Author: admin

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ೧೨೪ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಭಾನುವಾರ ನಡೆಯಿತು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಅವರು ಮಾತನಾಡಿ ರಕ್ತದಾನ ಅತ್ಯಂತ ಪುಣ್ಯದ ಕೆಲಸ. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವು ಉತ್ತಮವಾಗುವುದರ ಜೊತೆಗೆ ಇನ್ನೊಬ್ಬರ ಪ್ರಾಣ ಉಳಿಸಲು ಸಾಧ್ಯವಿದೆ ಎಂದರು. ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಅವರು ಸೇವೆಯೇ ತನ್ನ ಗುರಿ ಎನ್ನುವ ಉದ್ದೇಶದೊಂದಿಗೆ ನಿರಂತರವಾಗಿ ಇಂತಹ ಸೇವಾ ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು. ಪೊಲೀಸ್ ಸಿಬ್ಬಂದಿ ಪ್ರಮೋದ್ ದೇವಾಡಿಗ, ಸುಕೇಶ್ ಶೆಟ್ಟಿ ತೇವು ಮೊದಲಾದ ಪ್ರಮುಖರು ರಕ್ತದಾನ ಮಾಡಿದರು. ಈ ಸಂದರ್ಭ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ಪ್ರಮುಖರಾದ ನಾರಾಯಣ ಬಡ್ಡೂರು, ಕೆಎಂಸಿ ಆಸ್ಪತ್ರೆಯ ವೈದ್ಯೆ ಡಾ. ಅಧಿತಿ. ಬ್ಲಡ್ ಬ್ಯಾಂಕಿನ ಸೆಲಿನ್ ಜೋಸೆಫ್, ಅರ್ಜುನ್ ಪೂಂಜ, ಮೋಹನ್, ಸತ್ಯರಾಜ್…

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ೧೨೪ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಭಾನುವಾರ ನಡೆಯಿತು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಅವರು ಮಾತನಾಡಿ ರಕ್ತದಾನ ಅತ್ಯಂತ ಪುಣ್ಯದ ಕೆಲಸ. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವು ಉತ್ತಮವಾಗುವುದರ ಜೊತೆಗೆ ಇನ್ನೊಬ್ಬರ ಪ್ರಾಣ ಉಳಿಸಲು ಸಾಧ್ಯವಿದೆ ಎಂದರು. ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಅವರು ಸೇವೆಯೇ ತನ್ನ ಗುರಿ ಎನ್ನುವ ಉದ್ದೇಶದೊಂದಿಗೆ ನಿರಂತರವಾಗಿ ಇಂತಹ ಸೇವಾ ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು. ಪೊಲೀಸ್ ಸಿಬ್ಬಂದಿ ಪ್ರಮೋದ್ ದೇವಾಡಿಗ, ಸುಕೇಶ್ ಶೆಟ್ಟಿ ತೇವು ಮೊದಲಾದ ಪ್ರಮುಖರು ರಕ್ತದಾನ ಮಾಡಿದರು. ಈ ಸಂದರ್ಭ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ಪ್ರಮುಖರಾದ ನಾರಾಯಣ ಬಡ್ಡೂರು, ಕೆಎಂಸಿ ಆಸ್ಪತ್ರೆಯ ವೈದ್ಯೆ ಡಾ. ಅಧಿತಿ. ಬ್ಲಡ್ ಬ್ಯಾಂಕಿನ ಸೆಲಿನ್ ಜೋಸೆಫ್, ಅರ್ಜುನ್ ಪೂಂಜ, ಮೋಹನ್, ಸತ್ಯರಾಜ್…

Read More

ಬಂಟ್ವಾಳ: ರಾಮಕೃಷ್ಣ ಮಠ, ಮಂಗಳಾದೇವಿ ಮಂಗಳೂರು ಹಾಗೂ ದೇಲಂಪಾಡಿ ಯೋಗ ಪ್ರತಿಷ್ಠಾನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ, ಅವಿಭಜಿತ ದ.ಕ.ಜಿಲ್ಲಾಮಟ್ಟದಲ್ಲಿ ನಡೆದ ರಜತಾಭಿನಂದನೆ ಕಾರ್ಯಕ್ರಮದಲ್ಲಿ 25 ಸಂವತ್ಸರಗಳಿಗೂ ಮಿಗಿಲಾದ ಯೋಗ ಸೇವೆಯನ್ನು ಗುರುತಿಸಿ ನಿವೃತ್ತ ಪ್ರಾಧ್ಯಪಕ ರಾಜಮಣಿ ರಾಮಕುಂಜ ಅವರನ್ನು ಗೌರವಿಸಲಾಯಿತು

Read More

ಬಂಟ್ವಾಳ: ತಾಲೂಕು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಸತತ ೩ನೇ ಬಾರಿಗೆ ವಿಶ್ವನಾಥ ಚೆಂಡ್ತಿಮಾರ್ ಅವರು ಪುನರಾಯ್ಕೆಗೊಂಡಿದ್ದಾರೆ.ಗೌರವಾಧ್ಯಕ್ಷರಾಗಿ ವಸಂತ ಮಣಿಹಳ್ಳ, ಕಾರ್ಯದರ್ಶಿಯಾಗಿ ಶ್ರೀಕಾಂತ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ರವಿ ಪಾಣೆಮಂಗಳೂರು ಆಯ್ಕೆಗೊಂಡರು. —

Read More

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ದಶಂಬರ್ 6ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದ ಸಹಯೋಗದಲ್ಲಿ ಜರಗಿಸಲಿದೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ರಾವ್ ಮೆರವಣಿಗೆಯನ್ನು ಉದ್ಘಾಟಿಸುವರು. ಕಡೇಶಿವಾಲಯ ಶಾಲಾ ಏಳನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಸುವರ್ಣ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿರುತ್ತಾರೆ. ಹಿಂದಿನ ಸಮ್ಮೇಳನಾಧ್ಯಕ್ಷೆ ಓಜಾಲ ಶಾಲಾ ವಿದ್ಯಾರ್ಥಿನಿ ಕುಮಾರಿ ಶ್ರುತಿಕಾ ಬಾಕಿಮಾರು ಉದ್ಘಾಟಿಸುವರು. ಮಕ್ಕಳ ಸ್ವರಚಿತ ಕೃತಿಗಳನ್ನು ಕವಿ ವಿಶ್ವನಾಥ ಕುಲಾಲ್ ಮಿತ್ತೂರು ಬಿಡುಗಡೆಗೊಳಿಸುವರು. ಬದಿಯಡ್ಕ ಶ್ರೀ ಭಾರತಿ ವಿದ್ಯಾ ಪೀಠದ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಆರಾಧ್ಯ ರೈ ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಕುರುಂಬ್ಲಾಜೆ ಕಿಟ್ಟಣ್ಣ ಶೆಟ್ಟಿ ವಿವರಿಸಿದರು.ಪ್ರಾಥಮಿಕದಿಂದ ಪದವಿಪೂರ್ವ ಕಾಲೇಜು ತನಕದ ಸುಮಾರಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮ್ಮೇಳನದ ವಿವಿಧ ಚಟುವಟಿಕೆಗಳಾದ ಚಿತ್ತ ಚಿತ್ತಾರ, ಕಿರುನಾಟಕ, ಸಾಹಿತ್ಯ ಸ್ವರಚನೆ,…

Read More

ಬಂಟ್ವಾಳ: ಕಳೆದ 18 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರನ್ನು ಕೇಂದ್ರವಾಗಿಸಿರಿಕೊಂಡು, ಇಸ್ಕಾನ್ ಅಕ್ಷಯ ಪಾತ್ರೆ ಫೌಂಡೇಶನ್ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿದೆ. ಇದನ್ನು ವಿಸ್ತರಿಸಿರುವ ಸಂಸ್ಥೆ, ಇದೀಗ ದಿನಕ್ಕೆ 25 ಸಾವಿರ ಮಕ್ಕಳಿಗೆ ಬಿಸಿಯೂಟ ನೀಡಲು ಸಜ್ಜಾಗುತ್ತಿದೆ. ಹೆಚ್ಚು ಬೇಡಿಕೆ ಹಿನ್ನೆಲೆ, ಇನ್ನಷ್ಟು ವಿದ್ಯಾರ್ಥಿಗಳನ್ನು ತಲುಪುವ ಉದ್ದೇಶದಿಂದ ಅಕ್ಷಯಪಾತ್ರೆ ಫೌಂಡೇಶನ್ ಈ ಯೋಜನೆ ಆರಂಭಿಸಿದೆ. ಬಂಟ್ವಾಳದ ಬೆಂಜನಪದವು ಎಂಬಲ್ಲಿ ಈಗಾಗಲೇ ಇದರ ಘಟಕ ತಯಾರಾಗಿದ್ದು, ಡಿ.೩ರಂದು ಭಾನುವಾರ ವಿದ್ಯುಕ್ತವಾಗಿ ಚಾಲನೆಗೊಳ್ಳಲಿದೆ ಎಂದು ಇಸ್ಕಾನ್ ಸಂಸ್ಥೆಯ ಗುಣಕರ ರಾಮದಾಸ ಸ್ವಾಮೀಜಿ ತಿಳಿಸಿದರು.ಅವರು ಬಿ.ಸಿ.ರೋಡು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಡಿ. 3ರಂದು ಭಾನುವಾರ ಬೆಳಿಗ್ಗೆ 11.30ಕ್ಕೆ ಮೆಗಾ ಕಿಚನ್ ಉದ್ಘಾಟನಾ ಸಮಾರಂಭ ನಡೆಯಲಿದೆ. ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ದಿವ್ಯ ಉಪಸ್ಥಿತಿಯಲ್ಲಿ ಅಕ್ಷಯ ಪಾತ್ರೆ ಫೌಂಡೇಷನ್ ಅಧ್ಯಕ್ಷ ಮಧು ಪಂಡಿತದಾಸ, ಉಪಾಧ್ಯಕ್ಷ ಚಂಚಲಪತಿ ದಾಸ, ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉದ್ಯಮಿ ಡಾ.…

Read More

ಬಂಟ್ವಾಳ: ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ, ಹಾಗೂ ಕ್ರೀಡಾ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯೊದಗಿಸುವ ನಿಟ್ಟಿನಲ್ಲಿ ಎರಡನೇ ವರ್ಷದ ದಡ್ಡಲಕಾಡು ಚಿಣ್ಣರೋತ್ಸವಕ್ಕೆ ಬಂಟ್ವಾಳ ತಾಲೂಕಿನ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿದ್ದಗೊಳ್ಳುತ್ತಿದೆ. ಕಳೆದ ವರ್ಷದ ಅತ್ಯದ್ಭುತ ಯಶಸ್ಸಿನಿಂದ ಪ್ರೇರಣೆ ಪಡೆದು ಈ ವರ್ಷವೂ ಹಲವಾರು ವಿಶಿಷ್ಠ, ವಿನೂತನ ಕಾರ್ಯಕ್ರಮ ನೀಡಲು ಶಾಲೆಯ ಸಾವಿರಾರು ವಿದ್ಯಾರ್ಥಿಗಳು ತಯಾರಾಗಿದ್ದು ಸರ್ಕಾರಿ ಶಾಲೆಯಲ್ಲಿ ಇಂತಹ ದೊಡ್ಡಮಟ್ಟದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯುತ್ತಿರುವುದು ಪ್ರಥಮ.ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ತಲುಪಿದ್ದ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಅವರ ನೇತೃತ್ವದಲ್ಲಿ ಮಾದರಿ ಶಾಲೆಯಾಗಿ ಬೆಳೆದಿರುವುದು ಈಗ ಇತಿಹಾಸ. ೨೮ ಮಕ್ಕಳಿದ್ದ ಶಾಲೆ ಈಗ ಸರಕಾರಿ ಆಂಗ್ಲಮಾಧ್ಯಮ ಶಾಲೆಯಾಗಿ ಪರಿವರ್ತನೆಗೊಂಡು ೧೨೦೦ಕ್ಕಿಂತಲೂ ಅಧಿಕ ಮಂದಿ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಶಾಲಾ ವೇದಿಕೆ ಕಿರಿದಾದಾಗ ಅನೇಕ ವಿದ್ಯಾರ್ಥಿಗಳು ತಮ್ಮ ಪ್ರತಿಭಾ ಪ್ರದರ್ಶನದಿಂದ ವಂಚಿತರಾಗುತ್ತಾರೆ.…

Read More

ಕರ್ನಾಟಕ ಜೂಡೋ ಸಂಸ್ಥೆ ಬೆಂಗಳೂರು ಇದರ ಆಶ್ರಯದಲ್ಲಿ ಬೆಂಗಳೂರು ನಗರ ಜಿಲ್ಲಾ ಜೂಡೋ ಸಂಸ್ಥೆ ಮತ್ತು ಡಿಬಿಕೆಡಿಓ ಜೈನ್ ವಿಕ್ಕಂ ಸಂಯೋಜನೆಯಲ್ಲಿ ನ.29 ಮತ್ತು 30 ರಂದು ನಡೆದ 41ನೇ ಕರ್ನಾಟಕ ರಾಜ್ಯ ಸಬ್ ಜ್ಯೂನಿಯರ್ ಮತ್ತು ಮಿನಿ ಜೂಡೋ ಚಾಂಪಿಯನ್ ಶಿಪ್ 2023-24 ರಲ್ಲಿ ಆಳ್ವಾಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ತನ್ಮಯ್ ಪಿ.ಶೆಟ್ಟಿ 66 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆದ್ದುಕೊಂಡಿದ್ದಾನೆ. ಈತ ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಮಾರ್ಷಲ್ ಆರ್ಟ್ಸ್ ತರಬೇತಿ ಪಡೆಯುತ್ತಿದ್ದಾನೆ.

Read More

ಬಂಟ್ವಾಳ: ಬಂಟ್ವಾಳದ ಬಸ್ತಿಪಡ್ಡುವಿನಲ್ಲಿರುವ ಭದ್ರಾಹೋಂ ಅಪ್ಲೆನ್ಸಸ್ ತನ್ನ ಮೂರನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಖರೀದಿಯ ಕೂಪನ್ ಗಳನ್ನು ನೀಡಿತ್ತು. ಅದೃಷ್ಟಚೀಟಿಯ ಫಲಿತಾಂಶವನ್ನು ಗುರುವಾರ ನಡೆಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕರಾದ ಶಿವಕುಮಾರ್ ನೆರವೇರಿಸಿದರು. ಬಂಪರ್ ಬಹುಮಾನ 0578 ನಂಬರ್ ಗೆ ಬಂದಿದ್ದು, ಪ್ರೋತ್ಸಾಹಕರ ដក 0524, 0512, 16388, 0830 ಮತ್ತು 1785 ನಂಬರ್ ಗಳಿಗೆ ಬಂದಿವೆ ಎಂದು ಮಾಲಕರಾದ ಮಂಜುನಾಥ ಆಚಾರ್ಯ ಮತ್ತು ಮೇಘಾ ಆಚಾರ್ಯ ತಿಳಿಸಿದ್ದಾರೆ. ಈ ಸಂದರ್ಭ ಮಡಂತ್ಯಾರು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸೊಸೈಟಿಯ ಅಧ್ಯಕ್ಷಕೆ. ಅರವಿಂದ ಜೈನ್, ನಿರ್ದೇಶಕ ಅಬ್ದುಲ್ ರಹಮಾನ್ ಪಡ್ಪು ಇದ್ದರು.

Read More

ಬಂಟ್ವಾಳ : ಏಡ್ಸ್ ಬಗ್ಗೆ ಜಗತ್ತಿನಲ್ಲಿ ಉಂಟುಮಾಡಿರುವ ಜಾಗೃತಿಯ ಪರಿಣಾಮವಾಗಿ ಇಂದು ಈ ಆರ್ಜಿತ ರೋಗವು ಗಣನೀಯ ಪ್ರಮಾಣದಲ್ಲಿ ನಿಯಂತ್ರಿಸಲು ಸಾಧ್ಯವಾಗಿದೆ ಎಂದು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ ಹೇಳಿದರು. ಅವರು ಶುಕ್ರವಾರ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಿಶ್ವ ಏಡ್ಸ್ ದಿನಾಚರಣೆನ್ನುದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಥಿ ಜೀವನದಲ್ಲೇ ಏಡ್ಸ್ ಮತ್ತಿತರ ಕಾಯಿಲೆಗಳ ಬಗ್ಗೆ ಸೂಕ್ತ ಅರಿವು ಮೂಡುವುದೇ ಭವಿಷ್ಯದ ಸುಂದರ ಬದುಕಿಗೆ ರಹದಾರಿ ಎಂದು ಅವರು ಅಭಿಪ್ರಾಯ ಪಟ್ಟರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಯೂಸುಫ್ ವಿಟ್ಲ ಮಾತನಾಡಿ ಜನ ಸಮುದಾಯದಲ್ಲಿ ಏಡ್ಸ್ ಬಗ್ಗೆ ಅರಿವು ಮೂಡಿಸುವುದೇ ಈ ಸಾಲಿನ ಆಚರಣೆಯ ಪ್ರಧಾನ ಧ್ಯೇಯ ಎಂದು ಹೇಳಿದರು. ನಿವೃತ್ತ ಮಲೇರಿಯಾ ಜಿಲ್ಲಾ ನಿಯಂತ್ರಣಾಧಿಕಾರಿ ಜಯರಾಮ ಪೂಜಾರಿ ಏಡ್ಸ್ ಜಾಗೃತಿ ಉಪನ್ಯಾಸ ನೀಡಿದರು.‌ ಕಾರ್ಯಕ್ರಮವನ್ನು ಜಿಲ್ಲಾ ಏಡ್ಸ್ ನಿಯಂತ್ರಣ ಸೊಸೈಟಿ, ತಾಲೂಕು ಆರೋಗ್ಯ ಇಲಾಖೆ, ತಾಲೂಕು ಸಾರ್ವಜನಿಕ ಆಸ್ಪತ್ರೆ…

Read More