Author: admin
ಬಂಟ್ಚಾಳ: ಲಯನ್ಸ್ ಕ್ಲಬ್ ಕೊಳ್ನಾಡು – ಸಾಲೆತ್ತೂರು ಇಲ್ಲಿಗೆ ಲಯನ್ಸ್ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ ಅವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು.ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿ ಕಾನೂನು ಹಾಗೂ ಶಿಸ್ತಿನ ಮೂಲಕ ವ್ಯಕ್ತಿತ್ವ ನಿರ್ಮಾಣಗೊಳ್ಳುತ್ತದೆ. ನಾವೆಲ್ಲರೂ ಲಯನ್ಸ್ ನ ಒಂದೊಂದು ಬಿಂದುಗಳು. ಲಯನ್ಸ್ ಮೂಲಕ ನಮ್ಮ ಪ್ರಯತ್ನಗಳು, ಸೇವಾ ಕಾರ್ಯಗಳು ಸಾಗಲಿ ಇದರಿಂದ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಪ್ರಯೋಜನವಾಗುತ್ತದೆ ಎಂದು ತಿಳಿಸಿದರು.ಉತ್ತಮ ನಾಯಕರು ನಮ್ಮ ಕ್ಲಬ್ ನಲ್ಲಿದ್ದಾರೆ. ಪ್ರಾಮಾಣಿಕರಾಗಿ ಕ್ಲಬ್ ನ ಬೆಳವಣಿಗೆಗೆ ಸಹಕರಿಸುವವರಿದ್ದಾರೆ, ಇಂತಹ ಕ್ಲಬ್ ನ ಸದಸ್ಯನಾದ ನಾನು ಪ್ರಾಂತೀಯ ಅಧ್ಯಕ್ಷನಾಗಿರುವುದು ನನಗೆ ಹೆಮ್ಮೆ ಎಂದರು. ಇದೇ ಸಂದರ್ಭ ಪ್ರಾಂತೀಯ ಅಧ್ಯಕ್ಷ ರಮನಾಂದ ನೂಜಿಪ್ಪಾಡಿ ದಂಪತಿಯನ್ನು ಸನ್ಮಾನಿಸಲಾಯಿತು. ಪ್ರಾಂತೀಯ ರಾಯಭಾರಿ ದಾಮೋದರ ಬಿ.ಎಂ. ಮಾತನಾಡಿ ಲಯನ್ಸ್ ಕ್ಲಬ್ ಕೊಳ್ನಾಡು – ಸಾಲೆತ್ತೂರು ಕಾಐವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ವೇದಿಕೆಯಲ್ಲಿ ಪ್ರಾಂತೀಯ ಪ್ರಥಮ ಮಹಿಳೆ ಸಂಧ್ಯಾ ರಮಾನಂದ, ಪ್ರಾಂತೀಯ ಸಂಯೋಜಕ ವಿಜಯ ರೈ ಕೆ, ಎರಡನೇ ವಲಯಾಧ್ಯಕ್ಷ ಡೊನಾಲ್ಡ್ ಬಂಟ್ವಾಳಅಮ್ಟೂರು…
ಬಂಟ್ವಾಳ: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಪಾಣೆಮಂಗಳೂರಿನ ಹಳೆ ಉಕ್ಕಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಸ್ಥಳೀಯರೊಬ್ಬರು ಭಾನುವಾರ ರಾತ್ರಿ ಸೇತುವೆಯಲ್ಲಿ ಬಿರುಕನ್ನು ಗಮನಿಸಿ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ತಕ್ಷಣ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಘನ ವಾಹನಗಳು ಸೇತುವೆಯಲ್ಲಿ ಸಂಚರಿಸದಂತೆ ನಿರ್ಭಂದ ವಿಧಿಸಲು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರಿನ ಹಳೆಯ ಉಕ್ಕಿನಸೇತುವೆ 1914 ರಲ್ಲಿ ನಿರ್ಮಾಣಗೊಂಡಿದ್ದು ಶತಮಾನ ಪೂರೈಸಿದೆ. ಅವಿಭಜಿತ ದ.ಕ. ಜಿಲ್ಲೆಯ ಮೊದಲ ಸಂಪರ್ಕ ಕೊಂಡಿ ಎನ್ನುವ ಹೆಗ್ಗಲಿಕೆಯೂ ಈ ಸೇತುವೆಗಿದೆ.
ಬಂಟ್ವಾಳ: ಶ್ರೀ ಶಾರದಾ ಸೇವಾ ಪ್ರತಿಷ್ಠಾನ ತುಂಬೆ ಇದರ ಆಶ್ರಯದಲ್ಲಿ ನಡೆಯಲಿರುವ 23ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ತುಂಬೆಯ ಶ್ರೀ ಶಾರದಾ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಿ ತುಂಬೆ, ಕೋಶಾಧಿಕಾರಿ ಸೋಮಪ್ಪ ಕೋಟ್ಯಾನ್, ಉಪಾಧ್ಯಕ್ಷೆ ಶೋಭಾ ಗೋಪಾಲ್ ಮೈಂದಾನ್, ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಪೂಜಾರಿ ಕುಮ್ಡೇಲ್, ಪ್ರಧಾನ ಕಾರ್ಯದರ್ಶಿ ವಿನೋದ್ ಬೊಳ್ಳಾರಿ, ಕೋಶಾಧಿಕಾರಿ ಮನೋಹರ್ ಕೊಟ್ಟಾರಿ, ಉಪಾಧ್ಯಕ್ಷರಾದ ಸದಾನಂದ ಕುಲಾಲ್ ಕೋಡಿಯಡ್ಕ ಸೇರಿದಂತೆ ಪ್ರತಿಷ್ಠಾನದ ಟ್ರಸ್ಟಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ಕರ್ನಾಟಕ ರಾಜ್ಯ ಕುಲಾಲ-ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಬಂಟ್ವಾಳ ವಿಧಾನಸಭಾ ಕ್ಷೇತ್ರ ಇದರ 2023-25 ನೇ ಪದ-ಪ್ರಧಾನ ಸಮಾರಂಭ ಮತ್ತು ಜಿಲ್ಲಾ ಮಟ್ಟದ ಕೆಸರುಗದ್ದೆ ಪಂದ್ಯಾಟ ಹಾಗೂ ನೂತನ ಕಛೇರಿ ಉದ್ಘಾಟನೆ ಕಾರ್ಯಕ್ರಮ ಅ.08 ರಂದು ಭಾನುವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ. ಬೆಳಗ್ಗೆ ಗಂಟೆ 8.30ಕ್ಕೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಮುಳಿಯ ಶ್ರೀ ವೈಷ್ಣವಿ ಆದಿಶಕ್ತಿ ಕ್ಷೇತ್ರದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ನಿತೀಶ್ ಕುಲಾಲ್ ಪಲ್ಲಿಕಂಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಭಾರತ ಕುಂಬಾರರ ಫೆಡರೇಶನ್ ಅಧ್ಯಕ್ಷ ಡಾ. ಶಿವಕುಮಾರ್ ಚೌಡಶೆಟ್ಟಿ, ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು, ನೇಪಾಳದ…
ಬಂಟ್ವಾಳ: ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ ಇದರ 25ನೇ ವಾರ್ಷಿಕ ಮಹಾಸಭೆಯು ಅ.8ರಂದು ಆದಿತ್ಯವಾರ ಮಧ್ಯಾಹ್ನ 2ಕ್ಕೆ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಲಿದೆ. ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ, ಪಂಗಡದ ಸಂಘ ಸಂಸ್ಥೆಗಳು, ಸಮುದಾಯದವರು, ಮತ್ತು ದಲಿತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ಕೆ. ಸತೀಶ್ ಅರಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ: ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು 7 ಕೋ.ರೂ.ವೆಚ್ಚದಲ್ಲಿ ಭರದಿಂದ ಸಾಗುತ್ತಿದೆ. ಈಗಾಗಲೇ ಪ್ರಧಾನ ಗರ್ಭಗುಡಿ, ತೀರ್ಥಮಂಟಪದ ಮೇಲ್ಛಾವಣಿಗೆ ತಾಮ್ರದ ಹೊದಿಕೆಯ ಕಾರ್ಯ ಪೂರ್ಣಗೊಂಡಿದ್ದು, 2024ರ ಜ. 17ರಿಂದ 25ರವರೆಗೆ ಕ್ಷೇತ್ರದ ಬ್ರಹ್ಮಕಲಶೋತ್ಸವ ನೆರವೇರಲಿದೆ.ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಆಗಮ ಶಾಸ್ತ್ರಕ್ಕೆ ಪೂರಕವಾಗಿ ದೇವಸ್ಥಾನದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈಗಾಗಲೇ ಸುಮಾರು 2.5 ಕೋ.ರೂ.ಗಳ ಕಾಮಗಾರಿಗಳು ಪೂರ್ಣಗೊಂಡಿದೆ. ಸುತ್ತಪೌಳಿಯ ಶಿಲಾಮಯ ಗೋಡೆಗಳು ಬಹುತೇಕ ಪೂರ್ಣಗೊಂಡಿದ್ದು, ಮೇಲ್ಛಾವಣಿಯ ದಾರುಶಿಲ್ಪದ ಕಾರ್ಯ ಪ್ರಗತಿಯಲ್ಲಿದೆ. ಧ್ವಜಸ್ತಂಭದ ತೈಲಾಧಿವಾಸ ನಡೆದಿದ್ದು, ಪ್ರಸ್ತುತ ಪ್ರತಿನಿತ್ಯವೂ ಭಕ್ತರು ಎಳ್ಳೆಣ್ಣೆ ಸಮರ್ಪಿಸುತ್ತಿದ್ದಾರೆ. ಪ್ರಧಾನ ಗರ್ಭಗುಡಿಯ ಮೇಲ್ಛಾವಣಿಗೆ ತಾಮ್ರದ ಹೊದಿಕೆಗೆ ಪ್ರತಿ ಮನೆಯ ಭಕ್ತರ ಸೇವೆ ಸಂದಾಯವಾಗಬೇಕು ಎನ್ನುವ ನಿಟ್ಟಿನಲ್ಲಿ ಕೂಪನ್‌ಗಳನ್ನು ನೀಡಲಾಗಿದ್ದು, ಜತೆಗೆ ಸ್ವರ್ಣಲೇಪಿತ ಪ್ರಧಾನ ಕಲಶಕ್ಕೂ ಪ್ರತಿ ಭಕ್ತರ ಸೇವೆಯ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಪ್ರತ್ಯೇಕ ಕಾಣಿಕೆ ಡಬ್ಬಿಯನ್ನಿಟ್ಟು ಭಕ್ತರ ಇಚ್ಛಾನುಸಾರ ಕಾಣಿಕೆ ನೀಡಲು ಜೀರ್ಣೊದ್ಧಾರ ಸಮಿತಿ ಅವಕಾಶ ಕಲ್ಪಿಸಿದೆ.…
ಬಂಟ್ವಾಳ: ಕಳೆದ ಒಂದು ವರ್ಷದಿಂದ ಸೇವಾಂಜಲಿ ಸಂಸ್ಥೆಯು ದಾನಿಗಳ ಸಹಕಾರದೊಂದಿಗೆ ನಿರಂತರವಾಗಿ ಕ್ಷಯ ರೋಗಿಗಳಿಗೆ ಸಮತೋಲನ ಆಹಾರದ ಕಿಟ್ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಬದ್ರುದ್ದೀನ್ ಹೇಳಿದರು.ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಗುರುವಾರ ಸೇವಾಂಜಲಿ ಸಭಾಗ್ರಹದಲ್ಲಿ ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ದವಸ ಧಾನ್ಯಗಳ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು. ಕ್ಷಯ ರೋಗಿಗಳಲ್ಲಿ ಪ್ರೋಟಿನ್ ಅಂಶ ಹೆಚ್ಚಿಸುವ ಉದ್ದೇಶದಿಂದ ಸಮತೋಲನ ಆಹಾರವನ್ನು ನೀಡಲಾಗುತ್ತದೆ. ಆದ್ದರಿಂದ ಕ್ಷಯರೋಗಿಗಳು ಈ ಆಹಾರವನ್ನು ಸೇವಿಸಿ ಆರೋಗ್ಯ ಉತ್ತಮ ಪಡಿಸುವಂತೆ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಮಾತನಾಡಿ ಸೇವಾಂಜಲಿ ಪ್ರತಿಷ್ಠಾನದ ಮೂಲಕ ಕೃಷ್ಣಕುಮಾರ್ ಪೂಂಜಾ ಅವರು ನಿರಂತರವಾಗಿ ಸೇವಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಕ್ಷಯ ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅವರನ್ನು ಗುರುತಿಸಿ ದವಸ ಧಾನ್ಯಗಳ ಕಿಟ್ ನೀಡುತ್ತಿದ್ದಾರೆ. ಇದನ್ನು ಕ್ಷಯರೋಗಿಗಳು ಸದುಪಯೋಗಪಡಿಸಿಕೊಳ್ಳಬೇಕು…
ಬಂಟ್ವಾಳ: ಓಂಕಾರ ಸೇವಾ ಬಳಗ ದುರ್ಗಾನಗರ ಕುರಿಯಾಳ ಇದರ ದಶಮಾನೋತ್ಸವದ ಪ್ರಯುಕ್ತ ಕೆಸರ್ದ ಕಂಡೊಂಡು ಕುಸಾಲ್ದ ಗೊಬ್ಬು, ಸಾಧಕರಿಗೆ ಗೌರವಾರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ವನ್ನು ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಕೃಷ್ಣ ಅರಳಿತ್ತಾಯ ಉದ್ಘಾಟಿಸಿದರು, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಚಾಯತಿ ಸದಸ್ಯ ರೂಪೇಶ್ ಕುಟೀಲ, ದ.ಕ.ಸೌಹಾರ್ದ ಸಹಕಾರಿ ಸಂಘ ಅಣ್ಣಳಿಕೆ ಇದರ ಉಪಾಧ್ಯಕ್ಷ ದೇವಪ್ಪ ಕುಲಾಲ್ ಪಂಜಿಕಲ್ಲು ಮೊದಲಾದವರು ಭಾಗವಹಿಸಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉದ್ಯಮಿ ಧನರಾಜ್ ಶೆಟ್ಟಿ ಫರಂಗಿಪೇಟೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತುಳುನಾಡ ಸಾಂಸ್ಕೃತಿಕ ವಿಮರ್ಶಕ ತಮ್ಮಣ್ಣ ಶೆಟ್ಟಿ, ನಮ್ಮ ಕುಡ್ಲ ವಾಹಿನಿಯ ವಾರ್ತವಾಚಕಿ ಡಾ ಪ್ರಿಯ ಹರೀಶ್, ಅಮ್ಟಾಡಿ ಗ್ರಾ.ಪಂ. ಸದಸ್ಯರಾದ ಹರೀಶ್ ಶೆಟ್ಟಿ ಪಡು, ಯಶೋಧ ಮೇಗಿನ ಕುರಿಯಾಳ, ಉದ್ಯಮಿ ದಿನೇಶ್ ಬಡಕೊಟ್ಟು, ಪತ್ರಕರ್ತ ಸಂದೀಪ್ ಸಾಲ್ಯಾನ್, ಮೆಸ್ಕಾಂ ಶಾಖಾಧಿಕಾರಿ ಯೋಗೀಶ್ ಅಂಚನ್, ಉದ್ಯಮಿ ರತ್ನಕರ ಬಳ್ಳಿ, ಚಿತ್ತಾರ ಡಿಜಿಟಲ್ಸ್ ನ ಚಿದಾನಂದ, ಓಂಕಾರ…
ಬಂಟ್ವಾಳ: ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ಮಕ್ಕಳು ಒಂದೇ ತರಗತಿಯಲ್ಲಿ ಕಲಿಯುತ್ತಿದ್ದು ಗಮನ ಸೆಳೆದಿದ್ದಾರೆ. ಶಾಲೆಯ ಎಂಟನೇ ತರಗತಿಯಲ್ಲಿ ಈ ಅವಳಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, 5 ಜೋಡಿ ಅವಳಿ ಮಕ್ಕಳು ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ.
ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕುಲಾಲ ಗುರು ಸಮ್ಮಿಲನ, ಗುರುವಂದನೆ ಕಾರ್ಯಕ್ರಮ ಹಲವಾರು ವಿಶೇಷತೆಗಳೊಂದಿಗೆ ಗಮನ ಸೆಳೆಯಿತು.ಬೆಳಿಗ್ಗೆ ಕಟ್ಟಡ ಸಮಿತಿ ಗೌರವಾಧ್ಯಕ್ಷ ಕೃಷ್ಣಪ್ಪ ಬಿ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನಾ ಆಟಗಳನ್ನು ನಡೆಸಲಾಯಿತು. ಶಿಕ್ಷಕರು, ಹಾಡಿ, ಕುಣಿದು, ವಿವಿಧ ಚಟುವಟಿಕೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಬಳಿಕ ಎಲ್ಲಾ ಶಿಕ್ಷಕರಿಗೆ ಆರತಿ ಬೆಳಗಿ, ಕುಂಕುಮ ಹರಶಿನ ಹಚ್ಚಿ, ಪುಷ್ಪ ಸಮರ್ಪಿಸಿ, ಶಾಲು, ಉಡುಗೊರೆ ನೀಡಿ ವಿನೂತನ ರೀತಿಯಲ್ಲಿ ಗುರುವಂದನೆ ಸಲ್ಲಿಸಲಾಯಿತು. ಇದೇ ಮೊದಲ ಬಾರಿಗೆ ಕುಲಾಲ ಸಂಘದ ವತಿಯಿಂದ ಕುಲಾಲ ಗುರು ಸಮ್ಮಿಲನ ಕಾರ್ಯಕ್ರಮ ನಡೆಯುತ್ತಿದ್ದು ಸಮುದಾಯದ ಶಿಕ್ಷಕ ವೃಂದ ಈ ವಿನೂತನ ಕಾರ್ಯಕ್ರದಿಮದ ಪುಳಕಿತಗೊಂಡಿತು. ಪ್ರತಿದಿನ ಮನೆ, ಶಾಲೆಯ ಒತ್ತಡದ ಕೆಲಸ ಮಧ್ಯೆ ಕುಲಾಲ ಗುರು ಸಮ್ಮಿಲನ ಕಾರ್ಯಕ್ರಮದ ಮೂಲಕ ವಿವಿಧಾ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಿಕ್ಷಕರು ಮನೋಲ್ಲಾಸದಿಂದ ಸಂಭ್ರಮಿಸಿದರು.ಬಳಿಕ ನಡೆದ ಸಭಾ…








