Author: admin
ಬಂಟ್ವಾಳ: ಜೋಡುಮಾರ್ಗ ನೇತ್ರಾವತಿ ಜೇಸಿಯ ಮಾಜಿ ಅಧ್ಯಕ್ಷ, ಬಿ.ಸಿ.ರೋಡಿನ ಜಿ.ಎಸ್.ಬಿ.ಸಮಾಜ ಸೇವಾ ಸಮಿತಿಯ ಮಾಜಿ ಕಾರ್ಯದರ್ಶಿ, ಕಲಾವಿದ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದ ಎಂ.ಸುಬ್ರಹ್ಮಣ್ಯ ಪೈ (43) ಕೆಲಕಾಲದ ಅಸೌಖ್ಯದ ಬಳಿಕ ಬುಧವಾರ (ಸೆ.29) ರಾತ್ರಿ ನಿಧನ ಹೊಂದಿದ್ದಾರೆ. ಶಿಕ್ಷಕಿಯಾಗಿರುವ ಪತ್ನಿ ಮತ್ತು ಬಂಧುವರ್ಗ ಹಾಗೂ ಅಪಾರ ಸ್ನೇಹಿತ ಬಳಗವನ್ನು ಅವರು ಅಗಲಿದ್ದಾರೆ. ತುಳು, ಕೊಂಕಣಿ ಭಾಷಾ ನಾಟಕ, ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಉತ್ತಮ ನಿರೂಪಕರೂ ಆಗಿದ್ದರು. ಮೃತರ ಅಂತಿಮ ವಿಧಿ ವಿಧಾನಗಳು 30.07.2026 ಗುರುವಾರ ಸಂಜೆ ಗಂಟೆ 5.30 ಕ್ಕೆ ಬಿ. ಸಿ. ರೋಡ್ ನಲ್ಲಿರುವ ಸ್ವಗೃಹದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಮ್ಮಾಭಿಮಾನದ ಅಭಿನಂದನೆ ಕಾರ್ಯಕ್ರಮ ಜು.11 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಅರಮನೆ ಮೈದಾನ ಮೇಕ್ರಿ ಸರ್ಕಲ್ ಬಳಿ ಗೇಟ್ . 2 ರ ತ್ರಿಪುರವಾಸಿನಿಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದ ಮಹಾಸ್ವಾಮಿಜೀ, ತುಮಕೂರು ಸಿದ್ದಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ದಿವ್ಯಸಾನಿಧ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಅಭಿನಂದನೆ ಸ್ವೀಕರಿಸಲಿರುವರು. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಉಪಸ್ಥಿತರಿರುವರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅಧ್ಯಕ್ಷತೆ ವಹಿಸುವರು. ಈ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರು, ಹಾಗೂ ಕಾರ್ಯದರ್ಶಿ ಪ್ರಕಟಣೆಯ ಮೂಲಕ…
ಬಂಟ್ವಾಳ: ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನದ ಅಂಗವಾಗಿ ಹಾಗೂ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಬೆಳ್ಳಿ ಹಬ್ಬದ ಪ್ರಯುಕ್ತ ಬೋಳಿಯಾರು ಗ್ರಾಮದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣಾ ಶಿಬಿರವು ಸೋಮವಾರ ನಡೆಯಿತು. ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಒಡಿಯೂರು, ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು, ಶ್ರೀ ಗ್ರಾಮವಿಕಾಸ ಯೋಜನೆ ಬೋಳಿಯಾರು ಘಟ ಸಮಿತಿ ಕಲ್ಲಡ್ಕ ವಲಯ, ಒಡಿಯೂರು ಶ್ರೀ ಗುರುದೇವ ಭಜನಾ ಮಂದಿರ ಬೋಳಿಯಾರು, ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಬೋಳಿಯಾರು, ಯುವ ಬಳಗ (ರಿ) ಬೋಳಿಯಾರು, ಶ್ರೀ ಗುರುದೇವ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ) ಒಡಿಯೂರು, ಒನ್ ಸೈಟ್ ಎಸ್ಸಿಲಾರ್ ಲಕ್ಸೋಟಿಕ್ ಫೌಂಡೇಶನ್ ಬೆಂಗಳೂರು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಇವುಗಳ ಸಹಯೋಗದಲ್ಲಿ ಕಾರ್ಯಕ್ರಮಬಆಯೋಜಿಸಲಾಗಿತ್ತು. ಬೋಳಿಯಾರು ಮಜಿ ಮಹಾಮ್ಮಾಯಿ ದೇವಸ್ಥಾನದ ಅರ್ಚಕ ಮನೋಹರ್ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.…
ಬಂಟ್ವಾಳ: ಮಂಚಿ ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಸಭೆ ಮಂಚಿ ಕುಕ್ಕಾಜೆಯಲ್ಲಿರುವ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಸಂಘವು ವರದಿ ಸಾಲಿನಲ್ಲಿ 2.10 ಕೋಟಿ ರೂ. ವ್ಯವಹಾರ ನಡೆಸಿ 11,06,860 ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ.20 ಡಿವಿಡೆಂಡ್ ಘೋಷಿಸಲಾಯಿತು. ಸಂಘದ ಅಧ್ಯಕ್ಷ ಕೆ. ನಿಶ್ಚಲ್ ಜಿ.ಶೆಟ್ಟಿ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದ ಸದಸ್ಯರು ಹೈನುಗಾರಿಕೆಯ ಮೂಲಕ ಹೇಗೆ ಲಾಭ ಪಡೆಯಬಹುದು, ಈ ವೃತ್ತಿಯನ್ನು ಲಾಭದಾಯಕವಾಗಿ ಹೇಗೆ ವಿಸ್ತರಣೆ ಮಾಡಿಕೊಳ್ಳಬಹುದು ಎನ್ನುವ ಬಗ್ಗೆ ಚಿಂತನಶೀಲರಾಗಬೇಕು ಈ ಮೂಲಕ ಸಹಕಾರ ಕ್ಷೇತ್ರದಲ್ಲಿ ಎತ್ತರಕ್ಕೇರೋಣ ಎಂದು ಆಶಯ ವ್ಯಕ್ತಪಡಿಸಿದರು. ಸಂಘದ ಅಭಿವೃದ್ದಿಗೆ ಸದಸ್ಯರೆಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು. ಸಂಘದ ಉಪಾಧ್ಯಕ್ಷ ಕೇಶವ ರಾವ್ ಸ್ವಾಗತಿಸಿ ಲೆಕ್ಕಪತ್ರ ಮಂಡಿಸಿದರು ಸಂಘದ ಕಾರ್ಯಚಟುವಟಿಕೆಯ ಬಗ್ಗೆ ತಿಳಿಸಿದರು. ದ.ಕ. ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಪ್ರಪುಲ್ಲಾ ಪಿ.ಎ. ಹಾಲು ಒಕ್ಕೂಟದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ…
ಬಿ.ಸಿ.ರೋಡ್‌ನ ಶ್ರೀ ಸಾಯಿ ಕಿಡ್‌ಜೋನ್ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಹಾಗೂ ಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ಸಹಯೋಗದೊಂದಿಗೆ ಶಾಲೆಯಲ್ಲಿ ಸಾಂಪ್ರದಾಯಿಕ ಆಟಿದ ಕೂಟ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ತುಳು ನಿರೂಪಕರಾದ ಶ್ರೀ ದಿನೇಶ್ ಸುವರ್ಣ ರಾಯಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ, ಆಟಿ ತಿಂಗಳ ಮಹತ್ವ, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷರಾದ ಶ್ರೀ ರವಿಚಂದ್ರ ಬಂಟ್ವಾಳ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ವೀಕ್ಷಾ ನಿಶಾಂತ್, ಉಪಾಧ್ಯಕ್ಷ ಶ್ರೀ ಜಿತೇಶ್ ಎನ್., ಖಜಾಂಚಿ ಶ್ರೀಮತಿ ಗಾಯತ್ರಿ, ನಿಕಟ ಪೂರ್ವ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಆರತಿ ಅಮೀನ್ , ಹಾಗೂ ಶ್ರೀ ಆಶ್ರಿತ್ ಅಮೀನ್ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಶ್ರೀ ಐತಪ್ಪ ಪೂಜಾರಿ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಹಾಗೂ ಭದ್ರಾ ಗ್ಯಾಸ್ ಏಜನ್ಸಿ ಬಂಟ್ವಾಳ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನ ಆಯ್ದ ಅರ್ಹ 58 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಭಾನುವಾರ ನಡೆಯಿತು. ರೋಟರಿ ಕ್ಲಬ್ ಬಂಟ್ವಾಳದ ಐವತ್ತೆಂಟನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದಕ್ಕೆ ಅರ್ಜುನ್ ಭಂಡಾರ್ಕಾರ್ ಮತ್ತು ಮಂಜುನಾಥ ಆಚಾರ್ಯ ಸಹಯೋಗ ನೀಡಿದ್ದಾರೆ ಎಂದು ಈ ಸಂದರ್ಭ ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ರವಿಚಂದ್ರ ಬಂಟ್ವಾಳ ಹೇಳಿದರು. ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್ ಶುಭ ಹಾರೈಸಿ ಮಾತನಾಡಿ, ಹಿರಿಯರು, ಶಿಕ್ಷಕರು, ಸೈನಿಕರನ್ನು ಗೌರವಿಸಿ. ಸಮಾಜಕ್ಕೆ ಒಳಿತನ್ನು ಮಾಡಿ, ಮುಂಬರುವ ದಿನಗಳಲ್ಲಿ ತಾವು ಪಡೆದುದಕ್ಕಿಂತ ಹತ್ತು ಪಟ್ಟು ಹೆಚ್ಚು ಮೊತ್ತವನ್ನು ಸಮಾಜಕ್ಕೆ ನೀಡುವಂತಾಗಿ ಎಂದು ಆಶಿಸಿದರು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕಂಫರ್ಟ್ ಝೋನ್ ನಿಂದ ಹೊರಬರಲು ಪ್ರಯತ್ನಿಸಬೇಕು.…
ರೋಟರಿ ಕ್ಲಬ್ ಬಂಟ್ವಾಳ ಇದರ ಇಂಟರಾಕ್ಟ್ ಕ್ಲಬ್ ಗಳ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ರೋಟರಿ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲಾ ಇಂಟರಾಕ್ಟ್ ಸಂಯೋಜಕ ಡಾ. ಜಯಕುಮಾರ್ ಶೆಟ್ಟಿ ಮಾತನಾಡಿ ಇಂಟರಾಕ್ಟ್ ಕ್ಲಬ್ ವಿದ್ಯಾರ್ಥಿ ದೆಸೆಯಲ್ಲಿ ಸೇವಾ ಮನೋಭಾವವನ್ನು ಹೆಚ್ಚಿಸುತ್ತದೆ. ನಾಯಕತ್ವದ ಜೊತೆಗೆ ವ್ಯಕ್ತಿತ್ವ ನಿರ್ಮಾಣ ಮಾಡುತ್ತದೆ. ಸಂವಹನ ಕಲೆಯನ್ನು ಕಲಿಸುತ್ತದೆ. ಇಂಟರಾಕ್ಟ್ ಕೇವಲ ಮೀಟಿಂಗ್ ಮಾಡಲು ಇರುವ ಕ್ಲಬ್ ಅಲ್ಲ ಬದಲಾಗಿ ನಮ್ಮ ಯೋಚನೆಗಳನ್ನು ವಿಶಾಲ ಗೊಳಿಸಲು, ನಮ್ಮ ಕೈಗಳನ್ನು ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಇರುವ ವೇದಿಕೆ ಎಂದು ಅಭಿಪ್ರಾಯ ಪಟ್ಟರು. ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್ ತಾಲೂಕಿನ 13 ಶಾಲೆಗಳ ಇಂಟರಾಕ್ಟ್ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಪ್ರತಿಜ್ಞಾವಿಧಿ ಭೋದಿಸಿದರು. ಅವರು ಮಾತನಾಡಿ ಸಣ್ಣ ಸಣ್ಣ ಯೋಜನೆಗಳ ಮೂಲಕ ಉತ್ತಮವಾದ ಕೆಲಸವನ್ನು ಮಾಡಲು ಸಾಧ್ಯವಿದೆ. ಅರ್ಪಣಾ ಮನೋಭಾವ ಇಲ್ಲದೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ. ವಿದ್ಯಾರ್ಥಿ ದೆಸೆಯಲ್ಲಿ ಸಕರಾತ್ಮಕ ಚಿಂತನೆಯೊಂದಿಗೆ ಮುನ್ನಡೆದಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ…
ಲಯನ್ಸ್ ಕ್ಲಬ್ ಬಂಟ್ವಾಳ ಹಾಗೂ ಲಿಯೋ ಕ್ಲಬ್ ಬಂಟ್ವಾಳ ಗೋಲ್ಡ್ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳ ಹಾಗೂ ಲಿಯೋ ಕ್ಲಬ್ ಬಂಟ್ವಾಳ ಗೋಲ್ಡ್ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ “ಕಲ್ಪತರು” ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ವಿಜ್ರಂಭಣೆಯಿಂದ ನಡೆಯಿತು. ಲಯನ್ಸ್ ಜಿಲ್ಲಾ ಪ್ರಥಮ ಉಪ ರಾಜ್ಯಪಾಲ ಗೋವರ್ಧನ ಕೆ.ಶೆಟ್ಟಿ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ಮಾತನಾಡಿ ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ಪ್ರಥಮ ಭಾರಿಗೆ ಸ್ತ್ರೀ ಶಕ್ತಿ ಅಧಿಕಾರದ ಗದ್ದುಗೆಯನ್ನು ಹಿಡಿದಿದೆ, ಎಲ್ಲರ ಸಹಕಾರ ಮಾರ್ಗದರ್ಶನದಿಂದ ಈ ತಂಡ ಜಿಲ್ಲೆಯಲ್ಲಿ ಉತ್ತಮ ಸ್ಥಾನವನ್ನು ಗಳಿಸಲಿದೆ ಎಂದರು. ಬಳಿಕ ಪದಾಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ಹಸ್ತಾಂತರಿಸಿದರು. ನೂತನ ಅಧ್ಯಕ್ಷರಾಗಿ ಚಿತ್ರ ಜೆ.ಎಡಪಡಿತ್ತಾಯ, ಕಾರ್ಯದರ್ಶಿಯಾಗಿ ಜಯಂತಿ ಮುಕುಂದ ಪ್ರಭು, ಕೋಶಾಧಿಕಾರಿಯಾಗಿ ಸುಮ ಸುನೀಲ್ ಹಾಗೂ ಇತರ ಪದಾಧಿಕಾರಿಗಳು, ಲಿಯೋ ಕ್ಲಬ್ ಬಂಟ್ವಾಳ ಗೋಲ್ಡ್ ನ ಅಧ್ಯಕ್ಷೆಯಾಗಿ ಶಿಯಾಂಕ ಆಚಾರ್ಯ, ಕಾರ್ಯದರ್ಶಿಯಾಗಿ ಸ್ಪಟಿಕಾ ಎಸ್. ಆಚಾರ್ಯ, ಕೋಶಾಧಿಕಾರಿಯಾಗಿ ಧ್ರುವಿ ಆರ್. ಕಾರಂತ್ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ನೂತನ ಸದಸ್ಯರನ್ನು ಬಂಟ್ವಾಳ ಕ್ಲಬ್ ಗೆ ಸೇರಿಸಿಕೊಳ್ಳಲಾಯಿತು. ನೂತನ…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ನೂತನ ಸಾಲಿನ ಅಧ್ಯಕ್ಷ ಹಂಝ ಬಸ್ತಿಕೋಡಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಬಿ.ಎ.ಸೋಮಯಾಜಿ ಮೆಮೊರಿಯಲ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಪದಗ್ರಹಣ ಅಧಿಕಾರಿ, ಪೂರ್ವ ಜಿಲ್ಲಾ ಗವರ್ನರ್ ವ ಎಚ್. ಆರ್. ಕೇಶವ್ ಮಾತನಾಡಿ ಹಲವು ಸಂಘಟನೆಗಳಲ್ಲಿ ತೊಡಗಿಸಿಕೊಂಡು ಅನುಭವಿಯಾಗಿರುವ ಹಂಝ ಬಸ್ತಿಕೋಡಿಯವರು ಉತ್ತಮ ಕಾರ್ಯ ನಿರ್ವಹಿಸುತ್ತಾರೆ ಎನ್ನುವ ಭರವಸೆ ಇದೆ. ರೋಟರಿ ಸಂಸ್ಥೆ ಜಾತ್ಯಾತೀತ, ಪಕ್ಷತೀತ, ಸೀಮಾತೀತ ಸಂಘಟನೆಯಾಗಿದ್ದು ನಮ್ಮ ಸೇವೆಯನ್ನು ಸಮಾಜ ಗುರುತಿಸಿದಾಗ ರೋಟೆರಿಯನ್ ಆಗಿರುವುದಕ್ಕೆ ಸಾರ್ಥಕ ಎಂದರು. ಮುಖ್ಯ ಅತಿಥಿ ಹಿದಾಯ ಫೌಂಡೇಷನ್ ಅಧ್ಯಕ್ಷ ಮೊಹಮ್ಮದ್ ಹನೀಪ್ ಮಾತನಾಡಿ ಸೌಮ್ಯ, ಸರಳತೆ, ಮುಗ್ದತೆಯ ವ್ಯಕ್ತಿತ್ವ ಹೊಂದಿರುವ ಹಂಝ ಬಸ್ತಿಕೋಡಿ ರೋಟರಿಗೊಂದು ಆಸ್ತಿ. ಬಂಟ್ವಾಳ ಆಸ್ಪತ್ರೆಯ ರೋಗಿಗಳಿಗೆ ಉಚಿತ ಆಹಾರ ಕೊಡುವ ಕಾರ್ಯಕ್ರಮ ರೋಟರಿಯಿಂದ ಆಗಲಿ ಎಂದು ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿ ಸಹಾಯಕ ಗವರ್ನರ್ ಶನ್ಫಾತ್ ಶರೀಫ್ ಮಾತನಾಡಿ ನಮ್ಮ ಕ್ಲಬ್ ಹಲವಾರು ಸವಾಲುಗಳನ್ನು ಎದುರಿಸಿಕೊಂಡು ದಶಮಾನೋತ್ಸವ ಸಂಭ್ರಮದತ್ತ…
ಬಂಟ್ವಾಳ: ಎಲ್ಲರಿಗೂ ರಕ್ತದಾನ ಮಾಡಲು ಸಾಧ್ಯವಿಲ್ಲ. ಸಾಧ್ಯವಿರುವ ಎಲ್ಲರೂ ರಕ್ತದಾನ ಮಾಡಬೇಕು, ನಾವು ರಕ್ತದಾನ ಮಾಡುವುದರ ಜೊತೆಗೆ ಸಮಾಜಕ್ಕೂ ರಕ್ತದಾನ ಮಾಡಲು ಪ್ರೇರಣೆ ನೀಡಬೇಕು ಎಂದು ಬಿ.ಸಿ.ರೋಡಿನ ಸೆಕ್ಯೂರ್ ಇನ್ಸೂರೆನ್ಸ್ ಕನ್ಸಲ್ಟೆನ್ಸಿ ಸಂಸ್ಥಾಪಕ ಪ್ರಶಾಂತ್ ಫ್ರಾಂಕ್ ಹೇಳಿದರು. ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಹಾಗೂ ಸೌತ್ ಕೆನರಾ ಪೊಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ಆಶ್ರಯದಲ್ಲಿ ಜ. ಕೆ. ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ನಡೆದ 137ನೇ ರಕ್ತದದೇವದಾಸ್ ರದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸೌತ್ ಕೆನರಾ ಪೊಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ಅಧ್ಯಕ್ಷ ರಾಜೇಂದ್ರ ಕೆ. ರಕ್ತದಾನ ಮಾಡಿ ಶಿಬಿರ ಉದ್ಘಾಟಿಸಿ ಮಾತನಾಡಿ ರಕ್ತವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ಜನರು ದಾನ ಮಾಡಿದರೆ ಮಾತ್ರ ಪಡೆಯಲು ಸಾಧ್ಯವಿದೆ. ಆದ್ದರಿಂದ ಹೆಚ್ಚು ಜನರು ರಕ್ತದಾನ ಮಾಡಬೇಕು ಎಂದರು. ಸತ್ಯಾಸಾಯಿ ರಕ್ತನಿಧಿಯ ಮೋಹನ್ ಶೆಟ್ಟಿ ಮಾತನಾಡಿ ರಕ್ತದಾನ ಶಿಬಿರ ಆಯೋಜಿಸುವುದು ಸುಲಭದ ಕೆಲಸವಲ್ಲ. ಕೃಷ್ಣ ಕುಮಾರ್ ಪೂಂಜ…








