Author: admin

ಬಂಟ್ವಾಳ: ಇಂದು ಯಕ್ಷಗಾನವನ್ನು ನಿರಂತರವಾಗಿ ಉಳಿಸಿ, ಬೆಳೆಸಲು ಕಲಾಪೋಷಕರ ಪಾತ್ರ ಹಿರಿದು, ಬೊಂಡಾಲದಲ್ಲಿ ದೀರ್ಘಕಾಲ ಯಕ್ಷಗಾನವನ್ನು ಸೇವಾರೂಪದಲ್ಲಿ ಆಡಿಸುವುದಲ್ಲದೆ, ಕಲಾವಿದರನ್ನು ಸನ್ಮಾನಿಸುವ ಮೂಲಕ ಕಲಾಮಾತೆಯ ಸೇವೆಯನ್ನೂ ನಡೆಸಿಕೊಂಡು ಬರುತ್ತಿರುವುದು ಸ್ತುತ್ಯರ್ಹ ಎಂದು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಅನಂತಪದ್ಮನಾಭ ಅಸ್ರಣ್ಣ ಹೇಳಿದರು. ಕಟೀಲು ಮೇಳದ ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್‌ಗೆ ಬೊಂಡಾಲ ಪ್ರಶಸ್ತಿ ಪ್ರದಾನ ಹಳೆ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ಧನ ಶೆಟ್ಟಿ ಮತ್ತು ಅವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ.ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ವತಿಯಿಂದ ನೀಡಲಾಗುವ ಬೊಂಡಾಲ ಪ್ರಶಸ್ತಿಯನ್ನು ಕಟೀಲು ಮೇಳದ ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಅವರಿಗೆ ಶುಕ್ರವಾರ ರಾತ್ರಿ ಬೊಂಡಾಲದಲ್ಲಿ ನಡೆದ ಯಕ್ಷಗಾನ ಬಯಲಾಟ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿ ಅವರು ಮಾತನಾಡಿದರು. ಯಕ್ಷಗಾನ ಬೆಳೆಯಬೇಕು ಎಂದಿದ್ದರೆ, ಕಲಾವಿದರು ಬೇಕು, ಉತ್ತಮ…

Read More

ಬಂಟ್ವಾಳ: ಕಟೀಲು ಮೇಳದ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ದಲಿತ ಸಮುದಾಯವನ್ನು ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗುತ್ತಿದ್ದು ಯಕ್ಷಗಾನ ಕಲಾವಿದರು ಮಾತಿನ ಭರದಲ್ಲಿ ರಂಗಸ್ಥಳದಲ್ಲಿ ಜಾತಿ ನಿಂದನೆ ಮಾಡಿದ್ದು ಘಟನೆಯನ್ನು ಖಂಡಿಸುವುದಾಗಿ ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸತೀಶ್ ಅರಳ ತಿಳಿಸಿದ್ದಾರೆ.ಖ್ಯಾತ ಯಕ್ಷಗಾನ ಕಲಾವಿದರದ ಸುಣ್ಣoಬಳ ವಿಶ್ವೇಶ್ವರ ಭಟ್ ಮತ್ತು ಡಾ. ಮಹೇಶ್ ಸಾಣೂರು ಇವರು ಶ್ರೀ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಬ್ರಾಹ್ಮಣ ಪಾತ್ರ ಮತ್ತು ದಲಿತ ಪಾತ್ರ ಮಾಡಿ ಸಂಭಾಷಣೆಯ ಸಂದರ್ಭದಲ್ಲಿ ದಲಿತರಿಗೆ ಅಪಮಾನ ಆಗುವ ರೀತಿಯಲ್ಲಿ ಚಿತ್ರಿಸಿ ಅತ್ಯಂತ ಕೀಳು ಮಟ್ಟದ ಪದ ಬಳಕೆ ಮಾಡಿ ಜಾತಿ ನಿಂದನೆಯನ್ನು ಮಾಡಿರುವುದಾಗಿ ಆರೋಪಿಸಿದ್ದಾರೆ. ಜಾತಿಯ ಹೆಸರನ್ನು ಅತ್ಯಂತ ಕೀಳು ಅರ್ಥ ಬರುವ ರೀತಿಯಲ್ಲಿ ವರ್ಣನೆ ಮಾಡಿರುವ ವಿಡಿಯೋ ತುಣುಕು ಪ್ರಸ್ತುತ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದ್ದು ದಲಿತ ಸಮುದಾಯದಿಂದ ಖಂಡನೆ ವ್ಯಕ್ತವಾಗುತ್ತಿದೆ. ಈ…

Read More

ಮಡಂತ್ಯಾರು: ಹುಬ್ಬಳ್ಳಿ ನಗರದ ಗೋಕುಲ್ ಗಾರ್ಡನ್ ನಲ್ಲಿ ಜನವರಿ 21, 22 ರಂದು ಇಂಟರ್ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ ಶಿಪ್- 2023 ಕರಾಟೆ ಸ್ಪರ್ಧಾ ಕೂಟವು ನಡೆಯಿತು.ಈ ಸ್ಪರ್ಧಾ ಕೂಟವನ್ನು ಹುಬ್ಬಳ್ಳಿಯ ಎಕ್ಸ್ಟ್ರೀಮ್ ಸ್ಪೋರ್ಟ್ಸ್ ಅಕಾಡೆಮಿ ಕರಾಟೆ ಸಂಸ್ಥೆಯು ಆಯೋಜಿಸಿತ್ತು. ಬೆಳ್ತಂಗಡಿ ತಾಲೂಕಿನಿಂದ ಶೋನಿಕಾ ವಿ ಆರ್ ಬಂಗೇರ ಹುಡುಗಿಯರ ಹದಿನೆಂಟು ವರ್ಷದ ವಯೋಮಿತಿಯಲ್ಲಿ ಬ್ಲಾಕ್ ಬೆಲ್ಟ್ ವಿಭಾಗದ ಕಟಾದಲ್ಲಿ ಪ್ರಥಮ, ಕುಮಿತೆಯಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕ ಮತ್ತು ಪ್ರಮಾಣ ಪತ್ರ ಪಡೆದು ವಿಶೇಷ ಸಾಧನೆ ಮಾಡಿರುತ್ತಾರೆ. ಈ ಸ್ಪರ್ಧಾ ಕೂಟಕ್ಕೆ ಭಾಗವಹಿಸಲು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಪ್ರಾಯೋಜಕತ್ವ ನೀಡಿದ್ದು ಕರಾಟೆ ನಿರ್ದೇಶಕ ಶಿಹಾನ್ ವಸಂತ ಕೆ.ಬಂಗೇರ ಮತ್ತು ಬಿ.ಕೆ. ರೇಖಾ ಪಾರೆಂಕಿ ದಂಪತಿಗಳ ಪುತ್ರಿಯಾಗಿರುತ್ತಾರೆ. ರಾಜ್ಯ ಸರಕಾರದ ಯೋಜನೆಯಡಿಯಲ್ಲಿ ಹೆಣ್ಣುಮಕ್ಕಳಿಗೆ ಸ್ವಂರಕ್ಷಣೆ ಕಲೆ ತರಬೇತಿ ನೀಡುವ ಜಿಲ್ಲೆಯ ಕರಾಟೆ ತರಬೇತಿ ಶಿಕ್ಷಕಿಯಾಗಿ ಮಡಂತ್ಯಾರು ಬಿ.ಸಿ.ಯಂ ಹಾಸ್ಟೆಲ್, ಮಚ್ಚಿನ ಮೊರಾರ್ಜಿ ವಸತಿ ಶಾಲೆಯ…

Read More

ಬಂಟ್ವಾಳ: ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟ ವತಿಯಿಂದ ದಕ್ಷಿಣ ಭಾರತದ ಪ್ರಸಿದ್ದ ವಿದ್ಯ ಕೇಂದ್ರ ಕಲ್ಲಿಕೋಟೆಯ ಜಾಮಿಯಾ ದಾರುಸ್ಸಲಾಮ್ ನಂದಿ‌ಇದರ 47 ವಾರ್ಷಿಕ 15 ನೇ ಘಟಿಕೋತ್ಸವ ಫೆ.24 ರಿಂದ 26 ರವರೆಗೆ ನಡೆಯುವ ಹಿನ್ನಲೆಯಲ್ಲಿ ಬೃಹತ್ ಮಿಹ್ರಾಜ್ ಮಜ್ಲಿಸ್,ಸುನ್ನಿ ಸಮಾವೇಶ ಕಾರ್ಯಕ್ರಮವು ಫೆ.18 ರಂದುಮಾಣಿ ಜನಪ್ರಿಯ ಮೈದಾನದಲ್ಲಿ ಜರಗಲಿದೆ ಎಂದು ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಬಿ.ಮುಹಮ್ಮದ್ ದಾರಿಮಿ ಹೇಳಿದ್ದಾರೆ.ಗುರುವಾರ ಸಂಜೆ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಸಮಾವೇಶವುವೈವಿಧ್ಯಪೂರ್ಣವಾಗಿ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಪ್ರಚಾರ ಕಾರ್ಯವು ರಾಜ್ಯಾದ್ಯಂತ ನಡೆಯುತ್ತಿದೆ ಎಂದರು.ಅಂದು ಸಂಜೆ ಜನಪ್ರಿಯ ಗಾರ್ಡನ್‌ ನ ಹಾಜಿ ಇಸ್ಮಾಯಿಲ್ ರವರು ಧ್ವಜಾರೋಹಣ ಗೈಯ್ಯಲಿದ್ದಾರೆ. ಸಮಸ್ತ ಪ್ರ. ಕಾರ್ಯದರ್ಶಿ ಶೈಖುಲ್ ಜಾಮಿಯಾ ಆಲಿಕುಟ್ಟಿ ‌ ದುವಾ ನೆರವೇರಿಸಿ, ಆಶೀರ್ವಚನ ನೀಡಲಿದ್ದಾರೆ. ಖಾಜಿ ತ್ವಾಕಾ ಆಹ್ಮದ್ ಮುಸ್ಲಿಯಾರ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಶಾಸಕರು ಸಹಿತ ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.ಈ ವರ್ಷ ಸನದು ಪಡೆಯುವ ಯುವ ದಾರಿಮಿಗಳನ್ನು ಸಭೆಯಲ್ಲಿ ಸನ್ಮಾನಿಸಲಾಗುವುದು.ಎಂದ…

Read More

ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 12 ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳ” ವು ಮಾ.4 ರಂದು ವೈಭವಯುತವಾಗಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ.‌‌ ಬಿ.ಸಿ‌.ರೋಡಿನ ಹೊಟೇಲ್ ರಂಗೋಲಿಯಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದ ಯಶಸ್ವಿಗೆ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು. ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭ ಆಶೀರ್ವಾದಗಳೊಂದಿಗೆ” ಬಂಟ್ವಾಳ ಕಂಬಳ” ಎಂಬ ಹೆಸರಿನಲ್ಲಿ ನಡೆಸಲಾಗುತ್ತಿದ್ದು, ಕಳೆದ ವರ್ಷ ಕಂಬಳ ಸೀಸನ್ ನ ಬಳಿಕವು ಕೋಣದ ಮಾಲೀಕರ ಸಹಕಾರದಿಂದ ಜಿಲ್ಲಾ ಕಂಬಳ ಸಮಿತಿ ವಿಶೇಷವಾದ ಅವಕಾಶ ಕಲ್ಪಿಸಿಕೊಟ್ಟಿದ್ದು,ಮಳೆಯಿಂದಾಗಿ ಒಂದಷ್ಟು ಸಮಸ್ಯೆ ಯಾಗಿತ್ತು.ಈ ಬಾರಿ ಮಾರ್ಚ್ ತಿಂಗಳಲ್ಲೇ ಕಂಬಳ ಸಮಿತಿ ಅನುವು ಮಾಡಿಕೊಟ್ಟ ಹಿನ್ನಲೆಯಲ್ಲಿ ವ್ಯವಸ್ಥಿತವಾಗಿ ಕಂಬಳವನ್ನು ನಡೆಸಲುದ್ದೇಶಿಸಲಾಗಿದೆ ಎಂದು ಹೇಳಿದರು.ಕಂಬಳದ ಯಶಸ್ವಿಗಾಗಿ ಮೂಡೂರು-ಪಡೂರು ಕಂಬಳ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಕಳೆದ ಬಾರಿಯ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.ಜೋಡುಕರೆಗಳನ್ನು…

Read More

https://youtu.be/9dsVc8NgpaE ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ ಹೇಗಿತ್ತು? ನೋಡಿ ಬಂಟ್ವಾಳ: ಪುರಸಭೆ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಗಳ ಅಸಮರ್ಪಕ ಕಾರ್ಯ ನಿರ್ವಾಹಣೆ ಹಾಗೂ ಅನುಷ್ಠಾನದ ಬಗ್ಗೆ ಹಿಂದಿನ ಸಾಮಾನ್ಯ ಸಭೆಗಳಲ್ಲಿ ಚರ್ಚೆಯಾಗುತ್ತಿದ್ದು ಗುರುವಾರ ನಡೆದ ಸಾಮಾನ್ಯ ಸಭೆಯಲ್ಲೂ ಸಿಸಿ ಕ್ಯಾಮರ ನಿರ್ವಹಣೆಯ ಬಗ್ಗೆ ಹಿಂದಿನ ಸಭೆಯ ನಿರ್ಣಯ ಕಾರ್ಯಗತವಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ವಿರೋಧ ಪಕ್ಷದ ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಅಧ್ಯಕ್ಷರ ಪೀಠದ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.ಪುರಸಭಾಧ್ಯಕ್ಷರು, ಮುಖ್ಯಾಧಿಕಾರಿ, ಆಡಳಿತ ಪಕ್ಷದ ಸದಸ್ಯರು ಧರಣಿ ನಿರತ ಸದಸ್ಯರನ್ನು ಮನವೊಲಿಸುವ ಪ್ರಯತ್ನ ನಡೆಸಿದರೂ ಫಲ ನೀಡದೆ ಇದ್ದಾಗ ಈ ವಿಚಾರವಾಗಿ 3 ನೇ ತಂಡದ ತಾಂತ್ರಿಕ ವರದಿ ಪಡೆದು ಫೆ.21 ರಂದು ಮಂಗಳವಾರ ಸಭೆ ಮುಂದುವರರೆಸುವುದಾಗಿ ತೀರ್ಮಾನಿಸಲಾಯಿತು. ಪುರಸಭೆಯ ಅಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯ ಆರಂಭದಲ್ಲಿ ಬೀದಿ ಬದಿ ವ್ಯಾಪಾರ, ಎರಡನೇ ಹಂತದ ಕುಡಿಯುವ ನೀರಿನ ಯೋಜನೆ ಅನುಷ್ಠಾನದ ವಿಚಾರವಾಗಿ ತೀವ್ರ ಚರ್ಚೆ…

Read More

ಬಂಟ್ವಾಳ: ಮುಂದಿನ ಮೇ ತಿಂಗಳಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನೇಮಿಸಬೇಕಾಗಿರುವುದರಿಂದ ದ.ಕ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಮತ್ತು ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ|| ಮುರಲೀ ಮೋಹನ್ ಚೂಂತಾರು ಅವರು ಬಂಟ್ವಾಳ ಗೃಹರಕ್ಷಕದಳ ಕಚೇರಿಗೆ ಭೇಟಿ ನೀಡಿದರು. ನಿಷ್ಕ್ರಿಯ ಗೃಹರಕ್ಷಕರನ್ನು ತೆಗೆದುಹಾಕಿ ಹೆಚ್ಚು ಕ್ರೀಯಾಶೀಲ ಗೃಹರಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಘಟಕಾಧಿಕಾರಿ ಐತಪ್ಪ ಅವರಿಗೆ ಸೂಚನೆ ನೀಡಿದರು. ಎಲ್ಲಾ ಗೃಹರಕ್ಷಕರು ತಮ್ಮ ಸದಸ್ಯತ್ವ ನವೀಕರಣಗೊಳಿಸಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಮಾಡಿಸಿಕೊಂಡು ಚುನಾವಣೆಗೆ ತಯಾರಾಗುವಂತೆ ಸೂಚನೆ ನೀಡಿದರು. ಪದೇ ಪದೇ ಕಾರಣವಿಲ್ಲದೆ ವಾರದ ಕವಾಯತಿಗೆ ಗೈರುಹಾಜರಾಗುವ ಮತ್ತು ಬಂದೋಬಸ್ತ್ ಕರ್ತವ್ಯಗಳಿಗೆ ಬಾರದೇ ಇರುವ ಗೃಹರಕ್ಷಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಘಟಕಾಧಿಕಾರಿಗೆ ಸೂಚನೆ ನೀಡಿದರು. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಗೆ ಎಲ್ಲಾ ಗೃಹರಕ್ಷಕರು ನೊಂದಾಯಿಸಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಗೃಹರಕ್ಷಕರಾದ ಶಿವರಾಜ್, ರಾಜೇಶ್, ಜಯಂತ್ ಮುಂತಾದವರು ಉಪಸ್ಥಿತರಿದ್ದರು.

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು ವತಿಯಿಂದ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಲಿಕಾ ಹಬ್ಬಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸುಧಾಕರ್ ಕೆ. ಬುಧವಾರ ಚಾಲನೆ ನೀಡಿದರು.ಅವರು ಮಾತನಾಡಿ ಸುಧಾಕರ್ ಕೆ, ಮಕ್ಕಳ ಸರ್ವಾಂಗೀಣ ಅಭ್ಯುದಯಕ್ಕಾಗಿ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರ ಸದುಪಯೋಗವನ್ನು ಮಕ್ಕಳೊಂದಿಗೆ ಶಿಕ್ಷಕರೂ ಪಡೆದುಕೊಳ್ಳಬೇಕು. ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ ಇಂತಹ ಕಾರ್ಯಕ್ರಮಗಳು ಶೈಕ್ಷಣಿಕ ವರ್ಷದ ಆರಂಭದಲ್ಲಿ ಬಂದರೆ ಉತ್ತಮ. ಮೇಲ್ ಹಂತದಲ್ಲಿ ಅಧಿಕಾರಿಗಳ ಹೇರಿಕೆಯಿಂದ ಗೊಂದಲ ಉಂಟಾಗುತ್ತದೆ. ಇಂತಹ ವೈರುದ್ಯಗಳ ಬಗ್ಗೆ ಸಂಘಟನೆಯ ಮೂಲಕ ಇಲಾಖೆಯ ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದರು.…

Read More

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು 5 ಲಕ್ಷ ರೂ. ಮೊತ್ತದ ಆರ್ಥಿಕ ಸಹಾಯಧನದ ಡಿ.ಡಿ.ಯನ್ನು ಹಸ್ತಾಂತರಿಸಿದರು. ಬಂಟ್ವಾಳ: ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯ ಪ್ರಾಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು 5 ಲಕ್ಷ ರೂ. ಮೊತ್ತದ ಆರ್ಥಿಕ ಸಹಾಯಧನದ ಡಿ.ಡಿ.ಯನ್ನು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಜೀರ್ಣೊದ್ಧಾರ ಸಮಿತಿ ಅಧ್ಯಕ್ಷ ಅಮ್ಮು ರೈ ಹರ್ಕಾಡಿ, ಪ್ರ.ಕಾರ್ಯದರ್ಶಿ ಅನಂತರಾಮ ನಾಯಕ್, ಕೋಶಾಧಿಕಾರಿ ಜಯರಾಮ ಕುಲಾಲ್, ಪ್ರಮುಖರಾದ ಮಾಣಿಕ್ಯರಾಜ್ ಜೈನ್, ಲೋಕಯ್ಯ ಪೂಜಾರಿ, ರವೀಂದ್ರ ಕುಲಾಲ್, ಶ್ರೀನಾಥ್ ಬೆಂಗಳೂರು ಅವರು ಉಪಸ್ಥಿತರಿದ್ದರು.

Read More

ಬಂಟ್ವಾಳ: ಊರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಶಂಭೂರಿನಿಂದ ದಾವಣಗೆರೆಗೆ ಹೋದ ವ್ಯಕ್ತಿ ಊರಿಗೆ ತೆರಳದೆ ನಾಪತ್ತೆಯಾದ ಬಗ್ಗೆ ವರದಿಯಾಗಿದೆ.ದಾವಣಗೆರೆ ಮೂಲದ ಜಗಳೂರು ಹುಚ್ಚಂಗಿಪುರ ನಿವಾಸಿ ಕೂಲಿ ಕಾರ್ಮಿಕ ಯಲ್ಲಪ್ಪ (31) ನಾಪತ್ತೆಯಾದ ವ್ಯಕ್ತಿ.ಶಂಭೂರು ಗ್ರಾಮದ ಅಡೆಪಿಲ ಎಂಬಲ್ಲಿ ತೋಟದ ಕೆಲಸ ಮಾಡುತ್ತಿದ್ದ ಇವರು ಮನೆಯವರ ನೆನಪಾಗಿ ಊರಿಗೆ ಹೋಗಿ ಬರುತ್ತೇನೆ ಎಂದು ಬಿ.ಸಿ.ರೋಡಿನಿಂದ ಬಸ್ ನಲ್ಲಿ ತೆರಳಿದವರು ದಾವಣಗೆರೆಗೆ ಹೋಗದೆ, ವಾಪಸು ಬಾರದೆ ನಾಪತ್ತೆಯಾದ ಬಗ್ಗೆ ಸಹೋದರ ತಿಮ್ಮೇಶ್ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದ ವ್ಯಕ್ತಿ

Read More