Author: admin
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುಡುವೆಟ್ಟು ( 42 ) ನ. 19 ರಂದು ನಿಧನರಾದರು .ಪುದುವೆಟ್ಟು ನಿವಾಸಿನಾರಾಯಣ ರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನ.19ರಂದು ಕೊನೆಯುಸಿರೆಳೆದಿದ್ದಾರೆ. ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಭುವನೇಂದ್ರ ಪುದುವೆಟ್ಟು ಅವರು ಕೆಲವು ಸಮಯಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಅವರನ್ನು ಅಗಲಿದ್ದಾರೆ. ಭುವನೇಂದ್ರ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಿಂದ ಪುದುವೆಟ್ಟು…
ಮಂಗಳೂರು : ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಝಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಮತ್ತು ಸಮನ್ವಯ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ವತಿಯಿಂದ ತುಂಬೆ ಪದವಿಪೂರ್ವ ಕಾಲೇಜು ತುಂಬೆಯಲ್ಲಿ ಭಾನುವಾರ ನಡೆಯಿತು. ಸಮಾರಂಭದಲ್ಲಿ ಪ್ರಧಾನ ಭಾಷಣಗಾರರಾಗಿ ಭಾಗವಹಿಸಿದ್ದ ಅಡ್ಯಾರಿನಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಡಾ.ಮುಸ್ಥಾಫ ಬಸ್ತಿಕೋಡಿ,ಮೌಲಾನಾ ಅಬುಲ್ ಕಲಾಂ ಆಝಾದರು , ಪ್ರಾಥಮಿಕ ಶಿಕ್ಷಣವು ಮಗುವಿನ ಹಕ್ಕಾಗಿದ್ದು ಅದು ಎಲ್ಲೆಡೆ ಮತ್ತು ಎಲ್ಲರಿಗೂ ಸಿಗುವಂತಾಗಬೇಕು ಎಂದು ಸ್ವಾತಂತ್ರ್ಯ ಪೂರ್ವದಲ್ಲೇಪ್ರತಿಪಾದನೆ ಮಾಡಿ ಅದಕ್ಕಾಗಿ ದೇಶದಲ್ಲಿ ಬುನಾದಿ ಹಾಕಿದ ಮಹಾನ್ ಮೇಧಾವಿಯಾಗಿದ್ದರು ಎಂದು ಹೇಳಿದರು. ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು ಎಚ್ ಮಾತನಾಡಿ ಅಕಾಡೆಮಿಯು ಸಾಹಿತ್ಯ ಮತ್ತು ಸಂಸ್ಕತಿಯ ಬೆಳವಣಿಗೆಗೆ ಪೂರಕವಾದ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆಗೆ ಬದ್ದವಾಗಿದ್ದು ಶಾಶ್ವತವಾದ ಕಛೇರಿ ಮತ್ತು ವಸ್ತು ಸಂಗ್ರಹಾಲಯ…
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆಯ ಆಶ್ರಯದಲ್ಲಿ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊಡಂಕಾಪು,ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಹರಿಪ್ರಿಯಾ ಇವರು ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆಶಾಲಾ ಸಂಚಾಲಕರಾದ ಅತೀ ವಂದನೀಯ ಗುರು ಫಾ.ವಲೇರಿಯನ್ ಡಿಸೋಜಾ, ಶಾಲಾ ಮುಖ್ಯೋಪಾಧ್ಯಾಯರಾದ ಅತೀ ವಂದನೀಯ ಗುರು ಮೆಲ್ವಿನ್ ಲೋಬೋ ಶಿಕ್ಷಕ ಮತ್ತು ರಕ್ಷಕ ಸಂಘದ ಸಮಿತಿಯ ಸದಸ್ಯರು, ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಬಂಟ್ವಾಳ: ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜ್ ತುಂಬೆ ಇಲ್ಲಿ ಪ್ರಥಮ ವರ್ಷದ ಅನಸ್ತೇಷಿಯಾ ಆಪರೇಷನ್ ಥಿಯೇಟರ್ ಟೆಕ್ನೋಲಜಿ (ಬಿ ಎಸ್ಸಿ ಎಟಿ- ಓಟಿ ) ಇದರ ಉದ್ಘಾಟನಾ ಸಮಾರಂಭ ಕಾಲೇಜಿನ ಪ್ಲೋರೆನ್ಸ್ ನೈಟಿಂಗೇಲ್ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ ನ ನಿರ್ದೇಶಕ ರೆವರೆಂಡ್ ಫಾದರ್ ರಿಚಾರ್ಡ್ ಎ. ಕುವೆಲ್ಯೋ ಉದ್ಘಾಟಿಸಿದರು. ಅವರು ಮಾತನಾಡಿ ಫಾದರ್ ಮುಲ್ಲರ್ ಕಾಲೇಜ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಮೂಲಕ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಅನೇಕ ಅವಕಾಶಗಳನ್ನು ಒದಗಿಸಿಕೊಡಲಾಗುತ್ತಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದು ಕೊಳ್ಳುವಂತೆ ತಿಳಿಸಿದರು.ಫಾದರ್ ಮುಲ್ಲರ್ ಕಾಲೇಜ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಮಂಗಳೂರು ಇಲ್ಲಿನ ಪ್ರಾಂಶುಪಾಲೆ ಡಾ. ಹಿಲ್ಡಾ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಂಸ್ಥೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನೇಕ ಹೊಸ ಕೋರ್ಸ್ ಗಳನ್ನು ಪರಿಚಯಿಸುತ್ತಿದ್ದುಮುಂದಿನ ದಿನಗಳಲ್ಲಿ ಇದನ್ನು ಅಭ್ಯಸುವ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ ಎಂದು ತಿಳಿಸಿದರು. ಕಠಿಣ ಪರಿಶ್ರಮ ಇಲ್ಲದೆ ಯಶಸ್ಸು ಸಿಗುವುದಿಲ್ಲ. 4…
ಬಂಟ್ವಾಳ: ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಿಬಿರಕ್ಕೆ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಪೋರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಮಹಾಬಲೇಶ್ ಶೆಟ್ಟಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಎಸೈ ಹರೀಶ್ ಎಂ.ಆರ್. ಪುದು ಗ್ರಾಮ ಪಂಚಾಯತಿ ಅಧ್ಯಕ್ಷೆ ರಶೀದಾ ಬಾನು ಸೇವಾಂಜಲಿ ಪ್ರತಿಷ್ಠಾನದ ಅಧ್ಯಕ್ಷ ವಜ್ರನಾಭ ಶೆಟ್ಟಿ, ಫರಂಗಿಪೇಟೆ ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಜಯರಾಮ ಶೇಖ, ರೋಟರಿ ಕ್ಲಬ್ ಫರಂಗಿಪೇಟೆ ಅಧ್ಯಕ್ಷ ಹಾಗೂ ಕಾರ್ಯಕ್ರಮ ಸಂಯೋಜಕ ಅರ್ಜುನ್ ಪೂಂಜ, ಎನ್ ಐಪಿ ಟಿ ಪ್ರಾಂಶುಪಾಲ ಡಾ.ಧನೇಶ್ ಕುಮಾರ್ ಕೆ.ಯು., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತ, ಎನ್ ಎಸ್ ಎಸ್ ವಿದ್ಯಾರ್ಥಿ ಕಾರ್ಯದರ್ಶಿ ಸಂಕೀರ್ತ್ ಸನೀಶ್ , ಡಾ. ಮಹಿಮಾ ಬಂಜನ್…
ಬಂಟ್ವಾಳ: ಸಿಡಿಲು ಬಡಿದು ಬಾಲಕ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಮೃತ ಬಾಲಕ.ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು. ಸುಭೋದ್ ಅವರು ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿದ್ದ ಆತನನ್ನು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೆ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ ಕ್ರೀಡಾಕೂಟದಲ್ಲಿ ಮುಕ್ತ ವಿಭಾಗದ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಪೊಳಲಿ ಸರಕಾರಿ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಯಶ್ವಿನಿ ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ಉಚಿತ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲೆಯಾಡಳಿತ ಮಂಡಳಿಯ ಸುಬ್ರಾಯ ಕಾರಂತ್, ಪೊಳಲಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಸಹಕರಿಸಿದ್ದಾರೆ. ರಾಜೇಶ್ ಬ್ರಹ್ಮರಕೂಟ್ಲು ಅವರು ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಮಾರ್ಷಲ್ ಆರ್ಟ್ ತರಬೇತಿಯನ್ನು ನೀಡುತ್ತಿದ್ದು ಆಸಕ್ತರು 9964673040 ಸಂಪರ್ಕಿಸ ಬಹುದಾಗಿದೆ
ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ ಕ್ರೀಡಾಕೂಟದಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹಂಸಿಕಾ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಗೆದ್ದುಕೊಂಡಿದ್ದಾರೆ. ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲೆಯಾಡಳಿತ ಮಂಡಳಿಯ ಸುಬ್ರಾಯ ಕಾರಂತ್, ಪೊಳಲಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಸಹಕರಿಸಿದ್ದಾರೆ.
ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ 6ನೇ ತರಗತಿ ವಿದ್ಯಾಥಿನಿ ಅನನ್ಯ ಆರ್. ಕಂಚಿನ ಪದಕದೊಂದಿಗೆ ತೃತೀಯ ಸ್ಥಾನವನ್ನು ಗೆದ್ದುಕೊಂಡಿದ್ದಾರೆ. ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲೆಯಾಡಳಿತ ಮಂಡಳಿಯ ಸುಬ್ರಾಯ ಕಾರಂತ್ ಸಹಕರಿಸಿದ್ದಾರೆ.
ಬಂಟ್ವಾಳ: ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲು ಉದ್ದೇಶಿಸಿರುವ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ‘ಎಳೆಯರ ಗೆಳೆಯ ಮುಳಿಯ’ ಎಂದೇ ಪ್ರಸಿದ್ಧರಾಗಿರುವ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆಗೊಳಿಸಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಘೋಷಿಸಿದ್ದಾರೆ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಬಂಟ್ವಾಳ ತಾಲೂಕಿನ ಅಳಿಕೆ ಸಮೀಪ ಮುಳಿಯದಲ್ಲಿ ವಿಶ್ರಾಂತ ಜೀವನ ನಡೆಸುತ್ತಿರುವ 72ರ ಹರೆಯದ ನಿವೃತ್ತ ಅಧ್ಯಾಪಕ ಮುಳಿಯ ಶಂಕರ ಭಟ್ ಅವರು ಮಕ್ಕಳ ಸಾಹಿತ್ಯದಿಂದ ತೊಡಗಿ ಆಧ್ಯಾತ್ಮ, ಧಾರ್ಮಿಕ ಸಹಿತ ವೈವಿಧ್ಯಮಯ ಸಾಹಿತ್ಯ ರಚನೆಗಳನ್ನು ಮಾಡಿದ್ದು, ಸುಮಾರು 19ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. ಪತ್ರಕರ್ತರಾಗಿ, ಗಮಕಿಯಾಗಿಯೂ ತೊಡಗಿಸಿಕೊಂಡಿದ್ದ ಅವರ ಕೃತಿ ಕೇರಳ ಶಾಲಾ ಪಠ್ಯದಲ್ಲಿ ಸೇರ್ಪಡೆಯಾಗಿದೆ. 2002ರಲ್ಲಿ ಪುತ್ತೂರಿನಲ್ಲಿ ನಡೆದ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ಅವರು, ಒಡಿಯೂರಿನಲ್ಲಿ 2006ರಲ್ಲಿ ನಡೆದ ವಿಟ್ಲ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದರು. 2021ರಲ್ಲಿ ಮಂಚಿಯಲ್ಲಿ…








