Author: admin
ಬಂಟ್ವಾಳ: ಬಿ.ಸಿ.ರೋಡಿನ ಪೊಲೀಸ್ ಲೈನ್‌ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾಮಹೋತ್ಸವ ಫೆ. ೧೬ರಿಂದ ಫೆ. ೨೩ರವರೆಗೆ ನಡೆಯಲಿದ್ದು ಶಕ್ರವಾರ ಸಂಜೆ ವೈಭವದ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಕೈಕಂಬದ ಪೊಳಲಿ ದ್ವಾರದ ಬಳಿ ಹೊರೆಕಣಿಕೆ ಮೆರವಣಿಗೆಗೆ ಪೊಳಲಿ ಶ್ರೀರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಉದ್ಯಮಿ ರಘುಸಪಲ್ಯ ಚಾಲನೆ ನೀಡಿದರು. ಭಜನಾ ತಂಡ, ಬಣದ ಕೊಡೆಗಳು, ಕಲಶ ಹೊತ್ತ ಮಹಿಳೆಯರು, ಚೆಂಡೆ, ಗೊಂಬೆ ಕುಣಿತ ಮೆರವಣಿಗೆಗೆ ವಿಶೇಷ ಮೆರುಗು ನೀಡಿತು. ಕೈಕಂಬದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆರವಣಿಗೆ ಸಾಗಿ ಬಂದು ದೇವಸ್ಥಾನದಲ್ಲಿ ಸಮಾಪನಗೊಂಡಿತು. ಈ ಸಂದರ್ಭ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಕಾರ್ಯಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಕಾರಂತ್, ವಿವಿಧ ಸಮಿತಿಯ ಪದಾಧಿಕಾರಿಗಳಾದ ವಿಜಯಪ್ರಸಾದ್, ಅಶ್ವನಿ ಕುಮಾರ್ ರೈ, ಸದಾನಂದ ಶೆಟ್ಟಿ, ಐತ್ತಪ್ಪ ಆಳ್ವ…
ಬಂಟ್ವಾಳ: ಕರ್ಮ ಯೋಗ ಮತ್ತು ಭಕ್ತಿಯೋಗದ ಮೂಲಕ ದೇವರನ್ನು ಸುಲಭದಲ್ಲಿ ಒಲಿಸಿಕೊಳ್ಳಲು ಸಾಧ್ಯವಿದೆ ಎಂದು ಧರ್ಮಸ್ಥಳ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.ಅವರು ನೂತನವಾಗಿ ನಿರ್ಮಾಣಗೊಂಡ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠೆ, ಅಷ್ಟಬಂಧ, ಬ್ರಹ್ಮಕಲಶಾಭಿಷೇಕ ಮತ್ತು ಧ್ವಜಸ್ಥಂಭ ಪ್ರತಿಷ್ಠೆ ಮತ್ತು ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಪ್ರಥಮ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಮಾನವ ಬದುಕಿನಲ್ಲಿ ಪುಣ್ಯದ ಉತ್ಕರ್ಷ ಆದಾಗ ಭಾಗ್ಯದ ಬಾಗಿಲು ತೆರೆಯುತ್ತದೆ. ಆಧ್ಯಾತ್ಮದೊಳಗೆ ಎಲ್ಲವೂ ಇದೆ. ಮಾನವನನ್ನು ಮಾಧವನನ್ನಾಗಿ ಮಾಡುವ ಶಕ್ತಿ ಆಧ್ಯಾತ್ಮಕ್ಕಿದೆ ಎಂದು ತಿಳಿಸಿದರು. ಬೆಂಗಳೂರಿನ ಉದ್ಯಮಿ ಎರಕಳ ಬಿ. ರಘುನಾಥ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಎ.ಜೆ. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲಉದ್ಯಮಿ ಜಗನ್ನಾಥ ಚೌಟ ಬದಿಗುಡ್ಡೆ, ಕೆ. ಎಂ.ಎಫ್ ಅಧ್ಯಕ್ಷ ಸುಚರಿತ ಶೆಟ್ಟಿ, ಅರುಣ್ ಕುಮಾರ್ ಪುತ್ತಿಲ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆರ್., ನ್ಯಾಯವಾದಿ…
ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಚಂಡಿಕಾ ಪರಮೇಶ್ವರೀ ದೇವಸ್ಥಾನದ ಜಾತ್ರಾಮಹೋತ್ಸವದ ಪ್ರಯುಕ್ತ ಗುರುವಾರ ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ ಉತ್ಸವ ನಡೆಯಿತು. ಬಳಿಕ ಬಟ್ಟಲು ಕಾಣಿಕೆ ನಡೆದು ರಾಜಾಂಗಣ ಪ್ರಸಾದ ವಿತರಿಸಲಾಯಿತು. ಬಳಿಕ ನವಕ ಕಲಶಾಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು. ಹರಕೆ ಬಂದ ಸೀರೆಗಳನ್ನು ಏಲಂ ಮಾಡಲಾಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಕಾರ್ಯದರ್ಶಿ ಇಂದೇಶ್, ಆಡಳಿತ ಸಮಿತಿ ಸದಸ್ಯರು, ಊರ ಪರವೂರ ಭಕ್ತರು ಭಾಗವಹಿಸಿದ್ದರು.
ಬಂಟ್ವಾಳ: ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಾರಿ ಸಂಘ ಇದರ ಸ್ಥಳಾಂತರಗೊಂಡ ಬೋಳಂತೂರು ಶಾಖೆಯ ಶುಭಾರಂಭ ಕಾರ್ಯಕ್ರಮ ಫೆ. 22ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಬೋಳಂತ್ತೂರಿನ ಉತ್ತಮ ನಗರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರಾಮೀಣ ಭಾಗವಾದ ಸಜೀಪಮೂಡದಲ್ಲಿ ಆರಂಭಗೊಂಡ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇಂದು 12 ಶಾಖೆಗಳನ್ನೊಳಗೊಂಡು ಗ್ರಾಹಕರಿಗೆ ಅತ್ಯುತ್ತವಾದ ಸೇವೆಯನ್ನು ನೀಡುತ್ತಿದೆ. ಸಹಕಾರಿ ಕ್ಷೇತ್ರದಲ್ಲಿ ಹೊಸತನದ ಛಾಪನ್ನು ಮೂಡಿಸಿಕೊಂಡು ಮುನ್ನಡೆಯುತ್ತಿರುವ ಸಂಘ ಸಹಕಾರಿ ಕ್ಷೇತ್ರದಲ್ಲಿ ಕಡಿಮೆಯ ಅವಧಿಯಲ್ಲಿ ಸಾಧಿಸಿದ ಸಾಧನೆಗೆ ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ವಿಸ್ತರಿಸಿಕೊಂಡು ಗ್ರಾಹಕ ಸ್ನೇಹಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಅವರು ತಿಳಿಸಿದ್ದಾರೆ.
ಬಂಟ್ವಾಳ: 1924ರಲ್ಲಿ ಆರಂಭವಾದ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ ಕಾರ್ಯಕ್ರಮ ಫೆ.21 ರಿಂದ ಫೆ.24 ರ ವರೆಗೆ ಮಂದಿರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ ಎಂದು ಶತಾಬ್ದಿ ಸಂಭ್ರಮ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿದರು. ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿಶತಾಬ್ದಿ ಕಾರ್ಯಕ್ರಮದಲ್ಲಿ ನೂತನವಾಗಿ ಶ್ರೀ ವಿದ್ಯಾಗಣಪತಿ ದೇವರ ಪ್ರತಿಷ್ಠೆ, ಶ್ರೀರಾಮಾಂಗಣ ಲೋಕಾರ್ಪಣೆ , ಮಾತೃ ಸಂಗಮ ಕಾರ್ಯಕ್ರಮ, 13 ಕೋಟಿ ರಾಮನಾಮ ತಾರಕ ಜಪಯಜ್ಞ ನಡೆಯಲಿದೆ. ಫೆ.21ರಂದು ಬುಧವಾರ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯ ನೇತ್ರಾವತಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ ತೀರ್ಥ ಕಲಶಗಳನ್ನು ಮಂದಿರಕ್ಕೆ ತರುವುದು, ಬಳಿಕ ಧ್ವಜಾರೋಹಣ ನೆರವೇರಿ ಭಜನೆ ನಡೆಯಲಿರುವುದು ಬೆಳಿಗ್ಗೆ 10.30ಕ್ಕೆಶ್ರೀ ರಾಮವಿದ್ಯಾಕೇಂದ್ರದ ಮಕ್ಕಳಿಂದ ಸರಸ್ವತಿ ಪೂಜೆ ನಡೆಯಲಿದೆ., ಸಂಜೆ ೪ ಗಂಟೆಗೆ ಮಂದಿರದ ಸುತ್ತಮುತ್ತಲಿನ ಭಾಗದಿಂದ ಆಗಮಿಸಿದ ಹೊರಕಾಣಿಕೆಯನ್ನು ನರಹರಿ ಪರ್ವತ ದ್ವಾರದ ಬಳಿಯಿಂದ ಕಲ್ಲಡ್ಕ ಶ್ರೀರಾಮ ಮಂದಿರದವರೆಗೆ…
ಬಂಟ್ವಾಳ: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ ೫ರ ಪ್ರಾಂತೀಯ ಸಮ್ಮಿಲನ ‘ಸಂಧ್ಯಾ’ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ ಸಾರಥ್ಯದಲ್ಲಿ ಲಯನ್ಸ್ ಕ್ಲಬ್ ಕೊಳ್ಳಾಡು ಸಾಲೆತ್ತೂರು ಇದರ ಆತಿಥ್ಯದಲ್ಲಿ ಇರಾ ಬಂಟರ ಭವನದ ಬಿ. ವಿ. ಕಾರಂತ ವೇದಿಕೆಯಲ್ಲಿ ಸೇವಾ ಸಾರ್ಥಕ್ಯದ ಹೊಂಗಿರಣ ಶೀರ್ಷಿಕೆಯೊಂದಿಗೆ ವಿನೂತನ ರೀತಿಯಲ್ಲಿ ಭಾನುವಾರ ಸಂಜೆ ನಡೆಯಿತು. ಪ್ರಾಂತೀಯ ಪ್ರಥಮ ಮಹಿಳೆ ಸಂಧ್ಯಾ ರಮಾನಂದ ತೆಂಗಿನ ಗಿಡಕ್ಕೆ ನೀರು ಎರೆದು ಬಳಿಕ ವೇದಿಕೆಯಲ್ಲಿ ದೀಪಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭಕೋರಿದರು. ಪ್ರಧಾನ ಅತಿಥಿಯಾಗಿದ್ದ ಸರಕಾರಿ ಪದವಿಪೂರ್ವ ಕಾಲೇಜು ಸಿದ್ಧಕಟ್ಟೆ ಇಲ್ಲಿನ ಪ್ರೌಢಶಾಲಾ ವಿಭಾಗದ ಅಧ್ಯಾಪಕ ಮಹೇಶ್ ಕುಮಾರ್ ವಿ. ಕರ್ಕೇರ ಮಾತನಾಡಿ ಜಗತ್ತು ಭೂಮಿಯನ್ನು ನಪುಂಸಕ ಲಿಂಗದಿಂದ ಕರೆದರೆ ತಾಯಿ ಎನ್ನುವ ಮಾತೃಭಾವದಿಂದ ನಮ್ಮ ದೇಶದ ಹಿರಿಯರು ಕರೆದರು. ನೆಲದ ಮೆಲೆ ನಿಂತು ಆಕಾಶ ನೋಡಿ ಯಾವ ಯಾವ ಗ್ರಹಗಳು ಎಲ್ಲೆಲ್ಲಿವೆ ಎನ್ನುವುದನ್ನು ತಿಳಿಸಿಕೊಟ್ಟವರು…
ಬಂಟ್ವಾಳ: ನಾವೂರು ಗ್ರಾಮದ ಫರ್ಲಾ ಚರ್ಚ್ ಬಳಿ ಸರ್ಕಾರಿ ಬಸ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ನಡೆದಿದ್ದು ಈ ಸಂದರ್ಭ ಹೆದ್ದಾರಿ ಪಕ್ಕದಲ್ಲಿರುವ ಮನೆಗೆ ಸರಕಾರಿ ಬಸ್ಸು ಡಿಕ್ಕಿಯಾಗಿ ಹಾನಿಯಾಗಿದೆ. ಧರ್ಮಸ್ಥಳ ಕಡೆಯಿಂದ ಕೆಎಸ್ಆರ್ ಟಿಸಿ ಬಸ್ಸು ಬರುತ್ತಿದ್ದು ವಿರುದ್ದ ದಿಕ್ಕಿನಿಂದ ಟ್ಯಾಂಕರ್ ಲಾರಿ ಇನ್ನೊಂದು ಟ್ಯಾಂಕರ್ ಲಾರಿಯನ್ನು ಓವರ್ ಟೇಕ್ ಮಾಡುವ ಬರದಲ್ಲಿ ಪರಸ್ಪರ ಅಪಘಾತ ಸಂಭವಿಸಿ ಬಸ್ಸು ಹೆದ್ದಾರಿ ಪಕ್ಕ ಇರುವ ಭುಜಂಗ ಮೂಲ್ಯ ಎಂಬವರ ಮನೆಗೆ ಡಿಕ್ಕಿಯಾಗಿ ಹಾನಿ ಉಂಟಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾದಾಗ ಇವರ ಜಾಗವು ಭೂಸ್ವಾಧಿನವಾಗಿದ್ದು ಈ ಮನೆಯರಿಗೆ ಪರಿಹಾರ ಹಣ ಬಾರದೆ ಮನೆಯನ್ನು ಸ್ಥಳಂತರಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಯನ್ನು ಜನರಿಗೆ ತಿಳಿಸಬೇಕು, ಕಾಂಗ್ರೆಸ್ ಜನರಿಗೆ ಸುಳ್ಳು ಹೇಳುತ್ತಿದ್ದು ಬಿಜೆಪಿ ಕಾರ್ಯಕರ್ತರು ಜನರಿಗೆ ಸತ್ಯ ತಿಳಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.ಅವರು ಗ್ರಾಮ ಚಲೋ ಅಭಿಯಾನದಂಗದವಾಗಿ ಪುದು ಮಹಾಶಕ್ತಿ ಕೇಂದ್ರದ ವತಿಯಿಂದ ರಾಮಲ್ ಕಟ್ಟೆಯ ಶ್ರೀ ವೈದ್ಯನಾಥ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ ಗ್ಯಾರಂಟಿಗಳು ಜನರಿಗರ ಸಿಗುತ್ತಿಲ್ಲ, ಕಾಂಗ್ರೆಸ್ ನಾಯಕರು ಜನರಿಗೆ ಮುಖ ತೋರಿಸಿಕೊಳ್ಳಲಾಗದೆ ದೆಹಲಿಯತ್ತ ಹೋಗುತ್ತಿದ್ದಾರೆ ಎಂದು ಟೀಕಿಸಿದರು. ನಮ್ಮೆಲ್ಲರ ಹಲವು ವರ್ಷಗಳ ಕನಸಾದ ರಾಮ ಮಂದಿರ ನಿರ್ಮಾಣವನ್ನು ಮೋದಿ ಸರಕಾರ ಮಾಡಿದೆ, ಅತೀ ಹೆಚ್ಚು ಬಹುಮತದ ಮೂಲಕ ಮತ್ತೊಮ್ಮೆ ಅವರನ್ನು ಪ್ರಧಾನಿ ಮಾಡುವ ಸಂಕಲ್ಪ ತೊಡಬೇಕು ಎಂದು ತಿಳಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ ಗ್ರಾಮ ಚಲೋ ಕಾರ್ಯಕ್ರಮದಡಿ ಸಂಚಾಲಕ ಹಾಗೂ ಪ್ರವಾಸಿ ಕಾರ್ಯಕರ್ತರ ತಂಡ ಗ್ರಾಮದ ಪ್ರತೀ ಮನೆಗಳಿಗೂ ಭೇಟಿ…
ಬಂಟ್ವಾಳ: ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ ವಿಷ್ಣು ಪ್ರಸಾದ ಪ್ರಶಸ್ತಿಯನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ಪ್ರದಾನ ಮಾಡಲಾಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಸೇವೆಯಿಂದ ಸಾರ್ಥಕತೆ ಎಂಬ ಧ್ಯೇಯ ವಾಕ್ಯದಂತೆ ಆರೋಗ್ಯ, ಶಿಕ್ಷಣ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವಾಂಜಲಿ ಪ್ರತಿಷ್ಠಾನದ ಮೂಲಕ ಅನುಪಮ ಸೇವೆ ಸಲ್ಲಿಸುತ್ತಿರುವ ಕೃಷ್ಣ ಕುಮಾರ್ ಪೂಂಜ ಅವರ ಸೇವಾ ಕಾರ್ಯ ಅಭಿನಂದನೀಯ ಎಂದು ಹೇಳಿದರು. ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ ರಾವ್ ಪೇಜಾವರ ಅವರು ಅಧ್ಯಕ್ಷತೆ ವಹಿಸಿದ್ದರು.ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಶುಭ ಹಾರೈಸಿದರು. ಸನಾತನ ಸಂಸ್ಥೆಯ ಉಪೇಂದ್ರ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಜಿ.ಪಂ.ಮಾಜಿ ಸದಸ್ಯ…
ಬೆಳ್ಮಣ್: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಫೆ.10ರ ಶನಿವಾರದಂದು ಸಾಯಂಕಾಲ ಗಂಟೆ 4.00ರಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ ಜರಗಲಿದೆ.ರಾತ್ರಿ ಗಂಟೆ 7.00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ರಾತ್ರಿ ಗಂಟೆ 8.00ರಿಂದ “ಸಂತ ಸಮಾಗಮ” ಧಾರ್ಮಿಕ ಸಭೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಭಾರತಭೂಷಣ ಚಾರುಕೀರ್ತಿ ಭಟ್ಟಾರಕ ಪಂಡಿತಾಚರ್ಯವರ್ಯ ಮಹಾ ಸ್ವಾಮೀಜಿ, ಶ್ರೀಧಾಮ ಮಾಣಿಲ ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ, ಗುರುಪುರ ಕ್ಷೇತ್ರ ವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಬಲ್ಯೊಟ್ಟು ಮಠದ ಪರಮಪೂಜ್ಯ…








