Author: admin
ಬಂಟ್ವಾಳ: ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಬೆಂಗಳೂರು ಇದರ ಆಶ್ರಯದಲ್ಲಿ ಅ.28ಮತ್ತು 29 ರಂದು ಬೆಂಗಳೂರಿನಲ್ಲಿ ನಡೆದ 14ರಿಂದ 17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ ಬಾಲಕಿಯರ ರಾಜ್ಯಮಟ್ಟದ ಜೂಡೋ ಪಂದ್ಯಾವಳಿಯಲ್ಲಿ ಪೊಳಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ವೆಂಕಟೇಶ್ ಬೆಳ್ಳಿ ಪದಕ, ಸತೀಶ್ ಹಾಗೂ ಜತೀನ್ ಅಯ್ಯಪ್ಪ ಕಂಚಿನ ಪದಕ ಗೆದ್ದುಕೊಂಡು ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಇವರು ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಮಾರ್ಷಲ್ ಆರ್ಟ್ ತರಬೇತಿ ಪಡೆಯುತ್ತಿದ್ದಾರೆ. ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಟೀಮ್ ಮ್ಯಾನೇಜರ್ ಜಯಂತ್ ಆಚಾರ್ಯ ಹಾಗೂ ಸಹಾಯಕ ತರಬೇತುಗಾರ್ತಿ ಅಸ್ಮಿತಾ ರೈ ಸಹಕರಿಸಿದ್ದಾರೆ.
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಎ.ಬಿ.ಶೆಟ್ಟಿ ಸ್ಮಾರಕ ದಂತ ವಿದ್ಯಾಲಯ ಇದರ ಸಹಭಾಗಿತ್ವದೊಂದಿಗೆ ದಂತ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಅ.31 ರಂದು ಬೆಳಿಗ್ಗೆ 9 ರಿಂದ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇಲ್ಲಿಗೆ ಜಿಲ್ಲಾ ಗವರ್ನರ್ ಎಚ್ . ಆರ್. ಕೇಶವ್ ಅವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು.ಬಿ.ಸಿ.ರೋಡಿನ ರೋಟರಿ ಬಿ.ಎ. ಸೋಮಯಾಜಿ ಮೆಮೋರಿಯಲ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ ಮಾತನಾಡಿ ಬಂಟ್ವಾಳ ಆರ್ ಸಿ ಬಿ. ಯಾವಾಗಲೂ ಗೆಲುವಿನ ಹಾದಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದರು. ಕಲ್ಲಡ್ಕ ಮ್ಯೂಸಿಯಂ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಇಂಟರಾಕ್ಟ್ ಕ್ಲಬ್ ಸದಸ್ಯರನ್ನು ಮ್ಯೂಸಿಯಂ ಗೆ ಭೇಟಿ ಮಾಡಿಸುವಂತೆ ಮನವಿ ಮಾಡಿದ ಅವರು ಅಲ್ಲಿ ಅದ್ಬುತ ಸಂಗ್ರಹಗಳು ಇದೆ ಎಂದರು. ರೋಟರಿ ಕ್ಲಬ್ ಬಂಟ್ವಾಳದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. Advertisement ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಪ್ರಾಸ್ತಾವಿಕ ವಾಗಿ ಮಾತನಾಡಿ ರೂ. 75 ಲಕ್ಷ ವೆಚ್ಚದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಬ್ಲಡ್ ಬ್ಯಾಂಕ್ ಸ್ಥಾಪಿಸುತ್ತಿದ್ದು ಈಗಾಗಲೇ 56.40 ಲಕ್ಷ ರೂಪಾಯಿ ಗ್ಲೋಬಲ್ ಗ್ರಾಂಟ್ ಬಂದು ಖಾತೆಗೆ ಜಮೆಯಾಗಿದ್ದು ಆದಷ್ಟು…
ಬಂಟ್ವಾಳ : ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿ ಎಂದು ಕೊಯಿಲ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಭಾರತಿ ಕಾರಂತ್ ಹೇಳಿದರು.ಬಂಟ್ಚಾಳ ತಾಲೂಕು ಕೊಯಿಲ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಕೇವಲ ಮಣ್ಣು ಹೋರುವ ಕೆಲಸ ಮಾತ್ರವಲ್ಲ ಅದು ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿಯಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆಯನ್ನು ಒದಗಿಸಿಕೊಡುತ್ತದೆ. ದೇಹ ಮನಸ್ಸು ಸ್ವಚ್ಚತೆ ವ್ಯಕ್ತಿಯ ಮಾನಸಿಕ ಸ್ಥೈರ್ಯ ತುಂಬಿ ಹೊಂದಾಣಿಕೆ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿದರು. Advertisement ಎಸ್.ವಿ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಯೋಗವರ್ಧನ್ ಡಿ. ಎಂ. ಅಧ್ಯಕ್ಷತೆ ವಹಿಸಿ, ನಾವೆಲ್ಲರೂ ಒಂದೇ ಎನ್ನುವ ಮನೋಭಾವ ಬೆಳೆಸುವ ಜತೆ ಕೀಳರಿಮೆಯನ್ನು ಹೋಗಲಾಡಿಸುತ್ತದೆ. ಜಾತಿ-ಧರ್ಮ, ಮೇಲು-ಕೀಳು ಎನ್ನುವ ಭೇದಭಾವವಿಲ್ಲದೆ ಎಲ್ಲರೂ ಒಂದೇ ಸೂರಿನಡಿಯಲ್ಲಿ ಒಟ್ಟಾಗಿ ಜೀವಿಸುವ ಭಾವೈಕ್ಯತೆಯ ಗುಣವನ್ನು…
Advertisement ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಘನವಾಹನಗಳ ಸಂಚಾರವನ್ನು ನಿಷೇಧಿಸಿದ್ದರೂ ಕೂಡ ಪಾಣೆಮಂಗಳೂರು ಪೇಟೆಗೆ ಸರಕು ಹೊತ್ತು ತರವ ವಾಹನಗಳು ಇದೇ ಸೇತುವೆಯನ್ನು ಬಳಸುತ್ತಿದೆ. ಲಾರಿಯೊಂದು ಇದೇ ಸೇತುವೆಯಲ್ಲಿ ಸಂಚರಿಸಿ ಕೆಲ ಹೊತ್ತುಗಳ ಕಾಲ ಟ್ರಾಫಿಕ್ ಜಾಂ ಉಂಟಾಯಿತು. ಘನ ವಾಹನಗಳ ಸಂಚಾರ ನಿಷೇಧ ಎನ್ನುವ ಜಿಲ್ಲಾಧಿಕಾರಿಯವತರ ಸೂಚನಾ ಫಲಕಕ್ಕೆ ಬೆಲೆ ಇಲ್ಲದಂತಾಗಿದೆ.
ಬಂಟ್ವಾಳ: ತಾಲೂಕಿನ ಗ್ರಾಮೀಣ ಪ್ರದೇಶವಾದ ಸಜೀಪಮೂಡ ಗ್ರಾಮದಲ್ಲಿ ಸ್ಥಾಪನೆಗೊಂಡ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಕನಿಷ್ಠ ಅವಧಿಯಲ್ಲಿಯೇ ಗರಿಷ್ಠ ಸಾಧನೆಯನ್ನು ಮಾಡಿಕೊಂಡು ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲನ್ನು ಸಾಧಿಸಿಕೊಂಡು ಮುನ್ನಡೆಯುತ್ತಿದೆ. ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಮುಂದಾಳತ್ವದಲ್ಲಿ, ಅನುಭವಿ ನಿರ್ದೇಶಕರ ಮಾರ್ಗದರ್ಶನದಲ್ಲಿ, ಕ್ರಿಯಾಶೀಲ ಸಿಬ್ಬಂದಿಗಳ ಸಹಕಾರದೊಂದಿಗೆ ಸಂಘ ಲಾಭದಾಯಕವಾಗಿ ಪ್ರಗತಿಯ ಹೆಜ್ಜೆ ಇಟಿದ್ದು ಸಂಘದ 13ನೇ ಶಾಖೆ ಉದ್ಘಾಟನೆಗೆ ಸಜ್ಜುಗೊಂಡಿದೆ.ನ. 5ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಪುಣಚ ಪರಿಯಲ್ತಡ್ಕ ಪ್ರಗತಿ ಕಾಂಪ್ಲೆಕ್ಸ್‌ನಲ್ಲಿ ಸಂಘದ ನೂತನ 13ನೇ ಶಾಖೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ. ರಮಾನಾಥ ರೈ, ಪುಣಚ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಅಧ್ಯಕ್ಷ, ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಸದಸ್ಯ ಎಸ್. ಆರ್. ರಂಗಮೂರ್ತಿ, ಪುಣಚ ಗ್ರಾಮ ಪಂಚಾಯತ್.…
ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕ ನಿರ್ವಹಿಸುವ ಬಂಟ್ವಾಳ ತಾಲೂಕು 17ನೆಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕಡೇಶಿವಾಲಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿ.12 ರಂದು ನಡೆಸಲಾಗುವುದು. ಸಮ್ಮೇಳನದಲ್ಲಿ ತಾಲೂಕಿನ ೧೮ ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಭಾಗವಹಿಸಲಿದ್ದಾರೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆತಿಥೇಯ ಸಂಸ್ಥೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಕುಮಾರಿ ಸಾನ್ವಿ ಸುವರ್ಣ ಆಯ್ಕೆಯಾಗಿರುತ್ತಾರೆ ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು ತಿಳಿಸಿದ್ದಾರೆ.ಸಾನ್ವಿಯವರು ಸುಂದರ ಪೂಜಾರಿ ವಿಶಾಲಾಕ್ಷಿ ದಂಪತಿಗಳ ಪುತ್ರಿ. ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲೇ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಇವರು ಭಾರತ ಸರಕಾರದ ಶಿಕ್ಷಣ ಸಚಿವಾಲಯದಿಂದ ವೀರ ಗಾಥಾ ಪ್ರಮಾಣ ಪತ್ರ ಪಡೆದಿರುವರು. ಸಶಸ್ತ್ರ ಪಡೆಗಳ ಶೂರರ ಸ್ಮರಣಾರ್ಥವಾಗಿ ಈ ಪ್ರಮಾಣ ಪತ್ರ ನೀಡಲಾಗಿದೆ. Advertisement ಭಾರತೀಯ ಜೀವವಿಮಾ ನಿಗಮ ನೀಡುವ ಸಾಧನಾ ಪ್ರಶಸ್ತಿಯನ್ನು ಪಡೆದ ಇವರು ಉತ್ತಮ…
Advertisement ಬಂಟ್ವಾಳ: ಪುರಸಭೆಯ ಬಿ.ಕಸ್ಬಾ ಗ್ರಾಮದ ಗಿರಿಗುಡ್ಡೆ ಜಕ್ರಿಬೆಟ್ಟು ನೀರು ಶುದ್ಧೀಕರಣ ಘಟಕದ ಪಿಲ್ಟರ್ ದುರಸ್ಥಿ ಕೆಲಸ ನಡೆಯುತ್ತಿರುವುದರಿಂದ ೧೫ ದಿನಗಳ ಕಾಲ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಸಮರ್ಪಕವಾಗಿ ಪೂರೈಸಲು ವ್ಯತ್ಯಯ ಉಂಟಾಗುವುದಾಗಿ ಬಂಟ್ವಾಳ ಪುರಸಭೆಯ ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಗೆಲುವು ಎನ್ನುವುದು ಎಲ್ಲರಿಂದಲೂ ಸಾಧ್ಯವಾಗದು, ಆದರೂ ಪ್ರಯತ್ನ ಬಹಳ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ವಹಿಸಬೇಕಾಗುವುದು ಅಗತ್ಯವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಹೇಳಿದರು.ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ತುಂಬೆ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರು ಮಂಗಳಾ ಸ್ಟೇಡಿಯಂನಲ್ಲಿ ಜರಗಿದಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. Advertisement ಬಂಟ್ವಾಳ ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣಕ್ಕಾಗಿ ಒಂದು ನೂರು ಕೋಟಿ ರೂಪಾಯಿಗಳ ಅನುದಾನಕ್ಕಾಗಿ ಕೇಲ್ ಇಂಡಿಯಾಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಶೀಘ್ರ ಮಂಜೂರಾಗಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು.ಅಧ್ಯಕ್ಷತೆಯನ್ನು ವಹಿಸಿದ್ದ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಮಾತನಾಡಿ ಕ್ರೀಡೆ ಎನ್ನುವುದು ಆರೋಗ್ಯಪೂರ್ಣ ಸ್ಪರ್ಧೆಯಾಗಿದ್ದು ಶಿಸ್ತು ಮತ್ತು ಸಂಯಮವನ್ನು ಕಲಿಸಿಕೊಡುತ್ತದೆ. ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ವೇದಿಕೆಯಾಗಿ ಕ್ರೀಡಾ ಕ್ಷೇತ್ರ ಸಹಕರಿಸುತ್ತದೆಯಲ್ಲದೆ ಕ್ರೀಡಾಕೂಟವೆನ್ನುವುದು ಒಂದು ಸ್ಮರಣೀಯ ಕ್ಷಣಗಳಾಗಿ ಉಳಿಯುತ್ತದೆ ಎಂದರು.ಬಂಟ್ವಾಳ…
ದೇರಳಕಟ್ಟೆ: ಕೇಶ ವಿನ್ಯಾಸದಲ್ಲಿ ಪ್ರಖ್ಯಾತಿ ಪಡೆದಿರುವ ಮುಂಬೈಯ ಪ್ರತಿಷ್ಠಿತ ಶಿವಾಸ್ ಸಂಸ್ಥೆಯ ಶಿವಾಸ್ ಕಾಲೇಜ್ , ಶಿವಾಸ್ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಪ್ರೊಫೆಷನಲ್ ಇನ್ನೋವೇಷನ್ ( SIIPI ) ಸಂಸ್ಥೆ ಹಾಗೂ ಶಿವಾಸ್ ಸಿಗ್ನೇಚರ್ ಫ್ಯಾಮಿಲಿ ಸೆಲೂನ್ ದೇರಳಕಟ್ಟೆಯ ಪ್ಲಾಮಾ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟನೆ ನೆರವೇರಿಸಿದರು. ಅವರು ಮಾತನಾಡಿ ಬಹಳಷ್ಟು ಜನರ ಜೀವನದಲ್ಲಿ ಹೊಸಬೆಳಕು ಮೂಡಿಸಿದ ಶಿವರಾಮ್ ಭಂಡಾರಿ, ಧರ್ಮಸ್ಥಳದಲ್ಲಿಯೂ ಅವರ ಸೇವೆ ನಡೆಸುತ್ತಾ ಬಂದಿರುವರು. ರುಡ್ಸೆಟ್ ನಲ್ಲಿಯೂ ಸೇವೆ ನೀಡಿ ಯುವಸಮುದಾಯಕ್ಕೆ ಜೀವನದ ದಾರಿ ಮಾಡಿಕೊಟ್ಟವರು. ಶಿವರಾಮ್ ಭಂಡಾರಿ ಮುಂಬೈನಿಂದ ಉಜಿರೆಗೆ ಬರುತ್ತಾರೋ ಅನ್ನುವ ಕಾತುರವಿತ್ತು. ಆದರೆ ಖುದ್ದಾಗಿ ಬಂದು ತರಬೇತಿ ನೀಡಿರುವುದು ಆಶ್ಚರ್ಯ ತಂದಿತ್ತು. ಮೂರು ದಿನಗಳ ಕಾಲ ನಿಂತು ತರಬೇತಿ ನೀಡಿ ಅನೇಕರಿಗೆ ಬೆಳಕಾಗಿದ್ದಾರೆ. ಕೇಶವಿನ್ಯಾಸಕ್ಕೆ ಮುಂಬೈನಲ್ಲಿ ಡಿಪ್ಲೊಮಾ ಕೋಸ್೯ ಆರಂಭಿಸುವ ಮೂಲಕ ವಿಶೇಷ ರೂಪು ನೀಡಿ ಅನೇಕ ಮಂದಿ ಉತ್ತಮ ಸಂಪಾದನೆಯ ಉದ್ಯೋಗವಾಕಾಶ ಮಾಡಿಕೊಟ್ಟವರು. ಬಹಿರಂಗ ಸೌಂದರ್ಯ…








