Author: admin

ಬಂಟ್ವಾಳ: ವಿಧಾನಸೌಧದಲ್ಲಿ ಪಾಕಿಸ್ಥಾನಕ್ಕೆ ಜಿಂದಾಬಾದ್ ಹೇಳಿದ ಭಯೋತ್ಪಾದಕ ಪ್ರೇಮಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಪ್ರತಿಭಟನೆ ಶನಿವಾರ ಬಿ.ಸಿ.ರೋಡಿನಲ್ಲಿ ನಡೆಯಿತು. Advertisement Advertisement ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಎಂಟು ತಿಂಗಳ ಅವಧಿಯಲ್ಲಿ ಕರ್ನಾಟಕದ ಆತ್ಮವಾಗಿರುವ ವಿಧಾನಸೌಧದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಿರುವುದು ಅವರು ಮಾಡಿರುವ ಸಾಧನೆ. ಇದೊಂದು ನಾಚಿಕೆಗೇಡಿನ ವಿಚಾರ ಎಂದರು. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬದಲು ಇಡೀ ಸರಕಾರ ಆರೋಪಿಗಳ ಪರ ನಿಂತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಆರೋಪಿಗಳು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ನೀಡಿ ವೀರೋಚಿತವಾಗಿ ಹೆಜ್ಜೆ ಹಾಕುತ್ತಾರೆಂದರೆ ಈ ದೇಶದ ಪ್ರಜಾಪ್ರಭುತ್ವದ ಗೌರವ ಎಲ್ಲಿಗೆ ಬಂದಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು. ಸುಳ್ಳಿನ ಸರಮಾಲೆಯನ್ನು…

Read More

ಬಂಟ್ವಾಳ: ಮೂಡೂರು ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಂಟ್ವಾಳ ಕಂಬಳ ಎಂದೇ ಪಸಿದ್ದಿ ಪಡೆದಿರುವ 13ನೇ ವರ್ಷದ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳಕ್ಕೆ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. Advertisement Advertisement ಅಲ್ಲಿಪಾದೆ ಸಂತ ಅಂತೋನಿ ಧರ್ಮಕೇಂದ್ರದ ಧರ್ಮಗರುಗಳಾದ ವಂದನೀಯ ಫೆಡ್ರಿಕ್ ಮೊಂತೆರೋ ಕಂಬಳ ಉದ್ಘಾಟಿಸಿದರು.ಕಂಬಳ ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಕರೆ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಕಾರ್ಯಕ್ರಮ ಎಲ್ಲಾ ಜಾತಿ ಧರ್ಮ ವರ್ಗದ ಜನರು ಬರುವಂತೆ ಕೈ ಬೀಸಿ ಕರೆಯುವಂತಿರಬೇಕು ಎಂದರು. ಕಂಬಳ ವೀಕ್ಷಿಸಲು ಬರುವ ಅತಿಥಿಗಳು, ಕಂಬಳಾಭಿಮಾನಿಗಳಿಗೆ ಉತ್ತಮ ವ್ಯವಸ್ಥೆಯನ್ನು ಮಾಡಿಕೊಟ್ಟು ಇದೊಂದು ಮಾದರಿ ಕಂಬಳವಾಗಲು ಸಹಕರಿಸಬೇಕು ಎಂದು ತಿಳಿಸಿದರು. Advertisement Advertisement ಮುಖ್ಯ ಅತಿಥಿಗಳಾಗಿ ಉದ್ಯಮಿ ರಘುನಾಥ ಸೋಮಯಾಜಿ, ನಮ್ಮ ಕುಡ್ಲ ವಾಹಿನಿಯ ನಿರ್ದೇಶಕ ಲೀಲಾಕ್ಷ ಕರ್ಕೆರಾ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್ ಖಾದರ್ಮಾಜಿ…

Read More

ಮಂಗಳೂರು:ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

Read More

ಬಂಟ್ವಾಳ: ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಓಬಿಸಿ ಮೋರ್ಚಾದ ಮಂಡಲ ಅಧ್ಯಕ್ಷರಾಗಿ ಗಣೇಶ್ ಸುವರ್ಣ ತುಂಬೆ ನೇಮಕಗೊಂಡಿದ್ದಾರೆ.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರನ್ನಾಗಿ ಗಣೇಶ್ ಸುವರ್ಣ ಅವರನ್ನು ಆಯ್ಕೆಗೊಳಿಸಿದ್ದಾರೆ. ಅವರು ಬಂಟ್ವಾಳ ತಾಲೂಕು ಪಂಚಾಯತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಮಂಗಳೂರು ಮಂಡಲದ ಕಾರ್ಯದರ್ಶಿಯಾಗಿ, ಬಿಜೆಪಿ ಪುದು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಸಾಮಾಜಿಕ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದಾರೆ.

Read More

ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಮಳೆ, ಬಿಸಿಲಿಗೆ ಪರಿತಪಿಸುತ್ತಿದ್ದ ಸಜೀಪ ಮೂಡ ಗ್ರಾಮದ ಮಿತ್ತಮಜಲು ನಿವಾಸಿಗಳಾದ ಭಾಗಿ ಮತ್ತು ಕಮಲ ಎಂಬವರಿಗೆ ಸ್ಥಳೀಯ ಯುವ ಎಂಜಿನಿಯರ್, ಸಜೀಪಮೂಡ ವಲಯ ಕಾಂಗ್ರೆಸ್ ಉಪಾಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆಯವರು ಮನೆ ನಿರ್ಮಿಸಿ ಕೊಟ್ಟಿದ್ದು ಗುರುವಾರ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಗಣಹೋಮ ನಡೆಯಿತು. ಬಳಿಕ ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿ ಮನೆಮಂದಿಗೆ ಕೀಲಿಕೈ ಹಸ್ತಾಂತರಿಸಿದರು. ಅವರು ಮಾತನಾಡಿ ಬಡವರಿಗೆ ಮನೆ ನಿರ್ಮಾಣ ಮಾಡಿರುವುದು ಇದು ದೇವರು ಮೆಚ್ಚುವಕಾರ್ಯವಾಗಿದ್ದು ಮನೆಮಂದಿಯ ಸಹಕಾರ ಹಾಗೂ ಪ್ರೋತ್ಸಾಹದಿಂದ ಶೈಲೇಶ್ ಪೂಜಾರಿ ಈ ಕೆಲಸ ಮಾಡಿದ್ದಾರೆ ಎಂದರು. ಇಂತಹ ಸೇವಾ ಕಾರ್ಯ ಮತ್ತೊಬ್ಬರಿಗೆ ಪ್ರೇರಣೆಯಾಗಬೇಕು ಎನ್ನುವ ಉದ್ದೇಶದಿಂದ ಸಣ್ಣ ಸಮಾರಂಭ ನಡೆಸಿ ಮನೆ ಹಸ್ತಾಂತರ ಕೆಲಸ ಮಾಡಲಾಗಿದೆ. ಇನ್ನಷ್ಟು ಮಂದಿ ಸ್ಪೂರ್ತಿ ಪಡೆದು ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ ಹಲವು…

Read More

ಬಂಟ್ವಾಳ: ಇಲ್ಲಿನ ಪುರಸಭೆಯ ವತಿಯಿಂದ ಲಯನ್ಸ್ ಕ್ಲಬ್ ಬಿ.ಸಿ.ರೋಡ್, ತಾಲೂಕು ಆಸ್ಪತ್ರೆ ಬಂಟ್ವಾಳ, ಎ.ಜೆ. ವೈದ್ಯಕೀಯ ಕಾಲೇಜು ಆಸ್ಪತ್ರೆ ಮಂಗಳೂರು, ಸ್ವ ಸಹಾಯ ಸಂಘಗಳ ಒಕ್ಕೂಟಗಳು ಪುರಸಭೆ, ಬಂಟ್ವಾಳ ಬೀದಿ ಬದಿ ವ್ಯಾಪಾರಿಗಳ ಪಟ್ಟಣ ಮಾರಾಟ ಸಮಿತಿ ಇವರ ಸಹಯೋಗದೊಂದಿಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಶಿಬಿರವನ್ನು ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಕೋಟ್ಯಾನ್, ತಾಲೂಕು ಆಸ್ಪತ್ರೆ ಬಂಟ್ವಾಳ ಇಲ್ಲಿನ ವೈದ್ಯಾಧಿಕಾರಿ ಡಾ. ಪುಷ್ಪಲತಾ, ಬೀದಿ ಬದಿ ವ್ಯಾಪಾರಿಗಳ ಸಂಘದ ಸದಸ್ಯ ಮಹಮ್ಮದ್ ಇಕ್ಬಾಲ್, ಸ್ವ ಸಹಾಯ ಸಂಘದ ಒಕ್ಕೂಟಗಳ ಅಧ್ಯಕ್ಷೆ ವಸಂತಿ ಉಪಸ್ಥಿತರಿದ್ದರು.ಶಿಬಿರದಲ್ಲಿ ಎ. ಜೆ ವೈದ್ಯಕೀಯ ಕಾಲೇಜು ಆಸತ್ರೆ ಮಂಗಳೂರು ಇಲ್ಲಿನ ತಜ್ಞ ವೈದ್ಯರು ಹಾಜರಿದ್ದು, ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆಯನ್ನು ನಡೆಸಿದರು. ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಿ ಕನ್ನಡಕ ಅಗತ್ಯವಿದ್ದವರಿಗೆ ಪುರಸಭೆಯಿಂದ ಉಚಿತ ಕನ್ನಡಕ ವಿತರಿಸಲಾಯಿತು. ಮಂಗಳ ಸ್ವಾಗತಿಸಿ, ಗೀತಾ ವಂದಿಸಿದರು. ಸಮುದಾಯ ಸಂಘಟಕಿ…

Read More

ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಮಳೆ, ಬಿಸಿಲಿಗೆ ಪರಿತಪಿಸುತ್ತಿದ್ದ ಸಜೀಪ ಮೂಡ ಗ್ರಾಮದ ಮಿತ್ತಮಜಲು ನಿವಾಸಿಗಳಾದ ಭಾಗಿ ಮತ್ತು ಕಮಲ ಎಂಬವರಿಗೆ ಸ್ಥಳೀಯ ಯುವ ಎಂಜಿನಿಯರ್, ಸಜೀಪಮೂಡ ವಲಯ ಕಾಂಗ್ರೆಸ್ ಉಪಾಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆಯವರು ಮನೆ ನಿರ್ಮಿಸಿ ಕೊಟ್ಟಿದ್ದು ಫೆ. 29ರಂದು ಗುರುವಾರ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಗಣಹೋಮ ನಡೆಯಲಿದೆ. ಬಳಿಕ ನಡೆಯುವ ಸಮಾರಂಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸುವರು, ಸಜೀಪಮೂಡ ಗ್ರಾ.ಪಂ. ಅಧ್ಯಕ್ಷೆ ಶೋಭಾ ಶೆಟ್ಟಿ ಅಧ್ಯಕ್ಷತೆ ವಹಿಸುವರು, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಕೆ. ಸಂಜೀವ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಸಜೀಪಮೂಡ ವಲಯ ಕಾಂಗ್ರೆಸ್ ಅಧ್ಯಕ್ಷ ಕರೀಂ ಬೊಳ್ಳಾಯಿ, ಪ್ರಗತಿಪರ ಕೃಷಿಕ ಸುಂದರ ಪೂಜಾರಿ ಕುಚ್ಚಿಗುಡ್ಡೆ, ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕ ಬಿ.ಕೆ. ಸೇಸಪ್ಪ ಬೆದ್ರಕಾಡು ಭಾಗವಹಿಸುವರು. ಮನೆಗೆ ಆಧಾರವಾಗಿದ್ದವೆರೆಲ್ಲ ಅನಾರೋಗ್ಯದಿಂದ…

Read More

https://youtu.be/0jXa4ncbzFU?si=qkKYFiL3Umy8dF5c For video click here ⬆️ ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಮಹಾರಥೋತ್ಸವ ಮಂಗಳವಾರ ರಾತ್ರಿ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಅಥರ್ವ ಶೀರ್ಷ ಹೋಮ, ಮಧ್ಯಾಹ್ನ ಮಹಾಪೂಜೆ, ಶ್ರೀ ದೇವರ ರಥಾರೋಹಣ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ವಿಜ್ರಂಭಣೆಯಿಂದ ನಡೆದ ಮಹಾರಥೋತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಸುಡುಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ಬಳಿಕ ದೇವಳದ ಅಂಗಣದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆಯಿತು.

Read More

ಬಂಟ್ವಾಳ: ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ ಬಂಟ್ವಾಳ ಕಂಬಳ ಎಂದು ಪ್ರಸಿದ್ದಿ ಪಡೆದಿರುವ 13ನೇ ವರ್ಷದ ಹೊನಲು ಬೆಳಕಿನ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳವು ಮಾ. 2ರಂದು ಹಲವು ವೈಶಿಷ್ಟ್ಯತೆಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಇಲ್ಲಿನ ಬಿ.ಸಿ.ರೋಡಿನಲ್ಲಿ ಮಂಗಳವಾರ ಆಮಂತ್ರಣಪತ್ರ ಬಿಡುಗಡೆಗೊಳಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಹಿಂದೆ ಕಾವಳಕಟ್ಟೆಯಲ್ಲಿ 10ವರ್ಷ ನಡೆದಿದ್ದ ಈ ಕಂಬಳವು ಹೊಸ ಆವಿಷ್ಕಾರಗಳಿಂದಲೇ ಗುರುತಿಸಿಕೊಂಡಿತ್ತು. ಇದೀಗ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ಮೂರನೇ ವರ್ಷ ನಡೆಯಲಿರುವ ಕಂಬಳದಲ್ಲಿ ಕೂಡಾ ಅತಿಥಿಗಳಿಗೆ ಪ್ರತ್ಯೇಕ ವಿಐಪಿ ಗ್ಯಾಲರಿ ಅಳವಡಿಸಲು ಚಿಂತನೆ ನಡೆಸಲಾಗಿದೆ ಎಂದರು. ಜಿಲ್ಲೆಯಲ್ಲಿ ಕಂಬಳ ಉಳಿಸಿ ಬೆಳೆಸುವಲ್ಲಿ ಕಾನೂನು ಹೋರಾಟ ನಡೆಸಿ, ಮಹಿಳೆಯರು ಕೂಡಾ ಕಂಬಳ ವೀಕ್ಷಿಸಲು ಪ್ರತ್ಯೇಕ ಗ್ಯಾಲರಿ ಅಳವಡಿಕೆ, ಸಿನೆಮಾ ತಾರೆಯರು ಮತ್ತು ಗಣ್ಯರು ಭಾಗವಹಿಸುವ ಮೂಲಕ ಕಂಬಳಕ್ಕೆ ಹೊಸ ರೂಪ ಕೊಟ್ಟ ಹೆಗ್ಗಳಿಕೆ ಮೂಡೂರು-ಪಡೂರು ಕಂಬಳ ಕೂಟಕ್ಕೆ ಸಲ್ಲುತ್ತದೆ. ಈ…

Read More

ಬಂಟ್ವಾಳ: ಜಿಲ್ಲೆಯ ಪ್ರಸಿದ್ದ ದೇವಸ್ಥಾನವಾದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನದಲ್ಲಿ ಮಹಾರಥೋತ್ಸವ ನಾಳೆ (ಫೆ.27) ನಡೆಯಲಿದೆ. ಫೆ. 24 ರಂದು ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು ಇಂದು ರಾತ್ರಿ ಶ್ರೀ ದೇವರ ಬಲಿ, ಪಾಲಕಿ ಉತ್ಸವ ಹಾಗೂ ರಥ ಬೀದಿಯಲ್ಲಿ ಸಾಗಿ ಕಟ್ಟೆ ಉತ್ಸವ ನಡೆಯಲಿದೆ. ನಾಳೆ ಬೆಳಿಗ್ಗೆ 7.30ಕ್ಕೆ ಅಥರ್ವ ಶೀರ್ಷ ಹೋಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಶ್ರೀ ದೇವರ ರಥಾರೋಹಣ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7ಕ್ಕೆ ಮಹಾರಥೋತ್ಸವ, ಸುಡುಮದ್ದು ಪ್ರದರ್ಶನ, ಶ್ರೀ ದೇವರ ಬಲಿ ಉತ್ಸವ ನಡೆಯಲಿದೆ‌. ಫೆ. 28 ರಂದು ರಾತ್ರಿ 7 ಕ್ಕೆ ಶ್ರೀ ದೇವರ ಬಲಿ ಹೊರಟು ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ. ರಾತ್ರಿ‌‌ 11 30ಕ್ಕೆ ಮಾಗಣೆಯ ಶ್ರೀ ನಾಲ್ಕೈತ್ತಾಯ ದೈವದ ನೇಮೋತ್ಸವ ಜರುಗಲಿದೆ. ಫೆ. 29 ರಂದು ಸಂಪ್ರೋಕ್ಷಣೆ ಮತ್ತು ಮಂತ್ರಾಕ್ಷತೆ ನಡೆಯಲಿದೆ.

Read More