್ರಿ ನೇತೃತ್ವದಲ್ಲಿ ಗಣಹೋಮ, ಪಂಚಾಮೃತ ಅಭಿಷೇಕ, ಸಾಮೂಹಿಕ ಸತ್ಯನಾರಾಯಣ ಪೂಜೆ ಮಹಾಪೂಜೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಸಂಸದ ಬೃಜೇಶ್ ಚೌಟ, ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಕೊಡ್ಮಾಣ್, ಬಿಜೆಪಿ ಮಾಜಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಗುತ್ತಿಗೆದಾರ ಮನೋಹರ್ ಡಿ ದೇವಾಡಿಗ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ವಕೀಲೆ ಸುಚಿತ್ರಾ ಅವಿನಾಶ್, ಪುದು ಗ್ರಾ.ಪಂ. ಸದಸ್ಯ ವಿಶು ಕುಮಾರ್ ಭಾಗವಹಿಸಲಿದ್ದಾರೆ.ಮಧ್ಯಾಹ್ನ 1 ಕ್ಕೆ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ಭಜನೆ ಪ್ರಾರಂಭಗೊಂಡು ರಾತ್ರಿ 8.30ಕ್ಕೆ ಮಂಗಳಾರತಿ , ಪ್ರಸಾದ ವಿತರಣೆ ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ.
ಬಂಟ್ವಾಳ: ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಇತ್ತೀಚೆಗೆ ತಾಲೂಕಿನ 10 ಕಡೆಗಳಲ್ಲಿ ನೋಂದಾವಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಯಶಸ್ವಿಯಾಗಿದ್ದು ರಾಜ್ಯಮಟ್ಟದಲ್ಲಿ ಬಂಟ್ವಾಳ ತಾಲೂಕು ಗುರುತಿಸಿಕೊಳ್ಳುವಂತಾಗಿದೆ ಎಂದು ಬಂಟ್ವಾಳ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ತಿಳಿಸಿದ್ದಾರೆ.ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿ 576 ಫಲಾನುಭವಿಗಳು ಶಿಬಿರದಲ್ಲಿ ಭಾಗಿಯಾಗಿದ್ದು 84 ಹೊಸ ಅರ್ಜಿಗಳು ಬಂದಿವೆ. ಬಂಟ್ವಾಳ ತಾಲೂಕಿನಲ್ಲಿ 2024ರ ಡಿಸೆಂಬರ್ ಅಂತ್ಯದವರೆಗೆ 70093ಮಂದಿ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಗೆ ನೊಂದಾಯಿಸಿದ್ದು ಇವರಲ್ಲಿ 67388 ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಮೊತ್ತ ಜಮೆಯಾಗಿದೆ. ಅನ್ನಭಾಗ್ಯ ಯೋಜನೆಯಡಿ ಶಿಬಿರದಲ್ಲಿ ಒಟ್ಟು 795 ಅರ್ಜಿಗಳು ಬಂದಿದ್ದು 538ಅರ್ಜಿಗಳು ವಿಲೇವಾರಿಯಾಗಿದ್ದು 256 ಅರ್ಜಿಗಳು ತನಿಖಾ ಹಂತದಲ್ಲಿದೆ ಎಂದು ತಿಳಿಸಿದರು. ಬಂಟ್ವಾಳ ತಾಲೂಕಿನಲ್ಲಿ 2023-24ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮ ಪೂರೈಸಿರುವ ನಿರಿದ್ಯೋಗಿ ಯುವಕ ಯುವತಿಯರಿಗೆ ಜ.16ರಂದು ನೋಂದಾವಣೆ ಪ್ರಕ್ರಿಯೆಯನ್ನು ತಾಲೂಕು ಪಂಚಾಯತಿ ಎಸ್‌ಜೆಎಸ್‌ಆರ್‌ವೈ ಸಭಾಂಗಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು ನಿರುದ್ಯೋಗಿ ಯುವಕ…








