Author: admin
ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಘಟನೆ ಶುಕ್ರವಾರ ಮುಂಜಾನೆ ವಗ್ಗ ಸಮೀಪದ ಮೇನಾಡು ಎಂಬಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನಾ ಪಿಂಟೋ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಮಾತ್ರ ಇದ್ದು, ಕಪಾಟಿನಲ್ಲಿರಿಸಲಾಗಿದ್ದ ಸುಮಾರು 82 ಗ್ರಾಂ ತೂಕದ ಚಿನ್ನಾಭರಣ, 11 ಸಾವಿರ ಮೌಲ್ಯದ ಎರಡು ಮೊಬೈಲ್ ಪೋನ್, 30 ಸಾವಿರ ರೂಪಾಯಿ ನಗದು ಹಾಗೂ ಒಂದು ಮೊಬೈಲ್ ಪೋನ್ ಸೇರಿ ಅಂದಾಜು 3.20 ಲಕ್ಷ ಮೌಲ್ಯದ ಸೊತ್ತು ದರೋಡೆಯಾಗಿರುವುದಾಗಿ ತಿಳಿದು ಬಂದಿದೆ. ಬೆಳಿಗ್ಗೆ ಸುಮಾರು 6.30 ರ ಸಮಯದಲ್ಲಿ ಮನೆಯ ಕಾಲಿಂಗ್ ಬೆಲ್ ಸದ್ದು ಕೇಳಿ ಬಾಗಿಲು ತೆಗೆದಾಗ ನಾಲ್ವರು ಮುಸುಕುಧಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ಹಣ, ಚಿನ್ನವನ್ನು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಜಗ್ಗದಿದ್ದಾಗ…
ಬಂಟ್ವಾಳ: ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿರುವ ನ್ಯಾಯವಾದಿ ಸುರೇಶ್ ಕುಮಾರ್ ನಾವೂರು ಅವರನ್ನುವ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲ ಸಂಘದ ವತಿಯಿಂದ ಅಭಿನಂದಿಸಲಾಯಿತು.ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಪ್ರಮುಖರಾದಮಾತೃ ಸಂಘಕ್ಕೆ ಇಂದು ಬೇಟಿ ನೀಡಿದ್ದರು ಈ ಸಂದರ್ಭದಲ್ಲಿ ಅವರಿಗೆ ಮಾತೃ ಸಂಘದ ವತಿಯಿಂದ ಗೌರವ ಸಲ್ಲಿಸಲಾಯಿತು ಪ್ರೊ. .ಯತೀಶ್ ಕುಮಾರ್, ಉಪನ್ಯಾಸಕಿ ಆಶಾ, ಸರ್ಕಾರಿ ಅಭಿಯೋಜಕಿ ಸ್ವಾತಿ ಬಂಗೇರ, ಮುಡಿಪು ಕುಲಾಕ ಸಂಘದ ಅಧ್ಯಕ್ಷ ಪುಂಡರಿಕಾಕ್ಷ ಮೂಲ್ಯ , ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ್ ನಿಕಟ ಪೂರ್ವ ಅಧ್ಯಕ್ಷ ನಾರಾಯಣ ಸಿ.ಪೆರ್ನೆ , ರಮೇಶ್ ಕುಲಾಲ್ ಪಣೋಲಿಬೈಲು ,ವಕೀಲ ಉಮಾಕರ್ , ದಯಾನಂದ ನೆರಂಬೋಳ್ ಉಪಸ್ಥಿತರಿದ್ದರು
ಬಂಟ್ವಾಳ: ಪುದು ಗ್ರಾಮದ ಸುಜೀರು ದತ್ತನಗರದ ಶ್ರೀ ವೀರ ಹನುಮಾನ್ ಮಂದಿರದ 22ನೇ ವಾರ್ಷಿಕೋತ್ಸವ ಜ. 15ರಂದು ನಡೆಯಲಿದೆ. ಅಂದು ಬೆಳಿಗ್ಗೆ ಗಣಹೋಮ, ಪಂಚಾಮೃತ ಅಭಿಷೇಕ, ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಒಡಿಯೂರು ಶ್ರೀ ಗುರುದೇವಾದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರ್ರಿ 9 ರಿಂದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಕೃಪಾಪೋಷಿತ ದಶಾವತಾರ ಯಕ್ಷ ಮಂಡಳಿಯಿಂದ ಶಿವಧೂತ ಗುಳಿಗೆ ಯಕ್ಷಗಾನ ನಡೆಯಲಿದೆ. Advertisement
ಬಂಟ್ವಾಳ: ಇಲ್ಲಿನ ಬಡ್ಡಕಟ್ಟೆ ರಾಯರ ಚಾವಡಿಯ ಶ್ರೀ ಪಂಜುರ್ಲಿ ಪಿಲಿಚಾಮುಂಡಿ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವವು ಜ.26 ಮತ್ತು ಜ.27ರಂದು ನಡೆಯಲಿದೆ. ಜ. 26ರಂದು ಬೆಳಿಗ್ಗೆ ಗಣಹೋಮ, ನೇಮೋತ್ಸವದ ಮುಹೂರ್ತ, ಶ್ರೀ ಮುಖ್ಯಪ್ರಾಣ ದೇವರ ಸನ್ನಧಿಯಲ್ಲಿ ಪೂಜೆ, ನಾಗಸನ್ನಿಧಿಯಲ್ಲಿ ನಾಗತಂಬಿಲ, ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮಹಾಪೂಜೆ, ಮಧ್ಯಾಹ್ನ ಅಶ್ವಥ ಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಅಶ್ವತ್ಥ ನಾರಾಯಣ ಕಟ್ಟೆ ಪೂಜೆ, ಪ್ರಸಾಧ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4ಕ್ಕೆ ದೈವಸ್ಥಾನದಲ್ಲಿ ನವಕ ಪ್ರಧಾನ ಹೋಮ, ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ದುರ್ಗಾ ಪೂಜೆ, ರಂಗಪೂಜೆ ರಾತ್ರಿ 8ಕ್ಕೆ ದೈವಸ್ಥಾನದಿಂದ ನೇಮೋತ್ಸವದ ಗದ್ದೆಗೆ ಭಂಡಾರ ಹೊರಟು ಶ್ರೀ ಪಿಲಿಚಾಮುಂಡಿ, ಕಲ್ಕುಡ ದೈವಗಳಿಗೆ ನೇಮೋತ್ಸವ, ರಾತ್ರಿ 12.30ಕ್ಕೆ ಶ್ರೀ ಪಿಲಿಚಾಮುಂಡಿ ಕಲ್ಕುಡ ದೈವಗಳ ವಲಸರಿ ನಡೆಯಲಿದೆ. Advertisement ಜ.27ರಂದು ಶನಿವಾರ ಸಂಜೆ 5.30ಕ್ಕೆ ಶ್ರೀ ಪಂಜುರ್ಲಿ ದೈವದ ಎಣ್ಣೆಬೂಳ್ಯ, ರಾತ್ರಿ 9ಕ್ಕೆ ಶ್ರೀ ಪಂಜುರ್ಲಿ ಕಲ್ಲುರ್ಟಿ ದೈವಗಳಿಗೆ ನೇಮೋತ್ಸವ ನಡೆಯಲಿದೆ ಎಂದು ಪ್ರಕಟಣೆ…
ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಇದರ 16ನೇ ತೊಕ್ಕೊಟ್ಟು- ದೇರಳಕಟ್ಟೆ ಶಾಖೆಯು ಜ.14ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿರುವ ನಿತ್ಯಾನಂದ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿದೆ.ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲಿಸಿ, ಆಶೀರ್ವಚನ ನೀಡುವರು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ನೂತನ ಶಾಖೆ ಉದ್ಘಾಟಿಸುವರು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ವಹಿಸುವರು. ಭದ್ರತಾ ಕೊಠಡಿಯಯನ್ನು ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ ಕುಮಾರ್ ರೈ ಬೋಳಿಯಾರ್, ಸೇಫ್ ಲಾಕರನ್ನು ದೈವದ ಮೂಲ್ಯಣ್ಣ ಕೆ. ಬಾಲಕೃಷ್ಣ ಸಾಲಿಯಾನ್, ಕಂಪ್ಯೂಟರನ್ನು ಬೆಳ್ಮಾ ಗ್ರಾಮ ಪಂಚಾಯತಿ ಅಧ್ಯಕ್ಷೆ ರಜೀಯ ಉದ್ಘಾಟಿಸುವರು, ಕುಂಭೇಶ್ವರ ವಿ.ಸ.ಸಂಘ ನಿ. ಕೊಲ್ಯ ಇದರ ಅಧ್ಯಕ್ಷ ಗೋಪಾಲ ಕಣ್ವತೀರ್ಥ ಠೇವಣಿ ಪತ್ರ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಉಪ ನಿಬಂಧಕ ಎಚ್. ಎನ್. ರಮೇಶ್, ಕೊಂಡಾಣ ದೇವಸ್ಥಾನದ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರು, ದೇರಳಕಟ್ಟೆಯ ಪಾನೀರು ಚರ್ಚ್‌ನ ಧರ್ಮಗುರು ವಂ. ರೇ| ಫಾ|…
ಬಂಟ್ವಾಳ: ಸ್ವಚ್ಚತೆ ಹಾಗೂ ತ್ಯಾಜ್ಯ ವಿಲೇವಾರಿಯ ಬಗ್ಗೆ ಅರಿವು ಮೂಡಿಸುವ ಕಸ ಪ್ರಸಂಗ ವಿಶೇಷ ಜಾಗೃತಿ ಕಾರ್ಯಕ್ರಮ ಮಂಗಳವಾರ ಬಂಟ್ವಾಳ ಪುರಸಭೆಯ ಸಭಾಂಗಣದಲ್ಲಿ ನಡೆಯಿತು. ಹಸಿರುದಳ ಸಂಯೋಜಕ ನಾಗರಾಜ್ ಬಜಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೌರಕಾರ್ಮಿಕರಿಗೆ ತ್ಯಾಜ್ಯ ವಿಲೇವಾರಿಯ ಬಗ್ಗೆ ಅರಿವು ಹಾಗೂ ಅವರ ಜವಾಬ್ದಾರಿಯ ಬಗ್ಗೆ ತಿಳಿಸಿಕೊಟ್ಟರು. ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಸಂದೀಪ್ ಸಾಲ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಿರಿಯ ಎಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಸಮುದಾಯ ಸಂಘಟಕಿ ಉಮಾವತಿ, ಪುರಸಭೆಯ ಸಿಬ್ಬಂದಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.
ಬಂಟ್ವಾಳ: ಉತ್ತರದ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನಿಗೆ ಸುಂದರವಾದ ದೇವಸ್ಥಾನ ನಿರ್ಮಾಣಗೊಂಡು ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆಗೊಳ್ಳುವ ಸುಸಂದರ್ಭದಲ್ಲೇ ದಕ್ಷಿಣದಲ್ಲಿರುವ ಬಂಟ್ವಾಳದ ತಾಲೂಕಿನ ಫರಂಗಿಪೇಟೆಯಲ್ಲಿ ಶ್ರೀರಾಮ ಧೂತ ಹನುಮನಿಗೂ ಸುಂದರವಾದ ಶಿಲಾಮಯ ದೇವಸ್ಥಾನ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ. ದೇವಸ್ಥಾನ ನಿರ್ಮಾಣದ ಅಂತಿಮ ಹಂತದ ಕೆಲಸಗಳು ಭರದಿಂದ ನಡೆಯುತ್ತಿದ್ದು ಫರಂಗಿಪೇಟೆ ಆಸುಪಾಸಿನ ಆರು ಗ್ರಾಮದ ಜನರಲ್ಲಿ ಸಂಭ್ರಮ ಮನೆ ಮಾಡಿದೆ. ಜಿಲ್ಲೆಯ ಜೀವನದಿ ನೇತ್ರಾವದಿಯ ದಂಡೆಯಲ್ಲಿರುವ ಪುದು ಗ್ರಾಮದ ಫರಂಗಿಪೇಟೆ ಬೆಳೆಯುತ್ತಿರುವ ಸಣ್ಣ ಪಟ್ಟಣ. ಇಲ್ಲಿನ ವಿಜಯನಗರದಲ್ಲಿ ಸುಮಾರು 40 ವರ್ಷಗಳ ಹಿಂದೆ ಊರಿನ ಯುವಕರು ವ್ಯಾಯಮ, ತಾಲೀಮು, ಕುಸ್ತಿ ಮೊದಲಾದ ಅಂಗ ಸಾಧನೆಗಾಗಿ ಮುಳಿಹುಲ್ಲಿನ ಜೋಪಡಿಯಲ್ಲಿ ಓಂ ಶ್ರೀ ವೀರಾಂಜನೇಯ ಎನ್ನುವ ವ್ಯಾಯಮ ಶಾಲೆಯನ್ನು ಆರಂಭಿಸಿದರು. ಕ್ರಮೇಣ ಮುಳಿಹುಲ್ಲಿನ ವ್ಯಾಯಾಮ ಶಾಲೆ ಸುಸಜ್ಜಿತ ಕಟ್ಟಡವಾಗಿ ಮಾರ್ಪಡುಗೊಂಡು ಶ್ರೀ ಆಂಜನೇಯ ಸ್ವಾಮಿಯ ಶಿಲಾಮೂರ್ತಿ ಪ್ರತಿಷ್ಠಾಪನೆಗೊಂಡಿತು. ನಿತ್ಯ ಪೂಜೆ, ಪುನಸ್ಕಾರಗಳಿಂದ ವ್ಯಾಯಮಶಾಲೆ ಶ್ರದ್ದಾಕೇಂದ್ರವಾಗಿ ಬೆಳೆಯುತ್ತಾ ಭಕ್ತ ಜನಾಕರ್ಷಣೆಯನ್ನು ಪಡೆಯಲಾರಂಭಿಸಿತು. ಪ್ರಶ್ನಾಚಿಂತನೆಯಲ್ಲಿ ಈ ಸ್ಥಳದಲ್ಲಿ ಶ್ರೀ ಆಂಜನೇಯನಿಗೆ…
ಬಂಟ್ವಾಳ: ಜೆಸಿಐ ಬಂಟ್ವಾಳದ 2024ನೇ ಸಾಲಿನ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಾಪ್ರದಾನ ಸಮಾರಂಭ ಬಂಟರ ಭವನದಲ್ಲಿ ನಡೆಯಿತು.ಶಕ್ತಿ ಎಜುಕೇಶನ್ ಟ್ರಸ್ಟ್ ನ ಮುಖ್ಯ ಸಲಹೆಗಾರ ರಮೇಶ್ ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ವಲಯ 15 ರ ಪ್ರಾಂತ್ಯ ಬಿ ಯ ಉಪಾಧ್ಯಕ್ಷ ಶಂಕರ್ ರಾವ್ ಭಾಗವಹಿಸಿದ್ದರು.ನಿರ್ಗಮನ ಅಧ್ಯಕ್ಷ ರಾಜೇಂದ್ರ ಕೆ. ನೂತನ ಅಧ್ಯಕ್ಷೆ ರಶ್ಮಿ ಶೆಟ್ಟಿ ಯವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಪದಾಧಿಕಾರಿಗಳು ಹಾಗೂ ನೂತನ ಸದಸ್ಯರುಗಳಿಗೆ ವಲಯ ಉಪಾಧ್ಯಕ್ಷರು ಪ್ರಮಾಣ ವಚನ ಭೋದಿಸಿದರು.ವೇದಿಕೆಯಲ್ಲಿ ಕಾರ್ಯದರ್ಶಿ ಶ್ರೀನಿವಾಸ್ ಅರ್ಬಿಗುಡ್ಡೆ, ಕೋಶಾಧಿಕಾರಿ ಮನೋಜ್ ಕನಪಾಡಿ, ಲೇಡಿ ಜೇಸಿ ಅಧ್ಯಕ್ಷೆ ಆಶಾಮಣಿ ಡಿ. ರೈ, ನಿಕಟಪೂರ್ವಾಧ್ಯಕ್ಷ ರೋಶನ್ ರೈ, ನಿರ್ಗಮನ ಲೇಡಿ ಜೇಸಿ ಅಧ್ಯಕ್ಷೆ ದೀಪ್ತಿ ಆರ್. ರೈ, ಜೆಜೆಸಿ ಅಧ್ಯಕ್ಷೆ ವೀಕ್ಷಿತಾ ಉಪಸ್ಥಿತರಿದ್ದರು
ಬಂಟ್ವಾಳ: ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ನೃತ್ಯಧಾರ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಭಾನುವಾರ ಸಂಜೆ ನಡೆಯಿತು.ಶ್ರೀ ಕರ್ನಾಟಕ ಕಲಾಶ್ರೀ ಕೆ. ವಿದ್ವಾನ್ ಚಂದ್ರಶೇಖರ್ ನಾವಡ ಅಧ್ಯಕ್ಷತೆ ವಹಿಸಿ ಮಾತನಾಡಿಭಾರತೀಯ ಕಲಾ ಪ್ರಜ್ಞೆ , ಸಂಸ್ಕಾರ, ಸಂಸ್ಕೃತಿ ಹಾಗೂ ಕಲಾ ವಿದ್ಯೆಯನ್ನು ಕಲಿಸುವ ಶ್ರೀದೇವಿ ನೃತ್ಯಾರಾಧನಾ ಶಾಶ್ವತವಾಗಿ ಉಳಿಯ ಬೇಕು ಎಂದರು. ಸಂಸ್ಕಾರ ಉಳಿದರೆ ಸಂಸ್ಕೃತಿ ಉಳಿಯುತ್ತದೆ. ವಿದ್ಯಾರ್ಥಿಗಳಿಗೆ ಭಕ್ತಿ ಪೂರ್ವಕ ನಡೆ ನುಡಿಯನ್ನು ನೀಡುವುದು ಭಾರತೀಯ ನೃತ್ಯ ಕಲೆಗಳು ಮಾತ್ರ. ಮಕ್ಕಳಿಗೆ ಸಂಸ್ಕಾರ ಕಲಿಸಿ ಕೊಟ್ಟಾಗ ಅವರು ತಮ್ಮ ತಂದೆ ತಾಯಿಯನ್ನು ದೂರ ಮಾಡುವುದಿಲ್ಲ. ಅಂತಹ ಪಕ್ವತೆ ಭಾರತೀಯ ಶಾಸ್ತ್ರೀಯ ಕಲೆಗಳಲ್ಲಿದೆ ಎಂದು ತಿಳಿಸಿದರು.ತುಳುವೆರೆ ಜನಪದ ಕೂಟ ಕೊಡಗು ಇದರ ಜಿಲ್ಲಾ ಖಜಾಂಚಿ ಪ್ರಭು ರೈ ಮಾತನಾಡಿ ವಿದ್ಯಾರ್ಥಿಗಳಿಗೆ ಕಲೆಯನ್ನು ಮತ್ತು ಪ್ರತಿಭೆಯನ್ನು ಈ ಸಂಸ್ಥೆ ಧಾರೆ ಎರೆಯುತ್ತ ಬರುತ್ತಿದೆ,…
ಬಂಟ್ವಾಳ: ತುಂಬೆಯ ಗುಲಾಬಿ ಶೆಟ್ಟಿ ಎಜುಕೇಷನ್ ಮತ್ತು ಸರ್ವೀಸ್ ಟ್ರಸ್ಟ್ ಅಧೀನದ ದಿವೀಶ್ ಫ್ರೀ- ಪ್ರೈಮರಿ ಶಾಲೆಯ ವಾರ್ಷಿಕೋತ್ಸವ ನಡೆಯಿತು.ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಟ್ರಸ್ಟ್ ಅಧ್ಯಕ್ಷ, ಜಿ.ಪಂ.ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಸಂಸ್ಥೆಯ ಸಂಚಾಲಕಿ ಉಷಾ ಚಂದ್ರಪ್ರಕಾಶ್ ಶೆಟ್ಟಿ,ಟ್ರಸ್ಟಿ ಸುಕನ್ಯಾ ಶೆಟ್ಟಿ ಹಾಜರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಸ್ವಾತಿಶ್ರೀ , ಸಹ ಶಿಕ್ಷಕಿ ಉಷಾ ಸಹಕರಿಸಿದರು. ಸಹ ಶಿಕ್ಷಕಿ ರುಬೀನಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.








