Author: admin

ಬಂಟ್ವಾಳ: ಬಂಟ್ವಾಳ ತಾಲೂಕು ಮಡಿವಾಳರ ಸಮಾಜ ಸೇವಾ ಸಂಘ ಇದರ 32ನೇ ವಾರ್ಷಿಕ ಮಹೋತ್ಸವ ಪ್ರಯುಕ್ತ ಮಡಿವಾಳ ಯುವ ಬಳಗ ಪ್ರಯೋಜಕತ್ವದಲ್ಲಿ ಕಂದೂರು ಶ್ರೀ ಗುರು ಮಾಚಿದೇವ ಸಮುದಾಯ ಭವನದ ಮುಂಭಾಗದ ಮೈದಾನದಲ್ಲಿ ಡಿ. 10ರಂದು ಭಾನುವಾರ ಕ್ರೀಡೋತ್ಸವ ಏರ್ಪಡಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಕ್ರೀಡೋತ್ಸವ ಸಭಾ ಕಾರ್ಯಕ್ರಮವನ್ನು ಮಂಗಳೂರು ವಿಶೇಷ ಆರ್ಥಿಕ ವಲಯ ಪ್ರಬಂಧಕ ಯೋಗೀಶ ಕಲಸಡ್ಕ ಉದ್ಘಾಟಿಸಲಿರುವರು. ಸಂಘದ ಅಧ್ಯಕ್ಷ ಎನ್.ಕೆ. ಶಿವ ಅಧ್ಯಕ್ಷತೆ ವಹಿಸಲಿರುವರು. ಕುಡ್ತಮುಗೇರು ಪಂ. ಸದಸ್ಯ ಹರೀಶ್ ಮಂಕುಡೆ, ಶಿಕ್ಷಕ ವೆಂಕಟೇಶ್ ಅನಂತಾಡಿ, ನಿವೃತ್ತ ಶಿಕ್ಷಕ ಸೋಮಪ್ಪ ಮಡಿವಾಳ ರಾಯಿ, ಉದ್ಯಮಿ ನವೀನ್ ರಾಧುಕಟ್ಟೆ, ಮಹಾವೀರ ಬ್ಯಾಂಕ್ ಪ್ರಬಂಧಕ ಪುಷ್ಪರಾಜ್ ಕುಕ್ಕಾಜೆ, ವಕೀಲೆ ವಿನೋದ ರವಿರಾಜ್ ಬಿ.ಸಿರೋಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಮಹಿಳಾ ಹಾಗೂ ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ಕ್ರೀಡಾಕೂಟ ನಡೆಯಲಿದೆ. ಬಂಟ್ವಾಳ ತಾಲೂಕಿನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಡಿವಾಳ ಯುವ ಬಳಗ ಅಧ್ಯಕ್ಷ ಸಂದೇಶ್ ಕೊಯಿಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇದರ ಆಶ್ರಯದಲ್ಲಿ ಬಂಟ್ವಾಳ ಗಿರಿಗುಡ್ಡೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತುಕಾರ್ಯಕ್ರಮವನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಂದಿಯ ನಾಯಕ್ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಮಾನವೀಯ ಮಾಲ್ಯಗಳಿಗೆ ಬೆಲೆಕೊಟ್ಟು ತೃಪ್ತಿಯುತ ಜೀವನ ನಡೆಸಬೇಕು, ದುಶ್ಚಟಗಳಿಗೆ ಬಲಿಯಾಗಿ ಜೀವನವನ್ನು ಹಾಳು ಮಾಡಿಕೊಳ್ಳದಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 25 ವರ್ಷದಿಂದ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ನಿರ್ವಹಿಸಿ ನಿವೃತ್ತರಾದ ಸಂತೋಷ್ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಸಿಬ್ಬಂದಿಗಳಾದ ರೇಖಾ, ಅರ್ಪಿತಾ, ಹಾಸ್ಟೆಲ್ ಮೇಲ್ವಿಚಾರಕ ವಿಜಯ್,ವೀರಪ್ಪ, ವಸತಿ ನಿಲಯದ ಅಧ್ಯಕ್ಷ ಚೇತನ್ಉಪಾಧ್ಯಕ್ಷ ಅವಿನಾಶ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತ ಪಡಿಸಿದರು. ವಿನೀತ್ ಸ್ವಾಗತಿಸಿ, ಕಿರಣ್ ವಂದಿಸಿದರು.

Read More

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ಸಹಕಾರದೊಂದಿಗೆ, ಮಂಗಳೂರಿನ ಎನಿಮಲ್ ಕೇರ್ ಟ್ರಸ್ಟ್ ಸಂಸ್ಥೆಯು ಡಿ.3 ಆದಿತ್ಯವಾರ ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದ ಪಕ್ಕ, ಮೇಲ್ಸೆತುವೆ ಕೆಳಗೆ ಸಂಪೂರ್ಣವಾಗಿ ಲಸಿಕೆಗಳನ್ನು ಕೊಟ್ಟ ದೇಸಿ ತಳಿಯ ನಾಯಿ ಹಾಗೂ ಬೆಕ್ಕು ಮರಿಗಳನ್ನು ಉಚಿತವಾಗಿ ದತ್ತು ನೀಡಲಿದ್ದಾರೆ. ಮರಿಗಳನ್ನು ದತ್ತು ಪಡೆಯುವವರು ತಮ್ಮ ಆಧಾರ್ ಕಾರ್ಡ್ ಖಡ್ಡಾಯವಾಗಿ ನೀಡಬೇಕು, ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶಿಬಿರ ನಡೆಯಲಿದ್ದು ಹಣ ಕೊಟ್ಟು ಪ್ರಾಣಿಗಳನ್ನು ಪಡೆಯುವ ಬದಲು ರಕ್ಷಿಸಿದ ದೇಸಿಯ ಪ್ರಾಣಿಗಳಿಗೆ ಬದುಕನ್ನು ಕೊಡಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ರೋಟರಿ ಕ್ಲಬ್ ಬಂಟ್ವಾಳ ಹಾಗೂ ಎನಿಮಲ್ ಕೇರ್ ಟ್ರಸ್ಟ್ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ೧೨೪ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಡಿ.೩ರಂದು ಭಾನುವಾರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧ರ ವರೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶಿವಕುಮಾರ್, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಭಾಗವಹಿಸುವರು. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಂಟ್ವಾಳ: ಜಿಲ್ಲೆಯಲ್ಲಿ ಶಿಸ್ತುಬದ್ಧ ಶಿಕ್ಷಕರು ಸುಸಂಸ್ಕೃತ ಮತ್ತು ಶಿಸ್ತು ಬದ್ಧ ವಿದ್ಯಾರ್ಥಿಗಳನ್ನು ರೂಪಿಸುತ್ತಿದ್ದಾರೆ. ಶಿಕ್ಷಕರಿಗೆ ಅನಗತ್ಯ ಕರ್ತವ್ಯದ ಹೊರೆ, ಪಠ್ಯಪುಸ್ತಕ ಗಳಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು. ರಾಜ್ಯದಲ್ಲಿ ಶಿಕ್ಷಣತಜ್ಞರ ನೇತೃತ್ವದಲ್ಲಿ ಪಠ್ಯ ರಚನೆ ಮತ್ತು ಶಿಕ್ಷಣ ನೀತಿ ಜೊತೆಗೆ ಮೂಲಭೂತ ಸೌಕರ್ಯ ಒದಗಿಸಿದಾಗ ಮಾತ್ರ ಗುಣಮಟ್ಟದ ಶಿಕ್ಷಣದಿಂದ ಸಮೃದ್ಧ ಸಮಾಜ ನಿರ್ಮಾಣವಾಗುತ್ತದೆ. ರಾಜ್ಯದಲ್ಲಿ ಶೇ.45 ರಷ್ಟು ಶಿಕ್ಷಕರ ಕೊರತೆ ಸಹಿತ ಶೌಚಾಲಯ, ಕೊಠಡಿ ಸಮಸ್ಯೆ ಕಾಡುತ್ತಿದೆ. ಸರ್ಕಾರಿ ಸೇರಿದಂತೆ ಅನುದಾನಿತ, ಅನುದಾನರಹಿತ ಶಾಲೆಗಳ ನಡುವೆ ತಾರತಮ್ಯ ಸಲ್ಲದು ಎಂದು ವಿಧಾನಪರಿಷತ್ ಸದಸ್ಯ ಎಸ್‌ಎಲ್.ಭೋಜೇ ಗೌಡ ಹೇಳಿದರು. ಅವರು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಇದರ ದ.ಕ. ಜಿಲ್ಲಾ ಘಟಕ ಮತ್ತು ಬಂಟ್ವಾಳ ತಲೂಕು ಘಟಕದ ಸಹಯೋಗದೊಂದಿಗೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಮಂಗಳವಾರ ನಡೆದ ಪ್ರೌಢಶಾಲಾ ಸಹಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಆರೋಗ್ಯ ಮತ್ತು ಶಿಕ್ಷಣಕ್ಕೆ ಸರ್ಕಾರ…

Read More

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕುಲಾಲ ಸಂಘಗಳ ಸಮಾಗಮ ಕುಲಾಲ ಸಂಘ ಸಮ್ಮಿಲನ ಕಾರ್ಯಕ್ರಮ ಭಾನುವಾರ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು. ಬೆಳಿಗ್ಗೆ ಬಿಎಸ್‌ಎನ್‌ಎಲ್ ನಿವೃತ್ತ ಎಜಿಎಂ ಕೃಷ್ಣಶ್ಯಾಂ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಮಧ್ಯಾಹ್ನ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಒಕ್ಕೂಟದ ಪರವಾಗಿ ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ ಹಾಗೂ ಬಿ.ಫಾರ್ಮದಲ್ಲಿ ಚಿನ್ನದ ಪದಕ ವಿಜೇತೆಯಾದ ಶಿವಾನಿ ಅವರನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಮುಖ್ಯ ಅತಿಥಿಯಾಗಿ ಕೆಪಿಸಿ ಲಿ. ನ ನಿವೃತ್ತ ಸಹಾಯಕ ಕಾರ್ಯನಿವಾಹಕ ಅಭಿಯಂತರ ಶಿವಪ್ಪ ಅಲೆತ್ತೂರು, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಮಾಜಿ ಅಧ್ಯಕ್ಷ ರಾಜೇಂದ್ರ ಕುಮಾರ್ ಅಳಪೆ, ನಿವೃತ್ತ ಉಪತಹಶೀಲ್ದಾರ್ ಪದ್ಮನಾಭ ಮಯ್ಯರಬೈಲು,ಬಿಎಸ್‌ಎನ್‌ಎಲ್…

Read More

ಬಂಟ್ವಾಳ: ತುಳುನಾಡಿನ ಕಾರಣಿಕ ಪ್ರಸಿದ್ದ ದೈವಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ವರ್ಷಾವಧಿ ಕೋಲ ನಡೆಯಿತು. ಬೆಳಿಗ್ಗೆ ಸಜೀಪ ಮಾಗಣೆಯ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ಪೌರೋಹಿತ್ಯದಲ್ಲಿ ಪುಣ್ಯಾಹ, ಪಂಚಗವ್ಯ ದ್ವಾದಶ ನಾಳಿಕೇರ ಗಣಯಾಗ, ನಾಗತಂಬಿಲ, ಫಲಪಂಚಾಮೃತ ಅಭಿಷೇಕ, ಆಶ್ಲೇಷ ಬಲಿ ಪೂಜೆ, ಪಲ್ಲಪೂಜೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ. ರಮನಾಥ ರೈ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮೊದಲಾದ ಪ್ರಮುಖರು ಭೇಟಿ ನೀಡಿ ಶ್ರೀ ದೈವದ ಗಂಧಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಪ್ರಧಾನ ಅರ್ಚಕ ವಾಸುದೇವ ಮೂಲ್ಯ, ಕಾರ್ಯನಿರ್ವಾಹಣಾಧಿಕಾರಿ ಪ್ರವೀಣ್ ಮೊದಲಾವರು ಉಪಸ್ಥಿತರಿದ್ದರು. ರಾತ್ರಿ ಶ್ರೀ ದೈವಗಳ ಕೋಲ ನಡೆದಿದ್ದು ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಕೋಲ ವೀಕ್ಷಿಸಿದರು.

Read More

ಬಂಟ್ವಾಳ: ಇಲ್ಲಿಯ ನಂದನಹಿತ್ಲು ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆನೂತನ ಧ್ವಜ ಸ್ತಂಭ ಸಮರ್ಪಣೆಯ ಹಿನ್ನಲೆಯಲ್ಲಿ ಬಂಟ್ವಾಳ ತ್ಯಾಗರಾಜರಸ್ತೆಯಲ್ಲಿ ಗುರುತಿಸಲಾದ ವೃಕ್ಷದಛೇಧಕ್ಕೆ ಸ್ಥಳದಲ್ಲಿ ಮುಹೂರ್ತಪೂಜಾ ವಿಧಿ ವಿಧಾನವನ್ನು ಶನಿವಾರ ನಡೆಸಲಾಯಿತು.ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿಯವರ ನೇತೃತ್ವದಲ್ಲಿ ವೃಕ್ಷಕ್ಕೆ ಧಾರ್ಮಿಕ ವಿಧಿವಧಾನಗಳನ್ನು ನೆರವೇರಿಸಲಾಯಿತು.ಈ ಸಂದರ್ಭ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ,ಬಾಳಿಗಾ ಮನೆತನದಬಿ. ಸುಧೀರ್ ಬಾಳಿಗಾ,ಮನೆತನದ ವಿಶ್ವನಾಥ ಪೂಜಾರಿ ಪೊನ್ನಂಗಿಲಗುತ್ತು,ಸಂಜೀವಪೂಜಾರಿ ಪೆಲತ್ತಿಮಾರು, ಲೋಕೇಶ್ ಬಂಗೇರ ಗಾಣದಪಡ್ಪು,ಲೋಕನಾಥ ಪೂಜಾರಿ ಬಡಕೊಟ್ಟು, ಧ್ವಜಸ್ತಂಭಕ್ಕಾಗಿ ಮರವನ್ನು ಉಚಿತವಾಗಿ ದಾನಗೈದ ಅವಿನಾಶ್ ಕಾಮತ್ ಉಪಸ್ಥಿತರಿದ್ದರು.ಶಿಲ್ಪಿ ಸದಾಶಿವ ಶೆಣೈ, ವಸಂತಪ್ರಭು,ಅಮ್ಮು ತುಂಬೆ,ದೇವದಾಸ ಅಮೀನ್ ಬಂಟ್ವಾಳ,ಜಯ ಸುವರ್ಣ, ಶಿವಪ್ರಸಾದ್ ಕೊಟ್ಟಾರಿ,ಜಗನ್ನಾಥ ಸಾಲಿಯಾನ್ ತುಂಬೆ,ಅರುಣ್ ಕುಮಾರ್ ಬೊಳ್ಳಾರಿ,ಯೋಗೀಶ್ ಕೋಟ್ಯಾನ್ ತುಂಬೆ,ಸಂತೋಷ್ ಕುಮಾರ್ ತುಂಬೆ,ಶೇಖರ್ ಮಂಡಾಡಿ,ರಿಷಿ ಮಹಾಬಲ ಬಂಗೇರ,ಗೋಪಾಲಕೃಷ್ಣ ,ಅಶ್ವಿತ್,ಸರೇಶ್ ನಾವೂರು,ಅಕ್ಷಿತ್ ಮುಗ್ಡಾಲ್ ಗುಡ್ಡೆ ಮೊದಲಾದವರಿದ್ದರು.ಇದೇ ವೇಳೆ ಮರ ಕತ್ತರಿಸುವುದು ಸಹಿತ ಮುಂದಿನ ಪ್ರಕ್ರಿಯೆಗೆ ವಿಶ್ವಕರ್ಮರಿಗೆ ವೀಳ್ಯ‌ ನೀಡಲಾಯಿತು.ಇದಕ್ಕು ಮುನ್ನ ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನದಲ್ಲಿ ಪ್ರಾರ್ಥಿಸಲಾಯಿತು. ದೈವಸ್ಥಾನದ ಆಡಳಿತ ಸಮಿತಿ…

Read More

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.ಬೆಳಿಗ್ಗೆ ಶಾಲಾ ಎನ್‌ಸಿಸಿ ತಂಡ ಹಾಗೂ ಬಣ್ಣದ ಸಮವಸ್ತ್ರ ತೊಟ್ಟ ವಿದ್ಯಾರ್ಥಿಗಳಿಂದ ಶಾಲಾ ಮೈದಾನದಲ್ಲಿ ಆಕರ್ಷಕ ಪಥಸಂಚಲನ ನಡೆದು ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಉದ್ಯಮಿ ಕೃಷ್ಣಾನಂದ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಸಾಧಕ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ತಂದು ಅತಿಥಿ ರಾಜೇಶ್ ನೆಕ್ಕರೆ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಶಾಲಾ ದತ್ತು ಸಂಸ್ಥೆ ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು. ಸೋಲು ಗೆಲುವು ಸಹಜವಾದುದು. ಗೆಲುವಿಗೆ ಹಿಗ್ಗದೆ, ಸೋಲಿಗೆ ಕುಗ್ಗದೆ ಕ್ರೀಡಾಸ್ಪೂರ್ತಿಯಿಂದ ತೊಡಗಿಸಿಕೊಳ್ಳಬೇಕು, ಇಂದಿನ ಕ್ರೀಡಾಕೂಟ ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಪ್ರೇರಣದಾಯಕವಾಗಲಿ ಎಂದು ಶುಭ ಹಾರೈಸಿದರು. ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಗೆದ್ದುಕೊಂಡ ಪ್ರಚನ್ ಪೂಜಾರಿಯನ್ನು ಅಭಿನಂದಿಸಲಾಯಿತು.ಇದೇ ವೇಳೆ ಮ್ಯಾಥ್ಸ್ ಕ್ಲಬ್ ಆಯೋಜಿಸಿದ ಮೆಟ್ರಿಕ್ ಮೇಳವನ್ನು ಉದ್ಯಮಿ ನಾಗೇಶ್ ಸಾಲ್ಯಾನ್…

Read More

ಬಂಟ್ವಾಳ: ತಾಲೂಲು ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕುಲಾಲ ಸಂಘಗಳ ಸಮಾಗಮ ಕುಲಾಲ ಸಂಘ ಸಮ್ಮಿಲನ ಕಾರ್ಯಕ್ರಮ ನ.26ರಂದು ಭಾನುವಾರ ಬೆಳಿಗ್ಗೆ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9ಕ್ಕೆ ಬಿಎಸ್‌ಎನ್‌ಎಲ್‌ನ ನಿವೃತ್ತ ಎಜಿಎಂ ಕೃಷ್ಣಶ್ಯಾಮ್ ದೀಪ ಪ್ರಜ್ವಲನೆ ಮಾಡುವರು, ಮಧ್ಯಾಹ್ನ 12.15ರಿಂದ ಸಭಾಕಾರ್ಯಕ್ರಮ ನಡೆಯಲಿದ್ದು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಕೆಪಿಸಿ ಲಿ.ನ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಪ್ಪ ಅಲೆತ್ತೂರು, ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲ ಮಾತೃ ಸಂಘದದ ಮಾಜಿ ಅಧ್ಯಕ್ಷ ರಾಜೇಂದ್ರ ಕುಮಾರ್ ಅಳಪೆ, ನಿವೃತ್ತ ಉಪ ತಹಶೀಲ್ದಾರ್ ಪದ್ಮನಾಭ ಎಂ. ಮಯ್ಯರಬೈಲು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಕುಲಾಲ ಸಂಘಗಳ ಜೊತೆ ಮಾತುಕತೆ, ಸಂವಾದ ವಿಚಾರ ವಿನಿಮಯ ಹಾಗೂ ಮನೋರಂಜನಾ ಆಟಗಳು ನಡೆಯಲಿದೆ.ಲೀ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕರ್ನಾಟಕ…

Read More