Author: admin

ಮಾತೃತ್ವದ ಶಕ್ತಿ ಅಪೂರ್ವವಾದುದು: ರೇಖಾ ಸತೀಶ್ ಬಂಟ್ವಾಳ : ಯಾರಿಂದಲೂ, ಯಾವುದರಿಂದಲೂ ತೀರಿಸಲಾಗದ್ದು ಅದು ತಾಯಿಋಣ‌. ತಾಯಿ ವ್ಯಕ್ತಿತ್ವ ರೂಪಿಸುವ ಶಕ್ತಿಯಾಗಿದ್ದಾಳೆ.‌ ಪ್ರತೀ ಮನುಷ್ಯನ ಯಶಸ್ಸಿನ‌ ಹಿಂದೆ ತಾಯಿ ಮಾತೃ ಪ್ರೇರಕ ಶಕ್ತಿಯಾಗಿದ್ದಾಳೆ, ಮನೆಯೇ ಮೊದ ಪಾಠ ಶಾಲೆ ತಾಯಿಯೇ ಮೊದಲ ಗುರು ಎನ್ನುವಂತೆ ತಾಯಿಯ ಪಾತ್ರ ಕುಟುಂಬದಲ್ಲಿ ಮಹತ್ತರವಾದುದುದು ಎಂದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಪೊಳಲಿ ನಗರದ ಮಾರ್ಗದರ್ಶಕಿ ರೇಖಾ ಸತೀಶ್ ಕಾಜಿಲ ಅಭಿಪ್ರಾಯ ಪಟ್ಟರು.ಅವರು ಕೊಯಿಲ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಭಜನಾ‌ ಮಂಡಳಿ ಬದನಡಿ ಇಲ್ಲಿ ನಡೆದ “ಮಾತೃ ಧ್ಯಾನ-ಮಾತೃ ಪೂಜನ” ಕಾರ್ತಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಲೆಕ್ಕಪತ್ರ ಪ್ರಮುಖ್ ಶಿವಪ್ರಸಾದ್ ಪೊಳಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತೃಪೂಜನ ಕಾರ್ಯಕ್ರಮವೂ ಗ್ರಾಮದ ವಿಕಾಸಕ್ಕೆ ಪೂರಕವಾದುದು, ಸಂಸ್ಕಾರಯುತ ಶಿಕ್ಷಣ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಮಾತೃಶಕ್ತಿಯ ಪ್ರಾಮುಖ್ಯತೆಯ ಬಗ್ಗೆ ತಿಳಿಸಿ ಮಾತೃಧ್ಯಾನ-ಮಾತೃಪೂಜನ ಕಾರ್ಯಕ್ರಮ‌ ನೇರವೇರಿಸಿದರು. ಕಾರ್ಯಕ್ರಮದ…

Read More

ಸೆ.3: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 12ನೇ ಕಂಬಳಬೆಟ್ಟು ಶಾಖೆ ಉದ್ಘಾಟನೆ ಬಂಟ್ವಾಳ: ತಾಲೂಕಿನ ಗ್ರಾಮೀಣ ಪ್ರದೇಶವಾದ ಸಜೀಪಮೂಡ ಗ್ರಾಮದಲ್ಲಿ ಸ್ಥಾಪನೆಗೊಂಡ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಕನಿಷ್ಠ ಅವಧಿಯಲ್ಲಿಯೇ ಗರಿಷ್ಠ ಸಾಧನೆಯನ್ನು ಮಾಡಿಕೊಂಡು ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲನ್ನು ಸಾಧಿಸಿಕೊಂಡು ಮುನ್ನಡೆಯುತ್ತಿದೆ. ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಮುಂದಾಳತ್ವದಲ್ಲಿ, ಅನುಭವಿ ನಿರ್ದೇಶಕರ ಮಾರ್ಗದರ್ಶನದಲ್ಲಿ, ಕ್ರಿಯಾಶೀಲ ಸಿಬ್ಬಂದಿಗಳ ಸಹಕಾರದೊಂದಿಗೆ ಸಂಘ ಲಾಭದಾಯಕವಾಗಿ ಪ್ರಗತಿಯ ಹೆಜ್ಜೆ ಇಟಿದ್ದು ಸಂಘದ 12ನೇ ಕಂಬಳಬೆಟ್ಟು ಶಾಖೆ ಉದ್ಘಾಟನೆಗೆ ಸಜ್ಜುಗೊಂಡಿದೆ. Advertisement ಸೆ. 3 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ವಿಟ್ಲ ಸಮೀಪದ ಕಂಬಳಬೆಟ್ಟು ದರ್ಬಾರ್ ಕಾಂಪ್ಲೆಕ್ಸ್ನಲ್ಲಿ ಸಂಘದ ನೂತನ 12ನೇ ಶಾಖೆಯನ್ನು ಕಲ್ಬುರ್ಗಿಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠಾಧಿಪತಿ ಶ್ರೀ ಡಾ| ಪ್ರಣವಾನಂದ ರಾಮ್ ಸ್ವಾಮೀಜಿ ಉದ್ಘಾಟಿಸುವರು, ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ…

Read More

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಸಂದೇಶ, ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಅವರ ಜನ್ಮದಿಚಾರಣೆ ಅರ್ಥಪೂರ್ಣವಾಗುತ್ತದೆ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು.ಯುವ ವಾಹಿನಿ ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಬೆಂಜನಪದವಿನಲ್ಲಿರುವ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ಗುರುವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 169 ನೇ ಜನ್ಮದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾರಾಯಣ ಗುರುಗಳು ಅಂದಿನ ಕಾಲದಲ್ಲಿ ಸಮಾಜದಲ್ಲಿದ್ದ ಜಾತಿ ಪದ್ದತಿ, ಅಸ್ಪ್ರಶ್ಯತೆ, ಅಸಮಾನತೆಯನ್ನು ತೊಡೆದು ಹಾಕಿ ಶೋಷಿತ, ದುರ್ಬಲ ವರ್ಗದವರ ಏಳಿಗೆಗಾಗಿ ಮೌನ ಕ್ರಾಂತಿ ಮಾಡಿದ ಶ್ರೇಷ್ಠ ದಾರ್ಶನಿಕ, ಅವರು ತೋರಿದ ಹಾದಿಯಲ್ಲಿ ಸಾಗಿ ಮಾನವೀಯ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿರುವ ಪ್ರತಿಯೊಬ್ಬರಲ್ಲೂ ಮಾನವ ಧರ್ಮವನ್ನು ಕಂಡಾಗ ಗುರುಗಳ ಆದರ್ಶ ಪಾಲನೆಯಾದಂತಾಗುತ್ತದೆ ಎಂದು ತಿಳಿಸಿದರು. Advertisement ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿಯ ಪೂರ್ವಾಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ ಯುವವಾಹಿನಿ, ವಸತಿ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ…

Read More

ಮಧ್ವ: ಹೃದಯಾಘಾತದಿಂದ ಯುವತಿ ಸಾವು ಪುಂಜಾಲಕಟ್ಟೆ : ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ.ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟವರಾಗಿದ್ದಾರೆ. ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, Advertisement ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್‌ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದರು. ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಏಳದಿರುವುದನ್ನು ಗಮನಿಸಿದ ತಾಯಿ ಎಬ್ಬಿಸುವಾಗ ಅವರು ಮೃತ ಪಟ್ಟಿರುವುದು ತಿಳಿದು ಬಂದಿದೆ. ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸಾವಿಗೆ ಹೃದಯಾಘಾತ ಕಾರಣವೆಂದು ವೈದ್ಯರು ತಿಳಿಸಿದ್ದಾರೆ. ನಂತರ ಮೃತ ದೇಹವನ್ನು ಹೆಚ್ಚಿನ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿತ್ತು.ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಮಿತ್ರಾ ಅವರು ಪದವೀಧರೆಯಾಗಿದ್ದು, ಸ್ಥಳೀಯವಾಗಿ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

Read More

ಬಂಟ್ವಾಳ: ಅಕ್ರಮವಾಗಿ ಮರ ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಬಮಟ್ವಾಳ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.7 ಲಕ್ಷ ರುಪಾಯಿ ಮೌಲ್ಯದ ವಾಹನ ಮತ್ತು ಸೊತ್ತುಗಳನ್ನು ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಮಂಗಳವಾರ ಬಿ. ಮೂಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ ಜಂಕ್ಷನ್ ನಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಕಟ್ಟಿಗೆಯನ್ನು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ ಉಪವಲಯ ಅರಣ್ಯಾಧಿಕಾರಿ ಪ್ರೀತಮ್ ಎಸ್ ,ಯಶೋಧರ ,ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ., ದಯಾನಂದ ,ಶೋಭಿತ್ ,ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ. Advertisement ಪ್ರಕರಣದ ಮುಂದಿನ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್ ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ ಇವರ ಮಾರ್ಗದರ್ಶನದಲ್ಲಿ…

Read More

ಬಂಟ್ವಾಳ: ಸರಕಾರದ ಸುತ್ತೋಲೆಯಂತೆ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಕಾರ್‍ಯಕ್ರಮ ಆ.30 ರಂದು ಸರ್ಕಾರದ ಮಟ್ಟದಲ್ಲಿ ಮೈಸೂರಿನಲ್ಲಿ ಪೂರ್ವಾಹ್ನ 12 ರಿಂದ ಅಪರಾಹ್ನ 1 ಗಂಟೆವರೆಗೆ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಫಲಾನುಭವಿಗಳು ವೀಕ್ಷಿಸಲು ರಾಜ್ಯದ ವಿವಿಧ ಕಡೆಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲು ಸರ್ಕಾರದ ಆದೇಶಿಸಿದೆ. Advertisement ಬಂಟ್ವಾಳ ಪುರಸಭಾ ವ್ಯಾಪ್ತಿಯ 4 ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು ಪುರಸಭಾ ಕಛೇರಿ ಸಭಾಂಗಣ, ಕೈಕಂಬ ಸೂರ್ಯವಂಶ ಕಟ್ಟಡದ ಸಭಾಂಗಣ, ಬಿ.ಸಿ.ರೋಡು ರಂಗೋಲಿ ಹೊಟೇಲ್ ಸಭಾಂಗಣ, ಮೆಲ್ಕಾರ್ ಬಿರ್ವ ಸೆಂಟರ್ ಸಭಾಂಗಣದಲ್ಲಿ ಏಕಕಾಲಕ್ಕೆ ಪ್ರಸಾರ ನಡೆಯಲಿದೆ. ಈ ಕಾರ್ಯಕ್ರಮವು ಮೈಸೂರಿನಿಂದ ಫಲಾನುಭವಿಗಳು ವೀಕ್ಷೀಸಲು ಮೇಲ್ಕಾಣಿಸಿದ ಕೇಂದ್ರಗಳಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದು ಪುರಸಭೆಯ ಪ್ರಕಟಣೆ ತಿಳಿಸಿದೆ.

Read More

ರಿಕ್ಷಾಕ್ಕೆ ಗುದ್ದಿದ ಕಾರು, ತೀವ್ರ ಗಾಯಗೊಂಡ ರಿಕ್ಷಾ ಚಾಲಕ Advertisement ಬಂಟ್ವಾಳ: ಬಿ.ಸಿ.ರೋಡಿನ ರೈಲು ನಿಲ್ದಾಣ ಬಳಿ ರಿಕ್ಷಾ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಘಟನೆಯ ತೀವ್ರತೆಗೆ ರಿಕ್ಷಾ ಮುಖಭಾಗ ನುಜ್ಜುಗುಜ್ಜಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರುಶೀಲನೆ ನಡೆಸುತ್ತಿದ್ದಾರೆ.

Read More

ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ವತಿಯಿಂದ ಉಚಿತ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಡ್ ಹಾಗೂ ಸಸಿ ವಿತರಣ ಕಾರ್ಯಕ್ರಮ ಬಂಟ್ವಾಳ: ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ ಇದರ ವತಿಯಿಂದ ಉಚಿತ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಡ್ ಹಾಗೂ ಸಸಿ ವಿತರಣ ಕಾರ್ಯಕ್ರಮ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು. Advertisement ಕಾರ್ಯಕ್ರಮವನ್ನು ಹಿರಿಯ ತೋಟಗಾರಿಕಾ ನಿರ್ದೇಶಕ ಜೋ ಪ್ರದೀಪ್ ಡಿಸೋಜಾ ಉದ್ಘಾಟಿಸಿ ಮಾತನಾಡಿ ಗಿಡಗಳು ಹೇಗೆ ಸದೃಢವಾಗಿ ಬೆಳೆಯಲು ನೀರು, ಗೊಬ್ಬರ, ಪೋಷಕಾಂಶಗಳು ಅಗತ್ಯವೋ ಅದೆ ರೀತಿ ಸಮುದಾಯದ ಯುವಕ ಯುವತಿಯರಿಗೆ ಸರಿಯಾದ ಮಾರ್ಗದರ್ಶನ ನೀಡಿದಾಗ ಅವರು ಸಮಾಜದಲ್ಲಿ ಉತ್ತಮ ಉದ್ಯೋಗ ಪಡೆದು ಸದೃಢವಾದ ಜೀವನ ನಡೆಸಲು ಸಾದ್ಯವಿದೆ. ಉತ್ತಮ ಪರಿಶ್ರಮದಿಂದ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.ಬಂಟ್ವಾಳ ತಾಲೂಕು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ…

Read More

ಬಂಟವಾಳ ಬಂಟರ ಸಂಘದಿಂದ 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಬಂಟ್ವಾಳ: ಬಂಟರ ಸಂಘ ಬಂಟವಾಳ ಮತ್ತು ಮುಂಬೈಯ ಆಲ್ ಕಾರ್ಗೋಲಾಜೆಸ್ಟಿಕ್ಸ್ ಸಂಸ್ಥೆಯ ಅಧ್ಯಕ್ಷ ಶಶಿಕರಣ್ ಶೆಟ್ಟಿ ಅವರ ಸಹಯೋಗದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ ಕಾರ್ಯಕ್ರಮದಡಿ 4 ನೇ ವರ್ಷದ ಬಂಟ್ವಾಳ ತಾಲೂಕಿನ ಸರ್ವ ಸಮಾಜದ ಸುಮಾರು 1,750 ವಿದ್ಯಾರ್ಥಿಗಳಿಗೆ 52 ಲಕ್ಷ ರೂ.ವಿದ್ಯಾರ್ಥಿ ವೇತನ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ರವಿವಾರ ಬ್ರಹ್ಮರಕೊಟ್ಲವಿನಲ್ಲಿರುವ ಬಂಟವಾಳ ಬಂಟರ ಭವನದಲ್ಲಿ ನಡೆಯಿತು. Advertisement ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಕೆ. ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಶಿಕ್ಷಣದಿಂದ ಮಾತ್ರ ಸಮಾಜದ ಬೆಳೆವಣಿಗೆ ಸಾಧ್ಯ,ಮುಂಬೈ ಬಂಟರ ಸಂಘ ವು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪೂರಕವಾಗಿ ದತ್ತು ಪಡೆಯುವುದು, ಬಡ್ಡಿರಹತ ಸಾಲ,ನೇರವಾಗಿ ವಿದ್ಯಾಸಂಸ್ಥೆಗೆ ಪೀಸ್ ಪಾವತಿ,ಶಿಕ್ಚಣ ಸಂಸ್ಥೆಗಳ ನಿರ್ಮಾಣ ಸಹಿತ ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ನೆರವು ನೀಡುತ್ತಿದೆ.ಅದೇ ಮಾದರಿಯಲ್ಲಿಬಂಟ್ವಾಳ ಬಂಟರ ಸಂಘ ಕೂಡ ಸಾಮಾಜಿಕ,ಶೈಕ್ಷಣಿಕ…

Read More

ತುಂಬೆಯಲ್ಲಿ ಪ್ರತಿಭಾ ಸ್ಪರ್ಧೆ Advertisement ಬಂಟ್ವಾಳ: ಸ್ಪರ್ಧೆ ಎನ್ನುವುದು ವಿದ್ಯಾರ್ಥಿ ಜೀವನದಿಂದಲೇ ಆರಂಭವಾದಾಗ ಭವಿಷ್ಯದ ಸ್ಪರ್ಧಾತ್ಮಕ ಜೀವನವನ್ನು ಎದುರಿಸಲು ಸಾಧ್ಯವಾಗುತ್ತದೆ. ಇದರಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲೂ ಸುಲಭವಾಗುತ್ತದೆ ಎಂದು ತುಂಬೆ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್.ಗಂಗಾಧರ ಆಳ್ವ ಹೇಳಿದರು. Advertisement ಅವರು ತುಂಬೆ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ಅಂತರ್ ತರಗತಿ ಪ್ರತಿಭಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.ತುಂಬೆ ಪ.ಪೂ.ಕಾಲೇಜಿನ ಉಪನ್ಯಾಸಕ ಅಬ್ದುಲ್ ರಹಿಮಾನ್ ಡಿ.ಬಿ.,ಡಾ.ವಿಶ್ವನಾಥ ಪೂಜಾರಿ,ಕಾರ್ಯಕ್ರಮ ಸಂಯೋಜಕಿ ಅಖಿಲಾ, ಪ್ರೌಢಶಾಲಾ ವಿಭಾಗದ ಅಧ್ಯಾಪಕ ರಮೇಶ್ ಮೆಲ್ಕಾರ್,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಣ ನಿರ್ದೇಶಕ ಸಾಯಿರಾಮ್ ನಾಯಕ್ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು,ಉಪನ್ಯಾಸಕಿ ನೀತಾಶ್ರೀ ನಿರೂಪಿಸಿದರು.

Read More