Author: admin
ಬಂಟ್ವಾಳ: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ನೆನೆಪಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ 2024 ಸೆ.5 ರಂದು ಬೆಳಿಗ್ಗೆ 10 ರಿಂದ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿದೆ. Advertisement Advertisement ರಾಜ್ಯ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು, ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಎಸ್. ಬಂಗಾರಪ್ಪ ಗೌರವ ಉಪಸ್ಥಿತರಿರುವರು.ಗಣ್ಯ ಅತಿಥಿಗಳಾಗಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ವಿವಿಧ ಅಕಾಡೆಮಿ, ನಿಗಮಗಳ ಅಧ್ಯಕ್ಷರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಭಾಗವಹಿಸುವರು. Advertisement ಬೆಳಿಗ್ಗೆ 9 ರಿಂದ ಬಂಟ್ವಾಳ ತಾಲೂಕಿನ ವಿವಿಧ ವಿದ್ಯಾಸಂಸ್ಥೆಗಳ ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ಬಂಟ್ವಾಳ ತಾಲೂಕು ನಿವೃತ್ತ ಶಿಕ್ಷಕ, ಶಿಕ್ಷಕೇತರ ನೌಕರರಿಗೆ ಸನ್ಮಾನ, ಕನ್ನಡ ಮಾಧ್ಯಮದಲ್ಲಿ…
ಬಂಟ್ವಾಳ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನ ದಿನದ ಷಷ್ಠಿ ಪೂರ್ತಿ ಕಾರ್ಯಕ್ರಮದ ಅಂಗವಾಗಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಪುದು ಗ್ರಾಮದ ಕಡೆಗೋಳಿ ನಾಣ್ಯದ ಗದ್ದೆಯಲ್ಲಿ ನಡೆಯಿತು. Advertisement Advertisement Advertisement ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಂಟ್ವಾಳ ಪ್ರಖಂಡ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ಪ್ರಸಾದ್ ಕುಮಾರ್ ವಿಶ್ವ ಹಿಂದೂ ಪರಿಷದ್ ನ ಕಾರ್ಯಚಟುವಟಿಕೆಯ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಬಜರಂಗದಳದ ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್, ಭಾ.ಜ.ಪ.ಜಿಲ್ಲಾ ವಿಶೇಷ ಅಹ್ವಾನಿತರಾದ ಜನಾರ್ಧನ ಅರ್ಕುಳ, ಶ್ರೀಧರ ಹೊಳ್ಳ, ಗಣೇಶ್ ಕಾಮಾಜೆ, ಭುವನೇಶ್ ಪಚ್ಚಿನಡ್ಕ, ಸಂದೀಪ್ ಆಚಾರ್ಯ ಬಿ.ಸಿ ರೋಡು, ರುಕ್ಮಯ ನಲಿಕೆ, ವಿಶ್ವನಾಥ ಕೆಂಪುಗುಡ್ಡೆ, ಧನರಾಜ್ ಶೆಟ್ಟಿ ಫರಂಗಿಪೇಟೆ, ಸೋಮನಾಥ ಕುಮ್ಡೇಲ್, ವೆಂಕಪ್ಪ ಗುರಿಕಾರ ಕುಮ್ಡೇಲ್, ಪ್ರಖಂಡ ಸಂಯೋಜಕ್ ಶಿವಪ್ರಸಾದ್ ತುಂಬೆ ಉಪಸ್ಥಿತರಿದ್ದರು.…
ಬಂಟ್ವಾಳ: ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬಿ.ಮೂಡದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. Advertisement Advertisement ಇವರಲ್ಲಿ ಮೂವರು ಪ್ರಥಮ, ಒಬ್ಬರು ದ್ವಿತೀಯ ಹಾಗೂ ಮೂವರು ತೃತೀಯ ಬಹುಮಾನ ಪಡೆದಿದ್ದಾರೆ. 4ನೇ ತರಗತಿಯ ವಿಹಾನ್ ಛದ್ಮವೇಷದಲ್ಲಿ ಪ್ರಥಮ, 4ನೇ ತರಗತಿಯ ಯಜ್ಞಶ್ರೀ ಇಂಗ್ಲೀಷ್ ಕಂಠಪಾಠದಲ್ಲಿ ಪ್ರಥಮ, 2ನೇ ತರಗತಿಯ ಸಮರ್ಥ ಅಭಿನಯಗೀತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 3ನೇ ತರಗತಿಯ ನಮಸ್ಯಾ ಚಿತ್ರಕಲೆಯಲ್ಲಿ ದ್ವಿತೀಯ,6ನೇ ತರಗತಿಯ ಶಿವರಾಜ್ ಆಶುಭಾಷಣದಲ್ಲಿ ತೃತೀಯ, 7ನೇ ತರಗತಿಯ ಕೃತೇಶ್ ಚಿತ್ರಕಲೆಯಲ್ಲಿ ತೃತೀಯ ಹಾಗೂ7ನೇ ತರಗತಿಯ ಬಿನೀತ್ ಕವನವಾಚನದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. Advertisement
ಬಂಟ್ವಾಳ: ಬ್ಯಾರಿ ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಅಪೂರ್ವ ಸೇವೆಗೈದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2023ರ ಗೌರವ ಪ್ರಶಸ್ತಿಗೆ ಪಾತ್ರರಾದ ಅಶ್ರಫ್ ಅಪೋಲೋ ಅವರನ್ನು ಕಲ್ಲಡ್ಕದ ಮುರಬೈಲು ಯೂನಿಯನ್ ವತಿಯಿಂದ ಕಲ್ಲಡ್ಕದ ಮ್ಯೂಸಿಯಂನಲ್ಲಿ ಶುಕ್ರವಾರ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭ ಮುರಬೈಲು ಯೂನಿಯನ್ ನ ಎಲ್ಲಾ ಸದಸ್ಯರು ಹಾಗೂ ಸ್ಥಳೀಯ ಹಿರಿಯರು ಉಪಸ್ಥಿತರಿದ್ದರು.
ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ 2023-24ನೇ ಸಾಲಿನಲ್ಲಿ 982.54 ಕೋಟಿ ವ್ಯವಹಾರ ನಡೆಸಿ 5.71 ಕೋಟಿ ರೂಪಾಯಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದರು.ಸಂಘದ ಪ್ರಧಾನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿ ಡಾ. ಅಮ್ಮೆಂಬಳ ಬಾಳಪ್ಪ ಹಾಗೂ ಬಿ. ಹೂವಯ್ಯ ಮೂಲ್ಯ ಅವರಿಂದ ಆರಂಭಗೊಂಡ ಸಮಾಜ ಸೇವಾ ಸಹಕಾರಿ ಸಂಘದಲ್ಲಿ ಪ್ರಸ್ತುತ 8660 ಸದಸ್ಯರಿದ್ದು, 7.87 ಕೋಟಿ ಪಾಲು ಬಂಡವಾಳ, 214.26 ಕೋಟಿ ಠೇವಣಾತಿ, 5.68 ಕೋಟಿ ನಿಧಿಗಳು, 59.82 ಕೋಟಿ ವಿನಿಯೋಗಗಳು, 192.78 ಕೋಟಿ ಸಾಲ ಹೊಂದಿದ್ದು ಶೇ. 95.02 ವಸೂಲಾತಿಯಾಗಿದೆ. ಸಂಘದ ದುಡಿಯವ ಬಂಡವಾಳ 239.90 ಕೋಟಿಯಾಗಿದ್ದು ಆಡಿಟ್ ವರ್ಗಿಕರಣದಲ್ಲಿ ಎ ತರಗತಿಯನ್ನು ಪಡೆದು ಕೊಂಡಿದೆ ಎಂದರು. ಬಂಟ್ವಾಳ, ಮಂಗಳೂರು, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳಿಗೆ ಸೀಮಿತವಾಗಿದ್ದ ಸಂಘದ ಕಾರ್ಯಾವ್ಯಾಪ್ತಿಯನ್ನು ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ವಿಸ್ತರಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ 4…
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಲ್ಲಡ್ಕ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಸರಕಾರಿ ಪ್ರೌಢ ಶಾಲೆ ಗೋಳ್ತಮಜಲು ಇದರ ಸಂಯುಕ್ತ ಆಶ್ರಯದಲ್ಲಿ ಗೋಳ್ತಮಜಲುವಿನಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ನಡೆಯಿತು. ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ವಲಯ ತರಬೇತುದಾರ, ಪತ್ರಕರ್ತ ಸಂದೀಪ್ ಸಾಲ್ಯಾನ್ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ್ದು. ಹದಿಹರೆಯದ ವಯಸ್ಸಿನಲ್ಲಿ ಅನೇಕ ಆಕರ್ಷಣೆಗಳು ನಮ್ಮನ್ನು ಸೆಳೆಯುತ್ತದೆ. ಕೆಟ್ಟ ಕುತೂಹಲಕ್ಕೆ ಒಳಗಾಗಿ ದುಶ್ಚಟಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳದಂತೆ ಎಚ್ಚರ ವಹಿಸಿ ಎಂದು ತಿಳಿಸಿದರು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ವೈಯಕ್ತಿಕ ಆರೋಗ್ಯ ಹದಗೆಡುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವೂ ಹದಗೆಡುತ್ತದೆ. ನಮ್ಮ ಆರೋಗ್ಯದ ಜೊತೆಗೆ ಸಮಾಜದ ಸ್ವಾಸ್ಯವನ್ನು ಕಾಪಾಡುವ ಮಹತ್ತರವಾದ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಕ್ಷಣಿಕ ಸುಖಕ್ಕಾಗಿ ಮಾದಕ…
ಬಂಟ್ವಾಳ: ಶ್ರೀ ದುರ್ಗಾ ಫ್ರೆಂಡ್ಸ್ ಇವರ ವತಿಯಿಂದ ಕುರಿಯಾಳ ದುರ್ಗಾನಗರ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 17ನೇ ವರ್ಷದ ಮೊಸರು ಕುಡಿಕೆ ಉತ್ಸವವು ವಿಜ್ರಂಭಣೆಯಿಂದ ನಡೆಯಿತು. ಬೆಳ್ಳಿಗ್ಗೆ ಕ್ರೀಡಾಕೂಟ ಉದ್ಘಾಟನೆ ಸಮಾರಂಭದಲ್ಲಿ ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರದ ಅರ್ಚಕ ಹೊನ್ನಪ್ಪ ಪೂಜಾರಿ, ಅಮ್ಟಾಡಿ ಗ್ರಾಮ ಪಂಚಾಯತಿ ಸದಸ್ಯೆ ಯಶೋಧ ಮೇಗಿನ ಕುರಿಯಾಳ, ಸದಸ್ಯರಾದ ರೂಪೇಶ್ ಕುಟೀಲ, ಅಶ್ವಿನಿ ಶೆಟ್ಟಿ ನೋಡಾಜೆ, ಕುರಿಯಾಳ ಬಿಲ್ಲವ ಸಂಘ ಅಧ್ಯಕ್ಷ ವಿಶ್ವನಾಥ ಪೂಜಾರಿ ಗಾಣದಕೊಟ್ಯ, ಶ್ರೀ ಓಂಕಾರೇಶ್ವರಿ ದೇವಿ ಭಜನಾ ಮಂದಿರದ ಅಧ್ಯಕ್ಷ ಶ್ರೀನಿಧಿ ವಿ ಬಂಗೇರ, ಓಂಕಾರ ಸೇವಾ ಬಳಗ ಅಧ್ಯಕ್ಷ ಸಂತೋಷ್ ಸುವರ್ಣ, ಶ್ರೀ ದುರ್ಗಾ ಫ್ರೆಂಡ್ಸ್ ಅಧ್ಯಕ್ಷ ಸಂದೇಶ್ ಪೂಜಾರಿ ಭಾಗವಹಿಸಿದ್ದರು. ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀರಾಮ ವಿದ್ಯಾಕೇಂದ್ರದ ನಿವೃತ್ತ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ, ಉದ್ಯಮಿ ಜಗದೀಶ್ ನೆತ್ತರಕೆರೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ,…
ಬಂಟ್ವಾಳ: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮಾ.24ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಲಿದೆ ಎಂದು ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ.ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ವಿವರ ನೀಡಿದರು. ಮುಂಬಯಿ ಉದ್ಯಮಿ ಕಕ್ಯಪದವು ನಾರಾಯಣ ಶೆಟ್ಟಿ ಅವರ ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಮದುವೆ ಮಂಟಪದವರೆಗೆ ವೈಭವಪೂರ್ವಕವಾಗಿ ವಧು-ವರರ ದಿಬ್ಬಣ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 11.21ರ ಶುಭ ಮುಹೂರ್ತದಲ್ಲಿ 6 ಜೋಡಿ ವಧು-ವರರಿಗೆ ಸಾಮೂಹಿಕ ವಿವಾಹ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮಾಡಲಾಗುವುದು ಎಂದು ಅವರು ತಿಳಿಸಿದರು.ನವದೆಹಲಿ ಅನಾರೋಕ್ ಸಂಸ್ಥೆಯ ವೈಸ್‌ಚೆಯರ್‌ಮೇನ್ ಸಂತೋಷ್ ಕುಮಾರ್ ಜೆ.ಪಿ.…
ಬಂಟ್ವಾಳ: ಬಿ.ಸಿ.ರೋಡಿನ ನಗರ ಭಾಗದಲ್ಲಿರುವ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ವರ್ಷಾವಧಿ ಉತ್ಸವ ವಿಜ್ರಂಭಣೆಯಿಂದ ನಡೆಯಿತು. ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಂತೆ ಮಾ. 16ರಂದು ಉತ್ಸವ ಆರಂಭಗೊಂಡಿದ್ದು ಕೊನೆಯ ದಿನವಾದ ಸೋಮವಾರ ಬೆಳಿಗ್ಗೆ ಗಣಹೋಮ, ಪ್ರಧಾನ ಹೋಮ, ಕಲಶಾಭಿಷೇಕ, ನಾಗಾರಾಧನೆ, ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ಸಂಜೆ ಸಪ್ತಶತಿ ಪಾರಾಯಣ ಸಹಿತ ವಿಶೇಷ ದುರ್ಗಾ ನಮಸ್ಕಾರ ಪೂಜೆ, ರಂಗಪೂಜೆ, ಅಲಂಕಾರ ಪೂಜೆ ಹಾಗೂ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು.ಈ ಸಂದರ್ಭ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಬಿ. ವಿಶ್ವನಾಥ, ಬೂಡ ಅಧ್ಯಕ್ಷ ಬಿ. ಬೇಬಿ ಕುಂದರ್, ಶ್ರೀ ಅನ್ನಪೂರ್ಣೆಶ್ವರೀ ನಾಗದೇವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೆಶ್ ಪಚ್ಚಿನಡ್ಕ, ಶ್ರೀ ಚಂಡಿಕಾ ಪರಮೇಶ್ವರೀ ದೇವಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲೋಕನಾಥ ಶೆಟ್ಟಿ , ದೇವಸ್ಥಾನದ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷ ಬಿ. ಸಂಜೀವ ಪೂಜಾರಿ, ಕಾರ್ಯದರ್ಶಿ ಎನ್. ಶಿವಶಂಕರ್, ಜೊತೆ ಕಾರ್ಯದರ್ಶಿ ರಮೇಶ್ ಸಾಲ್ಯಾನ್, ಕೋಶಾಧಿಕಾರಿ ಬಿ.…
ಬಂಟ್ವಾಳ: ಮುಂಬರುವ ಲೋಕಸಭಾ ಚುನಾವಣೆ ನಿಕ್ಷ್ಪಕ್ಷಪಾತವಾಗಿ, ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕೆನ್ನುವ ಉದ್ದೇಶದಿಂದ ಮಾ.16ರಿಂದ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದ್ದು ವಿವಿಧ ತಂಡಗಳನ್ನು ರಚಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ ತಿಳಿಸಿದರು.ಭಾನುವಾರ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು. ಮಾ. 28 ಚುನಾವಣೆ ನೋಟಿಸು ಹೊರಡಿಸುವುದು, ಎ.4 ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ, ಎ.೫ ನಾಮ ಪತ್ರ ಪರಿಶೀಲನೆಯ ದಿನಾಂಕ, ಎ.8 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ, ಎ.26 ಚುನಾವಣೆ ನಡೆಯುವ ದಿನಾಂಕ, ಜೂ.4 ಮತ ಎಣಿಕೆ ದಿನಾಂಕ, ಜೂ.6 ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುವ ದಿನಾಂಕ ಎಂದು ತಿಳಿಸಿದರು. ಮಾ. 28 ರಿಂದ ಎ.8ರವರೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ದ.ಕ. ಜಿಲ್ಲಾ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಮುಲ್ಲೈ ಮುಹಿಲನ್ ಅವರಿಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಚುನಾವಣೆಗೆ ಸಂಬಮಧಿಸಿದಂತೆ ಡಿಯುಡಿಸಿ ಯೋಜನಾ ನಿರ್ದೇಶಕ ಡಾ. ಉದಯ ಶೆಟ್ಟಿ…








